Connect with us

DAKSHINA KANNADA

ಉಳ್ಳಾಲದಲ್ಲೊಬ್ಬ ಖತರ್ನಾಕ್ ಖದೀಮ-ಗೃಹಪ್ರವೇಶದ ಮನೆಯಲ್ಲಿ ಹೋಮದ ಹೊಗೆಯನ್ನೇ ಲಾಭ ಮಾಡಿಕೊಂಡು ದೋಚಿ ಸಲೀಸಾಗಿ ಹೊರ ಬಂದ…!

Published

on

ಉಳ್ಳಾಲ: ಗೃಹಪ್ರವೇಶದ ಮನೆಯೊಂದರ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗ- ನಗದು ದೋಚಿದ ಪರಾರಿಯಾಗಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ.


ಡಿಸೆಂಬರ್ 10ರಂದು ರಾತ್ರಿ ಇಲ್ಲಿನ ನಿವಾಸಿಗಳಾದ ಸ್ಮಿತಾ-ದಾಮೋದರ್ ದಂಪತಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಕಬೈಲು ಎಂಬಲ್ಲಿ ತಾವು ನಿರ್ಮಿಸಿದ ನೂತನ ಮನೆಯಲ್ಲಿ ವಾಸ್ತು ಹೋಮ ನೆರವೇರಿಸಿದ್ದರು.

ವಾಸ್ತು ಹೋಮ ನಡೆಯುತ್ತಿರುವಾಗಲೇ ಎಲ್ಲರ ಸಮ್ಮುಖದಲ್ಲೇ ಹೋಮದ ಹೊಗೆಯಲ್ಲಿ ಯಾರಿಗೂ ಗೊತ್ತಾಗದಂತೆ ಒಳ ನುಗ್ಗಿದ್ದ ಬರ್ಮುಡ ಧಾರಿ ಯುವಕನೋರ್ವ ಕೋಣೆಯೊಳಗೆ ನುಗ್ಗಿ ಬ್ಯಾಗಲ್ಲಿದ್ದ 15 ರೂಪಾಯಿ ನಗದು, ಮೊಬೈಲ್ ಚಾರ್ಜರ್ ಮತ್ತು ಬೆಲೆ ಬಾಳುವ ಕಾಸ್ಮೆಟಿಕ್ಸ್ ಕಳವು ನಡೆಸಿದ್ದಾನೆ.


ಕಳ್ಳ ಹೋಮ ನಡೆಯುತ್ತಿದ್ದ ವೇಳೆ ಮನೆಯೊಳಗಿನ ಕೋಣೆಗೆ ನುಗ್ಗಿ ಹೊರನಡೆಯುವ ದೃಶ್ಯ ವೃತ್ತಿಪರ ಕ್ಯಾಮೆರ ಮೆನ್ ನ ವೀಡಿಯೋದಲ್ಲಿ ದಾಖಲಾಗಿದೆ.

ಅದೇ ದಿನ ಮಧ್ಯ ರಾತ್ರಿ ಅಲ್ಲೇ ಸಮೀಪದ ಶಿವ ಸುಬ್ರಹ್ಮಣ್ಯ ಪ್ರಸಾದ್ ಭಟ್ ಎಂಬವರ ಮನೆಗೂ ರಾತ್ರಿ ಕನ್ನ ಹಾಕಿದ್ದ ಕಳ್ಳ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲನ್ನ ಒಡೆದು ಕೋಣೆಯೊಳಗಿನ ಕಪಾಟಲ್ಲಿದ್ದ 11 ಸಾವಿರ ರೂಪಾಯಿ ನಗದು,32 ಗ್ರಾಂ ಚಿನ್ನ ,8 ಬೆಳ್ಳಿಯ ನಾಣ್ಯ,ಮತ್ತು 3 ರೇಡೋ ವಾಚ್ ಗಳು ಸೇರಿ ಒಟ್ಟು 1 ಲಕ್ಷದ 49 ಸಾವಿರ ರೂಪಾಯಿ ಮೌಲ್ಯದ ನಗ,ನಗದನ್ನ ಕದ್ದೊಯ್ದಿದ್ದಾನೆ.


ಬರ್ಮುಡ ಧಾರಿ ಕಳ್ಳನ ಜತೆ ಇನ್ನೋರ್ವನು ಇದ್ದು ಇವರಿಬ್ಬರು ಡಿಸೆಂಬರ್ 10 ರಾತ್ರಿ ಕಳ್ಳತನ ನಡೆದಿದ್ದ ಪ್ರದೇಶ ಅಡ್ಕಬೈಲಿಗೆ ದ್ವಿಚಕ್ರ ವಾಹನದಲ್ಲಿ ಬರುವ ದೃಶ್ಯ ಸಿ.ಸಿಟಿವಿಯಲ್ಲಿ ಸೆರೆಯಾಗಿದೆ.


ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದು ವೀಡಿಯೋ ಫೂಟೇಜ್ ಆಧಾರದಲ್ಲಿ ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

READ IN ENGLISH : https://www.nammakudlaenglish.com/speed-limit-imposed-on-surathkal-nanthur-junction-national-highway/

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

DAKSHINA KANNADA

ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

Published

on

ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಹಲವು ಕಡೆಗಳಲ್ಲಿ ಅಪಾರ ಹಾನಿಗೂ ಕಾರಣವಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತಕ್ಕೊಳಗಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

ಉಷಾ ಅಶೋಕ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತಕ್ಕೊಳಗಾಗಿದೆ. ಮನೆಯ ಹಲವು ಸಾಮಾಗ್ರಿಗೆ ಹಾನಿ ಉಂಟಾಗಿದೆ.

ಮನೆಯಲ್ಲಿ ಜನರಿದ್ದ ವೇಳೆ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತವಾಗಿದ್ದರೂ ಮನೆ ಮಂದಿ ಪ್ರಾಣಾಪಾಯದಿಂದ ಪಾರು ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page