Connect with us

DAKSHINA KANNADA

ಹಳೆ ಮೀಸಲು ಪಟ್ಟಿಯಂತೆ ಪಾಲಿಕೆ ಚುನಾವಣೆ ..!? ಶೀಘ್ರವೇ ಆಗಲಿದೆ ಘೋಷಣೆ..!

Published

on

ಮಂಗಳೂರು / ಮೈಸೂರು: ಮಂಗಳೂರು ಸೇರಿದಂತೆ ರಾಜ್ಯದ ಐದು ಮಹಾನಗರ ಪಾಲಿಕೆಗೆ ಈ ವರ್ಷದಲ್ಲೇ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ. ಸರ್ಕಾರದಿಂದ ಈ ಐದೂ ಮಹಾನಗರ ಪಾಲಿಕೆಗಳ ಮೀಸಲು ಪಟ್ಟಿ ನೀಡಿದ್ರೆ ಅದರಂತೆ ಚುನಾವಣೆ ನಡೆಯಲಿದೆ. ಇಲ್ಲವಾದಲ್ಲಿ ಹೈ ಕೋರ್ಟ್ ಮೊರೆ ಹೋಗಿ ಹಳೆ ಮೀಸಲು ಪಟ್ಟಿಯಂತೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.


ಮಂಗಳೂರು ಸೇರಿದಂತೆ ಮೈಸೂರು, ಶಿವಮೊಗ್ಗ, ದಾವರಣಗೆರೆ, ತುಮಕೂರು ಈ ಐದು ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿನಿದಿಗಳ ಅವದಿ ಮುಕ್ತಾಯಗೊಂಡಿದೆ. ಈ ಐದೂ ಮಹಾನಗರ ಪಾಲಿಕೆಯಲ್ಲಿ ಚುನಾವಣೆ ನಡೆಸಬೇಕಾಗಿದ್ದು, ಚುನಾವಣಾ ಆಯೋಗ ರಾಜ್ಯ ಸರ್ಕಾರದ ಬಳಿ ಮೀಸಲು ಪಟ್ಟಿ ನೀಡಲು ಮನವಿ ಮಾಡಿದೆ. ನಿಯಮಾನುಸಾರ ಸರ್ಕಾರ ಮೀಸಲು ಪಟ್ಟಿ ಕೊಟ್ಟ ಬಳಿಕ ಅದರಂತೆ ಚುನಾವಣೆ ನಡೆಸಲಾಗುತ್ತದೆ. ಆದ್ರೆ ಸರ್ಕಾರ ಇನ್ನೂ ಮೀಸಲು ಪಟ್ಟಿ ನೀಡುವ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗೊಂದು ವೇಳೆ ಮೀಸಲು ಪಟ್ಟಿ ನೀಡದೇ ಇದ್ರೆ ಈ ಹಿಂದಿನ ಮೀಸಲು ಪಟ್ಟಿಯ ಆಧಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣ ಆಯಕ್ತು ಜಿ.ಎಸ್. ಸಂಗ್ರೇಶಿ ಮಾಹಿತಿ ನೀಡಿದ್ದಾರೆ. ಮತದಾರರ ಪಟ್ಟಿ ಸಿದ್ಧವಾಗಿದೆಯಾದ್ರೂ ಮೀಸಲು ಪಟ್ಟಿಗಾಗಿ ಮಾತ್ರ ಕಾಯಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

DAKSHINA KANNADA

‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

Published

on

ಮಂಗಳೂರು: ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ “ನಶೆ ಮುಕ್ತ ಮಂಗಳೂರು’  ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಪೌಂಡೇಶನ್‌ನ ಸುಹೈಲ್ ಕಂದಕ್ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅಭಿಯಾನದ ಉದ್ಘಾಟನೆಯನ್ನು ಸ್ಪೀಕರ್ ಯು ಟಿ ಖಾದರ್ ನೆರವೇರಿಸುವರು. ಸಂಸದ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್ ವಿ ದರ್ಶನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿರುತ್ತಾರೆ ಎಂದರು.

ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಅಭಿಯಾನವನ್ನು ಆಯೋಜಿಸುತ್ತಿದ್ದು ಇದರ ಅಂಗವಾಗಿ ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ಹಲವು ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರ ಎಸಿಪಿ ರವೀಶ್ ನಾಯಕ್, ಕಾಂಗ್ರೆಸ್ ನಾಯಕ ವಿಕಾಸ್ ಶೆಟ್ಟಿ, ಬಾರ್ನ್ ಅಗೇನ್ ರಿಕವರಿ ಸೆಂಟರ್, ಬೀನಾ ಸಲ್ದಾನ ಮೊದಲಾದವರಿದ್ದರು.

 

Continue Reading

DAKSHINA KANNADA

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ: ವಾರ್ಷಿಕ ಮಹೋತ್ಸವ

Published

on

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವ ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜ, ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆಯೊಂದಿಗೆ ದೇವರ ಅನುಗ್ರಹವು ಬೇಕು. ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ  ಇದನ್ನು ಗಳಿಸಬಹುದು ಎಂದರು.

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ : ಕಾವ್ಯಾ ನಾಮಿನೇಟ್ ಮಾಡಿದ್ಯಾರನ್ನ ಗೊತ್ತಾ!? ರಣರಂಗವಾಯ್ತು ‘ಬಿಗ್’ ಮನೆ

ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ  ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ  ಅನೇಕ ಭಕ್ತರು ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page