Connect with us

 ಸುದ್ದಿ ಮನೆಗಳ ಶೋಷಣೆ ಬಗ್ಗೆ ಧ್ವನಿ ಎತ್ತಬೇಕಿದೆ: ದಿನೇಶ್ ಅಮೀನ್‍ಮಟ್ಟು

Published

on

 ಸುದ್ದಿ ಮನೆಗಳ ಶೋಷಣೆ ಬಗ್ಗೆ ಧ್ವನಿ ಎತ್ತಬೇಕಿದೆ: ದಿನೇಶ್ ಅಮೀನ್‍ಮಟ್ಟು

ಮಂಗಳೂರು : ದೇಶವನ್ನು ಕಾಡುತ್ತಿರುವ ಆರ್ಥಿಕ ಸಂಕಷ್ಟ, ನಿರುದ್ಯೋಗ ಸಮಸ್ಯೆ ಇಂದು ಸುದ್ದಿ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರನ್ನೂ ಕಾಡುತ್ತಿದೆ. ಪತ್ರಕರ್ತ ತನ್ನ ವೃತ್ತಿಯನ್ನು ಉಳಿಸಿಕೊಳ್ಳುವ ಸವಾಲನ್ನು ಎದುರಿಸುತ್ತಿದ್ದು, ಈ ಬಗ್ಗೆ ಟ್ರೇಡ್ ಯೂನಿಯನ್‍ನಡಿ ನೋಂದಾವಣೆಗೊಂಡಿರುವ ರಾಜ್ಯ ಪತ್ರಕರ್ತರ ಸಂಘ ಧ್ವನಿ ಎತ್ತಬೇಕು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸಲಹೆ ನೀಡಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿ¯್ಲÁ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುತ್ತಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದಲ್ಲಿ `ಪತ್ರಕರ್ತರ ವೃತ್ತಿ ಸವಾಲು ಮತ್ತು ಸಾಮಾಜಿಕ ಹೊಣೆಗಾರಿಕೆಐ ಕುರಿತ ಗೋಷ್ಠಿಯಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪತ್ರಕರ್ತನೊಬ್ಬ ಇಂದು ತನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುವ ಪರಿಸ್ಥಿತಿ ಇಲ್ಲವಾಗಿದ್ದು, ತನ್ನ ವೃತ್ತಿಯನ್ನು ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಒಂದು ರೀತಿಯಲ್ಲಿ ಕನ್ನಡ ಪತ್ರಿಕೋದ್ಯಮ ಸಾವಿನ ಮನೆ ತರ ಕಾಣುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಪತ್ರಕರ್ತರು ಕೆಲಸ ಕಳೆದುಕೊಂಡು ಬೀದಿಗೆ ಬೀಳುತ್ತಿದ್ದು, ಅವರ ಕುಟುಂಬಗಳು ಒಡೆದು ಹೋಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ವೃತ್ತಿಯ ಸವಾಲಿನ ಬಗ್ಗೆ ಮಾತುಗಳು ನಿರ್ದಯಿಯಾಗಿ ಕಾಣುತ್ತದೆ. ಜಗತ್ತಿನ ಇತರ ಎಲ್ಲಾ ಶೋಷಣೆಗಳ ಬಗ್ಗೆ ಮಾತನಾಡುವವರು ಇಂದು ತಮ್ಮ ಶೋಷಣೆ ಬಗ್ಗೆ ಮಾತನಾಡಲಾಗದ ಪರಿಸ್ಥಿತಿ ಇದೆ. ಈ ಬಗ್ಗೆ ಪತ್ರಕರ್ತರ ಸಂಘ ಧ್ವನಿ ಎತ್ತಬೇಕಾಗಿದೆ ಎಂದು ಅವರು ಹೇಳಿದರು.
ಜ್ಞಾನಭಂಡಾರವಿಂದು ಬೆರಳ ತುದಿಯಲ್ಲಿದೆ. ತಂತ್ರಜ್ಞಾನ ಮುಂದುವರಿದೆ.

ಅದರ ಜತೆಯಲ್ಲೇ 35 ವರ್ಷಗಳ ಹಿಂದೆ ಪತ್ರಕರ್ತರು, ಮಾಧ್ಯಮಕ್ಕೆ ಇದ್ದ ಗೌರವ ಇಂದು ಇದೆಯೇ ಎಂದು ಪ್ರಶ್ನಿಸುವಂತಾಗಿದೆ. ಎಲ್ಲಾ ವೃತ್ತಿಗಳಂತೆ ಪತ್ರಿಕೋದ್ಯಮವೂ ಇಂದು ಉದ್ಯಮವಾಗಿದೆ. ಇಂದಿನ ಪತ್ರಿಕೋದ್ಯಮಕ್ಕೆ ಸುದ್ದಿ ಮುಖ್ಯವಾಗಿಲ್ಲ. ಗ್ರಾಹಕರು ಮುಖ್ಯವಾಗಿದ್ದಾರೆ. ರಾಜಕಾರಣಿಗಳು, ಉದ್ಯಮಿಗಳು ಇಂದು ಪತ್ರಿಕೋದ್ಯಮ ಪ್ರವೇಶಿಸುತ್ತಿದ್ದಾರೆ. ಉದ್ಯಮಿಗಳಿಗಿಂತಲೂ ರಾಜಕಾರಣಿಗಳ ಪತ್ರಿಕೋದ್ಯಮ ಪ್ರವೇಶ ಅಪಾಯಕಾರಿ ಬೆಳವಣಿ ಎಂದು ಅವರು ಹೇಳಿದರು.
ಸಾಮಾಜಿಕ ಹೊಣೆಗಾರಿಕೆ ಇಲ್ಲದ ವೃತ್ತಿ ಅಪರಾಧ ಎಂದು ವಿಶ್ಲೇಷಿಸಿದ ಅವರು, ಸ್ವಾವಲಂಬಿಯಾಗಿ ಮಾಧ್ಯಮ ಹೇಗೆ ಕಟ್ಟಬೇಕು ಎಂಬುದರ ಬಗ್ಗೆ ಚಿಂತನೆ ಮಾಡಬೇಕಿದೆ ಎಂದವರು ಹೇಳಿದರು.
ಟಿವಿ 9ನ ನಾ ವಿನಯ್ ಮಾತನಾಡಿ, ಮುದ್ರಣ, ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪತ್ರಕರ್ತರನ್ನು ನಿರ್ದಯವಾಗಿ ಕೆಲಸದಿಂದ ತೆಗೆದು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ ಆರೇಳು ತಿಂಗಳ ಅವಧಿಯಲ್ಲಿ ಸುಮಾರು 300ರಷ್ಟು ಪತ್ರಕರ್ತರು ಕೆಲಸವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ ಅವರು, ವೃತ್ತಿಯಿಂದ ಹೊರಬಂದ ಮೇಲೆ ಅವರನ್ನು ಯಾರೂ ಮಾತನಾಡಿಸದಂತಾಗಿದೆ. ಅನಗತ್ಯವಾಗಿ ಕೆಲಸ ಕಳೆದುಕೊಂಡವರಿಗೆ ಪತ್ರಕರ್ತರ ಸಂಘವು ಸಮ್ಮೇಳನದ ಮೂಲಕ ವೇದಿಕೆಯನ್ನು ಸೃಷ್ಟಿಸುವಂತಾಗಬೇಕು ಎಂದು ಅವರು ಹೇಳಿದರು.
ಕನ್ನಡ ಪ್ರಭ ಸಂಪಾದಕ ರವಿ ಹೆಗಡೆ, ಕಂ.ಕ. ಮೂರ್ತಿ, ರವಿಕಾಂತ ಕುಂದಾಪುರ ಅವರು ಕೂಡಾ ಪತ್ರಕರ್ತರ ಸಂಕಷ್ಟಗಳ ಕುರಿತಂತೆಯೇ ಗೋಷ್ಠಿಯಲ್ಲಿ ಗಮನ ಸೆಳೆದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು.
ನವೀನ್ ಶೆಟ್ಟಿ ಎಡ್ಮೆಮಾರ್ ಗೋಷ್ಠಿಯನ್ನು ನಿರ್ವಹಿಸಿದರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಮಹಿಳಾ, ಮಕ್ಕಳ ಆಸ್ಪತ್ರೆಯಲ್ಲಿ ಎನ್‌ ಆರ್‌ಸಿ ಕೇಂದ್ರ ಇಲ್ಲದಕ್ಕೆ ಗರಂ ಆದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

Published

on

ಉಡುಪಿ:  ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು.

ಪ್ರತಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಈ ಕೇಂದ್ರ ಇದೆ. ಆದರೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಸುಪರ್ದಿಗೆ ಬಂದು  ನಾಲ್ಕು ವರ್ಷಗಳಾದರೂ ಇನ್ನೂ ಎನ್‌ ಆರ್‌ ಸಿಯನ್ನು ಆರಂಭಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಹಳ ಬೇಸರದ ಸಂಗತಿ. ಈ ಬಗ್ಗೆ ಜಿಲ್ಲಾಡಳಿತ, ಡಿಎಚ್‌ಓ, ಜಿಲ್ಲಾ ಸರ್ಜನ್ ಯಾವ ಕಾರಣಕ್ಕಾಗಿ ಇದನ್ನು ಇನ್ನೂ ಆರಂಭಿಸಿಲ್ಲ ಎಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯಲ್ಲಿ ಮಕ್ಕಳು ದಾಖಲಾದ ಮೇಲೆ ಪ್ರತಿಯೊಂದು ಹೆಸರು, ತಾಯಿ ಹೆಸರು ದಾಖಲೆ ಮಾಡಿ, ಬಳಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಆದರೆ ಇಲ್ಲಿ ಕೇಸ್ ಶೀಟ್ ನೋಡಿದರೆ ಹಿನ್ನೆಲೆಯಲ್ಲಿ ಬರೆಯಲಾಗಿದೆ. ವಿವರ ಮಗುವಿನ ತಂದೆ ತಾಯಿ ಹೆಸರು ವಿಳಾಸ ಕೂಡ ಇಲ್ಲ. ಇದರಿಂದ ತಪ್ಪಾದ ಚಿಕಿತ್ಸೆ ನೀಡುವ ಸಾಧ್ಯತೆ ಹೆಚ್ಚು ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಅನಾವಶ್ಯಕವಾಗಿ ಆ ಮಗು ಅನಾರೋಗ್ಯಕ್ಕೆ ತುತ್ತಾಗುತ್ತದೆ. ಆದುದರಿಂದ ವೈದ್ಯರು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

Continue Reading

BELTHANGADY

ಶಿರಾಡಿ ಘಾಟ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

Published

on

ಶಿರಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ.

 

ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ ,  ಉಜಿರೆ ನಿವಾಸಿಗಳಾದ ಶ್ರೀಧರ್ , ಜನಾರ್ದನ ಕೆರಿಮಾರ್ ಮೃತ ದುರ್ದೈವಿಗಳು. ಧರ್ಮಸ್ಥಳದಿಂದ ಮದ್ಯಾಹ್ನ 1.30ಕ್ಕೆ ಬೆಂಗಳೂರು ಮೂಲಕ ತಿರುಪತಿಗೆ ಹೊರಟಿದ್ದ ಕೆ.ಎಸ್. ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಗೆ ಬರುತ್ತಿದ್ದ ಕಾರು ಶಿರಾಡಿ ಘಾಟ್ ಗಡಿ ಸಮೀಪ ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

 

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜಗುಜ್ಜಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಮತ್ತೋರ್ವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.  ಘಟನೆಯಲ್ಲಿ ಸುರೇಶ್ ಎಂಬವರಿಗೂ ಕೂಡಾ ಗಾಯಗಳಾಗಿವೆ ಎಂದು ತಿಳಿದುಬಂದಿದೆ.  ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

ಸಿಲಿಂಡರ್ ಅಭಾವ: ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

Published

on

ಬೆಂಗಳೂರು: ಇಸ್ರೇಲ್‌, ಅಮೇರಿಕ ಮತ್ತು ಇರಾನ್‌ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಇದೀಗ ಗ್ಯಾಸ್ ಸಿಲಿಂಡರ್ ಕೊರತೆಯ ನಡುವೆ, ಗ್ರಾಹಕರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ಈಗ ಬೆಲೆ ಏರಿಕೆಯ ಬಿಸಿ ಮತ್ತೊಂದು ಶಾಕ್ ನೀಡುವ ಸಾಧ್ಯತೆಯಿದೆ.


ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಅಯೋಮಯವಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಸಹ ಬಂದ್‌ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್​ನಂತೆ ಅಡುಗೆ ಆಯಿಲ್ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಅಡುಗೆ ಎಣ್ಣೆ ಮಾಲಿಕರೊಬ್ಬರು ಪ್ರತಿಕ್ರಿಯಿಸಿದ್ದು, ಕಳೆದ 1 ವಾರದಿಂದ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ. 100-200 ಬಾಕ್ಸ್‌ ಎಣ್ಣೆ ಬುಕ್‌ ಮಾಡಿದರೆ 20-50 ಬಾಕ್ಸ್‌ ಮಾತ್ರ ಕಳುಹಿಸುತ್ತಾರೆ. ಏಜೆಂಟರಲ್ಲಿ ಕೇಳಿದರೆ, ಸಪ್ಲೈ ಆಗುತ್ತಿಲ್ಲ. ಹೆಚ್ಚು ಬಾಕ್ಸ್‌ ನೀಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ 15-20 ರೂ. ದರ ಜಾಸ್ತಿ ಆಗಿರುವುದರಿಂದ ನಮಗೆ ತುಂಬಾ ಸಮಸ್ಯೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೀಮೆಎಣ್ಣೆ ಹಂಚಿಕೆ ಮತ್ತು ಆಮದು ನೀತಿಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದ ಹೊಸ ನಿರ್ಧಾರ

ಗ್ಯಾಸ್ ಅಭಾವ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದಾಗಿ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುವ ಭೀತಿ ಎದುರಾಗಿದೆ. ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಕಾಡುತ್ತಿದೆ. ನಗರದ ಕೆಲವು ಹೋಟೆಲ್‌ಗಳು ಮತ್ತು ಪಿಜಿಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ಮತ್ತೆ ಹಳೆಯ ಪದ್ಧತಿಯಂತೆ ಸೌದೆ ಒಲೆಗಳನ್ನು ಬಳಸುವ ಅನಿವಾರ್ಯತೆ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page