Connect with us

LATEST NEWS

17 ದಿನಗಳ ಅಂತರದಲ್ಲಿ ಸಹೋದರಿಯರ ಸಾವು: ಕೊಲೆ ಶಂಕೆ

Published

on

ಹಾಸನ : ಇಲ್ಲಿನ ಸಕಲೇಶಪುರ ತಾಲೂಕಿನ ಬೆಳಗೊಡು ಗ್ರಾಮದ ಕಾಫಿ ತೋಟದ ಕಾರ್ಮಿಕ ಉದಯ್ ಎಂಬವರ ಇಬ್ಬರು ವಿವಾಹಿತ ಪುತ್ರಿಯರು  ಕೇವಲ 17 ದಿನಗಳ ಅಂತರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಲೆ ಶಂಕೆ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

ಸೌಂದರ್ಯ(21) ಮತ್ತು ಐಶ್ವರ್ಯ (19) ಮೃತ ದುರ್ದೈವಿಗಳು. ಉದಯ್ ಅವರಿಗೆ ನಾಲ್ವರು ಪುತ್ರಿಯರಿದ್ದು, ಈ ಪೈಕಿ ಎರಡನೇ ಮಗಳು ತುಮಕೂರಿನಲ್ಲಿ ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಲಾಗಿದ್ದು, ಇದಾದ 17 ದಿನಗಳಲ್ಲಿ ಹಿರಿಯ ಮಗಳು ಹೊಸನಗರದ ತನ್ನ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇನ್ನಿಬ್ಬರು ಪುತ್ರಿಯರು ಪಿಯುಸಿ ಹಾಗು ಎಸ್ಸೆಸೆಲ್ಸಿಯಲ್ಲಿ ಓದುತ್ತಿದ್ದಾರೆ.

ಹಿರಿಯ ಮಗಳು ಸೌಂದರ್ಯ ಪತ್ರಿಕೋದ್ಯಮದಲ್ಲಿ ಪದವಿ ಓದುತ್ತಿದ್ದು, ಈ ಕಾರಣಕ್ಕಾಗಿಯೇ ಮದವೆಯಾಗಲು ನಿರಾಕರಿಸಿದ್ದರು ಎನ್ನಲಾಗಿದ್ದು, ಬಳಿಕ ಈಕೆಯ ತಂಗಿ ಐಶ್ವರ್ಯಾಗೆ ಕಳೆದ ವರ್ಷ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಾವೇರಿಪುರ ನಿವಾಸಿ ನಾಗರಾಜು ಎಂಬಾತನಿಗೆ ಮದುವೆ ಮಾಡಲಾಗಿತ್ತು. ನಾಗರಾಜು ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದು, ಅವರು ತುಮಕೂರು ನಗರದ ಸರಸ್ವತಿಪುರಂನಲ್ಲಿ ವಾಸವಾಗಿದ್ದರು. ಹಿರಿಯ ಮಗಳು ಸೌಂದರ್ಯಗೆ ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಾಡಿಗ್ಗೇರಿ ನಿವಾಸಿ ಉಮೇಶ್ ಎಂಬಾತನನ್ನು ಕುಟುಂಬದ ಹಿರಿಯರ ವಿರೋಧದ ನಡುವೆ 2020ರ ನವೆಂಬರ್‌ನಲ್ಲಿ ಮದುವೆ ಆಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

2021ರ ಜೂ.8ರಂದು ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಎರಡನೇ ಮಗಳು ಐಶ್ವರ್ಯಳ ಶವ ಪತ್ತೆಯಾಗಿತ್ತು. ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ಕೊಡುತ್ತಿದ್ದರು. ಐಶ್ವರ್ಯಳನ್ನು ಆಕೆಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತಳ ಪಾಲಕರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

DAKSHINA KANNADA

ಉಳ್ಳಾಲ: ಕಡಲ್ಕೊರೆತ ಪೀಡಿತ ಪ್ರದೇಶಕ್ಕೆ ಸ್ಪೀಕರ್ ಖಾದರ್ ಭೇಟಿ

Published

on

ಉಳ್ಳಾಲದ ಕಡಲ್ಕೊರೆತ ಪೀಡಿತ ಐದು ಪ್ರದೇಶಗಳಲ್ಲಿ ಕಲ್ಲು ಹಾಕುವ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಊರವರು ಹಾಗೂ ನಗರಸಭೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಕಾಮಗಾರಿಗಳ ಪರಿಶೀಲನೆ ನಡೆಸಬೇಕು. ತದನಂತರವೂ ದೂರುಗಳು ಬಂದಲ್ಲಿ ಮೂರನೇ ನಿಯೋಗವನ್ನು ರಚಿಸಿ ಪರಿಶೀಲನೆ ನಡೆಸಿದ ನಂತರವೇ ಗುತ್ತಿಗೆದಾರರಿಗೆ ಬಿಲ್ ಪಾವತಿಸಲಾಗುವುದು ಎಂದು ಸ್ಪೀಕರ್ ಯು ಟಿ ಖಾದರ್ ಹೇಳಿದ್ದಾರೆ.

ಉಳ್ಳಾಲದ ಕಡಲ್ಕೊರೆತ ಬಾಧಿತ ಕೋಟೆಪುರ, ಕೋಡಿ, ಮೊಗವೀರಪಟ್ನ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದರು. ಹಿಲೆರಿಯಾನಗರ, ಕೈಕೋ, ಸೋಮೇಶ್ವರ ಬೆಟ್ಟಂಪಾಡಿ, ಕೋಡಿ, ಮೊಗವೀರಪಟ್ನ ಮತ್ತು ಉಚ್ಚಿಲ ಪ್ರದೇಶದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದೆ.

ಶಾಶ್ವತ ಪರಿಹಾರ ಕಂಡುಕೊಂಡ ಹಿನ್ನೆಲೆಯಲ್ಲಿ ಕೆಲಕಾಲ ಸಂರಕ್ಷಿತವಾಗಿತ್ತು. ಕಳೆದ ಬಾರಿ ಊರಿನವರ ಸಮ್ಮುಖದಲ್ಲಿ ಬೇಕಾದ ಅನುದಾನದ ರೂಪುರೇಷೆ ತಯಾರಿಸಿ ಸಂಬಂಧಿಸಿದ ಮೀನುಗಾರಿಕಾ ಮತ್ತು ಬಂದರು ಇಲಾಖೆಗಳ ಸಚಿವ ಮಾಂಕಳ್ ವೈದ್ಯ ಹಾಗೂ ಮುಖ್ಯಮಂತ್ರಿಗೆ ಜೊತೆ ಸಭೆ ನಡೆಸಿ ಒಂದು ವರ್ಷದ ಮುಂಚೆಯೇ ಅನುದಾನ ಬಿಡುಗಡೆ ಮಾಡಿ ಟಂಡರ್ ನಡೆಸಿ ವ್ಯವಸ್ಥಿತವಾಗಿ ಕೋಟೆಪುರ, ಮೊಗವೀರಪಟ್ನ, ಸೀಗ್ರೌಂಡ್, ಬಟ್ಟಂಪಾಡಿ, ಉಚ್ಚಿಲ ಐದು ಕಡೆಗಳಲ್ಲಿ ಕೆಲಸ ಆರಂಭಿಸಲಾಗಿದೆ. ಕಾಮಗಾರಿ ಪರಿಶೀಲನೆಗೆ ಊರವರಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ ಎಂದರು.

ಇದನ್ನೂ ಓದಿ: ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

ಈ ಸಂದರ್ಭ ನಗರಸಭೆ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷೆ ಸ್ವಪ್ನಾ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಮೊದಲಾದವರಿದ್ದರು.

Continue Reading

DAKSHINA KANNADA

ರಾಜ್ಯ ಕಾಂಗ್ರೆಸ್‌ ಸರಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ: ವೇದವ್ಯಾಸ ಕಾಮತ್

Published

on

ಮಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೇತೃತ್ವದಲ್ಲಿ ಜೂನ್ 23 ರಂದು ಸೋಮವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ತನಕ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 94 ಸಿ ಹಕ್ಕು ಪತ್ರಗಳಿಗೆ 9/11 ನೀಡುತ್ತಿಲ್ಲ. ಇ-ಖಾತಾ ಹೆಸರಿನಲ್ಲಿ ಜನಸಾಮಾನ್ಯರಿಗೆ ಸಂಕಷ್ಟವಾಗಿದೆ. ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆ ಮಾಡುತ್ತಿಲ್ಲ. ಅರ್ಹ ಬಿಪಿಎಲ್ ಕಾರ್ಡ್ ಗಳ ರದ್ದತಿ ಮತ್ತು ನೂತನ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸ್ವೀಕರಿಸುತ್ತಿಲ್ಲ. ಮಂಗಳೂರು ಪಾಲಿಕೆಗೆ ಕಳೆದೆರಡು ವರ್ಷಗಳಿಂದ ರಾಜ್ಯ ಸರಕಾರ ವಿಶೇಷ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದ ಅವರು ಇದೆಲ್ಲವನ್ನೂ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

Continue Reading

DAKSHINA KANNADA

ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

Published

on

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಆರೋಪಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು (ಜೂನ್.21) ಬೆಳಿಗ್ಗೆ 11.30 ಗಂಟೆಗೆ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಎಂಜಿನಿಯರಿಂಗ್‌, ಯೋಜನೆ, ಕಂದಾಯ, ಲೆಕ್ಕ ಪತ್ರವಿಭಾಗದಲ್ಲಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಉಡುಪಿ: ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ..!

ಲೋಕಾಯುಕ್ತ ಪ್ರಭಾರ ಎಸ್ ಪಿ ಕುಮಾರ ಚಂದ್ರ ಅವರ ನೇತೃತ್ವದಲ್ಲಿ ಇಬ್ಬರು ಡಿವೈಎಸ್‌ಪಿ, ನಾಲ್ಕು ಮಂದಿ ಇನ್‌ಸ್ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಗಳಾಗಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page