Connect with us

FILM

ಕುಡ್ಲದ ಕುವರನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಐಶ್ವರ್ಯ ರಂಗರಾಜನ್

Published

on

ಸರಿಗಮಪ ಮೂಲಕ ಸಖತ್ ಫೇಮಸ್ ಆಗಿದ್ದ ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಅವರು ಕುಡ್ಲದ ಕುವರನೊಂದಿಗೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ.


ಕನ್ನಡದಲ್ಲಿ ಹಲವಾರು ಸೂಪರ್ ಹಿಟ್ ಹಾಡುಗಳನ್ನು ಹಾಡಿರುವ ಐಶ್ವರ್ಯ ರಂಗರಾಜನ್ ಇದೀಗ ತಮ್ಮ ಬಹುಕಾಲದ ಗೆಳೆಯ, ಪ್ರೀತಿಸಿದ ಹುಡುಗ ಸಾಯಿ ಸ್ವರೂಪ್ ಜೊತೆ ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಐಶ್ವರ್ಯ ರಂಗರಾಜನ್ ಅವರು ಇದೆ ವರ್ಷ ಮಾರ್ಚ್ ತಿಂಗಳಲ್ಲಿ ಸಿಂಪಲ್ ಆಗಿ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ಅದರಲ್ಲಿ ಬೆಂಗಳೂರು ಟು ಮಂಗಳೂರು, ಪರ್ಫೆಕ್ಟ್ ಪಿಚ್ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: ದೊಡ್ಮನೆಯಿಂದ ಹೊರಬಂದ ಮಲ್ಲಮ್ಮನನ್ನು ಅದ್ದೂರಿಯಾಗಿ ಸ್ವಾಗತಿಸಿದ ನಟ

ಇದೀಗ ಸದ್ದಿಲ್ಲದೆ ಮದುವೆ ಮಾಡಿಕೊಂಡಿದ್ದಾರೆ. ಮದುವೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆದರೆ ಮದುವೆ ಯಾವಾಗ? ಎಲ್ಲಿ ನಡೆಯಿತು ಎನ್ನುವ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ. ಕೆಲದಿನಗಳ ಹಿಂದೆಯಷ್ಟೇ ಐಶ್ವರ್ಯ ತಮ್ಮ ಹೊಸ ಆಲ್ಬಂ ಹಾಡು ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಿದ್ದರು.

ಐಶ್ವರ್ಯ ರಂಗರಾಜನ್ ಅವರು, ಕ್ರಾಂತಿ, ಯುಐ, ಕಬ್ಜ, ಏಕ್ ಲವ್ ಯಾ ಸಾಂಗ್ ಸೇರಿದಂತೆ ಹಲವು ಹಿಟ್ ಹಾಡುಗಳನ್ನು ಹಾಡಿದ್ದಾರೆ. ಬರೀ ಗಾಯನಕ್ಕೆ ಮಾತ್ರ ಸೀಮಿತವಾಗದೆ, ಮಗಳು ಜಾನಕಿ ಸೀರಿಯಲ್‌ನಲ್ಲಿ ಐಶ್ವರ್ಯಾ ರಂಗರಾಜನ್ ಅವರು ನಟಿಸಿದ್ದರು.

FILM

ಪ್ರೀಮಿಯರ್ ಶೋ ನೋಡಿ ‘ಜೈ’ ಅಂದ್ರು ಪ್ರೇಕ್ಷಕರು

Published

on

ಮಂಗಳೂರು : ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ ಹೊಸ ತುಳು ಚಲನ ಚಿತ್ರ ‘ಜೈ’ ನವೆಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದ್ದು, ಅದರ ಪ್ರೀಮಿಯರ್ ಶೋ ಇಂದು(ನ.09) ಮಂಗಳೂರಿನ ಭಾರತ್ ಸಿನಿಮಾ ಚಿತ್ರ ಮಂದಿರದಲ್ಲಿ ಭರ್ಜರಿಯಾಗಿ ನಡೆಯಿತು.  ನಟ ರಾಜ್ ದೀಪಕ್ ಶೆಟ್ಟಿ ಸೇರಿದಂತೆ ಹಲವಾರು ಕಲಾವಿದರು ಮತ್ತು ಅಭಿಮಾನಿಗಳು ಪ್ರೀಮಿಯರ್ ಶೋ ಉದ್ಘಾಟನೆ ವೇಳೆ ಉಪಸ್ಥಿತರಿದ್ದರು.

ಬಿಗ್ ಬಜೆಟ್‌ನ ಈ ಚಿತ್ರ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿದೆ. ಈಗಾಗಲೇ ಚಿತ್ರದ ಹಾಡುಗಳು, ಟೀಸರ್, ಟ್ರೇಲರ್ ಎಲ್ಲವೂ  ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಿಸಿದೆ. ಅಂದಹಾಗೆ, ಈ ಚಿತ್ರದಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ನಟಿಸಿರೋದು ಪ್ರಮುಖ ಆಕರ್ಷಣೆ.

ಗಿರಿಗಿಟ್, ಗಮ್ಜಾಲ್ ಮತ್ತು ಸರ್ಕಸ್ ಚಿತ್ರದ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ‘ಜೈ’ ಎಂಬ ಮಹತ್ವಾಕಾಂಕ್ಷೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ.  ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್ ಹಾಗೂ ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಆ್ಯಕ್ಷನ್, ಡ್ರಾಮಾ ಮತ್ತು ಎಮೋಷನ್‌ಗಳ ಸಮನ್ವಯವಿದೆ. ರೂಪೇಶ್ ಶೆಟ್ಟಿಗೆ  ನಾಯಕಿಯಾಗಿ ಅದ್ವಿತಿ ಶೆಟ್ಟಿ ಜೊತೆಯಾಗಿದ್ದಾರೆ.

ಚಿತ್ರದ ಕಥೆ ಹಾಗೂ ಸಂಭಾಷಣೆ ಪ್ರಸನ್ನ ಶೆಟ್ಟಿ ಬೈಲೂರು ಅವರು ಬರೆದಿದ್ದಾರೆ. ಕ್ಯಾಮೆರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ್ಹಾ, ಸಂಕಲನ ರಾಹುಲ್ ವಸಿಷ್ಠ ಅವರದ್ದು ಅರವಿಂದ್ ಬೋಳಾರ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ. ಪಡೀಲ್, ದೇವದಾಸ್ ಕಾಪಿಕಾಡ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ : ಉರ್ವ ಮಾರಿಯಮ್ಮ ಕ್ಷೇತ್ರ : ಡಿ.25 ಮತ್ತು 26 ರಂದು ನವಾಕ್ಷರಿ ಮಹಾಮಂತ್ರ ಯಾಗ

ನವೆಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿರುವ ‘ಜೈ’ ಚಲನ ಚಿತ್ರದ  ಪ್ರಿಮಿಯರ್ ಶೋ ಈಗಾಗಲೇ ಹಲವಾರು ಕಡೆ ನೆರವೇರಿದೆ. ಮಂಗಳೂರಿನಲ್ಲಿ ಇಂದು(ನ.09) ನೆರವೇರಿದ್ದು, ಚಿತ್ರ  ನೋಡಿದ ಪ್ರೇಕ್ಷಕರು ಜೈ ಎಂದಿದ್ದಾರೆ.

 

 

Continue Reading

FILM

20 ವರ್ಷದ ಯುವತಿ ವಿರುದ್ದ ಕೇಸ್ ದಾಖಲಿಸಿದ ಖ್ಯಾತ ನಟಿ ಅನುಪಮಾ ಪರಮೇಶ್ವರನ್‌; ಪೋಸ್ಟ್‌ನಲ್ಲೇನಿದೆ?

Published

on

ಖ್ಯಾತ ನಟಿ ಅನುಪಮಾ ಪರಮೇಶ್ವರನ್ ಅವರು 20 ವರ್ಷದ ಯುವತಿ ವಿರುದ್ದ ಕೇರಳ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ.

ಹೌದು, ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಅವರ ಫೋಟೋವನ್ನು ಆಕ್ಷೇಪಾರ್ಹ ರೀತಿಯಲ್ಲಿ ಎಡಿಟ್ ಮಾಡಿ, ಸುಳ್ಳು ಮಾಹಿತಿ ನೀಡಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ನಟಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಅನುಪಮಾ ಪರಮೇಶ್ವರನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಒಂದು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನನ್ನ ಫೋಟೋ ಬಳಸಿಕೊಂಡು, ತಪ್ಪು ಮಾಹಿತಿಯನ್ನು ಹಬ್ಬಿಸಲಾಗುತ್ತಿದೆ. ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ರೀತಿ ಬಳಸಿಕೊಂಡು ನನ್ನ ಪರಿಚಯದವರು ಹಾಗೂ ಕುಟುಂಬದವರನ್ನು ಟ್ಯಾಗ್ ಮಾಡಲಾಗುತ್ತಿತ್ತು. ಇದರಿಂದ ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ” ಎಂದು ನಟಿ ಬರೆದುಕೊಂಡಿದ್ದಾರೆ.

“ಈ ಬಗ್ಗೆ ತನಿಖೆ ಮಾಡಿದಾಗ ಗೊತ್ತಾಗಿದ್ದು ಏನೆಂದರೆ, ನನ್ನ ಬಗ್ಗೆ ದ್ವೇಷ ಹರಡಲು ಮತ್ತು ನನ್ನ ಬಗ್ಗೆ ಕೆಟ್ಟ ಕಮೆಂಟ್ ಮಾಡಲು ಒಬ್ಬರೇ ವ್ಯಕ್ತಿ ಹಲವು ಫೇಕ್ ಅಕೌಂಟ್ ಮಾಡಿಕೊಂಡಿದ್ದಾರೆ. ಇದು ಗೊತ್ತಾದಾಗ ನಾನು ಕೇರಳ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದೆ. ಈ ಕೃತ್ಯದ ಹಿಂದೆ ಇರುವ ವ್ಯಕ್ತಿ ಯಾರು ಎಂಬುದು ಪೊಲೀಸರ ಸಹಕಾರದಿಂದ ತಿಳಿಯಿತು” ಎಂದಿದ್ದಾರೆ ಅನುಪಮಾ ಪರಮೇಶ್ವರನ್.

ಇದನ್ನೂ ಓದಿ: ವಿಶ್ವಕಪ್ ಗೆದ್ದ ರಿಚಾ ಘೋಷ್‌ಗೆ ಪೊಲೀಸ್ ಹುದ್ದೆ; ನೇಮಕಾತಿ ಪತ್ರ ಹಸ್ತಾಂತರಿಸಿದ ಸಿಎಂ ಮಮತಾ ಬ್ಯಾನರ್ಜಿ

‘ನನಗೆ ಆಶ್ಚರ್ಯ ಆಗಿದ್ದು ಏನೆಂದರೆ, ಈ ಕೃತ್ಯ ಮಾಡಿರುವುದು ತಮಿಳುನಾಡಿನ 20 ವರ್ಷದ ಹುಡುಗಿ! ಆಕೆಯ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಅವಳ ಗುರುತನ್ನ ಬಹಿರಂಗ ಮಾಡುತ್ತಿಲ್ಲ. ಯಾಕೆಂದರೆ, ಆಕೆಯ ಭವಿಷ್ಯ ಮತ್ತು ಮನಶಾಂತಿಗೆ ತೊಂದರೆ ಆಗಬಾರದು’ ಎಂದು ಅನುಪಮಾ ಪರಮೇಶ್ವರನ್ ಅವರು ಹೇಳಿದ್ದಾರೆ. ಅವರ ಈ ನಿರ್ಧಾರಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ನೋಡಿ, ಎಲ್ಲರಿಗೂ ಒಂದು ವಿಷಯ ಅರ್ಥವಾಗಬೇಕು.. ಮೊಬೈಲ್ ಫೋನ್ ಮತ್ತು ಸೋಷಿಯಲ್ ಮೀಡಿಯಾ ಇದೆ ಎಂದ ಮಾತ್ರಕ್ಕೆ ಬೇರೆಯವರ ಘನತೆಗೆ ಧಕ್ಕೆ ತರುವ ಅಧಿಕಾರ ಯಾರಿಗೂ ಇಲ್ಲ. ಆನ್‌ಲೈನ್‌ಲ್ಲಿ ನೀವು ಮಾಡುವ ಎಲ್ಲಾ ಕೆಲಸಕ್ಕೂ ಹೆಜ್ಜೆ ಗುರುತುಗಳು ಇರುತ್ತವೆ.. ಎಲ್ಲದಕ್ಕೂ ಉತ್ತರ ಕೊಡಬೇಕಾಗಿ ಬರುತ್ತದೆ. ನಾನು ಹಾಕಿರುವ ಕೇಸ್ ತನಿಖೆ ನಡೆಯುತ್ತಿದೆ. ಆಕೆಯೂ ಅಷ್ಟೇ, ತಾನು ಮಾಡಿದ ಕೆಟ್ಟ ಕೆಲಸಕ್ಕೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

Continue Reading

FILM

ರೇಣುಕಾಸ್ವಾಮಿ ಕೊ*ಲೆ ಪ್ರಕರಣ : ಪವಿತ್ರಾ ಗೌಡಗೆ ಮತ್ತೆ ಹಿನ್ನಡೆ

Published

on

ಮಂಗಳೂರು/ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆಯಾಗಿದೆ. ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ಈ ಹಿಂದೆ ರದ್ದುಗೊಂಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿದೆ.

ಆ. 14 ರಂದು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹದೇವನ್ ಅವರ ಪೀಠವು ಅರ್ಜಿ ವಜಾಗೊಳಿಸಿದೆ.

ನಾವು ಸದರಿ ಆದೇಶ ಮತ್ತು ದಾಖಲೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದೇವೆ. ನಮ್ಮ ಅಭಿಪ್ರಾಯದಲ್ಲಿ, ಜಾಮೀನು ರದ್ದು ಮರುಪರಿಶೀಲನೆಗೆ ಯಾವುದೇ ಆಧಾರವಿಲ್ಲ. ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ : ಹಸೆಮಣೆ ಏರಿದ ‘ಪದ್ಮಾವತಿ’ ನಟಿ

ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಡಿಸೆಂಬರ್ 13, 2024 ರಂದು ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿತ್ತು.  2025ರ ಆಗಸ್ಟ್ 14 ರಂದು ಸುಪ್ರೀಂಕೋರ್ಟ್ ಕರ್ನಾಟಕ  ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತ್ತು.

 

Continue Reading
Advertisement

Trending

Copyright © 2025 Namma Kudla News

You cannot copy content of this page