Connect with us

ಮಾರ್ಚ್‌ 5ಕ್ಕೆ ರಾಜ್ಯ ಬಜೆಟ್‌ ಮಂಡನೆ : ಮುಖ್ಯಮಂತ್ರಿ ಯಡ್ಯೂರಪ್ಪ

Published

on

ಬನವಾಸಿ : ಶನಿವಾರ ಮತ್ತು ಭಾನುವಾರ ಎರಡು ದಿನಗಳು ರಜೆ ಇರುವ ಕಾರಣ ಸೋಮವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಬನವಾಸಿಯ ಕದಂಬೋತ್ಸವಕ್ಕೆ ಚಾಲನೆ‌ ನೀಡಲು ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಿಎಂ, ಈಗಾಗಲೇ ಸಚಿವರು ಪ್ರಮಾಣ ವಚನ ತೆಗೆದುಕೊಂಡಿದ್ದಾರೆ.

ಅವರಿಗೆ ಎರಡು ದಿನಗಳ ನಂತರ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದರು. ಶೀಘ್ರದಲ್ಲಿ ಅಧಿವೇಶನ ಆರಂಭವಾಗಲಿದೆ.

ಮಾರ್ಚ್ 5ರಂದು ಬಜೆಟ್ ಮಂಡನೆ ಆಗಲಿದ್ದು, ಇದು ಮಹತ್ವ ಪೂರ್ಣ ಬಜೆಟ್ ಆಗಲಿದೆ ಎಂದು ಹೇಳಿದರು.

ಇನ್ನು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರದ್ದು ತಿರುಕನ ಕನಸಾಗಿದೆ.

ಅವರ ಪ್ರತಿಕ್ರಿಯೆಗೆ ಏನೂ ಹೇಳುವುದಿಲ್ಲ. ಅವರು ವಾಸ್ತವಿಕ ಸಂಗತಿ ಅರಿತು ಮಾತನಾಡಬೇಕು.

ಇಲ್ಲದೇ ಹೋದಲ್ಲಿ ಅವರಿಗೆ ಗೌರವ ಕಡಿಮೆ ಆಗುತ್ತದೆ. 3 ವರ್ಷಗಳ ಕಾಲ ವಿರೋಧ ಪಕ್ಷದಲ್ಲಿ ಕೂತುಕೊಳ್ಳಬೇಕು ಎಂಬ ಕಾರಣದಿಂದ ಅವರು ಡೆಸ್ಪರೇಟ್‌ ಆಗಿ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಇನ್ನು ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಕ್ರಮ ಕೈಗೊಂಡಿದ್ದೇವೆ. ಅದರ ನ್ಯೂನ್ಯತೆಗಳನ್ನು ಮರು ಪರಿಶೀಲಿಸಿ ಮರು ಅನುಷ್ಠಾನ ಕೈಗೊಳ್ಳಲಾಗುವುದು ಎಂದರು.

ವಿಡಿಯೋಗಾಗಿ..

Advertisement
Click to comment

Leave a Reply

Your email address will not be published. Required fields are marked *

STATE

ಬೆಳಗಾವಿ ಅಧಿವೇಶನದಲ್ಲಿ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ 50 ಲಕ್ಷ ರೂ. ನೀಡಲು ಶಾಸಕರ ಮನವಿ

Published

on

ಬೆಳಗಾವಿ: ಢಾಕಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಗೆದ್ದ ಕಾರ್ಕಳ್ ಮಿಯ್ಯಾರಿನ ಧನಲಕ್ಷ್ಮಿ ಪೂಜಾರಿ ಅವರು ಇಂದು ತನ್ನ ಕೋಚ್‌ ತೇಜಸ್ವಿನಿ ಪೈ ಅವರ ಜತೆಗೆ ಬೆಳವಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದಅಧಿವೇಶನದ ಕಲಾಪ ವೀಕ್ಷಿಸಿದರು.

 

ಈ ಸಂದರ್ಭದಲ್ಲಿ ಧನ ಲಕ್ಷ್ಮಿ ಅವರನ್ನು ಸರಕಾರದ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಧನಲಕ್ಷ್ಮಿ ಅದರ ಸಾಧನೆಯನ್ನು ಗುರುತಿಸಿ ಸರಕಾರದ ವತಿಯಿಂದ ಈಗಾಗಲೇ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿದೆ ಎಂದು ತಿಳಿಸಿದರು.

ಧನಲಕ್ಷ್ಮಿ ಮತ್ತು ಆಕೆಯ ತರಬೇತುದಾರರಾದ ತೇಜಸ್ವಿನಿ ಪೈ ಅವರನ್ನು ಅಭಿನಂದಿಸುತ್ತೇನೆ ಎಂದರು. ಧನಲಕ್ಞ್ಮಿ ಅವರಿಗೆ  ಕನಿಷ್ಟ 50 ಲಕ್ಷ ರೂಪಾಯಿ ಬಹುಮಾನ ನೀಡ ಬೇಕೆಂದು ಶಾಸಕ ವೇದವ್ಯಾಸ ಕಾಮತ್ ಒತ್ತಾಯಿಸಿದರು.ಆಕೆಗೆ ಸರಕಾರಿ ಉದ್ಯೋಗ ಕೊಡಿಸಬೇಕೆಂದು ವಿ ಸುನಿಲ್ ಕುಮಾರ್ ಮನವಿ ಮಾಡಿದರು.

Continue Reading

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

DAKSHINA KANNADA

‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

Published

on

ಮಂಗಳೂರು: ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ “ನಶೆ ಮುಕ್ತ ಮಂಗಳೂರು’  ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಪೌಂಡೇಶನ್‌ನ ಸುಹೈಲ್ ಕಂದಕ್ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅಭಿಯಾನದ ಉದ್ಘಾಟನೆಯನ್ನು ಸ್ಪೀಕರ್ ಯು ಟಿ ಖಾದರ್ ನೆರವೇರಿಸುವರು. ಸಂಸದ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್ ವಿ ದರ್ಶನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿರುತ್ತಾರೆ ಎಂದರು.

ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಅಭಿಯಾನವನ್ನು ಆಯೋಜಿಸುತ್ತಿದ್ದು ಇದರ ಅಂಗವಾಗಿ ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ಹಲವು ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರ ಎಸಿಪಿ ರವೀಶ್ ನಾಯಕ್, ಕಾಂಗ್ರೆಸ್ ನಾಯಕ ವಿಕಾಸ್ ಶೆಟ್ಟಿ, ಬಾರ್ನ್ ಅಗೇನ್ ರಿಕವರಿ ಸೆಂಟರ್, ಬೀನಾ ಸಲ್ದಾನ ಮೊದಲಾದವರಿದ್ದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page