Connect with us

DAKSHINA KANNADA

ಕಾನೂನುಬಾಹಿರವಾಗಿ ಮಕ್ಕಳನ್ನು ಇರಿಸಿ ದುಡಿಮೆ ಪ್ರಕರಣ: ಮನೆಗೆ ದಾಳಿ

Published

on

ಸುಳ್ಯ: ಕಾನೂನುಬಾಹಿರವಾಗಿ ಪುಟ್ಟ ಮಕ್ಕಳನ್ನು,ಹೆಂಗಸರನ್ನು ಇರಿಸಿ ಜೀತಪದ್ದತಿ ರೀತಿಯಲ್ಲಿ ಕೆಲಸ ಮಾಡಿಸಿ, ಸಂಬಳ ನೀಡದೇ ತೊಂದರೆ ನೀಡಲಾಗುತ್ತಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದಂತೆ ವಿವಿಧ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ಮಹಿಳೆಯರು ಹಾಗೂ ಮಕ್ಕಳನ್ನು ಇರಿಸಿದ್ದ ಮನೆಗೆ ದಾಳಿ ನಡೆದಿದೆ.

ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳದ ವಿಶ್ವನಾಥ್ ಭಟ್ ಎಂಬವರ ಮನೆಯಲ್ಲಿ ಸುಮಾರು ಎಂಟರಿಂದ ಹತ್ತು ಮಕ್ಕಳು ಹಾಗೂ ಮಹಿಳೆಯರನ್ನು ದುಡಿಸುತ್ತಿದ್ದು, ಯಾವುದೇ ರೀತಿಯಲ್ಲಿ ಸಂಬಳವನ್ನು ನೀಡಲಾಗುತ್ತಿಲ್ಲ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಪುಟ್ಟ ಪುಟ್ಟ ಮಕ್ಕಳು ದನ ಮೇಯಿಸುತ್ತಿರುವ ವೀಡಿಯೋ ಒಂದು ವೈರಲ್ ಆಗಿದೆ. ಬಚ್ ಪನ್ ಬಚಾವೋ ಸಂಸ್ಥೆಯು, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶಕರಿಗೆ ನೀಡಿದ ದೂರು ಆಧರಿಸಿ, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶಕರಾದ ಪಲ್ಲವಿ ಆಕುರಾತಿ ಐಎಎಸ್ ಅವರು ದ.ಕ ಜಿಲ್ಲಾಧಿಕಾರಿಗಳಿಗೆ ಘಟನೆಯ ವಿವರ ಪಡೆದು ದಾಳಿ ನಡೆಸಿ ಮಕ್ಕಳನ್ನು ರಕ್ಷಣೆ ಮಾಡುವಂತೆ ಆದೇಶಿಸಿದರು. ಈ ಆದೇಶದ ಮೇರೆಗೆ ಬಚ್ ಪನ್ ಬಚಾವೋ ರಾಜ್ಯ ಸಮನ್ವಯಾಧಿಕಾರಿ ಬೆಂಗಳೂರಿನ ಬಿನು ವರ್ಗೀಸ್,  ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಅವರ ನೇತೃತ್ವದಲ್ಲಿ ಬಾಲ ಕಾರ್ಮಿಕ ಅಧಿಕಾರಿಗಳು, ಪುತ್ತೂರು ಕಾರ್ಮಿಕ ಇಲಾಖೆ ಅಧಿಕಾರಿಗಳು, ಸುಳ್ಯ ಸಿಡಿಪಿಓ, ಕಂದಾಯ ಅಧಿಕಾರಿಗಳು, ಸುಬ್ರಹ್ಮಣ್ಯ ಪೊಲೀಸರು, ಪಂಜ ಗ್ರಾಮ ಪಂಚಾಯತ್ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ತಾವು ಸಾಮಾಜಿಕ ಸೇವೆ ಮಾಡುತ್ತಿದ್ದೇವೆ ಎಂಬುದಾಗಿ ವಿಶ್ವನಾಥ್ ಭಟ್ ದಂಪತಿಗಳು ಹೇಳಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ಟ್ರಸ್ಟ್ ನೊಂದಾವಣೆ ಆಗಲಿ, ಈ ಜನರಿಗೆ ಆಧಾರ್ ಸೇರಿದಂತೆ ಯಾವುದೇ ಅಧಿಕೃತ ದಾಖಲೆಗಳೂ ಇವರ ಬಳಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ 48 ಗಂಟೆಗಳ ಒಳಗಾಗಿ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸುವಂತೆ ಆದೇಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಳು ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದ್ದು, ಮಕ್ಕಳ ಹಾಗೂ ಮಹಿಳೆಯರ ರಕ್ಷಣಾ ಕಾರ್ಯಾಚರಣೆ ಇನ್ನಷ್ಟೇ ನಡೆಯಬೇಕಿದೆ.

DAKSHINA KANNADA

ಪುತ್ತೂರು : 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

Published

on

ಪುತ್ತೂರು : ಷರತ್ತು ಬದ್ದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಪುತ್ತೂರು ಕಸಬಾ ಗ್ರಾಮದ ಅಬ್ಬಾಸ್ ಆಲಿ ಅಲ್ತಾಫ್‌(55) ಬಂಧಿತ ಆರೋಪಿ.  ಮಂಗಳೂರು ಕುಲಶೇಖರ ಬಿಕರ್ನಕಟ್ಟೆ ಬಳಿ ಪುತ್ತೂರು ನಗರ ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : NSUI ನಾಯಕನ ಮೇಲೆ ತಲವಾರು ದಾ*ಳಿ ಪ್ರಕರಣ; ಐವರು ಅರೆಸ್ಟ್

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಫೆಬ್ರವರಿ 27ರ ವರೆಗೆ  ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

DAKSHINA KANNADA

ಲಕ್ಷ್ಮಣ ಮರಕಡರಿಗೆ ಯಕ್ಷ ಸವ್ಯಸಾಚಿ ಬಿರುದು ಪ್ರದಾನ

Published

on

ಮಂಗಳೂರು : ಶ್ರೀಕಟೀಲು ಮೇಳದ ಕಲಾವಿದ, ಯಕ್ಷ ಗುರು ಲಕ್ಷ್ಮಣ ಕುಮಾರ್ ಮರಕಡರಿಗೆ ಕದ್ರಿ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀಭಗವದ್ಗೀತಾಮೃತ ಪುರಸ್ಕಾರದೊಂದಿಗೆ “ಯಕ್ಷ ಸವ್ಯ ಸಾಚಿ” ಬಿರುದು ನೀಡಿ ಗೌರವಿಸಲಾಯಿತು.

ಶ್ರೀ ಮದ್ ಭಗವದ್ಗೀತೆಯ  ಪ್ರಚಾರಕ, ಆಧ್ಯಾತ್ಮಿಕ ಗುರು ಸುಬ್ರಾಯ  ನಂದ್ಯೋಡಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಲಕ್ಷ್ಮಣ ಅವರು ಗಣೇಶ ಪುರ, ಸುರತ್ಕಲ್ ಸದಾಶಿವ ಮಹಾಗಣಪತಿ, ತಲಕಳ, ಬಪ್ಪನಾಡು, ಉಳ್ಳಾಲ ಚೀರುಂಭ ಭಗವತೀ , ಸಸಿಹಿತ್ಲು ಭಗವತಿ, ಎಡನೀರು ಮೇಳಗಳಲ್ಲಿ ತಿರುಗಾಟ ಮಾಡಿ ಕಟೀಲು  ಮೇಳದಲ್ಲಿ ಈಗ 7ನೇ ವರ್ಷದ  ತಿರುಗಾಟ ಮಾಡುತ್ತಿರುವ ನಿಷ್ಠಾವಂತ ಕಲಾಸಾಧಕ.

ಕಾಸರಗೋಡು ಮತ್ತು ಮಂಗಳೂರು ಪರಿಸರದಲ್ಲಿ ಯಕ್ಷಗಾನ ಶಿಕ್ಷಕನಾಗಿ ತರಗತಿ ನಡೆಸಿ ಸಮೃದ್ಧ ಶಿಷ್ಯ ಗಡಣ ಹೊಂದಿರುವ ಯಕ್ಷ ಗುರು.ಆಮೇರಿಕಾ, ಮಸ್ಕತ್, ಆಸ್ಟ್ರೇಲಿಯಾ, ದುಬೈ ದೇಶಗಳಲ್ಲಿ ಪುಂಡು, ಸ್ತ್ರೀ,ರಾಜವೇಷ,ಹಾಸ್ಯ, ಎದುರು ವೇಷಗಳೆಲ್ಲವನ್ನೂ ಸಮರ್ಥವಾಗಿ ನಿರ್ವಹಿಸುತ್ತಿರುವ  ಅಪೂರ್ವ ಯಕ್ಷ ಕಲಾ ಸಾಧಕ ಎಂದು ಕದ್ರಿ ನವನೀತ ಶೆಟ್ಟಿ ಅಭಿನಂದಿಸಿದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಕಾರ್ಯಕ್ರಮದಲ್ಲಿ  ಯಕ್ಷಗಾನ ಅಕಾಡೆಮಿ ಸದಸ್ಯ ಮೋಹನ್ ಕೊಪ್ಪಳ ಕದ್ರಿ, ಡಾ.ಶಶಾಂಕ್ ಮತ್ತಿತ್ತರರು ಉಪಸ್ಥಿತರಿದ್ದರು. ಮೇಳದ ಎಲ್ಲಾ ಕಲಾವಿದರಿಗೆ ಸೇವಾಕರ್ತರಾದ ಗೀತಾ ಪ್ರಚಾರಕಿ ಸವಿತಾ ಕೊರಗಪ್ಪ ಅವರು ಅರ್ಥ ಸಹಿತ ಭಗವದ್ಗೀತೆಯನ್ನು ವಿತರಿಸಿದರು. ಕಟೀಲು ಮೇಳದವರಿಂದ ಶ್ರೀದೇವಿ ಮಹಾತ್ಮೆ ಸೇವೆ ಬಯಲಾಟ ಜರುಗಿತು.

 

Continue Reading

DAKSHINA KANNADA

ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಜಯ ವಿಜಯ ಕಂಬಳಕ್ಕೆ ಚಾಲನೆ

Published

on

ಮಂಗಳೂರು :  ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 16 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು(ಫೆ.14) ಬೆಳಗ್ಗೆ ಚಾಲನೆ ದೊರೆತಿದೆ.

ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿ ಮೆನ್ನು ತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥಈ ಕಂಬಳ ನಡೆಯುತ್ತಿದೆ. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್‌ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ನುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಕಟೀಲು ಕ್ಷೇತ್ರದ ಅನಂತಪದ್ಮನಾಭ ಆಸ್ರಣ್ಣ, ಬಿಜೆಪಿ ನಾಯಕ ಮೋನಪ್ಪ ಭಂಡಾರಿ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌, ಪ್ರವೀಣ್‌ಚಂದ್ರ ಆಳ್ವ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page