Connect with us

ಕರ್ನಾಟಕಕ್ಕೆ ಮುಂಬೈನಿಂದ ಗಂಡಾಂತರ: ಒಂದೇ ದಿನ 127 ಕೊರೊನಾ ಪಾಸಿಟಿವ್ ಪತ್ತೆ.!

Published

on

ಕರ್ನಾಟಕಕ್ಕೆ ಮುಂಬೈನಿಂದ ಗಂಡಾಂತರ: ಒಂದೇ ದಿನ 127 ಕೊರೊನಾ ಪಾಸಿಟಿವ್ ಪತ್ತೆ.!

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಾಗುತ್ತಿದ್ದು, ಕರ್ನಾಟಕಕ್ಕೆ ದೇಶದ ವಾಣಿಜ್ಯ ರಾಜಧಾನಿ ಮುಂಬೈನ ಸಂಪರ್ಕದಿಂದಾಗಿ ಬಹುದೊಡ್ಡ ಗಂಡಾಂತರವೇ ಎದುರಾಗಿದೆ.

ಅದ್ರಲ್ಲೂ ಇಂದು ಒಂದೇ ದಿನ ರಾಜ್ಯದಲ್ಲಿ ಮೂವರು ಸಾವನ್ನಪ್ಪಿದ್ದಲ್ಲದೇ,127 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಈವರೆಗೂ ಒಂದೇ ದಿನದಲ್ಲೇ ಪತ್ತೆಯಾದ ಹೆಚ್ಚಿನ ಪ್ರಕರಣ ಇದಾಗಿದ್ದು, ಕರ್ನಾಟಕ ಅಕ್ಷರಶಃ ಬೆಚ್ಚಿಬಿದ್ದಿದೆ. ಒಂದೆಡೆ ರಾಜ್ಯ ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿರುವ ಸಂದರ್ಭದಲ್ಲೇ 127 ಪ್ರಕರಣಗಳು ಒಂದೇ ದಿನ ಪತ್ತೆಯಾಗಿರುವುದು ಅಪಾಯದ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಈವರೆಗೂ ಕೊರೊನಾ ಸೋಂಕಿತರ ಸಂಖ್ಯೆ 1373ಕ್ಕೆ ಏರಿಕೆಯಾಗಿದೆ. ಈವರೆಗೂ ಹಸಿರು ವಲಯದಲ್ಲಿದ್ದ ಚಿಕ್ಕಮಂಗಳೂರಿಗೂ ಈ ಮಹಾಮಾರಿ ವಕ್ಕರಿಸಿರುವುದು ಇಂದಿನ ವಿಶೇಷ.

ಮಂಡ್ಯ 62, ದಾವಣಗೆರೆ 19, ಕಲಬುರಗಿ 11, ಶಿವಮೊಗ್ಗ 12, ಬೆಂಗಳೂರು 05, ಉಡುಪಿ 04, ಚಿಕ್ಕಮಗಳೂರು 2, ಉತ್ತರ ಕನ್ನಡ 04,

ಹಾಸನ 03, ಗದಗ, ಯಾದಗಿರಿ, ವಿಜಯಪುರ ಮತ್ತು ಚಿತ್ರದುರ್ಗದಲ್ಲಿ ತಲಾ ಒಂದೊಂದು ಪ್ರಕರಣಗಳು ಕಂಡು ಬಂದಿವೆ.

ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿವೆ.

ಇಂದು ದೃಢಪಟ್ಟಿರುವ 127 ಪ್ರಕರಣಗಳಲ್ಲಿ ಸಕ್ಕರೆ ಜಿಲ್ಲೆ ಮಂಡ್ಯದಲ್ಲೇ ಸರಿಸುಮಾರು ಅರ್ಧದಷ್ಟು ಅಂದರೆ 62 ಪ್ರಕರಣಗಳು ಪತ್ತೆಯಾಗಿವೆ.

ಮುಂಬೈನಿಂದ ಹಿಂತಿರುಗಿದ್ದ ನಾಗಮಂಗಲ ಮತ್ತು ಕೆ.ಆರ್.ಪೇಟೆಯಲ್ಲಿ 62 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.

ಇವರೆಲ್ಲರೂ ಮುಂಬೈನಿಂದ ಹಿಂತಿರುಗಿದ್ದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.

ಉಡುಪಿಯಲ್ಲಿ ಇಂದು ನಾಲ್ಕು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇವರೆಲ್ಲರೂ ಮುಂಬೈನಿಂದ ನಗರಕ್ಕೆ ಹಿಂತಿರುಗಿದ್ದರು. ಇದರಲ್ಲಿ 8 ವರ್ಷದ ಮಗು, 24 ವರ್ಷದ ಮಹಿಳೆ ಮತ್ತು ಪುರುಷ ಸೇರಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಐದು ಪ್ರಕರಣಗಳು ಪತ್ತೆಯಾಗಿವೆ. ರೋಗಿ ಸಂಖ್ಯೆ 608ರ ಸಂಪರ್ಕದಿಂದಾಗಿ 54 ವರ್ಷದ ಮಹಿಳೆ, 74 ವರ್ಷದ ವೃದ್ಧನಿಗೆ ಸೋಂಕು ಕಾಣಿಸಿಕೊಂಡಿದೆ.

ಉಳಿದಂತೆ 25 ವರ್ಷದ ಯುವತಿ ಹಾಗೂ 32 ವರ್ಷದ ಪುರಷನಿಗೂ ಸೋಂಕು ಹಬ್ಬಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಮಹಿಳಾ, ಮಕ್ಕಳ ಆಸ್ಪತ್ರೆಯಲ್ಲಿ ಎನ್‌ ಆರ್‌ಸಿ ಕೇಂದ್ರ ಇಲ್ಲದಕ್ಕೆ ಗರಂ ಆದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

Published

on

ಉಡುಪಿ:  ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು.

ಪ್ರತಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಈ ಕೇಂದ್ರ ಇದೆ. ಆದರೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಸುಪರ್ದಿಗೆ ಬಂದು  ನಾಲ್ಕು ವರ್ಷಗಳಾದರೂ ಇನ್ನೂ ಎನ್‌ ಆರ್‌ ಸಿಯನ್ನು ಆರಂಭಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಹಳ ಬೇಸರದ ಸಂಗತಿ. ಈ ಬಗ್ಗೆ ಜಿಲ್ಲಾಡಳಿತ, ಡಿಎಚ್‌ಓ, ಜಿಲ್ಲಾ ಸರ್ಜನ್ ಯಾವ ಕಾರಣಕ್ಕಾಗಿ ಇದನ್ನು ಇನ್ನೂ ಆರಂಭಿಸಿಲ್ಲ ಎಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯಲ್ಲಿ ಮಕ್ಕಳು ದಾಖಲಾದ ಮೇಲೆ ಪ್ರತಿಯೊಂದು ಹೆಸರು, ತಾಯಿ ಹೆಸರು ದಾಖಲೆ ಮಾಡಿ, ಬಳಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಆದರೆ ಇಲ್ಲಿ ಕೇಸ್ ಶೀಟ್ ನೋಡಿದರೆ ಹಿನ್ನೆಲೆಯಲ್ಲಿ ಬರೆಯಲಾಗಿದೆ. ವಿವರ ಮಗುವಿನ ತಂದೆ ತಾಯಿ ಹೆಸರು ವಿಳಾಸ ಕೂಡ ಇಲ್ಲ. ಇದರಿಂದ ತಪ್ಪಾದ ಚಿಕಿತ್ಸೆ ನೀಡುವ ಸಾಧ್ಯತೆ ಹೆಚ್ಚು ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಅನಾವಶ್ಯಕವಾಗಿ ಆ ಮಗು ಅನಾರೋಗ್ಯಕ್ಕೆ ತುತ್ತಾಗುತ್ತದೆ. ಆದುದರಿಂದ ವೈದ್ಯರು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

Continue Reading

BELTHANGADY

ಶಿರಾಡಿ ಘಾಟ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

Published

on

ಶಿರಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ.

 

ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ ,  ಉಜಿರೆ ನಿವಾಸಿಗಳಾದ ಶ್ರೀಧರ್ , ಜನಾರ್ದನ ಕೆರಿಮಾರ್ ಮೃತ ದುರ್ದೈವಿಗಳು. ಧರ್ಮಸ್ಥಳದಿಂದ ಮದ್ಯಾಹ್ನ 1.30ಕ್ಕೆ ಬೆಂಗಳೂರು ಮೂಲಕ ತಿರುಪತಿಗೆ ಹೊರಟಿದ್ದ ಕೆ.ಎಸ್. ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಗೆ ಬರುತ್ತಿದ್ದ ಕಾರು ಶಿರಾಡಿ ಘಾಟ್ ಗಡಿ ಸಮೀಪ ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

 

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜಗುಜ್ಜಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಮತ್ತೋರ್ವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.  ಘಟನೆಯಲ್ಲಿ ಸುರೇಶ್ ಎಂಬವರಿಗೂ ಕೂಡಾ ಗಾಯಗಳಾಗಿವೆ ಎಂದು ತಿಳಿದುಬಂದಿದೆ.  ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

ಸಿಲಿಂಡರ್ ಅಭಾವ: ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

Published

on

ಬೆಂಗಳೂರು: ಇಸ್ರೇಲ್‌, ಅಮೇರಿಕ ಮತ್ತು ಇರಾನ್‌ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಇದೀಗ ಗ್ಯಾಸ್ ಸಿಲಿಂಡರ್ ಕೊರತೆಯ ನಡುವೆ, ಗ್ರಾಹಕರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ಈಗ ಬೆಲೆ ಏರಿಕೆಯ ಬಿಸಿ ಮತ್ತೊಂದು ಶಾಕ್ ನೀಡುವ ಸಾಧ್ಯತೆಯಿದೆ.


ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಅಯೋಮಯವಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಸಹ ಬಂದ್‌ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್​ನಂತೆ ಅಡುಗೆ ಆಯಿಲ್ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಅಡುಗೆ ಎಣ್ಣೆ ಮಾಲಿಕರೊಬ್ಬರು ಪ್ರತಿಕ್ರಿಯಿಸಿದ್ದು, ಕಳೆದ 1 ವಾರದಿಂದ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ. 100-200 ಬಾಕ್ಸ್‌ ಎಣ್ಣೆ ಬುಕ್‌ ಮಾಡಿದರೆ 20-50 ಬಾಕ್ಸ್‌ ಮಾತ್ರ ಕಳುಹಿಸುತ್ತಾರೆ. ಏಜೆಂಟರಲ್ಲಿ ಕೇಳಿದರೆ, ಸಪ್ಲೈ ಆಗುತ್ತಿಲ್ಲ. ಹೆಚ್ಚು ಬಾಕ್ಸ್‌ ನೀಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ 15-20 ರೂ. ದರ ಜಾಸ್ತಿ ಆಗಿರುವುದರಿಂದ ನಮಗೆ ತುಂಬಾ ಸಮಸ್ಯೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೀಮೆಎಣ್ಣೆ ಹಂಚಿಕೆ ಮತ್ತು ಆಮದು ನೀತಿಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದ ಹೊಸ ನಿರ್ಧಾರ

ಗ್ಯಾಸ್ ಅಭಾವ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದಾಗಿ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುವ ಭೀತಿ ಎದುರಾಗಿದೆ. ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಕಾಡುತ್ತಿದೆ. ನಗರದ ಕೆಲವು ಹೋಟೆಲ್‌ಗಳು ಮತ್ತು ಪಿಜಿಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ಮತ್ತೆ ಹಳೆಯ ಪದ್ಧತಿಯಂತೆ ಸೌದೆ ಒಲೆಗಳನ್ನು ಬಳಸುವ ಅನಿವಾರ್ಯತೆ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page