Connect with us

LATEST NEWS

ನಾಗಮಂಗಲದಲ್ಲಿ ಭೀಕರ ರಸ್ತೆ ಅಪಘಾತಕ್ಕೆ : ಕೊಡಗಿನ ಮೂಲದ ಮೂವರು ದಾರುಣ ಸಾವು..!

Published

on

ಮಡಿಕೇರಿ : ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ನಾಗಮಂಗಲದ ಕೆಂಪನಕೊಪ್ಪಲು ಗೇಟ್ ಬಳಿ ನಡೆದಿದೆ. ಮೃತರೆಲ್ಲರು ಕೊಡಗಿನವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ಳೂರು ಕಡೆಗೆ ತೆರಳುತ್ತಿದ್ದ ಬಸ್ ಮತ್ತು ಮೈಸೂರಿಗೆ ತೆರಳುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಇತರ ಐವರ ಸ್ಥಿತಿ ಗಂಭೀರವಾಗಿದೆ.

ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಸೋಮವಾರಪೇಟೆ ಮೂಲದ ಸುದೀಪ್(35), ಶ್ರೀಜಾ(30) ಹಾಗೂ ತಂಗಮ್ಮ (55) ಮೃತ ಪಟ್ಟವರಾಗಿದ್ದಾರೆ. 15 ವರ್ಷದ ಯುವತಿಯೊಬ್ಬಳು ಗಂಭೀರ ಗಾಯಗಾಳಾಗಿದೆ ಎಂದು ತಿಳಿದು ಬಂದಿದೆ.

ಸೋಮವಾರಪೇಟೆ ಸಮೀಪದ ಕುಂದಳ್ಳಿ ಗ್ರಾಮದ ಸುದೀಪ್ ಹಾಗೂ ಮುಳ್ಳುಸೋಗೆ ಗ್ರಾಮದ ಶ್ರೀಜಾ ಅವರಿಗೆ 20 ದಿನಗಳ ಹಿಂದೆಯಷ್ಟೇ ಸೋಮವಾರಪೇಟೆಯಲ್ಲಿ ವಿವಾಹವಾಗಿತ್ತು.

ಬಸ್ ಚಾಲಕನಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS

IPL 2025: ಅಭಿಮಾನಿಗಳಿಗೆ ಉಚಿತ ಪ್ರಯಾಣ ಭಾಗ್ಯ ಕಲ್ಪಿಸಿದ ಸಿಎಸ್‌ಕೆ

Published

on

ಮಂಗಳೂರು/ಚೆನ್ನೈ: ಇದೇ ಮಾರ್ಚ್‌ 22ರಂದು ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯಲಿದ್ದು, ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ.


ವಿಶ್ವದ ಶ್ರೀಮಂತ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಅಭಿಮಾನಿಗಳಲ್ಲಿ ಈಗಾಗಲೇ ಐಪಿಎಲ್ ಜ್ವರ ಶುರುವಾಗಿದೆ. ಮಾರ್ಚ್ 22ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ.

ಆ ಬಳಿಕ ಟೂರ್ನಿಯ ಎರಡನೇ ದಿನದಂದು ಎರಡನೇ ಪಂದ್ಯದಲ್ಲಿ ಮತ್ತೆರಡು ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಚೆನ್ನೈನ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ತಮ್ಮ ತಮ್ಮ ಮೊದಲ ಪಂದ್ಯವನ್ನು ಆಡಲಿವೆ.

ಆದರೆ ಈ ಪಂದ್ಯಕ್ಕೂ ಮುನ್ನ ಸಿಎಸ್‌ಕೆ ಫ್ರಾಂಚೈಸಿ ತನ್ನ ತವರು ಅಭಿಮಾನಿಗಳಿಗೆ ವಿಶೇಷ ಉಡುಗೊರೆಯನ್ನು ನೀಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತವರು ಪಂದ್ಯಗಳಿಗೆ ಪ್ರಯಾಣಿಸುವ ಅಭಿಮಾನಿಗಳಿಗೆ ಉಚಿತ ಬಸ್ ಟಿಕೆಟ್‌ಗಳನ್ನು ಒದಗಿಸಲು ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ಲಿಮಿಟೆಡ್ (MTC) ನೊಂದಿಗೆ ಕೈ ಜೋಡಿಸಿದೆ. ಇದರ ಅಡಿಯಲ್ಲಿ ಸಿಎಸ್​ಕೆ ಅಭಿಮಾನಿಗಳು ಮೆಟ್ರೋ ಮತ್ತು ಬಸ್‌ನಲ್ಲಿ ಉಚಿತ ಪ್ರಯಾಣ ಮಾಡುವ ಅವಕಾಶ ಹೊಂದಿದ್ದಾರೆ.

ಇದನ್ನೂ ಓದಿ: 2028ರ ಆ ಒಂದು ಪಂದ್ಯಕ್ಕಾಗಿ ಟಿ20 ನಿವೃತ್ತಿಯನ್ನು ಹಿಂಪಡೆಯುತ್ತೇನೆ ಎಂದ ಕಿಂಗ್ ಕೊಹ್ಲಿ!

ಉಚಿತ ಬಸ್ ಪ್ರಯಾಣ
ಇದು ಮೊದಲ ಬಾರಿಗೆ ಅಲ್ಲ. ಸತತ ಎರಡನೇ ವರ್ಷ ಸಹ ಚೆನ್ನೈ ಸೂಪರ್ ಕಿಂಗ್ಸ್ ತಂಡದ ತವರು ಪಂದ್ಯಗಳಿಗೆ ಟಿಕೆಟ್ ಹೊಂದಿರುವ ಅಭಿಮಾನಿಗಳು ಪಂದ್ಯ ಪ್ರಾರಂಭವಾಗುವ ಮೊದಲು ಅಂದರೆ ಮೂರು ಗಂಟೆಗಳ ಮೊದಲು ಎಂಟಿಸಿ ಬಸ್‌ಗಳಲ್ಲಿ (NON-AC) ಉಚಿತವಾಗಿ ಪ್ರಯಾಣಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ತವರು ಮೈದಾನವಾದ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 7 ಪಂದ್ಯಗಳನ್ನು ಆಡಲಿದೆ. ಈ 7 ಪಂದ್ಯಗಳಿಗೂ ಅಭಿಮಾನಿಗಳನ್ನು ಸೆಳೆಯಲು ವಿಶೇಷ ಯೋಜನೆಯನ್ನು ಹಾಕಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ, ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ ಮತ್ತು ಮೆಟ್ರೋಪಾಲಿಟನ್ ಸಾರಿಗೆ ನಿಗಮದೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರ ಅಡಿಯಲ್ಲಿ ಸಿಎಸ್​ಕೆ ಅಭಿಮಾನಿಗಳು ಮೆಟ್ರೋ ಮತ್ತು ಬಸ್‌ನಲ್ಲಿ ಉಚಿತ ಪ್ರಯಾಣ ಮಾಡುವ ಅವಕಾಶ ಹೊಂದಿದ್ದಾರೆ.

ಇನ್ನು, ಅಭಿಮಾನಿಗಳನ್ನು ಸಾರ್ವಜನಿಕ ಸಾರಿಗೆಯನ್ನು ಬಳಸಲು ಇದು ಉತ್ತೇಜಿಸುವಂತಾಗಿದೆ. ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಗಳನ್ನು ಅಭಿಮಾನಿಗಳು ಇದರಿಂದಾಗಿ ಸಂಪೂರ್ಣವಾಗಿ ಆನಂದಿಸಬಹುದು. 2024ರಲ್ಲಿ ಪ್ರತಿ ಪಂದ್ಯಕ್ಕೂ ನಗರದ ವಿವಿಧ ಭಾಗಗಳಿಂದ ಸುಮಾರು 8000 ಅಭಿಮಾನಿಗಳು ಬಸ್ ಸೇವೆ ಬಳಿಸಿದ್ದರು.

ಉಚಿತ ಪ್ರಯಾಣ ಭಾಗ್ಯ ಪಡೆಯುವುದು ಹೇಗೆ ?
ಇನ್ನು ಸಿಎಸ್‌ಕೆ ಅಭಿಮಾನಿಗಳು ಉಚಿತ ಬಸ್ ಹಾಗೂ ಮೆಟ್ರೋ ಪ್ರಯಾಣ ಸೌಲಭ್ಯ ಪಡೆಯುವುದು ಹೇಗೆಂದರೆ.. ಈ ಸೌಲಭ್ಯವನ್ನು ಬಳಸಿಕೊಳ್ಳಲು ಇಚ್ಚಿಸುವ ಅಭಿಮಾನಿಗಳು ಆ ದಿನದಂದು ನಡೆಯುವ ಪಂದ್ಯದ ಟಿಕೆಟ್ ಅನ್ನು ಖರೀದಿಸಿರಬೇಕು. ಯಾರ ಕೈಯಲ್ಲಿ ಅಂದಿನ ಪಂದ್ಯದ ಟಿಕೆಟ್ ಇರುತ್ತದೆಯೋ, ಅವರು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತದೆ. ಬಾರ್‌ಕೋಡ್ ಹೊಂದಿರುವ ಟಿಕೆಟ್‌ಗಳು ಮೆಟ್ರೋ ಟಿಕೆಟ್‌ಗಳಂತೆ ಕಾರ್ಯನಿರ್ವಹಿಸುತ್ತವೆ. ಇದರಿಂದಾಗಿ ಯಾವುದೇ ಅಭಿಮಾನಿಗಳು ಸಾಲಿನಲ್ಲಿ ನಿಲ್ಲಬೇಕಾಗಿಲ್ಲ.

Continue Reading

LATEST NEWS

ನದಿಯಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ಸಾವು

Published

on

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ರಾಜಸ್ಥಾನದ ಇಬ್ಬರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿದ ಘಟನೆ ಕಳಸದ ಸಂಜೆ ಮೆಟ್ಟಿಲು ತೂಗು ಸೇತುವೆ ಬಳಿ ನಡೆದಿದೆ.

ಮೃತರನ್ನು ಜಗದೀಶ್ (33) ಹಾಗೂ ಚೋಟಾಸಿಂಗ್ (28) ಎಂದು ಗುರುತಿಸಲಾಗಿದೆ. 12 ಜನ ಗೆಳೆಯರೊಂದಿಗೆ 2 ಕಾರಿನಲ್ಲಿ ರಾಜಸ್ಥಾನದಿಂದ ಕಳಸಕ್ಕೆ ಪ್ರವಾಸ ಬಂದಿದ್ದರು. ಅಲ್ಲಿ ಭದ್ರಾ ನದಿಗೆ ನಿರ್ಮಿಸಿರುವ ತೂಗು ಸೇತುವೆ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಬಳಿಕ ಈಜಲು ತೆರಳಿದ್ದಾರೆ.

ಭಾರೀ ಆಳ ಇರುವ ಜಾಗವಾಗಿದ್ದು, ಈ ಸ್ಥಳದಲ್ಲಿ ಮಾಹಿತಿ ಇಲ್ಲದವರು ಈಜುವುದು ಕಷ್ಟ. ಆದರೆ, ರಾಜಸ್ಥಾನದಿಂದ ಬಂದವರಿಗೆ ಸ್ಥಳದ ಪರಿಚಯ ಇಲ್ಲದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮಲ್ಪೆಯ ಮುಳುಗು ತಜ್ಞ ಭಾಸ್ಕರ್, ಇಬ್ಬರ ಮೃತದೇಹಗಳನ್ನು ಮೇಲಕ್ಕೆ ಎತ್ತಿದ್ದಾರೆ. ಅವರು ನೀರಿನಲ್ಲಿ ಮುಳುಗುವಾಗ ಜೊತೆಗಿದ್ದ ಸ್ನೇಹಿತರು ಎಳೆಯುವ ಪ್ರಯತ್ನ ಮಾಡಿದರು. ಆದರೂ ನದಿ ಆಳವಿದ್ದ ಕಾರಣ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

Continue Reading

LATEST NEWS

ಕೆನಡಾ ಸಂಪುಟದಲ್ಲಿ ಭಾರತೀಯ ಮೂಲದ ಇಬ್ಬರು ಮಹಿಳೆಯರಿಗೆ ಸಚಿವ ಸ್ಥಾನ

Published

on

ಮಂಗಳೂರು/ಒಟ್ಟಾವ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರ ಸಂಪುಟದಲ್ಲಿ ಭಾರತ ಮೂಲದ ಇಬ್ಬರೂ ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗಿದೆ.


ಭಾರತೀಯ ಮೂಲದ ಅನಿತಾ ಆನಂದ್ (58) ಹಾಗೂ ದೆಹಲಿ ಮೂಲದ ಕಮಲಾ ಖೇರಾ (36) ಅವರು ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕೆನಡಾ ಸಂಸತ್ತಿನ ಇತಿಹಾಸದಲ್ಲಿಯೇ ಖೇರಾ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲಿ ಸಂಸತ್ತು ಪ್ರವೇಶಿಸಿದವರಾಗಿದ್ದಾರೆ.

ಇದನ್ನೂ ಓದಿ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಆಯ್ಕೆ

ಅನಿತಾ ಆನಂದ್ ಅವರು ನಾವೀನ್ಯತೆ, ವಿಜ್ಞಾನ ಮತ್ತು ಕೈಗಾರಿಕಾ ಸಚಿವರಾಗಿ ಹಾಗೂ ಕಮಲಾ ಖೇರಾ ಅವರು ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಸಂಪುಟದಲ್ಲಿಯೂ ಈ ಇಬ್ಬರು ಕಾರ್ಯನಿರ್ವಹಿಸಿದ್ದರು. ಟ್ರಡೊ ಅವರ ರಾಜೀನಾಮೆ ಬಳಿಕ ಅನಿತಾ ಅವರೇ ಪ್ರಧಾನಿ ಆಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

 

Continue Reading
Advertisement

Trending

Copyright © 2025 Namma Kudla News

You cannot copy content of this page