Connect with us

DAKSHINA KANNADA

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ರಿಗೆ ‘ಕನ್ನಡ ಪಯಸ್ವಿನಿ ಅವಾರ್ಡ್- 2026’ ಪ್ರದಾನ 

Published

on

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026’ ಅಂತಾರಾಜ್ಯ ಪ್ರಶಸ್ತಿಯನ್ನು  ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆರಿಗೆ ಪ್ರದಾನ ಮಾಡಲಾಯಿತು.

ಕಾಸರಗೋಡು ನುಳ್ಳಿಪಾಡಿಯಲ್ಲಿ ನಡೆದ ಕನ್ನಡ ಭವನ ರಜತ ಸಂಭ್ರಮ – ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನುಅವರು  ಸ್ವೀಕರಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ  ಅಂಕಣಕಾರರಾಗಿ ಹಾಗೂ ಕ್ರೀಡಾ  ವಿಮರ್ಶಾತ್ಮಕ ಲೇಖನಗಳ  ಮೂಲಕ ಎಸ್. ಜಗದೀಶ್ಚಂದ್ರ ಅಂಚನ್ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

ಕಾರ್ಯಕ್ರಮದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಡಾ.ಕೆ.ವಾಮನ್ ರಾವ್, ನಿರ್ದೇಶಕ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ‌ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟ್ಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು  ಮೊದಲಾದವರು ಉಪಸ್ಥಿತರಿದ್ದರು.

DAKSHINA KANNADA

ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

Published

on

ಬೆಳ್ತಂಗಡಿ : ಅಜ್ಜಿಯ ತಿಥಿಗೆ ಆಮೆಯನ್ನು ಸಾರು ಮಾಡಿ ಬಡಿಸಲು ನದಿಯಲ್ಲಿ ಅ*ಕ್ರಮವಾಗಿ ಆಮೆಗಳನ್ನು ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದ ನಾಲ್ವರನ್ನು  ಆಮೆಗಳ ಸಹಿತ ಬೆಳ್ತಂಗಡಿ ಠಾಣೆಯ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ಪೆರ್ಡಾಲ ನೀರ್ಚಾಲಿನ ನಿವಾಸಿ ಮಣಿಕಂಠ(42), ಮಂಗಳೂರು ಮೂಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ(54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ವಿಘ್ನೇಶ್(32), ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ನಿವಾಸಿ ಪ್ರಶಾಂತ್(35)  ಬಂಧಿತರು.

ದಾ*ಳಿ ವೇಳೆ ಆರೋಪಿಗಳಿಂದ ನಾಲ್ಕು ಸುಟ್ಟ ಆಮೆಯನ್ನು ಜಪ್ತಿ ಮಾಡಿ ಮುಂದಿನ ತನಿಖೆಗಾಗಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ : ಕೋಟ : ಗೂಗಲ್ ಮ್ಯಾಪ್ ಎಡವಟ್ಟು; ಕೊಲ್ಲೂರಿಗೆ ಹೊರಟವರು ತಲುಪಿದ್ದೆಲ್ಲಿಗೆ ಗೊತ್ತಾ?

ಫೆ.13 ರಂದು ಆರೋಪಿಗಳು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ, ದೇವಮ್ಮ ಎಂಬವರ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಆಗಮಿಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇವರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

Continue Reading

DAKSHINA KANNADA

ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ಸಾ*ವು

Published

on

ಪುತ್ತೂರು : ಹೃದಯಾ*ಘಾತಕ್ಕೆ ವ್ಯಕ್ತಿ ಬ*ಲಿಯಾಗಿರುವ ಘಟನೆ ಪುತ್ತೂರಿನ ಶಾಂತಿಗೋಡಿನಲ್ಲಿ ನಡೆದಿದೆ. 48 ವರ್ಷದ ರವಿ ಕುಮಾರ್ ಕಲ್ಕಾರ್ ಮೃ*ತ ವ್ಯಕ್ತಿ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವೇಳೆ  ರವಿ  ಕುಸಿದು ಬಿ*ದ್ದಿದ್ದರು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯು*ಸಿರೆಳೆದಿದ್ದಾರೆಂದು ತಿಳಿದು ಬಂದಿದೆ.

ಇದನ್ನೂ ಓದಿ : ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ರವಿ ಕಲ್ಕಾರ್  ವಿದೇಶದಲ್ಲಿ ಹಲವಾರು ವರ್ಷ ದುಡಿದು ಬಳಿಕ ಶಾಂತಿಗೋಡು ಕಲ್ಕಾರ್ ಎಂಬಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದರು. ಪುತ್ತೂರು ತಾಲೂಕು ಬಿಲ್ಲವ ಸಂಘದ ವಿದ್ಯಾನಿಧಿ ಸಂಚಾಲಕರಾಗಿ, ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಪುತ್ತೂರು ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ, ಕೂಡುರಸ್ತೆ ಮುಂಡೋಡಿ ನವಶಕ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಹೀಗೆ ಹಲವು ಸಂಘಟನೆಗಳಲ್ಲಿ ರವಿ ಕಲ್ಕಾರ್  ಗುರುತಿಸಿಕೊಂಡಿದ್ದರು.

Continue Reading

DAKSHINA KANNADA

ಪಂಪ್ ವೆಲ್ ಸರ್ಕಲ್ – ಕರಾವಳಿ ಜಂಕ್ಷನ್ ಚತುಷ್ಪಥ ರಸ್ತೆ ಕಾಮಗಾರಿ; ಸಂಚಾರ ಬದಲಾವಣೆ

Published

on

ಮಂಗಳೂರು : ಮಂಗಳೂರು ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ  15-02-2026 ರಿಂದ 15-06-2026 ರವರೆಗೆ 4 ತಿಂಗಳುಗಳ ಕಾಲ ನಡೆಯಲಿದೆ.

ಈ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೆ ರಸ್ತೆ – ಕಂಕನಾಡಿ ಜಂಕ್ಷನ್‌ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು ಕರಾವಳಿ ಜಂಕ್ಷನ್‌ನಿಂದ – ಪಂಪುವೆಲ್ ವೃತ್ತದ ವರೆಗಿನ (ಮಂಗಳೂರು ನಗರದಿಂದ ಹೊರ ಹೋಗುವ ರಸ್ತೆ) ಬೈಪಾಸ್ ರಸ್ತೆಗಳನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಗಳನ್ನಾಗಿ ಮಾರ್ಪಾಡು ಮಾಡಲಾಗಿದ್ದು, ಇದರಿಂದ ರಸ್ತೆಯಲ್ಲಿ ವಾಹನ ದಟ್ಟನೆ ಉಂಟಾಗಲಿದ್ದು, ಸಾರ್ವಜನಿಕರು ಈ ಕೆಳಗಿನ ರಸ್ತೆಯನ್ನು ಉಪಯೋಗಿಸಬಹುದಾಗಿದೆ.

1.ಪಂಪ್‌ವೆಲ್ ಜಂಕ್ಷನ್ ನಿಂದ ಕರಾವಳಿ ಜಂಕ್ಷನ್‌ಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ, ಕಂಕನಾಡಿ ಹಳೇ ರಸ್ತೆ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

2.ತಲಪಾಡಿ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ನಗರಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳು ಪರ್ಯಾಯ ರಸ್ತೆಯಾದ ಮಹಾಕಾಳಿಪಡ್ಪು, ಮಾರ್ಗನ್ಸ್ ಗೇಟ್, ಕೋಟಿಚೆನ್ನಯ ಸರ್ಕಲ್ ಅಥವಾ ಮಂಗಳಾದೇವಿ ಮುಖಾಂತರ ಸಂಚರಿಸುವುದು.

3.ಬಿ.ಸಿ ರೋಡ್ ಕಡೆಯಿಂದ ಬರುವಂತಹ ಭಾರಿ ವಾಹನಗಳು, ಇತರೆ ವಾಹನಗಳು ಮತ್ತು ಲಾಲ್‌ಬಾಗ್ ಬಸ್ಸು ನಿಲ್ದಾಣಕ್ಕೆ ತೆರಳುವ KSRTC ಬಸ್ಸುಗಳು ಪಡೀಲ್ ಜಂಕ್ಷನ್‌ನಿಂದ ನಂತೂರು ಕಡೆಗೆ ಹಾಗೂ ಕೇರಳ-ಕಾಸರಗೋಡು ಕಡೆಯಿಂದ ಕರಾವಳಿ ಕಡೆಗೆ ಬರುವ ಭಾರಿ ವಾಹನಗಳು ಮತ್ತು KSRTC ಬಸ್ಸುಗಳು ಪಂಪ್‌ವೆಲ್ ಜಂಕ್ಷನ್ ನಿಂದ ನಂತೂರು ಕಡೆಗೆ ಸಂಚರಿಸುವುದು.

4.ಮಂಗಳೂರು ನಗರದ ಒಳಭಾಗದಿಂದ ಕರಾವಳಿ ಜಂಕ್ಷನ್ ಕಡೆಯಿಂದ ಪಂಪ್ ವೆಲ್ ಕಡೆಗೆ ಸಂಚರಿಸುವ ವಾಹನಗಳು ಯಥವತ್ತಾಗಿ ಸಂಚರಿಸುವುದು.

5.ಕಂಕನಾಡಿ ಜಂಕ್ಷನ್-ಪಂಪ್  ವೆಲ್ ರಸ್ತೆ(ಕಂಕನಾಡಿ ಓಲ್ಡ್ ರಸ್ತೆ), ಕರಾವಳಿ-ಕಂಕನಾಡಿ ರಸ್ತೆ, ಕಂಕನಾಡಿ-ಫಳ್ನೀರ್ ಹೈಲ್ಯಾಂಡ್ ಆಸ್ಪತ್ರೆ ರಸ್ತೆ, ಕರಾವಳಿ-ಬಲ್ಮಠ ರಸ್ತೆ ಹಾಗೂ ಕಂಕನಾಡಿ ಬೈಪಾಸ್ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.

ಇದನ್ನೂ ಓದಿ : ನೆಲಮಂಗಲ ಬಳಿ ಭೀಕರ ಅಪಘಾತ; ಡಿವೈಡರ್‌ಗೆ ದಾಟಿ ಬಸ್ಸಿಗೆ ಗುದ್ದಿದ ಕಾರು; ಐವರ ದುರ್ಮರಣ

ಕಾಮಗಾರಿ ಮತ್ತು ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page