Connect with us

ಲಕ್ಷದ್ವೀಪದ ಕಾರ್ಮಿಕರ ಕ್ರೆಡಿಟ್ ತೆಗೆದುಕೊಳ್ಳಲು ಶಾಸಕರ ಕಿತ್ತಾಟ..!!

Published

on

ಹಡಗಿನಲ್ಲಿ ಬಂದ ಕಾರ್ಮಿಕರನ್ನು ಸ್ವಾಗತಿಸುವ ಭರಾಟೆಯಲ್ಲಿ ಕಿತ್ತಾಡಿದ ಬಿಜೆಪಿ-ಕಾಂಗ್ರೆಸ್.!

ಮಂಗಳೂರು: ಲಾಕ್ ಡೌನ್ ನಿಂದ ಕಳೆದ ಎರಡೂವರೆ ತಿಂಗಳಿನಿಂದ ಅರಬ್ಬೀ ಸಮುದ್ರ ಮಧ್ಯೆ ಲಕ್ಷದ್ವೀಪದಲ್ಲಿ ಅತಂತ್ರರಾಗಿದ್ದ ಕಾರ್ಮಿಕರನ್ನು ಇಂದು (ಮೇ 28) ಮಂಗಳೂರಿಗೆ ಕರೆ ತರಲಾಗಿದೆ.

ಒಟ್ಟು 19 ಮಂದಿ ಇದ್ದ ಕಾರ್ಮಿಕರನ್ನು ಅಮಿನ್ ದೀವ್ ಎನ್ನುವ ಹಡಗಿನಲ್ಲಿ ಮಂಗಳೂರಿನ ಹಳೆ ಬಂದರಿಗೆ ತರಲಾಗಿದೆ.

ಆದ್ರೆ ಇವರನ್ನು ಸ್ವಾಗತಿಸುವ ಭರದಲ್ಲಿ ಮಂಗಳೂರಿನ ಬಿಜೆಪಿ ಮತ್ತು ಕಾಂಗ್ರೆಸಿನ ಶಾಸಕರು, ಬೆಂಬಲಿಗರು ಸೇರಿ ಕಿತ್ತಾಟ ನಡೆಸಿದ ಘಟನೆ ಮಾತ್ರ ಮುಜುಗರ ತಂದಿದೆ.

ಮಾಜಿ ಮೇಯರ್ ಕೆ. ಅಶ್ರಫ್ ಮತ್ತವರ ಬೆಂಬಲಿಗರು ಕೂಡ ಜೊತೆ ಸೇರಿದ್ದು ಕೊರೊನಾ ನಿಯಮದ ಸಾಮಾಜಿಕ ಅಂತರವನ್ನೂ ಮರೆತು ತಳ್ಳಾಡಿದ್ದಾರೆ.

ಯಾವುದೇ ಸಾಮಾಜಿಕ ಅಂತರ ಇಟ್ಟುಕೊಳ್ಳದೆ, ಹಡಗಿನಿಂದ ಹೊರಬರುತ್ತಿದ್ದ ಕಾರ್ಮಿಕರನ್ನು ಸ್ವಾಗತಿಸಲು ಸುಮಾರು 300 ಜನರ ಜಮಾವಣೆಗೊಂಡಿದ್ದಲ್ಲದೇ ಸಾಮಾಜಿಕ ಅಂತರವನ್ನೇ ಗಾಳಿಗೆ ತೂರಿ ತಳ್ಳಾಟ ನಡೆಸಿದ್ದಾರೆ.

ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಕಾಂಗ್ರೆಸ್ ಎಂ.ಎಲ್.ಸಿ ಐವನ್ ಡಿಸೋಜ ಒಬ್ಬರ ಮೈಮೇಲೆ ಒಬ್ಬರು ಬಿದ್ದು,

ಹೂ ಕೊಟ್ಟು ಸ್ವಾಗತ ಮಾಡಿ ಸಾಮಾಜಿಕ ಅಂತರ ಮರೆತು, ಕ್ರೆಡಿಟ್ ಪಡೆಯಲು ನೂಕು ನುಗ್ಗಾಟ ನಡೆಸಿದ್ದು, ಕ್ಷಣಕಾಲ ಅಲ್ಲಿ ನೆರೆದಿದ್ದವರು ಕಸಿವಿಸಿಗೊಳಗಾಗುವಂತೆ ಮಾಡಿತು.

ಈ ನಡುವೆ, ಕಾರ್ಮಿಕರ ಆರೋಗ್ಯ ತಪಾಸಣೆ, ಇನ್ನಿತರ ಅಗತ್ಯ ಕೆಲಸಕ್ಕೆ ಆಗಮಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು ಕೆಲಕಾಲ ಕಿರಿಕಿರಿ ಅನುಭವಿಸಿದರು.

ಇನ್ನು ವಿವಿಧ ಕೆಲಸಗಳಿಗಾಗಿ ಲಕ್ಷ ದ್ವೀಪಕ್ಕೆ ತೆರಳಿದ್ದ ಕಾರ್ಮಿಕರು ಲಾಕ್ ಡೌನ್ ಬಳಿಕ ಕೆಲಸ ಇಲ್ಲದೆ ಕಂಗಾಲಾಗಿದ್ದರು.

ಲಕ್ಷ ದ್ವೀಪದ ಕಿಲ್ತಾನ್, ಕವರತ್ತಿ, ಅಗಟ್ಟಿ ದ್ವೀಪದಲ್ಲಿ ಬಾಕಿಯಾಗಿದ್ದ ಕಾರ್ಮಿಕರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ನೌಕಾ ಪಡೆಯ ಸಹಾಯದಿಂದ ಯಶಸ್ವಿಯಾಗಿ ಇಂದು ಮರಳಿ ತರಲಾಗಿದೆ.

ಎಲ್ಲ ಕಾರ್ಮಿಕರನ್ನು ತಪಾಸಣೆಗೆ ಒಳಪಡಿಸಿ, ಕ್ವಾರಂಟೈನ್ ಕೇಂದ್ರಗಳಿಗೆ ಕಳಿಸಿಕೊಡಲಾಗಿದೆ.

ಈ ಸಂದರ್ಭದಲ್ಲಿ ಕಾರ್ಮಿಕರ ಕುಟುಂಬದ ಸದಸ್ಯರು ಭಾಗಿಯಾಗಿ ಸ್ವಾಗತಿಸಿ, ಬರಮಾಡಿಕೊಂಡರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಬಾವಿಗೆ ಹಾರಿ ಜೀವಾಂತ್ಯಗೊಳಿಸಿದ ಬಸ್ ಏಜೆಂಟ್

Published

on

ಉಡುಪಿ: ಬಸ್ ಏಜೆಂಟ್ ಓರ್ವರು ಮನೆಯ‌ ಹತ್ತಿರದ ಬಾವಿಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ನಡೆದಿದೆ.

ಬಸ್ ಏಜೆಂಟ್ ಕೆ. ರಾಜೇಶ್ ಶೆಣೈ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.  ಸಮಾಜಸೇವಕ ಈಶ್ವರ್ ಮಲ್ಪೆ ತಂಡದವರು ಕಾರ್ಯಾಚರಣೆ ಮೂಲಕ ಶವವನ್ನು ಬಾವಿಯಿಂದ ಮೇಲೆತ್ತಿದರು.

ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಸಹಕರಿಸಿದರು. ನಗರ ಪೋಲಿಸ್ ಠಾಣೆಯ ಎಸ್. ಐ ನಾರಾಯಣ, ಹೆಡ್  ಕಾನ್ಸ್ಟೇಬಲ್  ನೇತಾವತಿ ಕಾನೂನು ಪ್ರಕ್ರಿಯೆ ನಡೆಸಿದರು.

Continue Reading

LATEST NEWS

ಹೆಲ್ಮೆಟ್‌ ಧರಿಸದ ಸವಾರನನ್ನು ನಿಲ್ಲಿಸಿ ದಂಡ ಹಾಕದೇ ಕಳುಹಿಸಿದ ಪೊಲೀಸ್‌ ಸಿಬ್ಬಂದಿ!

Published

on

ಶಹದೋಲ್: ದ್ವಿಚಕ್ರ ವಾಹನ ಸವಾರರ ಸುರಕ್ಷತೆ ಚಾಲನೆ ಹಾಗೂ ಅಪಘಾತಗಳಾಗುವ ಸಂದರ್ಭದಲ್ಲಿ ತಲೆಗೆ ಏಟು ಬೀಳಬಾರದೆನ್ನುವ ಕಾರಣಕ್ಕೆ ಹೆಲ್ಮೆಟ್‌ ಖಡ್ಡಾಯಗೊಳಿಸಿ ಸರಕಾರವೇ ಆದೇಶ ಹೊರಡಿಸಿದೆ. ಹೆಲ್ಮೆಟ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ.

ಆದರೆ, ಮಧ್ಯಪ್ರದೇಶದ ಶಹದೋಲ್‌ನಲ್ಲಿ ಸಂಚಾರಿ ಪೊಲೀಸ್ ಹೆಲ್ಮೆಟ್ ಧರಿಸದೇ ಬಂದ ಬೈಕ್ ಸವಾರರನನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದಾಗ ಅವರು ಹೇಳಿದ ಉತ್ತರ ಕೇಳಿ ಕಕ್ಕಾಬಿಕ್ಕಿಯಾಗಿದ್ದಾರೆ.

ತನ್ನ ದೊಡ್ಡ ತಲೆಗೆ ಚಿಕ್ಕ ಹೆಲ್ಮೆಟ್ ಸರಿಹೊಂದುವುದಿಲ್ಲ ಎಂದಾಗ ಪೊಲೀಸ್‌ ತನ್ನದೇ ಹೆಲ್ಮೆಟ್‌ ತೆಗೆದು ಸವಾರನ ತಲೆಗೆ ಇಟ್ಟು ನೋಡಿದ್ದಾರೆ. ಆದರೂ ಹೆಲ್ಮೆಟ್‌ ಅವರ ತಲೆಗೆ ಸರಿಹೊಂದಿಲ್ಲ. ಇವರಿಬ್ಬರ ನಡುವಿನ ಸಂವಾದ ಇದೀಗ ಭಾರೀ ವೈರಲ್‌ ಆಗಿದೆ.

“ದಿ ಟ್ರಾಫಿಕ್ ಕಾಪ್” ಎಂದು ಜನಪ್ರಿಯವಾಗಿರುವ ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್ ಮತ್ತು ಸೋಶಿಯಲ್ ಇನ್ಫ್ಲುಯೆನ್ಸರ್ ಆಗಿರುವ ವಿವೇಕಾನಂದ ತಿವಾರಿ, ಹೆಲ್ಮೆಟ್ ಇಲ್ಲದೆ ಮೋಟಾರ್‌ಸೈಕಲ್ ಸವಾರಿ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ತಡೆದಿದ್ದಾರೆ.

ಸುರಕ್ಷತಾ ಉಲ್ಲಂಘನೆಯ ಬಗ್ಗೆ ಪ್ರಶ್ನಿಸಿದಾಗ, ಸವಾರ ಬೈಕ್‌ನಿಂದ ಇಳಿದು ಮಾರುಕಟ್ಟೆಯಲ್ಲಿ ತನ್ನ ಗಾತ್ರದ ಹೆಲ್ಮೆಟ್ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಆರಂಭದಲ್ಲಿ ಸಂಶಯ ವ್ಯಕ್ತಪಡಿಸಿದ ತಿವಾರಿ, ಸವಾರನ ತಲೆಯ ಮೇಲೆ ತನ್ನದೇ ಆದ ಹೆಲ್ಮೆಟ್ ಹಾಕಲು ಪ್ರಯತ್ನಿಸಿದ್ದಾರೆ. ಹೆಲ್ಮೆಟ್ ಹೊಂದಿಕೆಯಾಗಲಿಲ್ಲ, ನಿಜವಾದ ಕಷ್ಟವನ್ನು ಅರಿತುಕೊಂಡ ಅಧಿಕಾರಿ, ದಂಡ ವಿಧಿಸಲ್ಲ ಎಂದರು.

ಇದನ್ನೂ ಓದಿ: ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

ಅಲ್ಲದೆ ದೊಡ್ಡ ತಲೆಗೆ ಸರಿ ಹೊಂದುವ ಹೆಲ್ಮೆಟ್‌ಗಳನ್ನು ತಯಾರಿಸಿ ಎಂದು ಕಂಪೆನಿಗಳಿಗೆ ಮನವಿ ಮಾಡಿದರು. ಈ ವಿಡಿಯೋ ವೈರಲ್‌ ಆಗಿದ್ದು, ಸ್ಟೀಲ್‌ಬರ್ಡ್ ಕಂಪೆನಿ ಹೆಲ್ಮೆಟ್ಸ್ ಕೂಡ ಪ್ರತಿಕ್ರಿಯೆ ನೀಡಿದೆ. ದೊಡ್ಡ ಹೆಲ್ಮೆಟ್‌ಗಳನ್ನು ತಯಾರಿಸುವುದಾಗಿ ಹೇಳಿದೆ.

Continue Reading

LATEST NEWS

ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

Published

on

ಕೇವಲ 10 ರೂಪಾಯಿಗೆ ಒಂದು ಬಟ್ಟೆ ಇಸ್ತ್ರಿ ಮಾಡುವ ಸಣ್ಣ ಉದ್ಯಮದಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸುತ್ತಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ.


ನಳಿನಿ ಉನಾಗರ್ ಎಂಬುವವರು ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಅವರ ಮನೆಯ ಬಳಿಯಿರುವ ಡ್ರೈ ಕ್ಲೀನರ್ ಅಂಗಡಿಯ ಮಾಲೀಕರು ಮತ್ತು ಅವರ ಪತ್ನಿ ಇಬ್ಬರೂ ಸೇರಿ ಸಹಾಯಕರ ನೆರವಿನೊಂದಿಗೆ ಈ ಸಾಧನೆ ಮಾಡುತ್ತಿದ್ದಾರೆ.

ಪ್ರತಿದಿನ ಸುಮಾರು 350 ಬಟ್ಟೆಗಳನ್ನು ತಲಾ 10 ರೂಪಾಯಿಯಂತೆ ಇಸ್ತ್ರಿ ಮಾಡುತ್ತಾರೆ. ಇದರಿಂದ ದಿನಕ್ಕೆ 3,500 ರೂ. ಆದಾಯ ಬರುತ್ತದೆ. ಪ್ರತಿದಿನ ಸರಿಸುಮಾರು 20 ಭಾರೀ ಬಟ್ಟೆಗಳನ್ನು ತಲಾ 350 ರೂ. ರಂತೆ ಡ್ರೈ ಕ್ಲೀನ್ ಮಾಡುತ್ತಾರೆ. ಇದರಿಂದ ದಿನಕ್ಕೆ 7,000 ರೂ. ಆದಾಯ ಬರುತ್ತದೆ. ಎಲ್ಲಾ ಸೇರಿ ದಿನಕ್ಕೆ ಸುಮಾರು 10,500 ರೂಪಾಯಿ ಗಳಿಸುತ್ತಾರೆ. ತಿಂಗಳಿಗೆ 27 ದಿನ ಕೆಲ್ಸ ಮಾಡಿದ್ರೂ ಒಟ್ಟು ಆದಾಯ ಸುಮಾರು 2.8 ಲಕ್ಷ ಎಂದು ನಳಿನಿ ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪನೊಂದಿಗೆ ಹಾಲು ತರಲು ಹೋದಾಗ ನಡೆದ ದುರಂತ; ಸ್ಕೂಲ್ ಬಸ್ ಹರಿದು ಇಬ್ಬರು ಕಂದಮ್ಮಗಳು ಸಾವು

ಅಂಗಡಿ ಅವರದ್ದೇ ಆದ ಕಾರಣ ಬಾಡಿಗೆ ಇರುವುದಿಲ್ಲ. ವಿದ್ಯುತ್ ಬಿಲ್ ಸುಮಾರು 6,000 ರೂ. ಮತ್ತು ಇಬ್ಬರು ಸಹಾಯಕರ ಸಂಬಳ 40,000 ರೂ. ಕಳೆದರೆ, ಅವರಿಗೆ ತಿಂಗಳಿಗೆ ಅಂದಾಜು 2.3 ಲಕ್ಷ ರೂಪಾಯಿ ಉಳಿಯುತ್ತದೆ.

Continue Reading
Advertisement

Trending

Copyright © 2025 Namma Kudla News

You cannot copy content of this page