Connect with us

LATEST NEWS

ಮಾವನ ದೈ*ಹಿಕ ಕಿರುಕುಳ ಸಹಿಸಲಾಗದೆ ಆ*ತ್ಮಹ*ತ್ಯೆಗೆ ಶರಣಾದ ಸೊಸೆ

Published

on

ಮಂಗಳೂರು/ಬೆಂಗಳೂರು: 25 ವರ್ಷದ ಯುವತಿಯೊಬ್ಬಳು ದೈ*ಹಿಕ ಸಂಪರ್ಕಕ್ಕೆ ಪೀಡಿಸಿದಕ್ಕೆ ಪೆಟ್ರೋಲ್ ಸುರಿದು, ಬೆಂ*ಕಿ ಹಚ್ಚಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಆರೋಪಿ ಸಂಬಂಧದಲ್ಲಿ ಯುವತಿಗೆ ಮಾವನಾಗಬೇಕು. ಮೊದಲು ಇಬ್ಬರು ಚೆನ್ನಾಗಿದ್ದು, ಟ್ರಿಪ್ ಹೋಗುತ್ತಿದ್ದರು. ಇತ್ತೀಚೆಗೆ ಆರೋಪಿ ದೈ*ಹಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದ. ನಗರದ ಹೋಟೆಲ್ ವೊಂದರಲ್ಲಿ ರೂಮ್ ಬುಕ್ ಮಾಡಿದ್ದ ಯುವತಿಯನ್ನು ಹೋಟೆಲ್ ರೂಮ್ ಗೆ ಬರುವಂತೆ ಕರೆದಿದ್ದಾನೆ. ಬರದಿದ್ದರೆ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ನೊಂದ ಯುವತಿ ಪೆ*ಟ್ರೋಲ್ ಸುರಿ*ದುಕೊಂಡು ಬೆಂ*ಕಿ ಹಚ್ಚಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾಳೆ.

 

ಇದನ್ನೂ ಓದಿ : 2 ದಿನದ ಕಂದಮ್ಮನನ್ನು ತೋಟದಲ್ಲಿ ಬಿಟ್ಟು ಹೋದ ಹೆತ್ತಮ್ಮ

 

ಈ ಘಟನೆ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LATEST NEWS

ಮನೆ-ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಅಗ್ನಿ ಅವಘಡ

Published

on

ಧಾರವಾಡ: ಮನೆಗಳಿಗೆ ನೇರ ಸಂಪರ್ಕವನ್ನು ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಧಾರವಾಡದ ರಜತಗಿರಿ ಬಡಾವಣೆಯಲ್ಲಿ ನಡೆದಿದೆ.

ಮನೆ-ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಇದಾಗಿದ್ದು, ಬಡಾವಣೆಯಲ್ಲಿ ಗ್ಯಾಸ್ ಪೈಪ್ ಲೈನ್‌ನ ಎರಡೂ ಕಡೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ.

ಪೈಪ್‌ ಲೈನ್‌ಗೆ ಬೆಂಕಿ ಹೊತ್ತಿದ ಪರಿಣಾಮ ಮಾರ್ಗದುದ್ದಕ್ಕೂ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಹತ್ತಿರದ ನಿವಾಸಿಗಳು ಭಯದಿಂದ ಮನೆಯಿಂದ ಹೊರಗಡೆ ನಡೆದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

DAKSHINA KANNADA

ಜಪ್ಪಿನಮೊಗರು “ಜಯ – ವಿಜಯ” ಜೋಡುಕರೆ ಕಂಬಳ ಕೂಟದ ಫಲಿತಾoಶ ಪ್ರಕಟ

Published

on

ಮಂಗಳೂರು : ಮಂಗಳೂರು ನಗರದ ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 15 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳ ನಿನ್ನೆ (ಶನಿವಾರ) ಬೆಳಗ್ಗೆ ಆರಂಭವಾಗಿ ಇಂದು ಮಧ್ಯಾಹ್ನ ಕೊನೆಗೊಂಡಿದೆ.

ಈ ಬಾರಿಯ ಕಂಬಳ ಕೂಟದಲ್ಲಿ 144 ಜೊತೆ ಕೋಣಗಳು ಭಾಗವಹಿಸಿದ್ದವು. ಅದರಲ್ಲಿ  ಕನೆ ಹಲಗೆ  8 ಜೊತೆ, ಅಡ್ಡ ಹಲಗೆ 8 ಜೊತೆ, ಹಗ್ಗ ಹಿರಿಯ 19 ಜೊತೆ, ನೇಗಿಲು ಹಿರಿಯ 27 ಜೊತೆ, ಹಗ್ಗ ಕಿರಿಯ  22 ಜೊತೆ, ನೇಗಿಲು ಕಿರಿಯ  60 ಜೊತೆ ಕೋಣಗಳು ಭಾಗವಹಿಸಿದ್ದವು. ಇದೀಗ  “ಜಯ – ವಿಜಯ” ಜೋಡುಕರೆ ಕಂಬಳ ಕೂಟದ ಫಲಿತಾoಶ ಪ್ರಕಟವಾಗಿದೆ.

ಕನೆ ಹಲಗೆ:

( ನೀರು ನೋಡಿ ಬಹುಮಾನ)

ಪ್ರಥಮ: ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ

ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ

 

ದ್ವಿತೀಯ: ನಿಡ್ಡೋಡಿ ಕಾನ ರಾಮ ಸುವರ್ಣ

ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡ್ಡಾಪಿ ಸುರೇಶ್ ನಾಯ್ಕ್

ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್ “ಎ” (11.14)

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

 

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ “ಬಿ” (11.68)

ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ

ಇದನ್ನೂ ಓದಿ: ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಚಾಲನೆ

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ” (10.91)

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

 

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ” (11.52)

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.14)

ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ

 

ದ್ವಿತೀಯ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.20)

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ನೇಗಿಲು ಹಿರಿಯ:

ಪ್ರಥಮ: ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ (10.94)

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

 

ದ್ವಿತೀಯ: ಎರ್ಮಾಳ್ ರೋಹಿತ್ ಹೆಗ್ಡೆ(11.31)

ಓಡಿಸಿದವರು: ಆದಿ ಉಡುಪಿ ಜಿತೇಶ್

ನೇಗಿಲು ಕಿರಿಯ:

ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ “ಎ” (11.29)

ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

 

ದ್ವಿತೀಯ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಬಿ” (11.57)

ಓಡಿಸಿದವರು: ಸೂರಾಲ್ ಪ್ರದೀಪ್

 

 

Continue Reading

LATEST NEWS

ಈಜಲು ಹೋಗಿ ನೀರುಪಾಲಾದ ಇಬ್ಬರು ವಿದ್ಯಾರ್ಥಿಗಳು

Published

on

ಆನೇಕಲ್​: ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ.

ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು. ಬೊಮ್ಮಸಂಸ್ರದ ಎಸ್​ಎಫ್​ಎಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿಗೆ ತೆರಳಿದ್ದಾರೆ. ಬಳಿಕ ಕಲ್ಯಾಣಿಗೆ ಈಜಲು ಇಳಿದಿದ್ದಾರೆ. ಈ ಪೈಕಿ ದೀಪು, ಯೋಗೇಶ್ವರ್​ಗೆ ಈಜಲು ಆಗದೆ ಪರದಾಡಿದ್ದಾರೆ. ಕೆಲ ಕಾಲ ಜೀವ ಉಳಿಸಿಕೊಳ್ಳಲು ಹೋರಾಟ ನಡೆಸಿದ್ದಾರೆ. ಇತ್ತ ರಕ್ಷಣೆ ಮಾಡಲು ಸಾಧ್ಯವಾಗದೆ ಉಳಿದ ಸ್ನೇಹಿತರು ಕಂಗಾಲಾಗಿದ್ದಾರೆ.

ಈಜಲು ಬಾರದೆ ಒಬ್ಬರಾದ ಮೇಲೆ ಒಬ್ಬರಂತೆ ಇಬ್ಬರು ಸ್ನೇಹಿತರು ಇನ್ನುಳಿದ ಸ್ನೇಹಿತರ ಕಣ್ಣೆದುರೇ ಮುಳುಗಿ ಪ್ರಾಣಬಿಟ್ಟಿದ್ದಾರೆ. ಘಟನೆಯ ಸಂಪೂರ್ಣ ವಿಡಿಯೋ ಅಲ್ಲಿದ್ದ ಯುವಕನ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page