Connect with us

DAKSHINA KANNADA

ಇಂದಿನಿಂದ ಕಟೀಲು ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟ ಆರಂಭ

Published

on

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಈ ಬಾರಿಯ ತಿರುಗಾಟ ಇಂದು ಅಂದರೆ ಡಿ. 7 ರಂದು ಸೇವೆಯಾಟದೊಂದಿದೆ ಆರಂಭವಾಗಲಿದೆ.

ಸಂಜೆ 5 ಗಂಟೆಗೆ ದೇವಸ್ಥಾನದಲ್ಲಿ ತಾಳಮದ್ದಳೆ ನಡೆಯಲಿದ್ದು, 6.45 ಕ್ಕೆ ಕಲಾವಿದರಿಗೆ ಗೆಜ್ಜೆ ಹಸ್ತಾಂತರ, 8.30 ಕ್ಕೆ ಚೌಕಿ ಪೂಜೆ 10.30 ಬಳಿಕ ಪಾಂಡವಾಶ್ವಮೇಧ ಯಕ್ಷಗಾನ ನಡೆಯಲಿದೆ , ಪ್ರತೀ ವರ್ಷ ಮೇಳದ ಪರಿಕರಗಳನ್ನು ದುರಸ್ತಿ ಮಾಡಲಾಗುತ್ತಿದ್ದು, ಈ ಬಾರಿ ಮೇಳದ ಹೆಚ್ಚಿನ ವೇಷ ಭೂಷಣಗಳನ್ನು ಹೊಸದಾಗಿ ತಯಾರಿಸಲಾಗಿದೆ. ಸುಮಾರು 30 ಕ್ಕೂ ಹೆಚ್ಚು ಕೀರಿಟ, 12 ಕ್ಕೂ ಹೆಚ್ಚು ಕೇಸರಿ ತಟ್ಟಿ, ಧರ್ಮರಾಯನ ಆರು ಕಿರೀಟ ಮತ್ತಿತರ ಸಾಮಾಗ್ರಿಗಳನ್ನು ಹೊಸತಾಗಿ ಮಾಡಲಾಗಿದೆ.

ಈ ಬಾರಿ ಅಧಿಕ ಮಾಸದ ನಿಮಿತ್ತ ತಡವಾಗಿ ಹೊರಡುತ್ತಿದ್ದು, 167 ದಿನ ತಿರುಗಾಟ ನಡೆಸಲಿದೆ. ಪ್ರತೀ ವರ್ಷ 450 ಖಾಯಂ ಇದ್ದ ಕಾರಣ ಸುಮಾರು 550 ಆಟಗಳನ್ನು ಮಾತ್ರ ನೀಡಲು ಸಾದ್ಯವಾಗಿದೆ, ಕಳೆದ ವರ್ಷ 774 ಹೊಸ ಆಟ ಬುಕಿಂಗ್ ಆಗಿದೆ. ಹಾಸ್ಯ ಕಲಾವಿದ ಬಾಗಮಂಡಲ ಮಹಬಲೇಶ್ವರ ಭಟ್, ನಿತೇಶ್ ಕುಪ್ಪೆಪದವು, ಬಂದಾರು ಬಾಲಕೃಷ್ಣ ಗೌಡ, ಪ್ರಸಾದ್ ಮೂಡಬಿದ್ರೆ, ಕಾರ್ತಿಕ್ ಮಂಚಿ, ಅಕ್ಷಯ್ ಕಾಂತಾವರ, ಅಕ್ಷಯ ಶೆಟ್ಟಿ ಬೆಳ್ಮಣ್ಣು, ಗಣೇಶ್ ಮೀಜಾರು ಕಟೀಲು ಮೇಳಕ್ಕೆ ಸೇರ್ಪಡೆಗೊಂಡಿದ್ದಾರೆ.

DAKSHINA KANNADA

ಕಲಾಯಿ ಅಶ್ರಫ್ ಹತ್ಯೆಗೆ ರಿವೇಂಜ್ ಪೋಸ್ಟ್..! 16 ಇನ್ಸ್ಟಾಗ್ರಾಂ ಖಾತೆ ವಿರುದ್ಧ FIR

Published

on

ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶವಾದ ಕರಾವಳಿಯಲ್ಲಿ ಧರ್ಮ ದಂಗಲ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದೆ ಎನ್ನುವಷ್ಟರಲ್ಲಿ ಮತ್ತೆ ಹತ್ಯೆಗೆ ಪ್ರಚೋದನೆ ನೀಡುವ ಉದ್ದೇಶದಲ್ಲಿ ಹಾಕಿರುವಂತಹ ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಭಯ ಹುಟ್ಟಿಸಿದೆ.

2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲ್​​​ಗೆ ಎಚ್ಚರಿಕೆ ನೀಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ರವಾನೆಯಾಗುತ್ತಿದೆ.

Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್​​ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್​​ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ‌ ಎಚ್ಚರಿಕೆ ನೀಡಲಾಗಿದೆ. ಭರತ್ ಕುಮ್ಡೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ಸ್ಟಾಗ್ರಾಮ್​​ ಪೋಸ್ಟ್​ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್​​ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್​​ ಖಾತೆಗಳ ವಿರುದ್ಧ ಎಫ್​ಐಆರ್​ ಮಾಡಿದೆ. ಜೊತೆಗೆ ಆಯಕಟ್ಡಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್​​ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ.

ಈ ಹಿಂದೆಯೂ ಭರತ್ ಕುಮ್ಡೇಲ್​​ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಬ್ಯಾರಿ ರಾಯಲ್ ನವಾಬ್ ,  ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್‌ ಕುಮ್ಡೇಲ್​​​ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ ಎಂದು ಪೋಸ್ಟ್​​ ಮಾಡಲಾಗಿತ್ತು. ಇದೀಗ ಇಂತಹ ಪ್ರಚೋದನಾಕಾರಿ ಪೋಸ್ಟ್ ಹಾಕುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Continue Reading

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

DAKSHINA KANNADA

‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

Published

on

ಮಂಗಳೂರು: ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ “ನಶೆ ಮುಕ್ತ ಮಂಗಳೂರು’  ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಪೌಂಡೇಶನ್‌ನ ಸುಹೈಲ್ ಕಂದಕ್ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅಭಿಯಾನದ ಉದ್ಘಾಟನೆಯನ್ನು ಸ್ಪೀಕರ್ ಯು ಟಿ ಖಾದರ್ ನೆರವೇರಿಸುವರು. ಸಂಸದ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್ ವಿ ದರ್ಶನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿರುತ್ತಾರೆ ಎಂದರು.

ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಅಭಿಯಾನವನ್ನು ಆಯೋಜಿಸುತ್ತಿದ್ದು ಇದರ ಅಂಗವಾಗಿ ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ಹಲವು ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರ ಎಸಿಪಿ ರವೀಶ್ ನಾಯಕ್, ಕಾಂಗ್ರೆಸ್ ನಾಯಕ ವಿಕಾಸ್ ಶೆಟ್ಟಿ, ಬಾರ್ನ್ ಅಗೇನ್ ರಿಕವರಿ ಸೆಂಟರ್, ಬೀನಾ ಸಲ್ದಾನ ಮೊದಲಾದವರಿದ್ದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page