Connect with us

LATEST NEWS

50 ಪೈಸೆಯಿಂದ ಹಿಡಿದು 20 ರೂ.ವರೆಗಿನ ನಾಣ್ಯಗಳು ಈಗಲೂ ಕಾನೂನುಬದ್ಧ: ಆರ್‌ಬಿಐ

Published

on

ಹೊಸದಿಲ್ಲಿ: 10 ರೂಪಾಯಿ ಅಥವಾ 20 ರೂಪಾಯಿ ನಾಣ್ಯವನ್ನು ಅಂಗಡಿ ಮಳಿಗೆಗಳು, ವ್ಯಾಪಾರಿಗಳು ಅಥವಾ ಯಾವುದೇ ವ್ಯಕ್ತಿಗೆ ನೀಡಿದರೂ ಅವರು ಅದನ್ನು ಸ್ವೀಕರಿಸಲು ಹಿಂದೇಟು ಹಾಕುವುದು ಸಾಮಾನ್ಯ. ಇನ್ನು 50 ಪೈಸೆಯ ನಾಣ್ಯವನ್ನು ಯಾರಿಗಾದರೂ ನೀಡಿದರೆ ಅವರು ವಿಚಿತ್ರವಾಗಿ ನೋಡುವುದರಲ್ಲಿ ಅನುಮಾನವೇ ಇಲ್ಲ. ಏಕೆಂದರೆ, ಈ ನಾಣ್ಯ ‘ಈಗ ಚಾಲ್ತಿಯಲ್ಲೇ ಇಲ್ಲ. ಅದನ್ನು ನಿಷೇಧಿಸಿ ವರ್ಷಗಳೇ ಕಳೆದಿವೆ’ ಎಂಬಂತೆ ಮಾತನಾಡುತ್ತಾರೆ.

ಆದರೆ, ಇದೆಲ್ಲ ಸುಳ್ಳು ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಇದೀಗ ಸ್ಪಷ್ಟನೆ ನೀಡಿದೆ. 50 ಪೈಸೆಯಿಂದ ಹಿಡಿದು 20 ರೂ.ವರೆಗಿನ ನಾಣ್ಯಗಳು ಇನ್ನೂ ಕಾನೂನು ಬದ್ಧವಾಗಿ ಚಲಾವಣೆಯಲ್ಲಿವೆ ಎಂದು ಆರ್‌ಬಿಐ ಸ್ಪಷ್ಟಪಡಿಸಿದ್ದು, ಅವುಗಳ ಸಿಂಧುತ್ವದ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಗೊಂದಲ ಮತ್ತು ತಪ್ಪು ಮಾಹಿತಿಗೆ ತೆರೆ ಎಳೆದಿದೆ.

ನಾಣ್ಯಗಳ ವಿಚಾರವಾಗಿ ಜನರಲ್ಲಿ ಜಾಗೃತಿ ಮೂಡಿಸಲು ‘ಆರ್‌ಬಿಐ ಕೆಹ್ತಾ ಹೈ’ ಎಂಬ ಬ್ಯಾನರ್ ಅಡಿಯಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿರುವ ಆರ್​ಬಿಐ, ವಾಟ್ಸ್​ಆ್ಯಪ್​ ಮೂಲಕ ಜನರಿಗೆ ವಿಡಿಯೋ ಸಂದೇಶ ಹಂಚಿಕೊಂಡಿದೆ. ಜನರು ನಾಣ್ಯಗಳೊಂದಿಗೆ ವಹಿವಾಟು ನಡೆಸಲು ಪ್ರಯತ್ನಿಸುತ್ತಿರುವ ಎರಡು ವಿಡಿಯೋಗಳನ್ನು ಆರ್​ಬಿಐ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಅಮೆರಿಕದ ಪಕ್ಕದ ದೇಶದಿಂದಲೂ ಭಾರತಕ್ಕೆ ಸುಂಕದ ಬರೆ!

ಆ ವಿಡಿಯೋಗಳಲ್ಲಿ ಕೆಲ ಅಂಗಡಿ ಮಾಲಕರು ನಾಣ್ಯ ಸ್ವೀಕರಿಸಲು ನಿರಾಕರಿಸುವುದನ್ನು ತೋರಿಸಲಾಗಿದೆ. ಅದೇ ರೀತಿ ವೀಡಿಯೋದ ಕೊನೆಯಲ್ಲಿ ಓರ್ವ ಅಂಗಡಿ ಮಾಲಕ ನಾಣ್ಯ ಸ್ವೀಕರಿಸುವುದನ್ನು ತೋರಿಸುವ ಮೂಲಕ ನಾಣ್ಯಗಳು ಇನ್ನೂ ಮಾನ್ಯವಾಗಿವೆ ಮತ್ತು ಚಾಲ್ತಿಯಲ್ಲಿದ್ದು, ಭಾರತದಲ್ಲಿ ಎಲ್ಲಿ ಬೇಕಾದರೂ ಪಾವತಿಸಬಹುದು ಎಂಬ ಸಂದೇಶವನ್ನು ನೀಡಿದೆ.

ನಾಣ್ಯಗಳ ಕುರಿತಾದ ವದಂತಿಗಳನ್ನು ನಂಬದಿರಿ. ಒಂದೇ ಮೌಲ್ಯದ ವಿಭಿನ್ನ ನಾಣ್ಯ ವಿನ್ಯಾಸಗಳು ದೀರ್ಘಕಾಲದವರೆಗೆ ಚಲಾವಣೆಯಲ್ಲಿರುತ್ತವೆ. ಅವೆಲ್ಲವೂ ಸ್ವೀಕಾರಾರ್ಹ ಎಂದು ಆರ್‌ಬಿಐ ವೀಡಿಯೋದಲ್ಲಿ ತಿಳಿಸಿದೆ. 50 ಪೈಸೆ, 1 ರೂ. 2 ರೂ. 5 ರೂ. 10 ರೂ. ಮತ್ತು ರೂ. 20 ರೂ. ಸೇರಿದಂತೆ ಎಲ್ಲಾ ಮುಖಬೆಲೆಯ ನಾಣ್ಯಗಳು ಭಾರತದಾದ್ಯಂತ ಕಾನೂನುಬದ್ಧವಾಗಿ ಚಲಾವಣೆಯಲ್ಲಿವೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ.

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page