Connect with us

LATEST NEWS

ಸೋಲಿನಲ್ಲಿ ಹಿಸ್ಟರಿ ಕ್ರಿಯೇಟ್ ..! ತಲೆಕೆಳಗಾಗುತ್ತಿದೆ ಸಿಎಸ್‌ಕೆ ಅಭಿಮಾನಿಗಳ ಲೆಕ್ಕಾಚಾರ ..!

Published

on

IPL 2025 : ಐಪಿಎಲ್‌ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸಿಎಸ್‌ಕೆ ತಂಡವು ಸತತ 5 ಪಂದ್ಯಗಳಲ್ಲಿ ಸೋಲಿನ ರುಚಿ ಅನುಭವಿಸುತ್ತಿದೆ. ಕಳೆದ 15 ವರ್ಷಗಳಲ್ಲಿ  ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಮ್ಮೆಯೂ ಸತತ ಐದು ಪಂದ್ಯಗಳಲ್ಲಿ ಸೋಲಿನ ರುಚಿ ನೋಡಿರಲಿಲ್ಲ. ಆದರೆ ಈ ಬಾರಿ ಚೆಪಾಕ್ ಮೈದಾನದಲ್ಲೇ ಯೆಲ್ಲೊ ಪಡೆಯ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಬಾರಿ ಚೆಪಾಕ್ ಮೈದಾನದಲ್ಲಿ ಆಡಿದ 4 ಪಂದ್ಯಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಚೆಪಾಕ್ ಮೈದಾನದಲ್ಲೂ ಸತತ ಮೂರು ಸೋಲುಂಡಿದೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ಸಿಎಸ್​ಕೆ ತಂಡವು ಚೆಪಾಕ್ ಮೈದಾನದಲ್ಲಿ ಹ್ಯಾಟ್ರಿಕ್ ಸೋಲು ಕಂಡಿರಲಿಲ್ಲ.

ಐಪಿಲ್‌ 2025 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದ್ದ ಸಿಎಸ್​ಕೆ ಬಳಿಕ ಸತತ ಐದು ಮ್ಯಾಚ್​ಗಳಲ್ಲೂ ಸೋತಿದೆ. ನಿನ್ನೆ (ಏ.11) ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್​ನ 25ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್‌ಕೆ ತಂಡವು 20 ಓವರ್​ಗಳಲ್ಲಿ ಕೇವಲ 103 ರನ್​ ಮಾತ್ರ ಕಲೆಹಾಕಿತು. ಈ ಗುರಿಯನ್ನು ಕೆಕೆಆರ್ ತಂಡವು ಕೇವಲ 10.1 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಜಯ ಸಾಧಿಸಿದೆ. ಅಷ್ಟು ಮಾತ್ರವಲ್ಲದೆ, ಈ ಬಾರಿ ಸಿಎಸ್​ಕೆ ವಿರುದ್ಧ ಆರ್​ಸಿಬಿ ಚೆಪಾಕ್ ಮೈದಾನದಲ್ಲಿ 17 ವರ್ಷಗಳ ಬಳಿಕ ಗೆಲುವು ದಾಖಲಿಸಿದೆ. ಇನ್ನು ಅದೇ ಮೈದಾನದಲ್ಲಿ 15 ವರ್ಷಗಳ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿಯುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಯಶಸ್ವಿಯಾಗಿದೆ. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸಹ ಸಿಎಸ್​ಕೆ ತವರಿನಲ್ಲಿ ಗೆಲುವಿನ ಪಾತಾಕೆಯನ್ನು ಹಾರಿಸಿದೆ.

ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 4 ವಿಕೆಟ್​ಗಳ ಜಯ ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು, ರಾಜಸ್ಥಾನ್ ರಾಯಲ್ಸ್ ತಂಡವು ಸಿಎಸ್​ಕೆ ವಿರುದ್ಧ 6 ರನ್​ಗಳ ರೋಚಕ ಜಯ ಸಾಧಿಸಿತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸಿಎಸ್​ಕೆ ವಿರುದ್ಧ 25 ರನ್​ಗಳಿಂದ ಜಯ ಸಾಧಿಸಿದರೆ, ಪಂಜಾಬ್ ಕಿಂಗ್ಸ್ 18 ರನ್​ಗಳ ಗೆಲುವು ದಾಖಲಿಸಿದೆ. ಇದೀಗ ನಿನ್ನೆ ನಡೆದ ಪಂದ್ಯಾಟದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಸಿಎಸ್​ಕೆ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದೆ. ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸತತ 5 ಸೋಲುಗಳ ರುಚಿ ನೋಡಿದಂತಾಗಿದೆ.

DAKSHINA KANNADA

ಎಎನ್ಎಫ್‌ ವಿಸರ್ಜನೆ ಮಾಡಲಾಗಿಲ್ಲ : ಗೃಹ ಸಚಿವ ಪರಮೇಶ್ವರ್

Published

on

ಮಂಗಳೂರು : ಎಎನ್ಎಫ್‌ ವಿಸರ್ಜನೆ ಮಾಡಲಾಗಿಲ್ಲ. ಅದರಲ್ಲಿರುವ ಸಿಬ್ಬಂದಿ ಸಂಖ್ಯೆ ಕಡಿಮೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ, ಜಿ. ಪರಮೇಶ್ವರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕೆಲವು ಕೊ*ಲೆ ಪ್ರಕರಣಗಳಿದಾಗಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು  ಸರಿದಾರಿಗೆ ತಂದು ಶಾಂತಿ ಕಾಪಾಡುವ ಉದ್ದೇಶದಿಂದ ರಚಿಸಲಾಗಿರುವ ವಿಶೇಷ ಕಾರ್ಯಪಡೆಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಇದನ್ನೂ ಓದಿ : ಬಾಂ*ಬ್ ಬೆದರಿಕೆ; ದೆಹಲಿಗೆ ಬರುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

ಸದ್ಯದ ಮಟ್ಟಿಗೆ ನಕ್ಸಲ್‌ ನಿಗ್ರಹ ದಳದ ಅಗತ್ಯತೆ ಇಲ್ಲದಿದ್ದರೂ ಯಾವುದಾದರೂ ಸಂದರ್ಭದಲ್ಲಿ ಅಗತ್ಯ ಬಂದರೆ ಬೇಕಾಗುತ್ತದೆ. ಈಗ  ನಮ್ಮ ರಾಜ್ಯದಲ್ಲಿ ನಕ್ಸಲರು ಇಲ್ಲದಿದ್ದರೂ ಒರಿಸ್ಸಾ, ಅಸ್ಸಾಂ ಮೊದಲಾದ ಕಡೆ ನಕ್ಸಲ್‌ ಚಟುವಟಿಕೆ ಇದೆ. ಅಲ್ಲಿಂದ ಇಲ್ಲಿಗೆ ಬರಲಾರರು ಎನ್ನಲಾಗದು. ಅವರು ಬಂದರೆ ತಯಾರಿರಬೇಕೆಂದು ನಕ್ಸಲ್‌ ನಿಗ್ರಹ ಪಡೆಯ ಸ್ವಲ್ಪ ಭಾಗವನ್ನು ಉಳಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

Continue Reading

LATEST NEWS

ಬಾಂ*ಬ್ ಬೆದರಿಕೆ; ದೆಹಲಿಗೆ ಬರುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

Published

on

ಮಂಗಳೂರು/ಬ್ಯಾಂಕಾಕ್ : ಥಾಯ್ಲೆಂಡ್‌ನ ಫುಕೆಟ್‌ನಿಂದ ಭಾರತದ ದೆಹಲಿಗೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂ*ಬ್ ಬೆದರಿಕೆ ಬಂದಿದೆ. ಹೀಗಾಗಿ ತುರ್ತು ಲ್ಯಾಂಡ್ ಮಾಡಲಾಗಿದೆ ಎಂದು ವರದಿಯಾಗಿದೆ.

ಸಾಂದರ್ಭಿಕ ಚಿತ್ರ

ಎಐ 379 ತುರ್ತು  ಭೂ ಸ್ಪರ್ಶ ಮಾಡಿದೆ. ಈ ವಿಮಾನದಲ್ಲಿ 156 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 9.30ಕ್ಕೆ ಫುಕೆಟ್ ವಿಮಾನ ನಿಲ್ದಾಣದಿಂದ ಈ ವಿಮಾನ ಟೇಕಾಫ್ ಅಗಿತ್ತು. ಅಂಡಮಾನ್ ಸಮುದ್ರದ ಮೇಲೆ ದೊಡ್ಡದೊಂದು ಸುತ್ತು ಹೊಡೆದು ಬಳಿಕ ದಕ್ಷಿಣ ಥಾಯ್ ದ್ವೀಪಕ್ಕೆ ಮರಳಿದೆ ಎಂದು ತಿಳಿದು ಬಂದಿದೆ. ಈ ವಿಮಾನ ಮಧ್ಯಾಹ್ನ 12.40ಕ್ಕೆ ದೆಹಲಿಗೆ ಬಂದಿಳಿಯಬೇಕಿತ್ತು.

ಇದನ್ನೂ ಓದಿ : ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ಪಂಜಾಬ್‌ನಲ್ಲಿ ತುರ್ತು ಭೂಸ್ಪರ್ಶ

ವಿಮಾನ ತುರ್ತು ಭೂ ಸ್ಪರ್ಶ ಮಾಡುತ್ತಿದ್ದಂತೆ ಪ್ರಯಾಣಿಕರೆಲ್ಲರನ್ನು ಅವರ ಲಗೇಜ್‌ನೊಂದಿಗೆ ಕೆಳಗಿಳಿಸಲಾಯಿತು. ಭದ್ರತಾ ಸಿಬ್ಬಂದಿ ಪ್ರಯಾಣಿಕರು ಮತ್ತು ಸರಕುಗಳನ್ನು ಸ್ಕ್ಯಾನ್ ಮಾಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

Continue Reading

LATEST NEWS

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತೆ ಸಿಬಿಐ ವಶಕ್ಕೆ

Published

on

ಮಂಗಳೂರು/ಬೆಂಗಳೂರು :  ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸುಪ್ರೀಂಕೋರ್ಟ್‌ನಿಂದ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಿದ್ದರು. ಈ ವೇಳೆ ಸಿಬಿಐ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ ಎದು ತಿಳಿದುಬಂದಿದೆ.


ಬಿಜೆಪಿ ಮುಖಂಡ ಯೋಗೀಶ್ ಗೌಡ ಹ*ತ್ಯೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿತ್ತು. ಹಾಗೇ ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಆದೇಶಿಸಿತ್ತು.

ಈ ಹಿನ್ನೆಲೆ ಕೋರ್ಟ್ ಮುಂದೆ ವಿನಯ್ ಕುಲಕರ್ಣಿ ಹಾಜರಾಗಿದ್ದು, ಅವರನ್ನು ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಏನಿದು ಪ್ರಕರಣ?

2016 ರಲ್ಲಿ ಧಾರವಾಡದಲ್ಲಿ ಬಿಜೆಪಿ  ನಾಯಕ ಯೋಗೀಶ್ ಗೌಡ ಹ*ತ್ಯೆ ನಡೆದಿತ್ತು. ಈ ಸಂಬಂಧ ಧಾರವಾಡ ಗ್ರಾಮಾಂತರ ಶಾಸಕ ವಿನಯ್ ಕುಲಕರ್ಣಿ 2020 ರಲ್ಲಿ ಬಂಧಿಸಲ್ಪಟ್ಟಿದ್ದರು. 2021 ರಲ್ಲಿ ಜಾಮೀನು ಪಡೆದು ಹೊರಬಂದಿದ್ದರು.

ಅವರು  ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ, ಜಾಮೀನು ಷರತ್ತುಗಳನ್ನು ಉಲ್ಲಂಘಿಸಲಾಗಿದೆ ಎಂದು ಸುಪ್ರೀಂಕೋರ್ಟ್‌ ಜಾಮೀನನ್ನು ರದ್ದುಗೊಳಿಸಿದೆ.

ಇದನ್ನೂ ಓದಿ : ಸುಟ್ಟು ಭಸ್ಮವಾದ ವಿಮಾನ…ಹಾನಿಯಾಗದ ಸ್ಥಿತಿಯಲ್ಲಿ ಸಿಕ್ಕಿತು ಭಗವದ್ಗೀತೆ ಪುಸ್ತಕ!

ಚುನಾವಣೆ ಗೆದ್ದಿದ್ದ ಕುಲಕರ್ಣಿ!

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು, ಕ್ಷೇತ್ರದ ಹೊರಗಿದ್ದರೂ ಗೆದ್ದು ಅಚ್ಚರಿ ಮೂಡಿಸಿದ್ದರು. 2 ವರ್ಷಗಳ ಕಾಲ ಕ್ಷೇತ್ರದ ಹೊರಗಿದ್ದುಕೊಂಡೇ ಆಡಳಿತ ನಡೆಸಿದ್ದರು. ಇದೀಗ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಮತ್ತೆ ಜೈಲು ಸೇರಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page