Connect with us

LATEST NEWS

ತಿರುಪತಿಯಿಂದ ಬರುತ್ತಿದ್ದ ಬಸ್ ಮತ್ತು ಲಾರಿ ನಡುವೆ ಅಪಘಾತ; ಮೂವರು ಸಾವು

Published

on

ದೇವನಹಳ್ಳಿ: ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.

ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ AP 03 Z 0190 ಸಂಖ್ಯೆಯ ಆಂಧ್ರ ಸಾರಿಗೆ ಬಸ್ ಅಪಘಾತಕ್ಕೆ ಒಳಗಾಗಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿ 16 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. 55 ವರ್ಷದ ಪುರುಷ, 18 ವರ್ಷದ ಹುಡುಗಿ ಮತ್ತು 5 ವರ್ಷದ ಮಗು ಮೃತಪಟ್ಟಿದ್ದಾರೆ.

READ IN ENGLISH : https://www.nammakudlaenglish.com/bus-from-tirupati-collides-with-lorry-three-dead/

ಗಾಯಾಳುಗಳನ್ನು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಓವರ್‌ ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿದೆ.

DAKSHINA KANNADA

ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

Published

on

ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ಬಳಿಕ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.

ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತಪಟ್ಟವರು ಎಂದು ತಿಳಿದುಬಂದಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಅನ್ನು ತುಳಿದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

Continue Reading

LATEST NEWS

ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು

Published

on

ರಾಮನಗರ: ಹಸು ಮೇಯಿಸುವಾಗ ಹೃದಯಾಘಾತವಾಗಿ 25 ವರ್ಷದ ಯುವಕ ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಡೆದಿದೆ.


ಗಿರೀಶ್ (25) ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ. ಕೂಲಿ ಕೆಲಸ ಮಾಡಿಕೊಂಡಿದ್ದ ಯುವಕ ಮಧ್ಯಾಹ್ನ ಹಸು ಮೇಯಿಸುವಾಗ ಎದೆನೋವು ಕಾಣಿಸಿಕೊಂಡು ಜಮೀನಿನ ಬಳಿಯೇ ಕುಸಿದು ಬಿದ್ದಿದ್ದಾನೆ.

ಇದನ್ನೂ ಓದಿ: ಸುಳ್ಯ: ಘನತ್ಯಾಜ್ಯ ಘಟಕಕ್ಕೆ ಬೆಂಕಿ; ನಾಲ್ಕು ಲಕ್ಷ ಮೌಲ್ಯದ ಯಂತ್ರ ಹಾನಿ

ಕೂಡಲೇ ಸ್ಥಳೀಯರು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೃತ ಗಿರೀಶ್ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತದೇಹದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Continue Reading

DAKSHINA KANNADA

ಸುಳ್ಯ: ಘನತ್ಯಾಜ್ಯ ಘಟಕಕ್ಕೆ ಬೆಂಕಿ; ನಾಲ್ಕು ಲಕ್ಷ ಮೌಲ್ಯದ ಯಂತ್ರ ಹಾನಿ

Published

on

ಸುಳ್ಯ: ಅರಂತೋಡು ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕಕ್ಕೆ ನಿನ್ನೆ (ಜು. 9) ಸಂಜೆಯ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದಿದೆ.

ಘನತ್ಯಾಜ್ಯ ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿತ್ತು. ಹೀಗಾಗಿ ಆಕಸ್ಮಿಕವಾಗಿ ಬೆಂಕಿ ತಗುಲಿ ಘಟಕವು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ.

ಇದನ್ನೂ ಓದಿ: ಹೃದಯಾ*ಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾ*ವು

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದರು. ಅಲ್ಲದೇ ಘನತ್ಯಾಜ್ಯ ವಿಲೇವಾರಿ ಮಾಡುವ ನಾಲ್ಕು ಲಕ್ಷ ಮೌಲ್ಯದ ಯಂತ್ರ ಸೇರಿ ಇತರ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page