Connect with us

LATEST NEWS

ಟಿ20 ವಿಶ್ವಕಪ್‌ 2026: ಭಾರತ ವಿರುದ್ದದ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನ!

Published

on

ನವದೆಹಲಿ: ಕ್ರಿಕೆಟ್‌ ಜಗತ್ತು ಇದೀಗ ಟಿ20 ವಿಶ್ವಕಪ್‌ ಪಂದ್ಯವನ್ನು ಕಣ್ತುಂಬಿಕೊಳ್ಳಲು ಸಜ್ಜಾಗಿದೆ. ಆದರೆ ಇದೀಗ ಪಾಕಿಸ್ತಾನ ಭಾರತ ವಿರುದ್ದ ಫೆ.15ರಂದು ಕೊಲಂಬೊದಲ್ಲಿ ನಡೆಯಲಿರುವ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕ್‌ ಸರ್ಕಾರ ಭಾನುವಾರ ಘೋಷಿಸಿದೆ.


ಕ್ರಿಕೆಟ್‌ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಹೈವೋಲ್ಟೇಜ್‌ ಕದನ ಎಂದೇ ಪರಿಗಣಿಸಲ್ಪಟ್ಟಿದೆ. ಅಷ್ಟು ಮಾತ್ರವಲ್ಲದೆ ಆಧುನಿಕ ಕ್ರಿಕೆಟ್‌ ಆರ್ಥಿಕತೆಯಲ್ಲಿ ಈ ಪಂದ್ಯವು ಇಡೀ ಟೂರ್ನಮೆಂಟ್‌ ಅನ್ನು ಸಲಹುವ ಚಿನ್ನದ ಗಣಿ ಎಂದು ಹೇಳಿದರೆ ತಪ್ಪಗಲಾರದು. ಆದರೆ ಪಾಕಿಸ್ತಾನ ಭಾರತದ ವಿರುದ್ದ ಆಡದಿರಲು ಅಧಿಕೃತವಾಗಿ ಬಹಿಷ್ಕಾರ ನಿರ್ಧಾರ ಪ್ರಕಟಿಸಿದೆ. ತನ್ನ ನಿರ್ಧಾರದಿಂದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಭಾರಿ ಬೆಲೆ ತೆರಬೇಕಾಗಬಹುದು ಎಂದು ವರದಿಯಾಗಿದೆ.

ಭದ್ರತಾ ಕಾರಣಗಳಿಗಾಗಿ ಬಾಂಗ್ಲಾದೇಶದ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸಲು ಐಸಿಸಿ ನಿರಾಕರಿಸಿತ್ತು. ಇದರಿಂದಾಗಿ ಟೂರ್ನಿಯಿಂದಲೇ ಬಾಂಗ್ಲಾದೇಶ ಹಿಂದಕ್ಕೆ ಸರಿದಿತ್ತು. ಐಸಿಸಿಯ ಈ ತೀರ್ಮಾನಕ್ಕೆ ರಾಜಕೀಯ ಪ್ರತಿಭಟನೆಯಾಗಿ ಪಾಕಿಸ್ತಾನ ಈ ನಿರ್ಧಾರ ಕೈಗೊಂಡಿದೆ. ಐಸಿಸಿ ಸಭೆಯಲ್ಲಿ ಬಾಂಗ್ಲಾ ನಿಲುವನ್ನು ಪಾಕಿಸ್ತಾನ ಬೆಂಬಲಿಸಿತ್ತು.

ಭಾರತ ತಂಡಕ್ಕೆ ಲಾಭ!
ಸಾಮಾನ್ಯವಾಗಿ ಪಂದ್ಯ ರದ್ದಾದರೆ ಉಭಯ ತಂಡಗಳು ತಲಾ 2 ಅಂಕಗಳನ್ನು ಹಂಚಿಕೊಳ್ಳತ್ತವೆ. ಇದೀಗ ಪಾಕಿಸ್ತಾನ್‌ ಪಂದ್ಯವನ್ನು ಬಹಿಷ್ಕರಿಸುವುದರಿಂದ ಪಾಕಿಸ್ತಾನ ತಂಡಕ್ಕೆ ಯಾವುದೇ ಅಂಕ ಸಿಗುವುದಿಲ್ಲ. ಇತ್ತ ಇಂಡಿಯಾ ಪಂದ್ಯವಾಡಲು ಸಿದ್ದವಾಗಿರುವುದರಿಂದ ಸಂಪೂರ್ಣ ಅಂಕಗಳನ್ನು ಪಡೆಯಲಿದೆ. ಅಂದರೆ ಗೆಲುವಿಗೆ ನೀಡಲಾಗುವ ಸಂಪೂರ್ಣ ಅಂಕವನ್ನು ಟೀಮ್‌ ಇಂಡಿಯಾ ಪಡೆಯಲಿದೆ.

ಟಿ20 ವಿಶ್ವಕಪ್‌ನಲ್ಲಿ ಒಂದು ಗೆಲುವಿಗೆ 2 ಅಂಕಗಳನ್ನು ನೀಡಲಾಗುತ್ತದೆ. ಅದರಂತೆ ಪಾಕಿಸ್ತಾನ್‌ ತಂಡವು ಪಂದ್ಯವನ್ನು ಬಹಿಷ್ಕರಿಸಿದರೆ ಟೀಮ್‌ ಇಂಡಿಯಾ 2 ಅಂಕಗಳನ್ನು ಪಡೆಯಲಿದೆ. ಪಂದ್ಯದಿಂದ ಹಿಂದೆ ಸರಿಯುವ ಪಾಕ್‌ ತಂಡಕ್ಕೆ ಯಾವುದೇ ಅಂಕ ಸಿಗುವುದಿಲ್ಲ. ಇದರಿಂದ ಪಾಕಿಸ್ತಾನ್‌ ತಂಡದ ರನ್‌ ರೇಟ್‌ ಮೇಲೆ ಪರಿಣಾಮ ಬೀರಲಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ವಿವಾಹದ ಸಿದ್ಧತೆ? ವೀಡಿಯೋ ಸಖತ್ ವೈರಲ್!

ಬಾಯ್ಕಾಟ್‌ನಿಂದ ಪಾಕ್‌ಗೆ ಎದುರಾಗುವ ಪರಿಣಾಮಗಳೇನು?
ಐಸಿಸಿ ನಿಯಮವನ್ನು ಉಲ್ಲಂಘಿಸಿದರೆ ಪಾಕಿಸ್ತಾನ್‌ ಕ್ರಿಕೆಟ್‌ ಬೋರ್ಡ್‌ ಅನ್ನು ಅಮಾನತುಗೊಳಿಸಲಾಗುತ್ತದೆ. ಪಾಕಿಸ್ತಾನ್‌ ಕ್ರಿಕೆಟ್‌ ತಂಡದ ಅಂತಾರಾಷ್ಟ್ರೀಯ ಮಾನ್ಯತೆಯನ್ನು ತಡೆ ಹಿಡಿಯಲಾಗುತ್ತದೆ. ಅಂದರೆ ಕೆಲ ವರ್ಷಗಳ ಕಾಲ ಪಾಕ್‌ ತಂಡ ಬ್ಯಾನ್‌ ಆಗಲಿದೆ. ಅಷ್ಟೇ ಅಲ್ಲದೆ ಪಾಕಿಸ್ತಾನ್‌ ಕ್ರಿಕೆಟ್‌ ಬೋರ್ಡ್‌ಗೆ ಐಸಿಸಿ ವಾರ್ಷಿಕ ಆದಾಯವನ್ನು ಪಾವತಿಸುವುದಿಲ್ಲ. ಭಾರತದ ವಿರುದ್ಧದ ಪಂದ್ಯದಿಂದ ಹಿಂದೆ ಸರಿದರೆ ಆದಾಯ ನಷ್ಟಕ್ಕೆ ಜಿಯೋ-ಸ್ಟಾರ್‌ಗೆ ಸಂಪೂರ್ಣ ಪರಿಹಾರವನ್ನು ಪಾವತಿಸಲು ಪಿಸಿಬಿಯನ್ನು ಒತ್ತಾಯಿಸಲಿದೆ. ಪಾಕಿಸ್ತಾನ್ ಸೂಪರ್ ಲೀಗ್​ ಆಡಲು ವಿದೇಶಿ ಆಟಗಾರರಿಗೆ ಎನ್​ಒಸಿ ನೀಡಲು ನಿರಾಕರಿಸಲಿದೆ.

ಕೋಟಿ-ಕೋಟಿ ನಷ್ಟ!?

ಭಾರತ-ಪಾಕಿಸ್ತಾನ ಟಿ20 ಪಂದ್ಯದ ಮೌಲ್ಯವು ಸಾಂಪ್ರದಾಯಿಕವಾಗಿ 500 ಮಿಲಿಯನ್ ಡಾಲರ್ (ರೂ. 4,500 ಕೋಟಿ) ಆಗಿದೆ. ಪ್ರಸಾರ ಹಕ್ಕುಗಳು, ಜಾಹೀರಾತು ಪ್ರೀಮಿಯಂಗಳು, ಪ್ರಾಯೋಜಕತ್ವ, ಟಿಕೆಟ್‌ಗಳು ಮತ್ತು ಇತರ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ಒಟ್ಟುಗೂಡಿಸಿದರೆ, ಇದು 4500 ಕೋಟಿ ರೂ ವಹಿವಾಟಿಗೆ ಕಾರಣವಾಗುತ್ತದೆ. ಆದರೆ ಪಂದ್ಯ ರದ್ದಾದರೆ ಈ ಎಲ್ಲಾ ಲೆಕ್ಕಾಚಾರ ತಲೆಕಳಗಾಗಲಿದೆ.

ಒಟ್ಟಿನಲ್ಲಿ ಈ ಪಂದ್ಯಕ್ಕಾಗಿ ಕಾಯುತ್ತಿರುವ ಸಾವಿರಾರು ಅಭಿಮಾನಿಗಳು ಈಗಾಗಲೇ ಲಕ್ಷಾಂತರ ರೂ ಖರ್ಚು ಮಾಡಿ ವಿಮಾನ ಟಿಕೆಟ್‌, ಹೋಟೆಲ್‌ ಬುಕ್‌ ಮಾಡಿದ್ದಾರೆ. ಪಂದ್ಯ ರದ್ದಾದರೆ ಅವರ ಕನಸು ಮತ್ತು ಹಣ ಎರಡೂ ಮಣ್ಣು ಪಾಲಾಗಲಿದೆ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page