Connect with us

UDUPI

ಜ.18ರಂದು ಶಿರೂರು ಮಠದ ಪರ್ಯಾಯೋತ್ಸವ- ಡಿ.14ರಂದು ಪೂರ್ವಭಾವಿ ಧಾನ್ಯ ಮುಹೂರ್ತ

Published

on

ಉಡುಪಿ: ನಗರದ  ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶಿರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಚತುರ್ಥ ಮುಹೂರ್ತವಾದ ಧಾನ್ಯ ಮುಹೂರ್ತವು ಕೃಷ್ಣಮಠದ ಆವರಣದಲ್ಲಿ ಡಿ.14ರ ಭಾನುವಾರ ನೆರವೇರಲಿದೆ ಎಂದು ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

ಶಿರೂರು ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6.15ಕ್ಕೆ ಮಠದಲ್ಲಿ ದೇವತಾ ಪ್ರಾರ್ಥನೆ ನಡೆಯಲಿದೆ. ಬಳಿಕ ಶ್ರೀ ಅನಂತೇಶ್ವರ, ಶ್ರೀಚಂದ್ರಮೌಳೀಶ್ವರ, ಶ್ರೀಕೃಷ್ಣಮುಖ್ಯಪ್ರಾಣ, ಗರುಡ ದೇವರು ಮತ್ತು ಶ್ರೀಮಧ್ವಾಚಾರ್ಯರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದರು.

ರಥಬೀದಿಯಲ್ಲಿ ಪಲ್ಲಕಿಯಲ್ಲಿ ಅಕ್ಕಿಮುಡಿ ಮೆರವಣಿಗೆ ನಡೆಯಲಿದೆ. ಬಳಿಕ ಭಕ್ತರು ಶ್ರೀಕೃಷ್ಣ ಮಠದ ಬಡಗು ಮಾಳಿಗೆಗೆ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ. ನಂತರ ಬಡಗುಮಾಳಿಗೆಯ ಗದ್ದುಗೆಯಲ್ಲಿ ನಾಲ್ಕು ಮುಡಿಗಳ ಮೇಲೆ ಕಿರು ಮುಡಿಯಿಟ್ಟು ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶಿರೂರು ಪರ್ಯಾಯ ಸ್ವಾಗತ ಸಮಿತಿಯ ಪ್ರಮುಖರಾದ ಮಟ್ಟಾರು ರತ್ನಾಕರ ಹೆಗ್ಡೆ, ಮೋಹನ್ ಭಟ್, ಸುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

LATEST NEWS

33ನೇ ವರ್ಷದ ಅಡ್ವೆ ನಂದಿಕೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

Published

on

ಪಡುಬಿದ್ರಿ: ಅಡ್ವೆ- ನಂದಿಕೂರು ಕೋಟಿ ಚೆನ್ನಯ ಕಂಬಳ ಸಮಿತಿ ಆಶ್ರಯದಲ್ಲಿ ಅಡ್ವೆ ಕಂಬಳ ಗದ್ದೆಯಲ್ಲಿ ನಡೆಯುತ್ತಿರುವ 33ನೇ ವರ್ಷದ ಕಂಬಳೋತ್ಸವಕ್ಕೆ ಇಂದು ಮುಂಜಾನೆ ಚಾಲನೆ ನೀಡಲಾಗಿದೆ.

ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಮಧ್ವರಾಯ ಭಟ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಇದನ್ನೂ ಓದಿ: 4ನೇ ವರ್ಷದ ನರಿಂಗಾನ ಲವ-ಕುಶ ಜೋಡುಕರೆ ಕಂಬಳ; ಫಲಿತಾಂಶ ಹೀಗಿದೆ

ಈ ಸಂದರ್ಭದಲ್ಲಿ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ, ಅಡ್ವೆ ಶ್ರೀ ಮಹಾಗಣಪತಿ ದೇವಳದ ಜನ್ನಿ ರವಿಶಂಕರ್ ಭಟ್‌, ಅಡ್ವೆ ಶ್ರೀ ಬ್ರಹ್ಮಬೈದರ್ಕಳ ಸೇವಾಸಮಿತಿ ಅಧ್ಯಕ್ಷ ಸುಂದರ್ ಯು ಸುವರ್ಣ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿ, ಗುಣಪಾಲ ಕಡಂಬ ಸೇರಿದಂತೆ ಹಲವು ಮಂದಿ ಗಣ್ಯರು, ಕಂಬಳಾಭಿಮಾನಿಗಳು ಉಪಸ್ಥಿತರಿದ್ದರು.

Continue Reading

LATEST NEWS

ಅಕ್ರಮ ಜಾನುವಾರು ಸಾಗಾಟ; ಇಬ್ಬರು ಆರೋಪಿಗಳ ಬಂಧನ

Published

on

ಉಡುಪಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಕೆಮ್ಮಣ್ಣು ನಿವಾಸಿ, ವಸೀಂ ಅಕ್ರಮ್ ಮತ್ತು ಮೊಹಮ್ಮದ್ ಖಾಜಾ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಬಿ ಎನ್ ಎಸ್ ಮತ್ತು ಕಲಂ ಪ್ರಾಣಿ ಹಿಂಸಾ ಪ್ರತಿಬಂದಕ ಕಾಯ್ದೆ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಮಾಂಜಾ ದಾರಕ್ಕೆ ಕುಟುಂಬ ಬಲಿ

ಆರೋಪಿಗಳನ್ನು ಮಂಗಳೂರು ತಾಲೂಕು ಮೂಡುತೆರಾರ್ ಗ್ರಾಮದ ಗಂಜಿಮಠ ಬಸ್ಸು ನಿಲ್ದಾಣದ ಬಳಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Continue Reading

LATEST NEWS

ಶಿರೂರು ಪರ್ಯಾಯ; ಬಿಗಿ ಭದ್ರತೆ

Published

on

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಶಿರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯ ಉತ್ಸವಕ್ಕೆ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲಿದ್ದು, ಅಲ್ಲದೇ ಗಣ್ಯ ವ್ಯಕ್ತಿಗಳು ಜಿಲ್ಲಾ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲೆಯ ಸೂಕ್ಷ್ಮತೆಯನ್ನು ಕಂಡು ಮುಂಜಾಗ್ರತೆಗಾಗಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಒಟ್ಟು ಓರ್ವ ಎಸ್‌ಪಿ, 01-ಹೆಚ್ಚುವರಿ ಎಸ್‌ಪಿ, 08-ಡಿವೈಎಸ್‌ಪಿ, 21-ಪೊಲೀಸ್ ಇನ್ಸ್‌ಪೆಕ್ಟರ್, 61-ಪೊಲೀಸ್ ಉಪನಿರೀಕ್ಷಕರು, 110-ಸಹಾಯಕ ಪೊಲೀಸ್ ಉಪನಿರೀಕ್ಷಕರನ್ನು, 812 ಪೊಲೀಸ್ ಸಿಬ್ಬಂದಿಯನ್ನು ಹಾಗೂ 200 ಗೃಹರಕ್ಷಕ ಸಿಬ್ಬಂದಿಗಳನ್ನು ಬಂದೊಬಸ್ತ್ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗಿದೆ. ಅಲ್ಲದೇ 04-ಕೆಎಸ್‌ಆರ್‌ಪಿ, 14-ಡಿಎಆರ್, 05-ವಿದ್ವಂಸಕ ಕೃತ್ಯ ಪತ್ತೆ ತಂಡವನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.


ಶ್ರೀ ಕೃಷ್ಣ ಮಠದ ಸುತ್ತಮುತ್ತ ಕಣ್ಗಾವಲಿಗೆ 70 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರ ಮಾಹಿತಿಗಾಗಿ ಕೃಷ್ಣಮಠದ ವಠಾರ ಬಳಿ ಹೊರಠಾಣೆಗಳನ್ನು ತೆರಯಲಾಗಿದೆ.

ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಸಂಭ್ರಮದ ಚೂರ್ಣೋತ್ಸವ

ಒಂದು ಕ್ಯೂ.ಆರ್.ಟಿ ತಂಡ, 6 ಆಂಬ್ಯುಲೆನ್ಸ್, 6 ಅಗ್ನಿಶಾಮಕ, 5 ಅಗ್ನಿ ಬುಲೆಟ್, 24 ಪಬ್ಲಿಕ್ ಅಡ್ರೆಸ್ ಸಿಸ್ಟಂ, 6 ಪೊಲೀಸ್ ಸಹಾಯವಾಣಿ, 12 ಬೈನಾಕುಲರ್, 3 ಡ್ರೋನ್ ಕ್ಯಾಮೆರಾ, 300 ಬ್ಯಾರಿಕೇಡ್ ಗಳನ್ನು ಬಳಸಿಕೊಳ್ಳಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page