Connect with us

LATEST NEWS

ಉಪನ್ಯಾಸಕಿಗೆ ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ..! ಕಾರಣ ಏನು ಗೊತ್ತಾ!?

Published

on

ಮಂಗಳೂರು/ವಿಜಯನಗರಂ (ಆಂಧ್ರ): ಭಾರತೀಯ ಸಂಸ್ಕೃತಿಯಲ್ಲಿ, ಪೋಷಕರಿಗೆ ಮೊದಲ ಸ್ಥಾನ ನೀಡಿದರೆ, ಎರಡನೇ ಸ್ಥಾನ ಕೊಡುವುದು ಶಿಕ್ಷಕರಿಗೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಶೈಕ್ಷಣಿಕವಾಗಿ ಬೋಧನೆ ಮಾಡುವ ಮತ್ತು ಜೀವನದಲ್ಲಿ ಉನ್ನತ ಮಟ್ಟವನ್ನು ತಲುಪಲು ಅಗತ್ಯವಾದ ಕೌಶಲ್ಯ ಮತ್ತು ತರಬೇತಿಯನ್ನು ನೀಡುವ ಶಿಕ್ಷಕರನ್ನು ನಾವು ದೇವರಿಗೆ ಸಮಾನವೆಂದು ಪರಿಗಣಿಸುತ್ತೇವೆ. ಆದರೆ ಇಲ್ಲೊಂದು ಕಡೆ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕಿಗೆ ಚಪ್ಪಲಿಯಲ್ಲಿ ಹೊಡೆದು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ್ದಾಳೆ.


ಈ ಒಂದು ಅಮಾನವೀಯ ಘಟನೆ ನಡೆದಿದ್ದು, ಆಂಧ್ರಪ್ರದೇಶದ ವಿಜಯನಗರಂನಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ. ಶಿಕ್ಷಕಿಯ ಮೇಲೆ ವಿದ್ಯಾರ್ಥಿನಿ ಹಲ್ಲೆ ನಡೆಸಿದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವಿದ್ಯಾರ್ಥಿನಿಯ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ಅಷ್ಟಕ್ಕೂ, ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಅದನ್ನು ಗಮನಿಸಿದ ಮಹಿಳಾ ಉಪನ್ಯಾಸಕಿಯೊಬ್ಬರು ವಿದ್ಯಾರ್ಥಿನಿಯನ್ನು ತಡೆದು, ಆಕೆಯಿಂದ ಫೋನ್ ಕಸಿದುಕೊಂಡರು. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ, ಉಪನ್ಯಾಸಕಿ ಜತೆ ಅಲ್ಲಿಯೇ ವಾಗ್ವಾದಕ್ಕೆ ಇಳಿದಳು. ‘ನೀನು ನನಗೆ ಫೋನ್ ಕೊಡುತ್ತಿಯಾ ಅಥವಾ ನನ್ನ ಚಪ್ಪಳಿಯಿಂದ ಹೊಡಿಬೇಕಾ?’ ಎಂದು ವಿದ್ಯಾರ್ಥಿನಿ ಬಾಯಿಗೆ ಬಂದಂತೆ ನಿಂದಿಸಿದಳು. ಯಾವಾಗ ಉಪನ್ಯಾಸಕಿ ಫೋನ್ ಕೊಡಲು ನಿರಾಕರಿಸಿದರೋ.. ವಿದ್ಯಾರ್ಥಿನಿ ತನ್ನ ಕಾಲಿನಲ್ಲಿದ್ದ ಚಪ್ಪಲಿಯೊಂದನ್ನು ಕಳಚಿ ಉಪನ್ಯಾಸಕಿ ಮೇಲೆ ಹಲ್ಲೆ ಮಾಡಿದ್ದಾಳೆ. ಈ ವೇಳೆ ಉಪನ್ಯಾಸಕಿ ಕೂಡ ಆಕೆಯ ಮೇಲೆ ಪ್ರತಿದಾಳಿ ನಡೆಸಿದರು.

ಇದನ್ನೂ ಓದಿ: AI ತಂತ್ರಜ್ಞಾನ ಬಳಸಿಕೊಂಡು ರಚಿಸಲಾದ ಚಲನಚಿತ್ರಗಳಿಗೂ ಆಸ್ಕರ್..!

ತಕ್ಷಣವೇ ಸಹ ವಿದ್ಯಾರ್ಥಿಗಳು ಮತ್ತು ಇನ್ನೊಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಜಗಳವನ್ನು ತಡೆದಿದ್ದಾರೆ. ಈ ವೇಳೆ ಅಲ್ಲೇ ಇದ್ದ ಮತ್ತೊಬ್ಬ ವಿದ್ಯಾರ್ಥಿ ಈ ಘಟನೆಯನ್ನು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ವೀಡಿಯೋ ನೋಡಿದ ನೆಟ್ಟಿಗರು ವಿದ್ಯಾರ್ಥಿನಿಯ ನಡೆಯನ್ನು ಟೀಕಿಸುತ್ತಿದ್ದಾರೆ. ಇನ್ನೂ ಉಪನ್ಯಾಸಕಿ ಮೇಲೆ ಹಲ್ಲೆ ನಡೆಸಿದ ಯುವತಿಯನ್ನು ಅದೇ ಕಾಲೇಜಿನ ಎರಡನೇ ವರ್ಷದ ಬಿ.ಟೆಕ್ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಘಟನೆಯ ಕುರಿತು ಕಾಲೇಜು ಆಡಳಿತ ಮಂಡಳಿ ಇನ್ನೂ ಪ್ರತಿಕ್ರಿಯಿಸಿಲ್ಲ.

LATEST NEWS

ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

Published

on

ಮಂಗಳೂರು/ನವದೆಹಲಿ: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

2022ರ ನಾಗರಿಕ ಸೇವೆಗಳ ಪರೀಕ್ಷೆಗೆ ಅರ್ಹತೆ ಪಡೆಯಲು ದಾಖಲೆಗಳನ್ನು ನಕಲಿ ಮಾಡಿದ ಆರೋಪ ಹೊತ್ತಿರುವ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು, ವಂಚನೆ ಪ್ರಕರಣದ ತನಿಖೆಗೆ ಸಹಕರಿಸುವಂತೆ ಖೇಡ್ಕರ್ ಅವರಿಗೆ ನಿರ್ದೇಶನ ನೀಡಿದೆ. ಆದಾಗ್ಯೂ, ದೆಹಲಿ ಪೊಲೀಸರ ವಕೀಲರು ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದನ್ನು ತೀವ್ರವಾಗಿ ವಿರೋಧಿಸಿದರು. ತನಿಖೆಯಲ್ಲಿ ಅವರು ಸಹಕರಿಸದಿರುವುದು ಮತ್ತು ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಹೇಳಿದರು.

ಆಕೆ ಮಾದಕ ದ್ರವ್ಯ ವ್ಯಸನಿಯಲ್ಲ..!
ಇದನ್ನು ಆಲಿಸಿದ ಪೀಠ ಖೇಡ್ಕರ್ ಅಂತದ್ದೇನು ಗಂಭೀರ ಅಪರಾಧ ಮಾಡಿದ್ದಾರೆ “ಆಕೆ ಮಾದಕ ದ್ರವ್ಯ ವ್ಯಸನಿಯಲ್ಲ ಅಥವಾ ಭಯೋತ್ಪಾದಕಿ ಅಲ್ಲ. ಆಕೆ ಕೊಲೆ ಮಾಡಿಲ್ಲ. ಆಕೆ ಎನ್‌ಡಿಪಿಎಸ್ ಅಪರಾಧಿಯೂ ಅಲ್ಲ. ನಿಮಗೆ ಒಂದು ವ್ಯವಸ್ಥೆ ಅಥವಾ ಸಾಫ್ಟ್‌ವೇರ್ ಇರಬೇಕು. ನೀವು ತನಿಖೆಯನ್ನು ಪೂರ್ಣಗೊಳಿಸಿ. ಆಕೆ ಎಲ್ಲವನ್ನೂ ಕಳೆದುಕೊಂಡಿದ್ದಾಳೆ ಇನ್ನು ಎಲ್ಲಿಯೂ ಆಕೆಗೆ ಸಿಗುವುದಿಲ್ಲ” ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿದೆ. “ಪ್ರಕರಣದ ವಾಸ್ತವಾಂಶ ಮತ್ತು ಸನ್ನಿವೇಶಗಳನ್ನು ಪರಿಗಣಿಸಿ, ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತ ಪ್ರಕರಣ ಇದು ಎಂದು ಪೀಠ ಹೇಳಿದೆ.

ಇದನ್ನೂ ಓದಿ: ಕನ್ನಡ ಮಾತನಾಡುವುದಿಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ರಾತ್ರೋರಾತ್ರಿ ಎತ್ತಂಗಡಿ

2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಜುಲೈನಲ್ಲಿ ಆಕೆಯ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಜುಲೈ 31ರಂದು ಆಕೆಯ ನೇಮಕಾತಿ ಆದೇಶವನ್ನು ಯುಪಿಎಸ್‌ಸಿ ರದ್ದುಗೊಳಿಸಿತ್ತು. ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಲಾಗಿದೆ.

 

 

 

Continue Reading

LATEST NEWS

ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

Published

on

ಚಿಕ್ಕಮಗಳೂರು: ರಾತ್ರಿ ವೇಳೆ ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಮ್ಯಾಪ್ ದಾರಿ ತೋರಿಸುತ್ತದೆ ಎಂದು ಅದು ಹೇಳಿದ ದಾರಿಯಲ್ಲಿ ಹೋದರೆ ಅಪಾಯ ಕಟ್ಟಿಟ್ಟ ಬುತ್ತಿ.

ಇಂತಹದ್ದೇ ಘಟನೆ ಒಂದು ಚಿಕ್ಕಮಗಳೂರಿನ ಆಲ್ದೂರು ಬಳಿ ಬೆಳಕಿಗೆ ಬಂದಿದೆ. ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ್ದಾರೆ.

ಹೌದು.. ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.

ಇದನ್ನೂ ಓದಿ: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಪ್ರವಾಸಿಗರ ಪರದಾಟ ನೋಡಿ, ಸ್ಥಳೀಯರು ಟ್ರ್ಯಾಕ್ಟರ್‌ಗೆ ಟಿಟಿಯನ್ನು ಕಟ್ಟಿ, ರಸ್ತೆಯ ಬಳಿ ತಂದು ಬಿಟ್ಟಿದ್ದಾರೆ. ಬಳಿಕ ಸ್ಥಳಿಯರಿಂದ ರಸ್ತೆಯ ಬಗ್ಗೆ ಮಾಹಿತಿ ಪಡೆದು, ಗೂಗಲ್ ಮ್ಯಾಪ್ ಆಫ್ ಮಾಡಿ ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.

Continue Reading

LATEST NEWS

ಕನ್ನಡ ಮಾತನಾಡುವುದಿಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ರಾತ್ರೋರಾತ್ರಿ ಎತ್ತಂಗಡಿ

Published

on

ಮಂಗಳೂರು/ಬೆಂಗಳೂರು: ಕನ್ನಡ ಭಾಷೆಗೆ ಅವಮಾನ ಮಾಡಿದ್ದ ಹಿನ್ನೆಲೆಯಲ್ಲಿ ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್ ಹುದ್ದೆಯಲ್ಲಿದ್ದ ಮಹಿಳೆಯನ್ನು ರಾತ್ರೋರಾತ್ರಿ ಕರ್ನಾಟಕದಿಂದಲೇ ಎತ್ತಂಗಡಿ ಮಾಡಲಾಗಿದೆ.

ಬೆಂಗಳೂರು ಹೊರವಲಯದ ಅನೇಕಲ್ ತಾಲೂಕಿನ ಚಂದಾಪುರದಲ್ಲಿರುವ SBI ಬ್ಯಾಂಕ್‌ನ ಲೇಡಿ ಮ್ಯಾನೇಜರ್ ಬ್ಯಾಂಕ್‌ನಲ್ಲಿ ಗ್ರಾಹಕರೊಂದಿಗೆ ಕನ್ನಡದಲ್ಲಿ ಮಾತನಾಡಿ ಎಂದು ಕೇಳಿದ್ದಕ್ಕೆ ನಾನು ಎಂದಿಗೂ ಕನ್ನಡದಲ್ಲಿ ಮಾತನಾಡಲ್ಲ. ಇದು ಇಂಡಿಯಾ, ಹಿಂದಿ ಅಷ್ಟೇ ಎಂದು ದರ್ಪದಿಂದ ಮಾತನಾಡಿದ್ದರು.

ಈ ವಿಡಿಯೋ ವೈರಲ್‌ ಆಗಿ ಕೂಡಲೇ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಅಲ್ಲದೆ ಆ ಬ್ಯಾಂಕ್‌ಗೆ ಮುತ್ತಿಗೆ ಹಾಕುತ್ತೇವೆ ಎಂದು ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದರರಿಂದ ಎಸ್‌ಬಿಐ ಕೂಡಲೇ ಎಚ್ಚೆತ್ತುಕೊಂಡಿದೆ. ಬ್ಯಾಂಕ್ ಆಡಳಿತ ಮಂಡಳಿಯು ಆ ಮ್ಯಾನೇಜರ್‌ ಅನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿದೆ. ಕರ್ನಾಟಕದಲ್ಲಿ ಕನ್ನಡ ಮಾತನಾಡಲ್ಲ ಎಂದಿದ್ದಕ್ಕೆ ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ನಾನು ಕರ್ನಾಟಕದಲ್ಲಿ ಎಂದಿಗೂ ಕನ್ನಡದಲ್ಲಿ ಮಾತನಾಡಲ್ಲ ಎನ್ನುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೇ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದರಿಂದ ಆ ಅಧಿಕಾರಿಯಿಂದ ಕನ್ನಡದಲ್ಲೇ ಕ್ಷಮೆ ಕೇಳಿಸಿ, ಕೂಡಲೇ ಟ್ರಾನ್ಸ್‌ಫರ್‌ ಮಾಡಲಾಗಿದೆ. ಕನ್ನಡ ಮಾತನಾಡದ ಮೇಲೆ ಅವರು ಕರ್ನಾಟಕದಲ್ಲಿ ಇರುವುದು ಸರಿಯಲ್ಲ ಎಂದು ಮನಗಂಡು ರಾಜ್ಯದಿಂದಲೇ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page