Connect with us

LATEST NEWS

ಹಾಲ್‌ಟಿಕೆಟ್ ತಿಂದ ‘ಕುರಿ..’! ಟೆನ್ಶನ್‌ಗೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ!!

Published

on

ಬೀದರ್:  ಒಂಭತ್ತನೇ ತರಗತಿ  ಬೋರ್ಡ್ ಪರೀಕ್ಷೆಯ ಪ್ರವೇಶಾತಿಗಾಗಿ ಶಾಲೆಯಿಂದ ನೀಡಲಾದ ಪ್ರವೇಶ ಪತ್ರವನ್ನು ಕುರಿ ತಿಂದಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ಮಾ.25ರಂದು ನಡೆದಿದೆ. ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗೋಕುಳ ಗ್ರಾಮದ ನಿವಾಸಿ ಪೂಜಾ ಮಾರುತಿ ಮೇತ್ರೆ (14) ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ.

ಇದನ್ನೂ ಓದಿ.. ದ್ವಿಚಕ್ರ ವಾಹನಕ್ಕೆ ಪಿಕ್‌ಅಪ್ ಡಿ*ಕ್ಕಿ ಹೊಡೆದು ಪರಾರಿ..! ಸವಾರ ಸ್ಪಾಟ್ ಡೆ*ತ್..!

ಈಕೆಯ ಪ್ರವೇಶ ಪತ್ರವನ್ನು ಕುರಿ ತಿಂದಿದೆ ಎಂದು ಆತಂಕಗೊಂಡು, ಶಾಲೆಯ ಮುಖ್ಯ ಗುರುಗಳ ಹೆಸರಿನಲ್ಲಿ ಪತ್ರ ಬರೆದಿಟ್ಟು ಆತ್ಮಹ*ತ್ಯೆಗೆ ಪ್ರಯತ್ನಪಟ್ಟಿದ್ದಾಳೆ. ವಿದ್ಯಾರ್ಥಿನಿ ಬರೆದ ಪತ್ರದಲ್ಲಿ “ನನ್ನ ಪರೀಕ್ಷೆ ಪ್ರವೇಶ ಪತ್ರ( ಹಾಲ್ ಟಿಕೆಟ್)ಕಳೆದ ಕಾರಣ ನನಗೆ ಶಾಲೆಗೆ ಬರಲು ಆಗಲ್ಲ. ನಾನು ಸ*ತ್ತು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಿ ಬಿಡಿ” ಎಂದು ಬರೆದಿದ್ದಾಳೆ.

ಶಿಕ್ಷಕರ ಹೆಸರಿನಲ್ಲಿ ಬರೆದ ಪತ್ರವನ್ನು ತನ್ನ ಅಣ್ಣನ ಕೈಯಲ್ಲಿ ಕೊಟ್ಟು,  ಸಂಜೆ 7 ಗಂಟೆ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದಾಳೆ. ಮನೆಯಿಂದ ಇವಳು ನಾಪತ್ತೆಯಾಗಿರುವುದನ್ನು ಗಮನಿಸಿದ ಸ್ಥಳೀಯರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಬಾವಿಗಳಲ್ಲಿ ಹುಡುಕಾಟ ಆರಂಭಿಸಿದ್ದಾರೆ.
ರಾತ್ರಿ 11-30ರ ಸುಮಾರಿಗೆ ಈಕೆ ತನ್ನ ಸಂಬಂಧಿಕರ ಜಮೀನಿನಲ್ಲಿರುವ ಬಾವಿಯಲ್ಲಿ ಅಳುತ್ತ ಕುಳಿತ್ತಿದ್ದು, ತಕ್ಷಣ ಆಕೆಯನ್ನು ಬಾವಿಯಿಂದ ಮೇಲೆ ತಗೆದು ರಕ್ಷಣೆ ಮಾಡಿದ್ದಾರೆ. ಸುಮಾರು 30 ಅಡಿಗಳಷ್ಟು ಆಳವಾಗಿರುವ ಬಾವಿಯಲ್ಲಿ ನೀರು ಕಡಿಮೆ ಇರುವ ಕಾರಣ ಜೀವಕ್ಕೆ ತೊಂದರೆಯಾಗಲಿಲ್ಲ. ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದು ಬಂದಿದೆ.

ಈ ಹಿಂದೆ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯೇ ದೊಡ್ಡ ಸವಾಲಾಗಿತ್ತು. ಇದೀಗ ಸರಕಾರ ಹೊಸದಾಗಿ 5,8,9,10 ನೇ ತರಗತಿಯವರಿಗೆ ಬೋರ್ಡ್ ಪರೀಕ್ಷೆಯನ್ನು ಜಾರಿಗೊಳಿಸಿದೆ. ಗೊಂದಲಗಳ ನಡುವೆ ಆರಂಭವಾಗಿರು ಬೋರ್ಡ್‌ ಪರೀಕ್ಷೆ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಆದ್ರೆ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ಬಗ್ಗೆ ಸರಿಯಾದ ಅರಿವು ಮೂಡಿಸುವಲ್ಲಿ ಶಿಕ್ಷಣ ಇಲಾಖೆ ವಿಫಲವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಗೊಂದಲದ ಜೊತೆಯಲ್ಲಿ ಭಯದಲ್ಲೇ ಪರೀಕ್ಷೆ ಬರೆಯುತ್ತಿದ್ದಾರೆ.

 

 

LATEST NEWS

ಅಹಮದಾಬಾದ್ ವಿಮಾನ ಪತನ: ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ನಿಧ*ನ

Published

on

ಮಂಗಳೂರು/ಅಹಮದಾಬಾದ್: ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ವಿಮಾನ ದುರಂತದಲ್ಲಿ ಮೃ*ತಪಟ್ಟಿದ್ದಾರೆ.


ಏರ್ ಇಂಡಿಯಾ ಪತನವಾದಾಗ ಆ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು. ಅವರು ಈ ದುರಂತದಲ್ಲಿ ಮೃ*ತಪಟ್ಟಿರುವುದು ದೃಢವಾಗಿದೆ.

ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

ಹಲವು ರಾಜಕೀಯ ನಾಯಕರು ರೂಪಾನಿ ಅವರ ದುರಂತದ ಸಾ*ವಿಗೆ ಸಂತಾಪ ಸೂಚಿಸಿದ್ದಾರೆ.

 

Continue Reading

LATEST NEWS

ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

Published

on

ಗುಜರಾತ್​​ನ ಅಹಮದಾಬಾದ್​ನಲ್ಲಿ ಲಂಡನ್​​ಗೆ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ.


ಅಹಮದಾಬಾದ್ ನಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಏರ್ ಇಂಡಿಯಾ ವಿಮಾನ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಲಂಡನ್ ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ವಿಮಾನ ನಿಲ್ದಾಣದ ಪರಿಧಿಯ ಬಳಿ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಯಾವುದೇ ವಿಮಾನ/ ಹೆಲಿಕಾಪ್ಟರ್‌ ಪತನವಾದರೂ ಪತನದ ತನಿಖೆಯಲ್ಲಿ ಪ್ರಮುಖ ಪಾತ್ರವಹಿಸುವುದು ಬ್ಲ್ಯಾಕ್‌ ಬಾಕ್ಸ್‌.

ಬ್ಲಾಕ್ ಬಾಕ್ಸ್‌ ಅಂದರೆ ಏನು?
ಬ್ಲಾಕ್ ಬಾಕ್ಸ್‌ ಅಂದರೆ ರೆಕಾರ್ಡರ್‌ಗಳನ್ನು ಒಳಗೊಂಡಿರುವ ಎರಡು ದೊಡ್ಡ ಲೋಹದ ಪಟ್ಟಿಗೆಗಳಾಗಿದ್ದು, ಹೆಚ್ಚಿನ ವಿಮಾನಗಳಲ್ಲಿ ಒಂದನ್ನು ಮುಂಭಾಗದಲ್ಲಿ ಮತ್ತು ಇನ್ನೊಂದು ಹಿಂಭಾಗದಲ್ಲಿ ಇರಿಸಬೇಕಾಗುತ್ತದೆ. ಈ ರೆಕಾರ್ಡರ್‌ಗಳು ವಿಮಾನ ಹಾರಾಟದ ಬಗ್ಗೆ ಮಾಹಿತಿಯನ್ನು ದಾಖಲಿಸುತ್ತವೆ ಮತ್ತು ವಿಮಾನ ಅಪಘಾತಕ್ಕೆ ಕಾರಣವಾಗುವ ಘಟನೆಗಳನ್ನು ಪುನರ್‌ನಿರ್ಮಿಸಲು ಸಹಕಾರಿಯಾಗುತ್ತವೆ.

ಸಾಮಾನ್ಯವಾಗಿ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿರುತ್ತದೆ.

ಇದನ್ನೂ ಓದಿ: ಅಹಮದಾಬಾದ್: ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವ ಶಂಕೆ

ಬ್ಲ್ಯಾಕ್ ಬಾಕ್ಸ್ ಹೆಸರು; ಬಣ್ಣ ಕಿತ್ತಳೆ
ವಿಮಾನದಲ್ಲಿ ಇರಿಸಿರುವ ಈ ಪೆಟ್ಟಿಗೆಗಳನ್ನು ಬ್ಲ್ಯಾಕ್‌ ಬಾಕ್ಸ್ ಎಂದು ಕರೆದರೂ ಸಹ ಇದು ಕಪ್ಪಗೆ ಇರುವುದಿಲ್ಲ. ಈ ಕಪ್ಪು ಪೆಟ್ಟಿಗೆಗಳು ಜ್ವಲಂತ, ಹೆಚ್ಚಿನ ಗೋಚರತೆಗಾಗಿ ಕಿತ್ತಳೆ ಬಣ್ಣದ್ದಾಗಿರುತ್ತವೆ. ಇದರಿಂದಾಗಿ ಕ್ರ್ಯಾಶ್ ಸೈಟ್‌ನಲ್ಲಿ ಅವುಗಳನ್ನು ಹುಡುಕುವ ಸಿಬ್ಬಂದಿಗಳು ಅವುಗಳನ್ನು ಹುಡುಕಲು ಸುಲಭವಾಗಿರುತ್ತದೆ.

ಬ್ಲ್ಯಾಕ್ ಬಾಕ್ಸ್ ಹೇಗೆ ಕಾರ್ಯನಿರ್ವಹಿಸುತ್ತದೆ ?
ಇದು ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲ್ಯಾಕ್‌ ಬಾಕ್ಸ್‌ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್‌ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್‌ ಹೊರ ಸೂಸುತ್ತಿರುತ್ತದೆ.

ಡೇಟಾ ರಿಕವರ್ ಮಾಡುವುದು ಹೇಗೆ?
ಕಪ್ಪು ಪೆಟ್ಟಿಗೆಗಳಿಂದ ರಿಕವರ್‌ ಆದ ಡೇಟಾವನ್ನು ವಿಶ್ಲೇಷಿಸಲು ಸಾಮಾನ್ಯವಾಗಿ 10-15 ದಿನಗಳನ್ನು ತೆಗೆದುಕೊಳ್ಳುತ್ತದೆ. ಈ ಮಧ್ಯೆ, ತನಿಖಾಧಿಕಾರಿಗಳು ಏರ್ ಟ್ರಾಫಿಕ್ ಕಂಟ್ರೋಲ್ ಸಿಬ್ಬಂದಿಯಿಂದ ಹೇಳಿಕೆ ಪಡೆಯುವುದು ಮತ್ತು ಎಟಿಸಿ ಹಾಗೂ ಪೈಲಟ್‌ಗಳ ನಡುವಿನ ಸಂಭಾಷಣೆಯ ರೆಕಾರ್ಡಿಂಗ್‌ಗಳಂತಹ ಇತರ ಸುಳಿವುಗಳಿಗಾಗಿಯೂ ನೋಡುತ್ತಾರೆ ಎಂದು ತಿಳಿದುಬಂದಿದೆ.

Continue Reading

LATEST NEWS

ಏರ್‌ ಇಂಡಿಯಾ ವಿಮಾನ ದುರಂತ; ಪ್ರಧಾನಿ ಮೋದಿ ಸಂತಾಪ

Published

on

ಗುಜರಾತ್‌ನ ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂತಾಪ ಸೂಚಿಸಿದ್ದಾರೆ.

ಅಹಮದಾಬಾದ್‌’ನಲ್ಲಿ ನಡೆದ ಈ ದುರಂತವು “ಪದಗಳಿಗೆ ಮೀರಿದ ಹೃದಯವಿದ್ರಾವಕ” ಎಂದು ಪ್ರಧಾನಿ ಹೇಳಿದರು. ಅಲ್ಲದೇ ಈ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ ಎಂದು ಪ್ರಧಾನಿ ಮೋದಿ X ನಲ್ಲಿ ಬರೆದಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page