ಬೆಂಗಳೂರು: ಬಿಗ್‌ಬಾಸ್ ಖ್ಯಾತಿ ಶೈನ್ ಶೆಟ್ಟಿ ಹಾಗೂ ಕಿರುತೆರೆ ನಟಿ ಅಂಕಿತಾ ಅಮರ್ ಜೊತೆಯಾಗಿ ನಟಿಸಿರುವ ಜಸ್ಟ್ ಮ್ಯಾರೇಜ್ ಬಿಗ್‌ಸ್ಕ್ರೀನ್‌ಗೆ ಎಂಟ್ರಿಯಾಗಲು ಸಿದ್ಧವಾಗಿದೆ. ಇಲ್ಲಿವರೆಗೂ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಅಜನೀಶ್ ಲೋಕನಾಥ್ ರವರ ಚೊಚ್ಚಲ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಸಿನೆಮಾ ಸಿನಿ ಪ್ರಿಯರಲ್ಲಿ ಕುತೂಹಲ ಮೂಡಿಸಿದೆ.

ಬಿಗ್‌ಬಾಸ್ ಖ್ಯಾತಿಯ ಕರಾವಳಿ ಹುಡುಗ ಶೈನ್ ಶೆಟ್ಟಿ ಹಾಗೂ ಕಿರುತೆರೆ ನಟಿ ಅಂಕಿತಾ ಅಮರ್ ಇವರಿಬ್ಬರ ಜೋಡಿಯನ್ನು ತೆರೆ ಮೇಲೆ ಕಾಣಲು ಪ್ರೇಕ್ಷಕರು ಕಾತುರರಾಗಿದ್ದಾರೆ. ಸಿ ಆರ್ ಬಾಬಿ ಅವರು ಸಿನೆಮಾ ನಿರ್ದೇಶನ ಮಾಡುತ್ತಿದ್ದಾರೆ. ಅದರಲ್ಲೂ ಸಂಗೀತದಿಂದ ಮೋಡಿ ಮಾಡಿದ್ದ ಅಜನೀಶ್ ರವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಿಂದ ಜನರು ಹೆಚ್ಚಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಸಿನೆಮಾ ತಂಡ ಕಂಪ್ಲೀಟ್ ಶೂಟಿಂಗ್ ಮುಗಿಸಿದ್ದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
ತೆರೆಗೆ ಸಿದ್ಧಗೊಂಡ ಸಿನೆಮಾ..
ಜಸ್ಟ್ ಮ್ಯಾರೀಡ್’ ಸಿನಿಮಾಗೆ ಬೆಂಗಳೂರು, ಮೈಸೂರು ಹಾಗೂ ಚಿಕ್ಕಮಗಳೂರಿನಲ್ಲಿ 45 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿದ್ದು, ಸಿ.ಆರ್.ಬಾಬಿ ಅವರು ಈ ಸಿನಿಮಾದ ನಿರ್ಮಾಣದಲ್ಲಿ ಅಜನೀಶ್ಗೆ ಸಾಥ್ ನೀಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಬ್ಯುಸಿಯಾಗಿದ್ದ ಸಿ.ಆರ್. ಬಾಬಿ ಅವರು ತನ್ನ ಚೊಚ್ಚಲ ನಿರ್ದೇಶನದ ಮೂಲಕ ಅಜನೀಶ್ ರವರಿಗೆ ಸಾಥ್ ನೀಡಿದ್ದಾರೆ.
ಸಿನೆಮಾದಲ್ಲಿದೆ ಸೂಪರ್ ಹಿಟ್ ಹಾಡುಗಳು:
ಈ ಸಿನೆಮಾದಲ್ಲಿ ಅಜನೀಶ್ ಲೋಕನಾಥ್‌ರವರ ಆರು ಸುಮಧುರ ಹಾಡುಗಳಿವೆ. ಈಗಾಗಲೇ ಅವುಗಳ ಪೈಕಿ ‘ಅಭಿಮಾನಿಯಾಗಿ ಹೋದೆ..’ ಗೀತೆ ಇತ್ತೀಚಿಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಹಾಡನ್ನು ಪ್ರಮೋದ್ ಮರವಂತೆ ಬರೆದಿದ್ದು, ವಿಜಯ್ ಪ್ರಕಾಶ್ ಧ್ವನಿಗೂಡಿಸಿದ್ದಾರೆ.
Read More..; ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
ಚಿತ್ರದಲ್ಲಿದೆ ದೊಡ್ಡ ತಾರಾಗಣ:
ಈ ಚಿತ್ರದಲ್ಲಿ ಶೈನ್ ಶೆಟ್ಟಿ, ಅಂಕಿತಾ ಅಮರ್, ಅಚ್ಯುತ್ ಕುಮಾರ್, ದೇವರಾಜ್, ಅನೂಪ್ ಭಂಡಾರಿ, ಮಾಳವಿಕಾ ಅವಿನಾಶ್, ಶ್ರುತಿ ಹರಿಹರನ್, ಸಾಕ್ಷಿ ಅಗರವಾಲ್, ಶ್ರುತಿ ಕೃಷ್ಣ, ರವಿಶಂಕರ್ ಗೌಡ, ಶ್ರೀಮಾನ್, ರವಿ ಭಟ್, ಸಂಗೀತಾ ಅನಿಲ್, ವಾಣಿ ಹರಿಕೃಷ್ಣ, ಕುಮುದಾ, ವೇದಿಕಾ ಕಾರ್ಕಳ, ಜಯರಾಮ್ ಮುಂತಾದ ನಟಿಸಿದ್ದು ದೊಡ್ಡ ತಾರಾಗಣವೆ ಇದೆ. ಸಿ.ಆರ್. ಬಾಬಿ ಕಥೆ ಬರೆದಿದ್ದಯ, ಧನಂಜಯ್ ರಂಜನ್ ಚಿತ್ರಕಥೆ ಬರೆದಿದ್ದಾರೆ. ಈ ಚಿತ್ರದ ಸಂಭಾಷಣೆ ರಘು ನಿಡುವಳ್ಳಿ , ಪಿ.ಜಿ. ಛಾಯಾಗ್ರಹಣ, ಶ್ರೀಕಾಂತ್ ಹಾಗೂ ಅಶಿಕ್ ಕುಸುಗೊಳ್ಳಿ ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ. ವಿಕ್ರಮ್ ಮೋರ್ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ.