Connect with us

LATEST NEWS

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಚಿಂತನೆ; ಶಾಸಕರ ಜೊತೆ ಡಿ.ಕೆ.ಶಿ ಸಭೆ ಆಯೋಜನೆ

Published

on

ಮಂಗಳೂರು/ಬೆಂಗಳೂರು :  ಕರಾವಳಿ ಭಾಗದ ಪ್ರವಾಸೋದ್ಯಮದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸಭೆ ನಡೆಸುವುದಾಗಿ ಅವರು ಇಂದು(ಮಾ.04) ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಡಿಕೆ ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು,  ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಹೇಳಿದರು.

ಸ್ಥಳೀಯ ಶಾಸಕರ ಮನವಿಗೆ ಸ್ಪಂದನೆ :

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳೆ ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಪ್ರತಿಕ್ರಿಯಿಸಿ,  ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬಿಜೆಪಿ ಶಾಸಕ ಹರೀಶ್ ಪೂಂಜ ಮಾತನಾಡಿ,  ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೇ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಡಿ.ಕೆ.ಶಿವಕುಮಾರ್ ಮಾತನಾಡಿ, ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ. ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ನಮ್ಮ ಸಚಿವ ಹೆಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು, ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ. ಈ ಸಂದರ್ಭದಲ್ಲಿ ಈ ಭಾಗದ ಶಾಸಕರ ಸಭೆ ಕರೆದು ಮಾತನಾಡಬೇಕಿದೆ.

ರಾತ್ರಿ 7-8 ಗಂಟೆಯ ಮೇಲೆ ಈ ಕರಾವಳಿ ಭಾಗ ಸ್ಥಬ್ಧವಾಗುತ್ತದೆ. ಯಾವುದೇ ಕಾರ್ಯಚಟುವಟಿಕೆ ಇರುವುದಿಲ್ಲ.  ಭಜನೆ, ಬಯಲಾಟ ಹೊರತಾಗಿ ಬೇರೆ ಯಾವುದೇ ಚಟುವಟಿಕೆ ಇರುವುದಿಲ್ಲ. ಈ ವಿಚಾರವಾಗಿ ಅಲ್ಲಿನ ಶಾಸಕರೇ ಕೂತು ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ನೀಡಬೇಕು. ಕಳೆದ ಕೆಲವು ವರ್ಷಗಳಿಂದ ಈ ಭಾಗದಲ್ಲಿ ಮಕ್ಕಳು ಶಾಲಾ ಕಾಲೇಜುಗಳಿಗೆ ಸೇರ್ಪಡೆಯಾಗುವ ಪ್ರಮಾಣವೂ ಕುಸಿಯುತ್ತಿದೆ. ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜು ನಡೆಸುವವರು ಈ ವಿಚಾರವಾಗಿ ನಮ್ಮ ಬಳಿ ಚರ್ಚೆ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ : ವಿಧಾನಸಭೆಯಲ್ಲಿ ಕಣಕಣದಲ್ಲೂ ಕೇಸರಿಯ ರಂಗು ಚೆಲ್ಲಿದ ಶಾಸಕ

7-8 ಗಂಟೆ ನಂತರ ಏನು ಮಾಡಬೇಕು?

ಈ ನಡುವೆ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿ, ರಾತ್ರಿ 8 ರ ನಂತರ ಏನು ಮಾಡಬೇಕೆಂದು ನೀವೇ ಸಲಹೆ ನೀಡಿ ಎಂದು ಕೇಳಿದರು. ಅದಕ್ಕೆ ಉತ್ತರಿಸಿದ ಶಿವಕುಮಾರ್, ರಾತ್ರಿ 7-8 ಗಂಟೆ ನಂತರ ಮಂಗಳೂರು ಸ್ಥಬ್ಧವಾಗಿದೆ ಎಂದರೆ ಮಂಗಳೂರಿನ ಜನ ಹೆಚ್ಚಾಗಿ ಮನೆಯಿಂದಾಚೆ ಬರುವುದಿಲ್ಲ. ಹೀಗಾದರೆ ಯಾವ ಆರ್ಥಿಕ ವಹಿವಾಟು ನಡೆಯುತ್ತದೆ? ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಕರಾವಳಿ ಭಾಗದಲ್ಲಿ ಐಟಿ ಬಿಟಿ ಸ್ಥಾಪಿಸಲು ಪ್ರಸ್ತಾವನೆ ನೀಡಲಾಗಿತ್ತು. ಆದರೆ ಅಲ್ಲಿ ಒಂದೇ ಒಂದು ಕಾಂಪ್ಲೆಕ್ಸ್ ಕೂಡ ಇರಲಿಲ್ಲ. ಈಗ ಮೂರೋ, ನಾಲ್ಕೋ ತಲೆ ಎತ್ತುತ್ತಿವೆ. ರಾಜ್ಯದಲ್ಲಿ ಅತಿ ಹೆಚ್ಚು ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು ಇರುವುದೆಲ್ಲ ಅಲ್ಲೇ. ಅಲ್ಲಿರುವ ಪ್ರತಿಭೆಗಳೆಲ್ಲವೂ ಬೆಂಗಳೂರು, ಮುಂಬೈ ಹಾಗೂ ಹೊರದೇಶಗಳಿಗೆ ಹೋಗುತ್ತಿದ್ದಾರೆ. ಯಾಕೆ ಈ ಪರಿಸ್ಥಿತಿ ಇದೆ? ಯಾವುದೇ ನಗರದಲ್ಲಿ ಮನರಂಜನೆಗೆ ಅವಕಾಶವಿಲ್ಲದಿದ್ದರೆ ಅಲ್ಲಿ ಯುವಕರು ಆಸಕ್ತಿ ತೋರುವುದಿಲ್ಲ. ಹೀಗಾಗಿ ಅಲ್ಲಿನ ಶಾಸಕರು ಕೂತು ಚರ್ಚೆ ಮಾಡಿ. ಈ ವಿಚಾರವಾಗಿ ನಾನು ಹಾಗೂ ಪ್ರವಾಸೋದ್ಯಮ ಸಚಿವರಿಬ್ಬರೂ ಸೇರಿ ಜಿಲ್ಲೆಯ ಎಲ್ಲಾ ಶಾಸಕರ ಜತೆ ಪ್ರತ್ಯೇಕವಾಗಿ ಸಭೆ ಮಾಡುತ್ತೇವೆ ಎಂದರು.

 

BANTWAL

ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಶ್ರದ್ಧಾಂಜಲಿ ಅರ್ಪಣೆ-ಕಲ್ಲಡ್ಕದಲ್ಲಿ ಬ್ಯಾನರ್ ಕಂಡು ಶಾಕ್ ಆದ ಜನತೆ

Published

on

ಬಂಟ್ವಾಳ: ಇಲ್ಲಿ ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ, ಈ ಕಸದಂತೆಯೇ ನಿಮ್ಮ ಜೀವನವೂ ಆದಷ್ಟು ಬೇಗನೇ ಕೊಳೆತು ಹೋಗಲಿ…..ಹೀಗೊಂದು ಬ್ಯಾನರ್ ರಾರಾಜಿಸುತ್ತಿರುವುದು ಕಲ್ಲಡ್ಕ ಪೇಟೆಯಲ್ಲಿ. ಕಲ್ಲಡ್ಕ ಜಂಕ್ಷನ್ ನ ಕಮಲಾ ಕಾಂಪ್ಲೆಕ್ಸ್ ನ ಮುಂಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಇಂಥದ್ದೊಂದು ಬ್ಯಾನರನ್ನು ಕಟ್ಟಿ ಹಾಕಲಾಗಿದೆ.

ಜನನಿಬಿಡ ಪ್ರದೇಶವಾಗಿರುವ ಕಲ್ಲಡ್ಕ ಕಮಲಾ ಕಾಂಪ್ಲೆಕ್ಸ್ ನಲ್ಲಿರುವ ಕೆ.ಟಿ.ಹೋಟೆಲ್ ನ ಮುಂಭಾಗದಲ್ಲಿ ಕಸವನ್ನು ತಂದು ಹಾಕಿ ಹೋಗುತ್ತಿದ್ದರು. ಕಮಲಾ ಕಾಂಪ್ಲೆಕ್ಸ್ ‌ನಲ್ಲಿ ಚಿಕಿತ್ಸಾಲಯ, ಹೋಟೆಲ್, ಬ್ಯಾಂಕ್ ಹಾಗೂ ಹತ್ತಿರದಲ್ಲಿ ಶ್ರೀರಾಮಮಂದಿರ ಇದ್ದು  ನಿತ್ಯ ಬೆಳಿಗ್ಗೆ ಇಲ್ಲಿ ಕಸದ ರಾಶಿ ಕೊಳೆತು ವಾಸನೆ ಬರುತ್ತಿತ್ತು.

ಜನರು ನಿತ್ಯ ಓಡಾಡುವ ಜಾಗದಲ್ಲಿ ಕಸವನ್ನು ಹಾಕಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದನ್ನು ಕಂಡು ಸಾರ್ವಜನಿಕರೇ ಬ್ಯಾನರ್ ಅಳವಡಿಸಿದ್ದಾರೆ. ಕಸ ತಂದು ಹಾಕುವವರನ್ನು ತಡೆಯಲು ಸಾಧ್ಯವಾಗದೆ ಅತ್ಯಂತ ನೋವಿನಿಂದ ಇಲ್ಲಿ‌ನ‌ ಸಾರ್ವಜನಿಕರು ನೋವು ತರುವ ಬರಹವನ್ನು ಬ್ಯಾನರ್ ನಲ್ಲಿ ಮುದ್ರಿಸಿ ಹಾಕಿದ್ದಾರೆ. ಬ್ಯಾನರ್ ಬರಹ ನೋಡಿದ ಜನರು  ಒಂದು ಕ್ಷಣ ನಿಬ್ಬೆಗೆರಗಾಗುವುದು ಮಾತ್ರ ಅಷ್ಟೇ ಸತ್ಯ.

Continue Reading

LATEST NEWS

ಪರ್ಯಾಯ ಮೆರವಣಿಗೆಗೆ ಭಗವಾಧ್ವಜ ಮೂಲಕ ಚಾಲನೆ ಕೊಟ್ಟಿದ್ದು, ಪಾಕಿಸ್ತಾನ ಧ್ವಜ ಹಿಡಿದಲ್ಲ-ಶಾಸಕ ಯಶ್ಪಾಲ್

Published

on

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವಕ್ಕೆ ಜಿಲ್ಲಾಧಿಕಾರಿಗಳು ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿರುವ ವಿಚಾರ ವಿವಾದವಾಗಿ ಮಾರ್ಪಟ್ಟಿದೆ. ಇದಕ್ಕೆ ಈಗಾಗಲೇ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ನಗರಸಭೆಯ ಆಡಳಿತ ಅಧಿಕಾರಿಯಾಗಿದ್ದ ಹಿನ್ನೆಲೆಯಲ್ಲಿ ತಾನು ಭಾಗಿಯಾಗಿದ್ದೇನೆ ವಿನಃ ಯಾವುದೇ ರಾಜಕೀಯ ಕಾರಣಗಳಿಗೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ ಜಿಲ್ಲಾಧಿಕಾರಿ ಕೈಗೆ ಕೇಸರಿ ಧ್ವಜ ಕೊಟ್ಟಿರುವ ಉಡುಪಿ ಶಾಸಕ ಯಶಪಾಲ್  ಸುವರ್ಣ ಅವರು ಜಿಲ್ಲಾಧಿಕಾರಿ ಸ್ವರೂಪ ಪರ ಮಾತನಾಡಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಆಕ್ಷೇಪಕ್ಕೆ ಅರ್ಥ ಇಲ್ಲ, ಪರ್ಯಾಯ ಮೆರವಣಿಗೆ ಭಗವಾಧ್ವಜ ಮೂಲಕ ಚಾಲನೆ ಕೊಟ್ಟಿದ್ದಾರೆ. ಹಿಂದೆಯೂ ಕೂಡ ಇದೇ ರೀತಿ ಚಾಲನೆ ನೀಡಲಾಗುತ್ತಿತ್ತು. ಒಂದು ವೇಳೆ ಅವರು ಪಾಕಿಸ್ತಾನ ಧ್ವಜ ಕೊಟ್ಟಿದ್ದರೆ ಟೀಕೆ ಮಾಡಬೇಕಿತ್ತು. ಡಿಸಿ ಅವರ ಸ್ಥಾನದಲ್ಲಿ ಅಂದು ನಮಗೆ ಉಸ್ತುವಾರಿ ಸಚಿವರು ಲಭಣ್ಯವಿರುತ್ತಿದ್ದರೆ ಅವರಿಮದಲೇ ಭಗವಾಧ್ವ ಹಜ ಮೂಲಕ ಚಾಲನೆ ನೀಡುತ್ತಿದ್ದೆವು. ಆವಾ್ಗಲೂ ಇವರು ಇದೇ ರೀತಿ ಅವರನ್ನು ರಾಜೀನಾಮೆಗೆ ಒಒತ್ತಾಯಿಸುತ್ತಿದ್ರಾ ಎಂಬುವುದು ಪ್ರಶ್ನೆಯಾಗಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದವರ ಮೇಲೆ ಕ್ರಮ ಕೈಗೊಂಡಿಲ್ಲ. ಬೇರೆ ಬೇರೆ ಸಂದರ್ಭದಲ್ಲಿ ಪಾಕಿಸ್ತಾನ ಧ್ವಜ ಹರಿದಾಗ ಕಣ್ಣು ಮುಚ್ಚಿ ಕೂರುತ್ತಾರೆ.   ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆಯನ್ನು ಕೊಡಲಿ. ಇಲ್ಲವಾದರೆ ಅದೆಷ್ಟೇ ದೊಡ್ಡ ರಾಜಕೀಯ ನಾಯಕ ಬಂದ್ರೂ ಕೂಡಾ ಇನ್ಮುಂದೆ ನಾವು ಭಗವಾಧ್ವಜ ಮೂಲಕವೇ ಸ್ವಾಗತ ಕೊಡುತ್ತೇವೆ ಇದು ಅವರಿಗೆ ನನ್ನ ಓಪನ್ ಚಾಲೆಂಜ್.  ಪರ್ಯಾಯದ  ಯಶಸ್ಸನ್ನು ಇವರಿಗೆ ಸಹಿಸಲು ಆಗಲ್ಲ ಎಂದು ಟೀಕಿಸಿದ್ದಾರೆ. ಇನ್ನು ಉಡುಪಿ ಪರ್ಯಾಯಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎಂಧೂ ಅವರು ಪ್ರಶ್ನಿಸಿ ವಾಗ್ದಾಳಿ ಮಾಡಿದ್ದಾರೆ.

 

Continue Reading

LATEST NEWS

ಉಡುಪಿ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ, ಕಾರಣ ನಿಗೂಢ

Published

on

ಉಡುಪಿ: ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳು ವಾಸವಾಗಿದ್ದ ಬಿಡಾರದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಉಡುಪಿಯ ಬೀಡಿನಗುಡ್ಡೆಯಲ್ಲಿ ನಡೆದಿದೆ.

ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಬರ್ಮವ್ವ ಮೃತ ಬಾಲಕಿ. ಖಾಸಗಿ ನಿವೇಶನದಲ್ಲಿದ್ದ ಜೋಪಡಿಯನ್ನು ಬಾಡಿಗೆ ಪಡೆದುಕೊಂಡು ಮೃತ ಬಾಲಕಿಯ ಹೆತ್ತವರು‌ ವಾಸವಾಗಿದ್ದರು. ಮನೆ ಮಂದಿ ಬೆಳಿಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿಯಿಂದ ಈ ಕೃತ್ಯ ನಡೆದಿದೆ.

ನಗರ ಪೋಲಿಸ್  ಠಾಣೆಯ ಎಸ್ ಐ ಗಂಗಪ್ಪ, ಮುಖ್ಯ ಆರಕ್ಷಕಿಯರಾದ ಆಶಾ ಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಮೃತ ದೇಹವನ್ನು ನೇಣು ಕುಣಿಕೆಯಿಂದ ತೆರವುಗೊಳಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.

Continue Reading
Advertisement

Trending

Copyright © 2025 Namma Kudla News

You cannot copy content of this page