Connect with us

ಟಿಪ್ಪು ಜಯಂತಿ ಗಲಭೆಕೋರರ ಕೇಸ್‌: 46 ಪ್ರಕರಣ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

Published

on

ಟಿಪ್ಪು ಜಯಂತಿ ಗಲಭೆಕೋರರ ಕೇಸ್‌: 46 ಪ್ರಕರಣ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಸಂಘಪಪರಿವಾರದ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ದಾಖಲಾಗಿದ್ದ 46 ಪ್ರಕರಣಗಳನ್ನು ಹಿಂಪಡೆಯಲು ಸರಕಾರ ನಿರ್ಧರಿಸಿದೆ.

ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 46 ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡಿದ್ದು, ಆ ಪೈಕಿ 18 ಪ್ರಕರಣಗಳು ಕೊಡಗು ಜಿಲ್ಲೆಗೆ ಸಂಬಂಧಿಸಿವೆ. ಇವುಗಳಲ್ಲಿ ಟಿಪ್ಪು ಜಯಂತಿಯ ಸಂದರ್ಭ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳೇ ಹೆಚ್ಚಾಗಿದ್ದು, ಎರಡೂ ಕೋಮುಗಳ ಕೇಸುಗಳನ್ನು ಹಿಂಪೆಯಲು ಸರಕಾರ ಸೂಚಿಸಿದೆ.

2015ರ ನವೆಂಬರ್ 9ರಂದು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗುಹ್ಯ ಅಗಸ್ತೇಶ್ವರ ಕಟ್ಟಡ, ನವೆಂಬರ್ 10ರಂದು ಪಾಲಿಬೆಟ್ಟದ ಖಾಸಗಿ ಬಸ್ ನಿಲ್ದಾಣ, ಕೊಂಡಂಗೇರಿಯ ಗ್ರಾಮದ ಹಾಲುಗುಂದ ಜಂಕ್ಷನ್ ಬಳಿ ಟಿಪ್ಪು ಸುಲ್ತಾನ್ ಜಯಂತಿಗೆ ಶುಭ ಕೋರಿ ಫ್ಲೆಕ್ಸ್ ಅಳವಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

2015ರಲ್ಲಿ ಸೋಮವಾರಪೇಟೆಯ ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಲ್ಲದೆ, ಜಯಂತಿ ಆಚರಣೆಗೆ ಬಂದವರನ್ನು ಪೊಲೀಸರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾಗ ಪೊಲೀಸ್ ಬಸ್ ಅನ್ನು ಅಡ್ಡಗಟ್ಟಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು 2018ರಲ್ಲಿ ಚುನಾವಣಾ ಪ್ರಚಾರ ಸಂದರ್ಭ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿರುವುದು,ಗೋಣಿಕೊಪ್ಪ ಪೊಲೀಸರು ದಸ್ತಗಿರಿಗೆ ಮುಂದಾದಾಗ ಪೊಲೀಸ್ ಭದ್ರತೆಯಿಂದ ತಪ್ಪಿಸಿಕೊಂಡು, ದಸ್ತಗಿರಿಗೆ ಪ್ರತಿರೋಧ ಒಡ್ಡಿರುವ ಪ್ರಕರಣಗಳು ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ವಿವಿಧ ರೀತಿಯ ಒಟ್ಟು 18 ಕೇಸುಗಳು ದಾಖಲಾಗಿದ್ದವು.

2014ರಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವ ಬಗ್ಗೆ ನವೆಂಬರ್‌ನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅರಣ್ಯ ಅಧಿಕಾರಿಯೊಬ್ಬರು ನಗುತ್ತಿದ್ದುದನ್ನು ಪ್ರಶ್ನಿಸಿ ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿರುವುದಾಗಿ ಕೆಲವರ ಮೇಲೆ ಪ್ರರಣಗಳನ್ನು ದಾಖಲಿಸಲಾಗಿತ್ತು. ಈ ಎಲ್ಲಾ ಪ್ರಕರಣಗಳನ್ನು ಕೈಬಿಡುವಂತೆ ಸಿ.ಆರ್.ಪಿ.ಸಿ. ಕಲಂ 321 ಅಭಿಯೋಜನೆಯಿಂದ ಹಿಂಪಡೆಯಲು ಸರಕಾರ ಮಂಜೂರಾತಿ ನೀಡಿದೆ.

ಅಲ್ಲದೆ, ಈ ಬಗ್ಗೆ ಅಭಿಯೋಗ ಮತ್ತು ಸರಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶರಿಗೆ ಸೂಚನೆ ನೀಡಿರುವ ಸರಕಾರ ಅನುಬಂಧದಲ್ಲಿರುವ 46 ಪ್ರರಣಗಳನ್ನು ಸಂಬಂಧಪಟ್ಟ ನ್ಯಾಯಾಲಯದಿಂದ ಹಿಂಪಡೆಯಲು ಅಗತ್ಯವಾದ ಅರ್ಜಿಯನ್ನು ಸಲ್ಲಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

Advertisement
Click to comment

Leave a Reply

Your email address will not be published. Required fields are marked *

kerala

ಮದ್ವೆಗೆ ಬಲವಂತ ಆರೋಪ-ಠಾಣೆ ಮೆಟ್ಟಿಲೇರಿದ ನೀಲಿ ಕಂಗಳ ಚೆಲುವೆ ಮೊನಾಲಿಸಾ

Published

on

ತಿರುವನಂತಪುರ: 2024ರಲ್ಲಿ ನಡೆದಿದ್ದ ಮಹಾಕುಂಭಮೇಳದಲ್ಲಿ  ರುದ್ರಾಕ್ಷಿ ಮಾರುತ್ತ ತನ್ನ ಸುಂದರ ಕಣ್ಣುಗಳ ಮೂಲಕವೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಹವಾ ಸೃಷ್ಟಿಸಿದ್ದ ಮೊನಾಲಿಸಾ ಬೋಂಸ್ಲೆ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ತನ್ನ ತಂದೆ ತೋರಿಸಿದ ಹುಡುಗನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಮೊನಾಲಿಸಾ ತನ್ನ ಗೆಳೆಯನ ಜೊತೆ ಬಂದು ತಂದೆ ವಿಜಯ್ ಸಿಂಗ್ ಭೋಸ್ಲೆ ವಿರುದ್ಧ ದೂರು ನೀಡಿದ್ದಾರೆ. ಯಾವುದೇ ದೈಹಿಕ ಕಿರುಕುಳ ನಡೆದಿಲ್ಲ. ಪ್ರಾಥಮಿಕವಾಗಿ ಬಲವಂತದ ವಿವಾಹ ಪ್ರಸ್ತಾಪವಾಗಿದೆ. ಮೊನಾಲಿಸಾ ತಂದೆ ತನ್ನ ಮೇಲೆ ಒತ್ತಡ ಹೇರುತ್ತಲೇ ಇದ್ದುದರಿಂದ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ನಾವು ಇನ್ನೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್ ಆದ ಬಳಿಕ ಮೊನಾಲಿಸಾ ಅವರ ಬದುಕೇ ಬದಲಾಗಿದೆ. ಸಾಲು ಸಾಲು ಸಿನಿಮಾ ಆಫರ್ ಗಳು ಬರುತ್ತಿದೆ. ಪ್ರಸ್ತುತ ಶೂಟಿಂಗ್ ಗಾಗಿ ತಿರುವನಂತಪುರಕ್ಕೆ ಬಂದಿದ್ದ ಮೊನಾಲಿಸಾ ಇದೀಗ ಗೆಳೆಯನ ಜೊತೆ ಬಮದು ದೂರನ್ನು ನೀಡಿದ್ದಾರೆ.

Continue Reading

bangalore

6 ತಿಂಗಳಿನಿಂದ ಒಂದೇ ಮನೆಗೆ ಸ್ಕೆಚ್, 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಯುವಕ ಅರೆಸ್ಟ್

Published

on

ಬೆಂಗಳೂರು: ಮನೆಯವರು ಅಮೇರಿಕಾದಲ್ಲಿ ಇರುವುದನ್ನು ಖಚಿತಪಡಿಸಿಕೊಂಡ  ಕಳ್ಳನೋರ್ವ ಸುಮಾರು 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿನಿಮೀಯ ಶೈಲಿಯಲ್ಲಿಕಳ್ಳತನಗೈದ ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ದಂಪತಿ ಅಮೇರಿಕಾದಲ್ಲಿ ಸೆಟಲ್ ಆಗಿರೋದನ್ನು ಖಚಿತಪಡಿಸಿಕೊಂಡು  ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ.

ಲಾಕರ್ ಓಪನ್ ಮಾಡಿ 1.8 ಕೆಜಿಯ ಚಿನ್ನಾಭರಣ, ಡೈಮಂಡ್ ಹಾಗೂ ನಗದು ಎಲ್ಲವನ್ನು ದೋಚಿಕೊಂಡು ಹೋಗಿದ್ದ. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಚಿನ್ನಾಭರಣ ಸಿಕ್ಕ ಖುಷಿಗೆ ಯಾರಿಗೂ ಹೇಳದೆ ಕೇಳದೆ ನೇರವಾಗಿ ರಾಜಸ್ಥಾನಕ್ಕೆ ಚಿನ್ನಾಭರಣ ಕೊಂಡೊಯ್ದು, ಮನೆಯಲ್ಲಿ ಬಚ್ಚಿಟ್ಟಿದ್ದ.

ಮನೆಯ ಸಿಸಿಟಿವಿಯನ್ನ ಅಮೆರಿಕದಲ್ಲಿದ್ದ ದಂಪತಿ ಮೊಬೈಲ್ ನಲ್ಲಿ ಪರಿಶೀಲಿಸಿದ ಸಂದರ್ಭ ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಸಿಸಿಟಿವಿ ಆಧರಿಸಿ ಆರೋಪಿ ವೇಲಾರಾಮ್‌ ನನ್ನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

Continue Reading

LATEST NEWS

ಸೆಕೆ ತಾಳಲಾರದೆ ತಂಪಾಗಲು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

Published

on

ಹುಬ್ಬಳ್ಳಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಈಜಲು ಹೋಗಿ ನೀರಿನ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.


ಮೃತಪಟ್ಟ ವಿದ್ಯಾರ್ಥಿಗಳನ್ನು ಸಮರ್ಥ್ ಮತ್ತು ಹರೀಶ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಗೋಪನಕೊಪ್ಪದ ಸರ್ಕಾರಿ ಪದವಪೂರ್ವ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ವಿದ್ಯಾರ್ಥಿಗಳು, ಪ್ರಥಮ ಪಿಯುಸಿ ಪರೀಕ್ಷೆ ಮುಗಿದಿರುವ ಕಾರಣ ಮನೆಯಲ್ಲಿದ್ದರು ಎನ್ನಲಾಗಿದೆ.

ಬೇಸಿಗೆಯ ಸೆಕೆ ತಾಳಲಾರದೆ ತಂಪಾಗಲು ಇಬ್ಬರು ಸ್ನೇಹಿತರು ಮನೆ ಸಮೀಪ ಇರುವ ನಿರ್ಮಾಣ ಹಂತದ RNS ಗಾಲ್ಫ್​​ ಮೈದಾನದಲ್ಲಿರೋ ಹೊಂಡಕ್ಕೆ ಈಜಲು ತೆರಳಿದ್ದರು. ಮಧ್ಯಾಹ್ನ ಮನೆಯಿಂದ ಹೋದವರು, ಸಂಜೆಯಾದರೂ ಮನೆಗೆ ಮರುಳಲಿಲ್ಲ. ಆ ವೇಳೆ ಇಬ್ಬರು ಹೊಂಡದಲ್ಲಿ ಬಿದ್ದಿರೋದನ್ನು ಗಮನಿಸಿದ ಅಲ್ಲಿನ ಕೆಲಸಗಾರರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಹಾಲ್​​ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?

ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದರು ಎನ್ನಲಾಗಿದೆ. ಘಟನನಾ ಸ್ಥಳಕ್ಕೆ ಭೇಟಿ ನೀಡಿದ ನವನಗರ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆಯಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page