Connect with us

LATEST NEWS

ಗರ್ಭಿಣಿ ಅಂತಾನೂ ನೋಡದೆ ಸೊಸೆಯ ಕತ್ತು ಸೀಳಿ ಕೊಂದ ಪಾಪಿ ಮಾವ!

Published

on

ರಾಯಚೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಐದು ತಿಂಗಳ ಗರ್ಭಿಣಿ ಸೊಸೆಯನ್ನು ಆಕೆಯ ಮಾವನೇ ಕತ್ತು ಸೀಳಿ ಕೊಂದ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಚಿಕ್ಕಹಣಗಿ ಗ್ರಾಮದಲ್ಲಿ ನಡೆದಿದೆ. ರೇಖಾ ನಾಗರಾಜ(24) ಮೃತಪಟ್ಟ ಗರ್ಭಿಣಿ ಮಹಿಳೆ, ಸಿದ್ದಪ್ಪ(50) ಆರೋಪಿ ಮಾವ.


ಕೆಲವು ವರ್ಷಗಳ ಹಿಂದೆ ರೇಖಾ ಮತ್ತು ನಾಗರಾಜ್‌ ವಿವಾಹವಾಗಿತ್ತು. ಆರಂಭದಲ್ಲಿ ಗಂಡನ ಮನೆಯವರು ಸೊಸೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಆರು ತಿಂಗಳ ಬಳಿಕ ಹೊಲ-ಮನೆ ಕೆಲಸದ ವಿಚಾರವಾಗಿ ಅತ್ತೆ-ಮಾವನ ಮಧ್ಯೆ ಆಗಾಗ ಜಗಳ ಉಂಟಾಗುತ್ತಿತ್ತು. ಈ ಕಾರಣದಿಂದ ರೇಖಾ ಮತ್ತು ನಾಗರಾಜ್‌ ಚಿಕ್ಕಹಣಗಿಯಿಂದ ಹಿರೇಹಣಗಿಗೆ ತೆರಳಿ ಪ್ರತ್ಯೇಕವಾಗಿ ವಾಸವಾಗಿದ್ದರು.

ಸೊಸೆ ಗರ್ಭಿಣಿಯಾಗಿರುವುದನ್ನು ತಿಳಿದ ಅತ್ತೆ-ಮಾವ, ಬೇರೆ ಮನೆ ಯಾಕೆ? ಮನೆಗೆ ಬನ್ನಿ ಎಂದು ಹೇಳಿ ಚಿಕ್ಕಹಣಗಿಗೆ ಕರೆದುಕೊಂಡು ಬಂದರು. ಆದರೆ ಇತ್ತೀಚೆಗೆ ಸೊಸೆ-ಮಾವನ ಮಧ್ಯೆ ಹೊಲ-ಮನೆ ಕೆಲಸದ ಬಗ್ಗೆ ಜಗಳ ಉಂಟಾಗಿತ್ತು. ಆ ವೇಳೆ ಕೋಪಗೊಂಡ ಮಾವ, 5 ತಿಂಗಳ ಗರ್ಭಿಣಿ ಎಂದು ನೋಡದೇ  ಚಾಕುವಿನಿಂದ ಸೊಸೆಯ ಕತ್ತು ಸೀಳಿ, ಮುಖಕ್ಕೆ ಚಾಕು ಚುಚ್ಚಿ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ರೇಖಾ ಪ್ರಾಣ ಉಳಿಸಿಕೊಳ್ಳುವ ಉದ್ದೇಶದಿಂದ ಮನೆಯಿಂದ ನರಳುತ್ತಾ ಹೊರಬಂದು, ಕಟ್ಟೆ ಮೇಲೆ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಗಳ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಮೂಲ್ಕಿ: ಹಾಲು ಕೊಂಡೊಯ್ಯುತ್ತಿರುವಾಗ ದುರಂತ; ಕಾರು ಡಿಕ್ಕಿಯಾಗಿ ಮಹಿಳೆ ಸಾವು

ಮೃತ ರೇಖಾಳ ಕುಟುಂಬಸ್ಥರು ಮಾವ ಸಿದ್ದಪ್ಪ, ಗಂಡ ನಾಗರಾಜ್‌ ಮತ್ತು ಅತ್ತೆಯ ವಿರುದ್ಧ ದೂರು ನೀಡಿದ್ದಾರೆ. ಸದ್ಯ ಆರೋಪಿ ಸಿದ್ದಪ್ಪನನ್ನು ಕವಿತಾಳ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆಯನ್ನು ತೀವ್ರಗೊಳಿಸಿದ್ದಾರೆ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page