Connect with us

LATEST NEWS

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ PDO ಹೃದಯಾಘಾತಕ್ಕೆ ಬಲಿ..

Published

on

ಸುಬ್ರಹ್ಮಣ್ಯ: ಪಿಡಿಒ ಓರ್ವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ ಶೇಖರ್ ಹರದಯಾಘಾತದಿಂದ ಮೃತಪಟ್ಟ ವ್ಯಕ್ತಿ.

ಇವರು ಇಂದು ಮುಂಜಾನೆ ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆಯಾಗಿದ್ದರು.

ಮೃತರು ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

DAKSHINA KANNADA

ಪವಿತ್ರ ಹಜ್ ಯಾತ್ರೆ ಕೈಗೊಂಡ ಸ್ಪೀಕರ್‌ ಯು.ಟಿ. ಖಾದರ್‌

Published

on

ಮಂಗಳೂರು: ಸ್ಪೀಕರ್ ಯು.ಟಿ.ಖಾದರ್ ಅವರು ಈ ವರ್ಷದ ಪವಿತ್ರ ಹಜ್ ಯಾತ್ರೆಯನ್ನು ಕೈಗೊಂಡಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ಮಂಗಳೂರಿನ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.

ಬಳಿಕ ಮಾತನಾಡಿದ ಯು.ಟಿ.ಖಾದರ್‌ ಅವರು ‘ನಾನು ಯಾವ ಸ್ಥಾನಮಾನವನ್ನೂ ಆಶಿಸಿದವನಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು, ಮಂತ್ರಿಯಾಗಲು ಯಾರದೇ ಶಿಫಾರಸು ಮಾಡಿಸಿದವನಲ್ಲ. ನಿಮ್ಮೆಲ್ಲರ ಆಶೀರ್ವಾದವೇ ನನ್ನನ್ನು ಈ ಹಂತಕ್ಕೆ ತಲುಪಿಸಿದೆ. ನನ್ನ ಈವರೆಗಿನ ಬದುಕು ನೆಮ್ಮದಿಯಿಂದ ಕೂಡಿದೆ. ಹಜ್ ಯಾತ್ರೆ ಪವಿತ್ರವಾದುದು. ಅದು ಎಲ್ಲರಿಗೂ ದಕ್ಕುವಂತದ್ದಲ್ಲ. ಹಣವಿದ್ದೂ ಹಜ್ ಯಾತ್ರೆ ಮಾಡಲಾಗದವರು ಇದ್ದಾರೆ. ಹಣವಿಲ್ಲದವರಿಗೂ ಈ ಸೌಭಾಗ್ಯ ಲಭಿಸುತ್ತದೆ. ನಾನು ಹಜ್ ಯಾತ್ರೆ ಮಾಡಲು ಯಾವುದೇ ಪೂರ್ವಸಿದ್ಧತೆ ಮಾಡಿದವನಲ್ಲ. ಅನಿರೀಕ್ಷಿತವಾಗಿ ನನಗೆ ಮತ್ತು ನನ್ನ ಸಹೋದರ ಇಫ್ತಿಕಾರ್ ಹಾಗೂ ಕುಟುಂಬದ ಸದಸ್ಯರಿಗೆ ಈ ಅವಕಾಶ ಲಭಿಸಿದೆ. ನಮ್ಮ ನಾಡು, ಸಮಾಜದ ಮತ್ತು ಸಮುದಾಯದ ಹಿತಕ್ಕಾಗಿ ನಾನು ಅಲ್ಲಿ ಪ್ರಾರ್ಥಿಸುವೆ’ ಎಂದು ಹೇಳಿದರು.

ಇದೇ ವೇಳೆ ಹಜ್ ಯಾತ್ರೆಗೈಯಲಿರುವ ದಿ ನ್ಯಾಷನಲ್ ಕಮಿಷನ್ ಫಾರ್ ಅಲ್ಲೈಡ್ ಆ್ಯಂಡ್ ಹೆಲ್ತ್‌ಕೇರ್ ಕರ್ನಾಟಕ ಇದರ ರಾಜ್ಯ ಅಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಕೂಡಾ ಬೀಳ್ಕೊಡಲಾಯಿತು. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೇನೆಪೊಯ ವಿಶ್ವ ವಿದ್ಯಾಲಯದ ಕುಲಾಧಿಪತಿ ಡಾ.ವೈ.ಅಬ್ದುಲ್ಲಾ ಕುಂಞಿ, ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ದ.ಕ.ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್ ಶುಭ ಹಾರೈಸಿದರು. ವೇದಿಕೆಯಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್ ಮತ್ತಿತರರು ಉಪಸ್ಥಿತರಿದ್ದರು.

 

Continue Reading

LATEST NEWS

ಮನೆ ಮುಂದೆ ಕಟ್ಟಿದ್ದ 3 ಹಸುಗಳ ಕಳ್ಳತನ

Published

on

ಬೆಂಗಳೂರು: ಮನೆ ಮುಂದೆ ಕಟ್ಟಿದ್ದ 3 ಹಸುಗಳು ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಪ್ಪ ಎಂಬುವರಿಗೆ ಸೇರಿದ 12 ಹಸುಗಳಲ್ಲಿ ಮೂರು ಹಸುಗಳನ್ನು ಕದಿಯಲಾಗಿದೆ. ಈ ಮೂರು ಹಸುಗಳಲ್ಲಿ, ಒಂದು ಹಸು ಇನ್ನೇರಡು ತಿಂಗಳಲ್ಲಿ ಕರು ಹಾಕುತ್ತಿತ್ತು. ಇನ್ನೆರಡು ಹಸುಗಳಿಂದ ಮನೆ ನಡೆಸುವಷ್ಟು ಆದಾಯ ಬರುತ್ತಿತ್ತು.

ಇದನ್ನೂ ಓದಿ: ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ

ಇತಂಹ ಹಸುಗಳನ್ನು ಖತರ್ನಾಕ್ ಕಳ್ಳರು ಕದ್ದಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ

Published

on

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.

ಹವಾಮಾನ ಇಲಾಖೆಯು ಇಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ನಿನ್ನೆ ರಾತ್ರಿ ವೇಳೆಯೇ ಕೆಲವು ಕಡೆ ಮಳೆಯಾಗಿದ್ದು, ಇಂದು ಮುಜಾನೆಯಿಂದ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ.

ಗಾಳಿ ಮಳೆಯಿಂದಾಗಿ ಕೆಲವು ಕಡೆ ಆಸ್ತಿ ಪಾಸ್ತಿಗೆ ಹಾನಿಯಾಗಿದೆ. ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಬಳಿಯ ಪಲ್ಲಿಕಂಡದಲ್ಲಿ ಸಿಸಿಲಿಯಾ ಪಿಂಟೊ ಎಂಬುವವರ ಮನೆ ಕುಸಿದು ಬಿದ್ದ ಘಟನೆ ಸಂಭವಿಸಿದ್ದು, ಯಾವುದೇ ಜಿವ ಹಾನಿಯಾಗಿಲ್ಲ.

ಕೆಲವು ಕಡೆ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಸಮಸ್ಯೆ ಉಂಟಾದ ಘಟನೆಯೂ ಸಂಭವಿಸಿದೆ. ಉಡುಪಿ, ಕಾರ್ಕಳ, ಕುಂದಾಪುರ, ಕಾಪು,ಪಡುಬಿದ್ರಿ ಸಹಿತ ಕರಾವಳಿಯ ಎಲ್ಲಾ ತಾಲೂಕುಗಳಲ್ಲಿ ಧಾರಾಕಾರ ಮಳೆ ಬಂದಿದೆ.

ಇದನ್ನೂ ಓದಿ: ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವತಿಯರ ಸಾ*ವು

ಕಾರ್ಮೋಡ ಮುಸುಕಿದ ವಾತಾವರಣವಿದ್ದು ದಿನಪೂರ್ತಿ ಮಳೆ ಬರುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page