Connect with us

LATEST NEWS

ಆಸ್ಪತ್ರೆಯ ಶುಲ್ಕ ಪಾವತಿಸಲಾಗದೆ ಮಗುವನ್ನೇ ಮಾರಾಟ ಮಾಡಿದ ತಂದೆ!

Published

on

ಮಂಗಳೂರು/ಕುಶಿನಗರ : ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಲ್ಕ ಪಾವತಿಸಲು ಸಾಧ್ಯವಾಗದ ಹಿನ್ನೆಲೆ ತಂದೆಯೊಬ್ಬ ತನ್ನ ಮೂರು ವರ್ಷದ ಮಗನನ್ನು ಮಾರಾಟ ಮಾಡಿದ ಘಟನೆ ಉತ್ತರ ಪ್ರದೇಶದ ಕುಶಿ ನಗರದಲ್ಲಿ ನಡೆದಿದೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬರ್ವಾಪಟ್ಟಿಯ ನಿವಾಸಿ ಹರೀಶ್ ಪಟೇಲ್ ಬಂಧಿತ.

ಹರೀಶ್ ಪಟೇಲ್ ತನ್ನ ಪತ್ನಿಯನ್ನು ಆರನೇ ಮಗುವಿನ ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ, ಆಸ್ಪತ್ರೆಯ ಶುಲ್ಕ ಭರಿಸಲು ಸಾಧ್ಯವಾಗಿಲ್ಲ. ಹೀಗಾಗಿ ಆತ ತನ್ನ ಮೂರನೇ ಮಗುವನ್ನು ಮಾರಾಟ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಪ್ರಕರಣದಲ್ಲಿ ಭಾಗಿಯಾದ ಮಗುವನ್ನು ದತ್ತು ಪಡೆದ ಪೋಷಕರು, ಆಸ್ಪತ್ರೆಯ ಸಹಾಯಕಿ, ನಕಲಿ ವೈದ್ಯೆ ತಾರಾ ಕುಶ್ವಾಹಾ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ಜಾತ್ರಾ ರಥೋತ್ಸವದ ವೇಳೆ ದುರಂ*ತ; ರಥದ ಚಕ್ರಕ್ಕೆ ಸಿಲುಕಿ ಯುವಕ ಸಾ*ವು

ಅಲ್ಲದೇ, ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ಕಾನಸ್ಟೇಬಲ್ ನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಮಗುವನ್ನು ಪೋಷಕರಿಗೆ ಹಿಂದಿರುಗಿಸಲಾಗಿದೆ ಎಂದು ತಿಳಿದು ಬಂದಿದೆ.

FILM

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್ ಪೋಸ್ಟ್!

Published

on

ಕನ್ನಡ ಚಿತ್ರರಂಗದ ಮಾದರಿ ದಂಪತಿಗಳಾದ ಯಶ್ ಮತ್ತು ರಾಧಿಕಾ ಪಂಡಿತ್ ಈ ಬಾರಿಯ ವ್ಯಾಲೆಂಟೈನ್ಸ್ ದಿನವನ್ನು ಪ್ರೀತಿಯಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪತಿ ಯಶ್ ಅವರೊಂದಿಗೆ ಇರುವ ಸುಂದರವಾದ ಫೋಟೋವನ್ನು ಹಂಚಿಕೊಳ್ಳುವ ಮೂಲಕ ವಿಶ್ ಮಾಡಿದ್ದಾರೆ.


ರಾಧಿಕಾ ಪಂಡಿತ್‌ ಮತ್ತು ಯಶ್‌ ಇಬ್ಬರೂ ಧಾರಾವಾಹಿ ಮೂಲಕ ಪರಿಚಯ ಆಗಿದ್ದು, ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿ, ಬಳಿಕ ಒಟ್ಟಾಗಿ ಸಿನಿಮಾ ಮಾಡಿದರು. ತೆರೆಮೇಲೆ ಜೋಡಿಯಾಗಿದ್ದ ಇವರು ತೆರೆಹಿಂದೆಯೂ ಕಪಲ್‌ ಆಗಿದ್ದಾರೆ. ಇದೀಗ ಯಶ್‌ ಅವರ ಕುರಿತು ರಾಧಿಕಾ ಪಂಡಿತ್‌ ಹಂಚಿಕೊಂಡಿರೋ ಪೋಸ್ಟ್‌ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಯಶ್ ಅವರಿಗೆ ಧನ್ಯವಾದ ಅರ್ಪಿಸಿರುವ ರಾಧಿಕಾ, ‘ನನ್ನ ಅಭದ್ರತೆಯನ್ನು ತೆಗೆದು ಹಾಕಿದವನು ನೀನು. ನಿನ್ನ ಕಣ್ಣುಗಳಲ್ಲಿ ದಣಿವು, ಬೇರೆ ಯಾರೂ ಗಮನಿಸದ ತ್ಯಾಗ, ದೂರು ನೀಡದೆ ನೀನು ಹೊತ್ತುಕೊಂಡ ದೀರ್ಘ ಭಾರ ನನಗೆ ಕಾಣುತ್ತಿದೆ. ಅದು ನಮಗಾಗಿ ಎಂದು ನನಗೆ ತಿಳಿದಿದೆ. ನನ್ನನ್ನು ದಿನವೂ ಆಯ್ಕೆ ಮಾಡಿದ್ದಕ್ಕೆ ನಿನಗೆ ಧನ್ಯವಾದ, ಹ್ಯಾಪಿ ವ್ಯಾಲೆಂಟೈನ್ಸ್ ಡೇ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಇಬ್ಬರೂ ಜೊತೆಯಾಗಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಪ್ರೇಮಿಗಳ ದಿನದ ಶುಭಾಶಯ ಕೋರಿದ್ದಾರೆ. ರಾಧಿಕಾ ಪಂಡಿತ್ ಅವರ ಈ ಪೋಸ್ಟ್ ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ಸಾವಿರಾರು ಅಭಿಮಾನಿಗಳು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

Continue Reading

LATEST NEWS

ಚರಂಡಿಗೆ ಬಿ*ದ್ದು ಬಾಲಕ ಸಾ*ವು

Published

on

ಮಂಗಳೂರು/ಬೀದರ್ : ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕ  ಚರಂಡಿಗೆ ಬಿ*ದ್ದು ಸಾ*ವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಅವಿನಾಶ್ ಮೃ*ತ ಬಾಲಕ. ಮನೆಯ ಮುಂದೆ ಆಡುತ್ತಿದ್ದ ಬಾಲಕ ಕಾಣೆಯಾಗಿದ್ದ. ಹೀಗಾಗಿ  ಕುಟುಂಬಸ್ಥರು ಹುಡುಕಾಡಿದ್ದು, ಬಾಲಕನ ಸುಳಿವು ಸಿಕ್ಕಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾ*ವನ್ನಪ್ಪಿರುವುದು ಗೊತ್ತಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಬಗದಲ್ ಪೊಲೀಸ್ ವ್ಯಾಪ್ತಿಯಲ್ಲಿ ಈ ದುರಂ*ತ ಸಂಭವಿಸಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Continue Reading

hasana

ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

Published

on

ಹಾಸನ: ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣದೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ.


ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕ (29) ಎಂಬುವವರು ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದಕ್ಕೆ ಆಗಮಿಸಿದ್ದರು. ಫೆಬ್ರವರಿ 12 ರಂದು ರಾತ್ರಿ 7-30 ರ ಸುಮಾರಿಗೆ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕ ತಮಗೆ ಯಾರೋ ಪರಿಚಯದವರು ಸಿಕ್ಕಿರುವುದಾಗಿ ತಿಳಿಸಿದ್ದರು. ಆ ಮಾತು ಮುಗಿಯುತ್ತಿದ್ದಂತೆಯೇ ಫೋನ್‌ ಸ್ವಿಚ್‌ ಆಫ್‌ ಆಗಿದೆ.

ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರೂ ಸಹ ಸ್ಪಂದಿಸಿದ ಅರೆಹಳ್ಳಿ ಮತ್ತು ಬೇಲೂರು ಪೊಲೀಸರ ವಿರುದ್ಧ ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಮಹಿಳೆಯ ಬ್ಯಾಗ್, ಚಪ್ಪಲಿ ಹಾಗೂ ಒಳ ಉಡುಪುಗಳು ಪತ್ತೆಯಾಗಿರುವುದು ತೀವ್ರ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಮಹಿಳೆಯು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಚಿನ್ನಾಭರಣಗಳನ್ನು ಧರಿಸಿದ್ದರು ಎಂದು ಹೇಳಲಾಗುತ್ತಿದೆ. ಒಡವೆಗಾಗಿ ದುಷ್ಕರ್ಮಿಗಳು ಮಹಿಳೆಯನ್ನ ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಪೊಲೀಸರು ಈಗ ತನಿಖೆ ಚುರುಕುಗೊಳಿಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page