Connect with us

LATEST NEWS

ಟಿಕ್ ಟಾಕ್‌ನ ಡಾನ್‌ ಅಜ್ಜಿ ಇನ್ನಿಲ್ಲ: ನಾಳೆ ಸ್ವಗೃಹದಲ್ಲಿ ಅಂತಿಮ ದರ್ಶನ

Published

on

ಮಂಗಳೂರು: ಖ್ಯಾತ ಸಾಮಾಜಿಕ ಜಾಲತಾಣ ಟಿಕ್ ಟಾಕ್‌ನ ಡಾನ್‌ ಅಜ್ಜಿಯೆಂದೇ ಖ್ಯಾತರಾಗಿದ್ದ ಕಮಲಜ್ಜಿ(86) ಇಂದು ನಿಧನರಾಗಿದ್ದಾರೆ.


ಕಳೆದ ಕೆಲವು ತಿಂಗಳಿಂದ ಟಿಕ್‌ಟಾಕ್‌ ಸೇರಿ ಸಾಮಾಜಿಕ ಜಾಲತಾಣದಲ್ಲಿ ಸೌಂಡ್‌ ಮಾಡಿದ್ದ ಕಮಲಜ್ಜಿ ಇಂದು ಸಂಜೆ 4:30 ಕ್ಕೆ ನಿಧನರಾಗಿದ್ದಾರೆಂದು ಟಿಕ್‌ಟಾಕ್‌ ಸ್ಟಾರ್‌ ಧನಂಜಯ ಆಚಾರ್‌ ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ. ನಾಳೆ ಬೆಳಗ್ಗೆ ಸ್ವಗೃಹ ಅನಂತಾಡಿಯಲ್ಲಿ ಅಜ್ಜಿಯ ಅಂತಿಮ ದರ್ಶನ ಇಡಲಾಗಿದೆ.

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading

LATEST NEWS

ಭೀಕರ ಅಪಘಾತ; ಟೋಲ್ ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್!

Published

on

ಉತ್ತರ ಪ್ರದೇಶ: ಟೋಲ್‌ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಟೋಲ್‌ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಶನಿವಾರ(ಜ.17) ಮಧ್ಯಾಹ್ನ ನಡೆದಿದೆ.


ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂಬ ಕಾರಣಕ್ಕೆ ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು. ಟೋಲ್ ಸಿಬ್ಬಂದಿ ಟ್ಯಾಗ್​ ಸ್ಕ್ಯಾನ್ ಮಾಡುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಟ್ರಕ್ ನಿಂತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ರಸ್ತೆ ವಿಭಜಕಕ್ಕೆ ಎಸ್ ಯುವಿ ಡಿ*ಕ್ಕಿ; 5 ಮಂದಿ ಸಾ*ವು

ಡಿಕ್ಕಿಯ ರಭಸಕ್ಕೆ ಸಿಬ್ಬಂದಿ ಕಾರಿನ ಬಾನೆಟ್ ಮೇಲೆ ಬಿದ್ದಿದ್ದು, ಟ್ರಕ್ ಅವರನ್ನು ಸುಮಾರು 50 ಮೀಟರ್‌ಗಳಿಗಿಂತಲೂ ಹೆಚ್ಚು ದೂರ ಎಳೆದೊಯ್ದಿದೆ. ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Continue Reading

BIG BOSS

ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

Published

on

BBK12 : ಬಿಗ್ ಬಾಸ್ ಸೀಸನ್ 12 ಕೊನೆಯ ಹಂತಕ್ಕೆ ಬಂದು ನಿಂತಿದೆ. ಸದ್ಯ ಯಾರಿಗೆ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ ಅನ್ನೋ ಕುತೂಹಲ ಬಿಗ್ ಬಾಸ್ ವೀಕ್ಷಕರದ್ದು.  ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ಈಗಾಗಲೇ ಬಹುತೇಕ ಮಂದಿ ವೋಟ್ ಮಾಡಿದ್ದು, ಫಿನಾಲೆಯತ್ತ ದೃಷ್ಟಿ ನೆಟ್ಟಿದ್ದಾರೆ.

ಬಿಗ್ ಬಾಸ್‌ 11ರಲ್ಲಿ ವೈಲ್ಡ್ ಕಾರ್ಡ್ ಪಡೆದಿದ್ದವರು ಗಾಯಕ ಹನುಮಂತ ಲಮಾಣಿ. ಆ ಸೀಸನ್‌ನ ವಿಜೇತರಾಗಿ ಹೊರಬಂದು ಇತಿಹಾಸ ಸೃಷ್ಟಿಸಿದ್ದರು. ವೈಲ್ಡ್ ಕಾರ್ಡ್ ಮೂಲಕ ಒಳಗೆ ಹೋದವರು ಗೆದ್ದು ತೋರಿಸಬಹುದೆಂದು ತೋರಿಸಿಕೊಟ್ಟಿದ್ದರು ಹನುಮಂತ. ಇದೀಗ ಈ ಬಾರಿಯ ಬಿಗ್ ಬಾಸ್ ವಿನ್ನರ್ ಯಾರು ಅನ್ನೋ ಭವಿಷ್ಯ ನುಡಿದಿದ್ದಾರೆ.

ಯಾರು ವಿನ್ನರ್ ?

ಗಿಲ್ಲಿ ಅಣ್ಣ ನನ್ನ ಫೇವರಿಟ್, ಅವರೇ ವಿನ್ನರ್ ಆಗ್ತಾರೆ ಎಂದು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಹನುಮಂತ ಹೇಳಿದ್ದಾರೆ.

ಈ ಬಾರಿಗೆ ಗಿಲ್ಲಿ ಚೆನ್ನಾಗಿ ಆಟವಾಡಿದ್ದಾರೆ. ಅವರು ಗೆಲ್ಲುವ ವಿಶ್ವಾಸ ನನಗೆ ಇದೆ. ಬಿಗ್ ಬಾಸ್ ಮನೆಯಲ್ಲಿ ಯಾವುದೇ ಭೇದ ಭಾವ ಮಾಡುವುದಿಲ್ಲ. ಈ ಬಾರಿ ಅತಿ ಹೆಚ್ಚು ವೋಟಿಂಗ್ ಆಗಿದೆ. ಅತಿ ಹೆಚ್ಚು ವೋಟು ಗಿಲ್ಲಿನಟ ತೆಗೆದುಕೊಂಡಿದ್ದಾರೆ. ನಾನು ಸಹ ಗಿಲ್ಲಿ ನಟನಿಗೆ ವೋಟ್ ಮಾಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ನನ್ನ ಫೇವರಿಟ್ ಗಿಲ್ಲಿ ಅಣ್ಣ. ಎಲ್ಲರಿಗೂ ಆಲ್ ದಿ ಬೆಸ್ಟ್. ಸೋತೋರು ಬೇಜಾರ್ ಮಾಡ್ಕೋಬೇಡಿ. ಎಲ್ಲರಿಗೂ ಆಲ್ ದಿ ಬೆಸ್ಟ್, ಗಿಲ್ಲಿ ಅಣ್ಣನಿಗೆ ವಿಶೇಷ ಆಲ್ ದಿ ಬೆಸ್ಟ್. ಸುದೀಪ್ ಸರ್ ಮುಂದೆ ನಿಲ್ಲೋದೆ ಪುಣ್ಯ. ಫೈನಲ್ ವರೆಗೂ ಹೋಗೋದೆ ಪುಣ್ಯ  ಎಂದಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page