Connect with us

LATEST NEWS

ಪ್ರಥಮ ವರ್ಷದ ಎರ್ಮಾಳ್ “ತೆಂಕ – ಬಡಾ” ಜೋಡುಕರೆ ಕಂಬಳ ಕೂಟದ ಫಲಿತಾoಶ

Published

on

ಉಡುಪಿ: ಶ್ರೀ ಜನಾರ್ದನ ಕಂಬಳ ಸಮಿತಿ ವತಿಯಿಂದ ಎರ್ಮಾಳು ತೆಂಕ-ಬಡಾ ಜೋಡುಕರೆ ಕಂಬಳ ಸಮಾಪನಗೊಂಡಿದೆ. ಸುಮಾರು 300 ವರ್ಷಗಳ ಇತಿಹಾಸವಿರುವ ಬಡಕೊಟ್ಟು ಬಾಕಿಮಾರು ಗದ್ದೆಯಲ್ಲಿ ಸಾಂಪ್ರದಾಯಿಕವಾಗಿ ಆಚರಿಸುವ ಪ್ರಥಮ ವರ್ಷದ ಹೊನಲು ಬೆಳಕಿನ ಕಂಬಳವಿದಾಗಿದ್ದು, ಕಂಬಳದ ವೀಕ್ಷಣೆಗೆ ಸಾವಿರಾರು ಮಂದಿ ಕಂಬಳ ಪ್ರೇಮಿಗಳು ಆಗಮಿಸಿದರು.


ಈ ಬಾರಿ ಕೂಟದಲ್ಲಿ ಕನೆಹಲಗೆ 11 ಜೊತೆ, ಅಡ್ಡಹಲಗೆ 8 ಜೊತೆ, ಹಗ್ಗ ಹಿರಿಯ 22 ಜೊತೆ, ನೇಗಿಲು ಹಿರಿಯ 29 ಜೊತೆ, ಹಗ್ಗ ಕಿರಿಯ 35 ಜೊತೆ, ನೇಗಿಲು ಕಿರಿಯ 90 ಜೊತೆ ಸೇರಿದಂತೆ ಒಟ್ಟು 195 ಜೊತೆ ಕೋಣಗಳು ಭಾಗಿಯಾಗಿದ್ದವು.

ಪ್ರಶಸ್ತಿ ವಿಜೇತರ ವಿವರ ಹೀಗಿದೆ:

ಅಡ್ಡ ಹಲಗೆ:

ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ (12.60)
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಮೋರ್ಲ ಪ್ರಾಪ್ತಿ ಗಿರೀಶ್ ಆಳ್ವ (13.12)
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಬಿ” (11.75)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ (11.86)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (12.14)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ದ್ವಿತೀಯ: ಉಡುಪಿ ಕಕ್ಕುಂಜೆ ರಾಧ ನಿಲಯ ಸಂತೋಷ್ ಶಿವರಾಜ್ ಪೂಜಾರಿ (12.20)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ನೇಗಿಲು ಹಿರಿಯ:

ಪ್ರಥಮ: 80 ಬಡಗುಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ “ಬಿ” (11.64)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಉಳೆಪಾಡಿ ಪುಲ್ಲೋಡಿಬೀಡು ಉದಯ್ ಶೆಟ್ಟಿ “ಬಿ” (11.73)
ಓಡಿಸಿದವರು: ಪಟ್ಟೆ ಗುರುಚರಣ್

ನೇಗಿಲು ಕಿರಿಯ:

ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ” (11.33)
ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಪದವು ಕಾನಡ್ಕ ಫ್ಲೇವಿ ಡಿಸೋಜ “ಎ” (11.60)
ಓಡಿಸಿದವರು: ಬೈಂದೂರು ಮಂಜುನಾಥ ಗೌಡ

DAKSHINA KANNADA

ರಾಜ್ಯದಲ್ಲಿ ಎಲ್ ಪಿಜಿ ಪೂರೈಕೆಯಲ್ಲಿ ವ್ಯತ್ಯಯ; ಕುಕ್ಕೆ ಕ್ಷೇತ್ರಕ್ಕೂ ತಟ್ಟಿದ ಬಿಸಿ.. ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ

Published

on

ಸುಬ್ರಹ್ಮಣ್ಯ: ಇರಾನ್-ಇಸ್ರೇಲ್ ಸಂಘರ್ಷದ ಕಾರಣದಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಇದೀಗ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ಇದರ ಬಿಸಿ ತಟ್ಟಿದೆ.


ಸುಬ್ರಹ್ಮಣ್ಯ ದೇಗುಲದಲ್ಲಿ ಪ್ರತಿದಿನ ಬೆಳಿಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು. ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಇಂದಿನಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಬೇಯಿಸುವ ತಿನಿಸು ಬದಲಾಗಿ ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಸಂಘರ್ಷ: ಮಾ.12ರಂದು ಮಂಗಳೂರು- ಮಧ್ಯ ಪ್ರಾಚ್ಯ ಮಾರ್ಗದ 14 ವಿಮಾನಗಳು ರದ್ದು

ಇದರ ನಡುವೆ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬದಲಾವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Continue Reading

LATEST NEWS

ಗ್ಯಾಸ್ ಟ್ರಬಲ್: ಚನ್ನಪಟ್ಟಣದ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಕಳವು!

Published

on

ರಾಮನಗರ: ಒಂದೆಡೆ ಇಸ್ರೇಲ್-ಇರಾನ್ ಯುದ್ಧದ ಭೀತಿಯಿಂದ ಗ್ಯಾಸ್ ಸಿಲಿಂಡರ್ ಅಭಾವ ತಲೆದೂರಿದ್ದರೆ, ಮತ್ತೊಂದೆಡೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರ ಹಾವಳಿ ಮಿತಿಮೀರಿದೆ. ಅಡುಗೆ ಅನಿಲ ಸಿಲಿಂಡರ್ ಕಳ್ಳತನವಾಗಿರುವ ಪ್ರಕರಣ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.


ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದ ಕಳ್ಳ ಕಂಪೌಂಡ್‌ ಒಳಗೆ ಇದ್ದಂತಹ ಸಿಲಿಂಡರ್‌ ಕದ್ದು ಪರಾರಿಯಾಗಿದ್ದಾನೆ. ಫುಲ್‌ ಗ್ಯಾಸ್‌ ಇದ್ದ ಸಿಲಿಂಡರ್‌ನನ್ನು ಕಳ್ಳ ಹೊತ್ತೊಯ್ದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಡಕೆ ತೋಟಕ್ಕೆ ಬೆಂಕಿ; ಲಕ್ಷಾಂತರ ರೂಪಾಯಿ ಹಾನಿ

ಮೊದಲೇ ಸಿಲಿಂಡ್‌ ಪೂರೈಕೆ ವ್ಯತ್ಯಯದಿಂದ ಆತಂಕಗೊಂಡಿದ್ದ ನಿವಾಸಿಗಳಿಗೆ ಸಿಲಿಂಡರ್‌ ಕಳ್ಳರ ಕಾಟ ಹೊಸ ತಲೆನೋವಾಗಿದೆ ಎನ್ನಲಾಗಿದೆ. ಈ ಕುರಿತು ಚನ್ನಪಟ್ಟಣ ಟೌನ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

Continue Reading

LATEST NEWS

ಇರಾನ್-ಇಸ್ರೇಲ್ ಸಂಘರ್ಷ: ಮಾ.12ರಂದು ಮಂಗಳೂರು- ಮಧ್ಯ ಪ್ರಾಚ್ಯ ಮಾರ್ಗದ 14 ವಿಮಾನಗಳು ರದ್ದು

Published

on

ಮಂಗಳೂರು: ಪಶ್ಚಿಮ ಏಷ್ಯಾ- ಮಧ್ಯ ಪ್ರಾಚ್ಯದಲ್ಲಿ ಯುದ್ಧದ ಸನ್ನಿವೇಶ ಇರುವ ಹಿನ್ನೆಲೆಯಲ್ಲಿ ಮಧ್ಯ ಪ್ರಾಚ್ಯ ದೇಶಗಳ ವಾಯು ಪ್ರದೇಶವನ್ನು ಮುಚ್ಚಿರುವುದರಿಂದ ಗುರುವಾರ (ಮಾ. 12) ಮಂಗಳೂರು ಮತ್ತು ಮಧ್ಯ ಪ್ರಾಚ್ಯ ದೇಶಗಳ ನಡುವಣ 14 ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.

ಮಂಗಳೂರು- ದುಬಾಯಿ ಮತ್ತು ದುಬಾಯಿ ಮಂಗಳೂರು ಮಾರ್ಗದ ಎರಡೂ ವಿಮಾನಗಳ ಓಡಾಟ ರದ್ದಾಗಿದೆ. ಹಾಗೆಯೇ ಮಂಗಳೂರು – ದೋಹಾ ಮತ್ತು ದೋಹಾ ಮಂಗಳೂರು, ಮಂಗಳೂರು- ಬಹ್ರೈನ್ ಮತ್ತು ಬಹ್ರೈನ್- ಮಂಗಳೂರು, ಮಂಗಳೂರು- ಕುವೈತ್ ಮತ್ತು ಕುವೈತ್- ಮಂಗಳೂರು, ಮಂಗಳೂರು- ದಮಾಮ್ ಮತ್ತು ದಮಾಮ್- ಮಂಗಳೂರು, ಮಂಗಳೂರು- ಅಬುಧಾಬಿ ಮತ್ತು ಅಬಿಧಾಬಿ- ಮಂಗಳೂರು ನಡುವಣ ವಿಮಾನ ಸಂಚಾರವನ್ನು ರದ್ದು ಪಡಿಸಲಾಗಿದೆ ಎಂದು ಮಂಗಳೂರು ವಿಮಾನ ನಿಲ್ದಾಣದ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಹಳೆ ಕಾಲಕ್ಕೆ ಮರಳಿದ ಹೋಟೆಲ್‌ಗಳು: ಗ್ಯಾಸ್ ಬಂದ್ ಬೆನ್ನಲ್ಲೇ ಒಲೆ ಹಚ್ಚಿದ ಮಾಲೀಕರು

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳ ಮತ್ತು ಕೇರಳ ರಾಜ್ಯದಿಂದ ಅಧಿಕ ಸಂಖ್ಯೆಯ ಜನರು ದುಡಿಯುತ್ತಿದ್ದಾರೆ. ಹಲವಾರು ಮಂದಿ ಸ್ವಂತ ಉದ್ಯಮಗಳನ್ನು ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಗಳೂರು ಮತ್ತು ಮಧ್ಯ ಪ್ರಾಚ್ಯ ದೇಶಗಳ ಮಧ್ಯೆ ವೈಮಾನಿಕ ಸಂಚಾರ ವ್ಯತ್ಯಯಗೊಂಡ ಕಾರಣ ಕರಾವಳಿಯ ಜನರಿಗೆ ಬಹಳಷ್ಟು ಸಮಸ್ಯೆಗಳಾಗಿವೆ. ಏನಾಗುತ್ತದೋ ಎಂಬ ಆತಂಕ ಕೂಡಾ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page