Connect with us

ದುಬೈಯಿಂದ ಇಂದು ಮಂಗಳೂರಿಗೆ ಎರಡನೇ ವಿಮಾನ ಆಗಮನ: ಬರಮಾಡಿಕೊಳ್ಳಲು ಜಿಲ್ಲಾಡಳಿತ ಸಜ್ಜು..

Published

on

ದುಬೈಯಿಂದ ಇಂದು ಮಂಗಳೂರಿಗೆ ಎರಡನೇ ವಿಮಾನ ಆಗಮನ: ಬರಮಾಡಿಕೊಳ್ಳಲಿ ಜಿಲ್ಲಾಡಳಿತ ಸಜ್ಜು..

ಮಂಗಳೂರು: ಕೇಂದ್ರ ಸರಕಾರದ “ವಂದೇ ಭಾರತ್ ಮಿಷನ್’ ಕಾರ್ಯಾಚರಣೆಯಲ್ಲಿ ದುಬೈಯಿಂದ ಎರಡನೇ ವಿಮಾನ ಇಂದು (ಮೇ 18) ಸಂಜೆ 6.30ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಲಾಕ್‌ ಡೌನ್‌ ನಿಂದಾಗಿ ದುಬೈಯಲ್ಲಿ ಸಿಲುಕಿಕೊಂಡಿರುವ 35 ಗರ್ಭಿಣಿಯರ ಸಹಿತ 173 ಮಂದಿ ಪ್ರಯಾಣಿಕರನ್ನು ಈ ವಿಮಾನ ಕರೆ ತರಲಿದೆ.

ಮೇ 12ರಂದು ದುಬೈಯಿಂದ ಮಂಗಳೂರಿಗೆ 177 ಪ್ರಯಾಣಿಕರಿರುವ ಮೊದಲ ವಿಮಾನ ಆಗಮಿಸಿತ್ತು.

ಮಂಗಳೂರಿನಿಂದ ಇಂದು ಬೆಳಗ್ಗೆ ದುಬೈಗೆ ತೆರಳುವ ಏರ್‌ ಇಂಡಿಯಾ ವಿಮಾನವು, ಅಪರಾಹ್ನ 3ರ ಸುಮಾರಿಗೆ 95 ಪುರುಷರು ಹಾಗೂ 78 ಮಹಿಳಾ ಪ್ರಯಾಣಿಕರೊಂದಿಗೆ ಹೊರಡಲಿದೆ.

ಇನ್ನು ಮೇ 12ರಂದು ದುಬೈಯಿಂದ ಮೊದಲ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಮೇ 16ರ ಶನಿವಾರ, ಖುದ್ದಾಗಿ ವಿಮಾನ ನಿಲ್ದಾಣಕ್ಕೆ ತೆರಳಿ, ಇಂದು ಆಗಮಿಸುವ ಪ್ರಯಾಣಿಕರಿಗೆ ಸಮಸ್ಯೆ ಆಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜೊತೆಗೆ ಸಂಸದ ನಳಿನ್‌ ಕುಮಾರ್‌ ಕಟೀಲ್ ನಿನ್ನೆ (ಮೇ 17) ಸಂಜೆ ಮಂಗಳೂರಿನಲ್ಲಿ ಜಿಲ್ಲಾಡಳಿತದ ಜೊತೆಗೆ ಸಭೆ ನಡೆಸಿ ಎಲ್ಲಾ ಸಿದ್ಧತೆ ನಡೆಸುವಂತೆ ಸೂಚಿಸಿದ್ದಾರೆ.

ಸದ್ಯ ವಿದೇಶದಿಂದ ಆಗಮಿಸುವ ಪ್ರಯಾಣಿಕರ ಪೈಕಿ ದ.ಕ. ಜಿಲ್ಲೆಯವರಿಗೆ ಮಂಗಳೂರಿನಲ್ಲಿ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿದ್ದು,

ಉಡುಪಿ ಹಾಗೂ ಇತರ ಜಿಲ್ಲೆಗಳ ಪ್ರಯಾಣಿಕರಿಗೆ ಆಯಾಯ ಜಿಲ್ಲೆಗಳಲ್ಲಿ ಕ್ವಾರಂಟೈನ್‌ ಮಾಡಲು ಆಯಾ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಲಿದೆ.

ಪ್ರಯಾಣಿಕರ ವಿವರಗಳನ್ನು ಮೊದಲೇ ಪಡೆದಿರುವ ಜಿಲ್ಲಾಡಳಿತ ಆನ್‌ ಲೈನ್‌ ಮೂಲಕ ಹೊಟೇಲ್‌ ಬುಕ್ಕಿಂಗ್‌ ಗೆ ಅವಕಾಶ ಕಲ್ಪಿಸಿದೆ.

ಕಳೆದ ಬಾರಿಯಂತೆ ಪ್ರಯಾಣಿಕರು ನಿಲ್ದಾಣದಲ್ಲಿ ಕಾಯಬೇಕಾದ ಪ್ರಮೇಯ ಕಡಿಮೆ.

ವಿಮಾನ ಬಂದ ತಕ್ಷಣ ಎಲ್ಲ ಪ್ರಯಾಣಿಕರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿದ್ದು, ಆರೋಗ್ಯ ತಪಾಸಣೆಯ ಬಳಿಕ ಊಟದ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಕಲ್ಪಿಸಲಾಗಿದೆ.

ಏರ್‌ ಪೋರ್ಟ್‌, ಏರ್‌ ಲೈನ್ಸ್‌ ಹಾಗೂ ಭದ್ರತಾ ಪಡೆಯವರ ಹೆಚ್ಚುವರಿ ಕೌಂಟರ್‌ಗಳನ್ನು ತೆರೆಯಲಾಗುತ್ತದೆ.

ಹಣ ಪಾವತಿಸುವ ಶರತ್ತಿಗೊಳಪಟ್ಟು, ಹೊಟೇಲ್ ಗಳಲ್ಲಿ ಕ್ವಾರಂಟೈನ್‌ ಆಗಲು ಒಪ್ಪಿಗೆ ಪತ್ರ ನೀಡಿರುವವರಿಗಾಗಿ ನಗರದಲ್ಲಿ 10 ಹೊಟೇಲ್ ‌ಗಳನ್ನು ಜಿಲ್ಲಾಡಳಿತ ಕಾದಿರಿಸಿದೆ.

ದಿನಕ್ಕೆ ಕನಿಷ್ಠ 1,000 ರೂ.ಗಳಿಂದ ಗರಿಷ್ಠ 5,400 ರೂ.ವರೆಗಿನ ಬಾಡಿಗೆ ಇರುವ ಕೊಠಡಿಗಳು ಇರಲಿವೆ.

ಅವುಗಳಿಗೆ ನೋಡೆಲ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಹೊಟೇಲ್‌ ವಾಸ್ತವ್ಯಕ್ಕೆ ಒಪ್ಪಿಗೆ ಇಲ್ಲದವರನ್ನು ಸರಕಾರಿ ವಸತಿ ನಿಲಯಗಳಲ್ಲಿ ಕ್ವಾರಂಟೈನ್‌ ಗೆ ಅವಕಾಶ ಮಾಡಿ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ವಿದೇಶದಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಹಾಗೂ ವ್ಯವಸ್ಥೆಗಳ ಪರಿಶೀಲನೆಗಾಗಿ ನಿಲ್ದಾಣದಲ್ಲಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್‌ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಪ್ರಯಾಣಿಕರ ಕುಟುಂಬಸ್ಥರಿಗೆ ನಿಲ್ದಾಣಕ್ಕಾಗಲೀ ಅಥವಾ ಕ್ವಾರಂಟೈನ್‌ ಕೇಂದ್ರಗಳಿಗಾಗಲೀ ಬರಲು ಅವಕಾಶ ನೀಡಲಾಗಿಲ್ಲ.

ಲಗೇಜ್‌ ಗಳನ್ನು ಕೊಂಡೊಯ್ಯಲು ಜಿಲ್ಲಾಡಳಿತದ ವತಿಯಿಂದ ಕೆಲವರನ್ನು ಆರೋಗ್ಯ ಸುರಕ್ಷಾ ಕವಚದೊಂದಿಗೆ ನೇಮಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಕ್ವಾರಂಟೈನ್‌ ಕೇಂದ್ರಗಳಿಗೆ ಕರೆದೊಯ್ಯಲು ಬಸ್‌ ವ್ಯವಸ್ಥೆ ಕೂಡ ಮಾಡಲಾಗಿದೆ.

ಇನ್ನು ಎಂದಿನಂತೆ ಪ್ರಯಾಣಿಕರನ್ನು “ಎ’ ಮತ್ತು “ಬಿ’ ಎಂದು 2 ವಿಭಾಗ ಮಾಡಲಾಗಿದೆ. ಕೆಮ್ಮು, ಜ್ವರ, ನೆಗಡಿ ಇರುವವರು “ಎ’ ವಿಭಾಗದವರಾಗಿದ್ದು,

ಅವರನ್ನು ವೆನ್ಲಾಕ್‌ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆಯೊಂದಿಗೆ 14 ದಿನಗಳ ಕ್ವಾರಂಟೈನ್‌ ಮಾಡಲಾಗುತ್ತದೆ.

ಯಾವುದೇ ರೋಗ ಲಕ್ಷಣ ಇಲ್ಲದವರು “ಬಿ’ ವಿಭಾಗದವರಾಗಿದ್ದು ಅಂತವರನ್ನು ಆಯಾಯ ಜಿಲ್ಲೆಗೆ ಜಿಲ್ಲಾಡಳಿತದ ವತಿಯಿಂದಲೇ ಕಳುಹಿಸಿ 14 ದಿನಗಳ ಕ್ವಾರಂಟೈನ್‌ ಮಾಡಲಾಗುತ್ತದೆ.

Advertisement
Click to comment

Leave a Reply

Your email address will not be published. Required fields are marked *

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page