Connect with us

LATEST NEWS

ಅಯೋಧ್ಯೆಯ ರಾಮ ಮಂದಿರದಲ್ಲಿ ಮೈಸೂರಿನ ಶ್ರೀರಾಮ

Published

on

ಮೈಸೂರು: ಅಯೋಧ್ಯೆಯ ರಾಮಮಂದಿರದಲ್ಲಿ ಜ.22ರಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಗೊಳ್ಳಲಿದೆ.

ಜ. 22 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದರಲ್ಲಿ ಹಲವು ಗಣ್ಯಾತಿಥಿಗಳು ಹಾಗೂ ಸಿನಿಮಾ ಸ್ಟಾರ್ ಗಳು ಕೂಡ ಭಾಗಿಯಾಗಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಮೆ ಜೊತೆಗೆ ಶಿಲ್ಪಿ ಯೋಗಿರಾಜ್ ಅರುಣ್ ಅವರ ಫೋಟೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ, ವಿಜಯೇಂದ್ರ, ಸಂಸದ ಪ್ರತಾಪ್ ಸಿಂಹ ಮತ್ತಿತರರು ಹಂಚಿಕೊಂಡಿದ್ದಾರೆ.

ಕರುನಾಡಿಗೆ ಇದು ಹೆಮ್ಮೆಯ ಸಂಗತಿ. ಶ್ರೀರಾಮ-ಹನುಮರ ಬಾಂಧವ್ಯಕ್ಕೆ ಕರುನಾಡ ನಂಟಿದೆ, ಇದೀಗ ರಾಮನೂರಿನ ಗುಡಿಯನು ಮೈಸೂರಿನ ಬಾಲರಾಮನು ಬೆಳಗುವನು. ಮೈಸೂರಿನ ಅಪ್ರತಿಮ ಶಿಲ್ಪ ಕಲಾ ಪ್ರತಿಭೆ ಅರುಣ್ ಯೋಗಿರಾಜ್ ಅವರ ಭಕ್ತಿ ಕೌಶಲ್ಯದ ಕೆತ್ತನೆಯಿಂದ ಪಡಿಮೂಡಿದ ರಾಮಲಲಾ ಮೂರ್ತಿಯು ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತಿರುವುದು ಮೈಸೂರಿನ ಹಿರಿಮೆ, ಕರುನಾಡ ಹೆಮ್ಮೆಯಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರು ಮೂಲದ ಪ್ರಖ್ಯಾತ ಶಿಲ್ಪಿ ಅರುಣ್ ಆಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ರಾಮಮಂದಿರದ ವಿಗ್ರಹದ ಕೆತ್ತನೆಯನ್ನು ನೆರವೇರಿಸಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

LATEST NEWS

SSLC ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Published

on

ಬೆಳಗಾವಿ: SSLC ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂಬ ಭಯದಿಂದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ದೀಪಿಕಾ ಬಡಿಗೇರ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲೋನಿಯಲ್ಲಿ SSLC ವಿದ್ಯಾಭ್ಯಾಸ ಮಾಡುತ್ತಿದ್ದಳು.

ಮಾ.25ರಂದು ಎಸ್ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಕಡಿಮೆ ಅಂಕ ಬರಬಹುದು ಎಂಬ ಭಯದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೃತ ದೀಪಿಕಾಳ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Continue Reading

LATEST NEWS

ಬದಲಾಗಲಿದೆ ಬ್ಯಾಂಕ್ ಸೇವೆಗಳು; RBI ಹೊಸ ರೂಲ್ಸ್

Published

on

ಮಂಗಳೂರು/ನವದೆಹಲಿ : ಬ್ಯಾಂಕಿಂಗ್ ಸೇವೆಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ತರ ಬದಲಾವಣೆ ತರಲಿದೆ. ಮೇ 1 ರಿಂದ ಹೊಸ ನಿಯಮ ಜಾರಿಗೆ ಬರಲಿದೆ. ಎಟಿಎಂ ಕ್ಯಾಶ್ ವಿತ್‌ಡ್ರಾಶುಲ್ಕ ಹೆಚ್ಚಳ ಸೇರಿದಂತೆ ಹಲವು ನಿಯಮಗಳನ್ನು ಪರಿಷ್ಕರಿಸಲಾಗಿದೆ. ಎಟಿಎಂಗಳಿಂದ ಹಣ ವಿತ್‌ಡ್ರಾ ಮಾಡುವ ಸೇವಾ ಶುಲ್ಕವನ್ನು 2 ರೂ.ಗೆ ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಪಾವತಿ ನಿಗಮ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಇಂಟರ್‌ಚೇಂಜ್ ಶುಲ್ಕವನ್ನು ಹೆಚ್ಚಿಸಿದೆ. ಈ ಹಿಂದೆ ಪ್ರತಿ ವಹಿವಾಟಿಗೆ 17 ರೂ. ವಿಧಿಸಲಾಗಿತ್ತು. ಇನ್ನು ಮುಂದಕ್ಕೆ 19 ರೂಪಾಯಿ ಪಾವತಿಸಬೇಕಾಗುತ್ತದೆ.ಎಟಿಎಂ ಇಂಟರ್‌ಚೇಂಜ್ ಶುಲ್ಕ ಅಂದರೆ ಎಟಿಎಂ ಸೇವೆ ಒದಗಿಸುವುದಕ್ಕಾಗಿ ಒಂದು ಬ್ಯಾಂಕ್ ಮತ್ತೊಂದು ಬ್ಯಾಂಕ್‌ಗೆ ವಿಧಿಸುವ ಶುಲ್ಕವಾಗಿದೆ.

ನಿಗದಿತ ಮಿತಿಯನ್ನು ಮೀರಿ ಹೆಚ್ಚು ಬಾರಿ ವಿತ್‌ ಡ್ರಾ ಮಾಡಿದರೆ ಆಗ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗಿದ್ದು, ಇದನ್ನು 1 ರಿಂದ 2 ರೂ.ವರೆಗೆ ಹೆಚ್ಚಳ ಮಾಡಲಾಗುತ್ತಿದೆ. ಅಕೌಂಟ್ಸ್ ಬ್ಯಾಲೆನ್ಸ್ ಪರಿಶೀಲನೆ ಸೇರಿದಂತೆ ನಾನ್ ಟ್ರಾನ್ಸಾಕ್ಷನ್ ಶುಲ್ಕ 6 ರೂ. ಇದ್ದುದು 7 ರೂ. ವರೆಗೆ ಆಗಲಿದೆ ಎಂದು ತಿಳಿದುಬಂದಿದೆ.

ಮಿನಿಮಮ್ ಬ್ಯಾಲೆನ್ಸ್ ಶುಲ್ಕವನ್ನೂ ಪರಿಷ್ಕರಿಸಲಾಗುತ್ತಿದ್ದು, ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಯಮ ಜಾರಿಗೆ ಬರುವ ಸಾಧ್ಯತೆಗಳಿವೆ.

ಸೇವಿಂಗ್ಸ್ ಬ್ಯಾಂಕ್ ಅಕೌಂಟ್ಸ್‌ನಲ್ಲಿ 100 ರೂ ಇದ್ದವರಿಗೂ ಶೇ.4, 1 ಲಕ್ಷ ಇಟ್ಟವರಿಗೂ ಅಷ್ಟೇ  ಬಡ್ಡಿದರ ಸಿಗುತ್ತದೆ. ಈ ನಿಯಮದಲ್ಲೂ ಬದಲಾವಣೆ ಮಾಡುವ ಯೋಜನೆ ಇದ್ದು, ಹೆಚ್ಚು ಹಣಕ್ಕೆ ಹೆಚ್ಚು, ಕಡಿಮೆ ಹಣಕ್ಕೆ ಕಡಿಮೆ ಬಡ್ಡಿದರ ನಿಗದಿ ಮಾಡಲಾಗುತ್ತಿದೆ.

ಇದನ್ನೂ ಓದಿ : ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಹೊಸ ಟೋಲ್ ರೇಟ್ ..! ಎಷ್ಟು ಹೆಚ್ಚಾಗಲಿದೆ ಗೊತ್ತಾ ?

ಎಸ್‌ಬಿಐ, ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಮೊದಲಾದ ಪ್ರಮುಖ ಬ್ಯಾಂಕ್‌ಗಳು ತಮ್ಮ ವಿಸ್ತಾರ ಕ್ರೆಡಿಟ್ ಕಾರ್ಡ್‌ಗಳ ನಿಯಮದಲ್ಲಿ ಬದಲಾವಣೆ ಮಾಡುತ್ತಿವೆ.

 

Continue Reading

LATEST NEWS

PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಆರೋಪಿಗಳು ಅರೆಸ್ಟ್

Published

on

ಬೆಂಗಳೂರು: PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು. ಅಲ್ಲದೇ ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ.

ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ. ಇವರಿಂದ ನಕಲಿ ಅಂಕಪಟ್ಟಿ ಪಡೆದ ಜನರು ಸಾರಿಗೆ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳು 5 ರಿಂದ 10 ಸಾವಿರ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page