Connect with us

LATEST NEWS

ಆನ್‌ ಲೈನ್‌ ಗೇಮ್‌ನ ಚಟಕ್ಕೆ ಬಿದ್ದಿದ್ದ ಮೂವರು ಸಹೋದರಿಯರ ದುರಂತ ಅಂತ್ಯ!

Published

on

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕೊರಿಯನ್ ಆನ್‌ ಲೈನ್ ಗೆಮಿಂಗ್ ಚಟಕ್ಕೆ ಬಿದ್ದ ಅಪ್ರಾಪ್ತ ವಯಸ್ಸಿನ ಮೂವರು ಸಹೋದರಿಯರು ತಮ್ಮ ಪ್ಲ್ಯಾಟ್ ನ 9 ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.


12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ, ಕೊರೊನಾ ಸಂದರ್ಭದಲ್ಲಿ ಈ ಮೂವರು ಬಾಲಕಿಯರು ಆನ್‌ಲೈನ್ ವಿಡಿಯೋ ಗೇಮ್‌ ವ್ಯಸನಿಯಾಗಿದ್ದರು ಮತ್ತು ಈ ಬಗ್ಗೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಈ ಮೂವರು ಸಹೋದರಿಯರು ಆನ್‌ಲೈನ್‌ ಕೊರಿಯನ್‌ ಟಾಸ್ಕ್‌ ಆಧಾರಿತ ಗೇಮ್ ಆಡುತ್ತಿದ್ದರು. ಅವರು ಎಷ್ಟರ ಮಟ್ಟಿಗೆ ವ್ಯಸನಿಗಳಾಗಿದ್ದರು ಎಂದರೆ, ಶಾಲೆಗೆ ಹೋಗುವುದನ್ನು ಕಡಿಮೆ ಮಾಡಿ ಹೆಚ್ಚಿನ ಸಮಯವನ್ನು ಈ ಆನ್ ಲೈನ್ ಆಟದಲ್ಲಿಯೇ ಕಳೆಯುತ್ತಿದ್ದರು ಎಂದು ವರದಿಯಾಗಿದೆ.
ಗಾಜಿಯಾಬಾದ್‌ ನ ಭಾರತ್ ಸಿಟಿ ವಸತಿ ಟೌನ್ ಶಿಪ್‌ ನಲ್ಲಿ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೇಲ್ಗಡೆಯಿಂದ ಬಿದ್ದ ಶಬ್ದದಿಂದ ನಿವಾಸಿಗಳು ಎಚ್ಚರಗೊಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಬಾಲ್ಕನಿಯಿಂದ ಕೆಳಗೆ ಹಾರುವ ಮೊದಲು ಕೋಣೆಯನ್ನು ಒಳಗಿನಿಂದ ಲಾಕ್ ಮಾಡಿದ್ದರು ಎನ್ನಲಾಗಿದೆ.

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗುವಂತಹ ಕೆಟ್ಟ ನಿರ್ಧಾರಕ್ಕೆ ಬರುವ ಮೊದಲು ಈ ಸಹೋದರಿಯರು ತಮ್ಮ ಹೆತ್ತವರಲ್ಲಿ ಕ್ಷಮೆಯಾಚಿಸಿ ಆತ್ಮಹತ್ಯೆ ಪತ್ರವೊಂದನ್ನು ಬರೆದಿಟ್ಟಿದ್ದಾರೆ ಹಾಗೂ ಅದರಲ್ಲಿ ಬರೆದಿರುವುದನ್ನು ಓದಲೇ ಬೇಕೆಂದು ಹೇಳಿದ್ದಾರೆ.

ಇದನ್ನೂ ಓದಿ: ಅನಾರೋಗ್ಯ ಪೀಡಿತ ತಾಯಿಯ ಮೇಲೆ ಹಲ್ಲೆ ನಡೆಸಿದ ಪಾಪಿ ಮಗ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಅದರಲ್ಲಿ “ಅಪ್ಪಾ, ನಾವು ಕೊರಿಯನ್ ಗೇಮ್ ಬಿಡಲು ಸಾಧ್ಯವಿಲ್ಲ. ಕೊರಿಯನ್ ನಮ್ಮ ಜೀವನ. ಕೊರಿಯನ್ ನಮಗೆ ಸರ್ವಸ್ವವೂ ಆಗಿದೆ. ನೀವು ಅದರಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ನಾವು ನಮ್ಮ ಪ್ರಾಣವನ್ನು ತ್ಯಜಿಸುತ್ತೇವೆ” ಎಂಬುದಾಗಿ ಬರೆದಿದ್ದಾರೆ ಎಂದು ಬಾಲಕಿಯರ ತಂದೆ ಚೇತನ್ ಕುಮಾರ್ ತಿಳಿಸಿದ್ದಾರೆ. ಇದೊಂದು ದೊಡ್ಡ ದುರಂತ. ಅವರು ಎಂತಹ ಆಟ ಆಡುತ್ತಿದ್ದರು, ಅವರಿಗೆ ಏನು ಟಾಸ್ಕ್ ಕೊಡಲಾಗುತ್ತಿತ್ತು ಎಂಬುದು ಗೊತ್ತಿಲ್ಲ. ಅಂತಹ ಟಾಸ್ಕ್ ಇರುತ್ತಿದ್ದರೆ ಗೇಮ್‌ ಆಡಲು ಬಿಡುತ್ತಿರಲಿಲ್ಲ. ಎಲ್ಲಾ ಪೋಷಕರು ಜಾಗರೂಕರಾಗಿರಬೇಕು. ತಮ್ಮ ಮಕ್ಕಳು ಇಂತಹ ಗೇಮ್‌ ಗಳ ಚಟಕ್ಕೆ ಅಂಟಿಕೊಳ್ಳದಂತೆ ನೋಡಿಕೊಳ್ಳಬೇಕೆಂದು ಎಂದು ತಂದೆ ಮನವಿ ಮಾಡಿದ್ದಾರೆ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page