Connect with us

LATEST NEWS

ಇಂದು 11 ಗಂಟೆಗೆ ಬಸವರಾಜ ಬೊಮ್ಮಾಯಿಗೆ ಪಟ್ಟಾಭಿಷೇಕ

Published

on

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ, ಇಂದು ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವ್ಯಕ್ತಿಗತವಾಗಿ 23ನೇ ಮುಖ್ಯಮಂತ್ರಿಯಾಗಿ ಆಯ್ಕೆ. ಇಂದು ಬೆಳಗ್ಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್​ಚಂದ್ ಗೆಹಲೋತ್ ನೂತನ ಸಿಎಂ ಬೊಮ್ಮಾಯಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಅಂದ್ಹಾಗೆ ಇವತ್ತು ಬೊಮ್ಮಾಯಿ ಒಬ್ಬರೇ ಪದಗ್ರಹಣ ಮಾಡ್ತಿದ್ದಾರೆ.

 

12 ಗಂಟೆಗೆ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಧ್ಯಾಹ್ನ 12 ಗಂಟೆಗೆ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ನಲ್ಲಿ ಸುದ್ದಿಗೋಷ್ಠಿ ಏರ್ಪಡಿಸಲಾಗಿದೆ.

ಸಿದ್ದರಾಮಯ್ಯ ಗೈರು

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸಮಾರಂಭಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗೈರಾಗಲಿದ್ದಾರೆ. ಸಿದ್ದರಾಮಯ್ಯ ಪುತ್ರ ದಿವಂಗತ ರಾಕೇಶ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ತೆರಳಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗುವುದು ಸಾಧ್ಯವಾಗುತ್ತಿಲ್ಲ.

DAKSHINA KANNADA

ಕುದ್ರೋಳಿ ಕ್ಷೇತ್ರದಲ್ಲಿ ಇಂದು ಭೈರವಾಷ್ಟಮಿ

Published

on

ಮಂಗಳೂರು : ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಇಂದು(ನ.12) ಭೈರವಾಷ್ಟಮಿ ಪ್ರಯುಕ್ತ ಬೆಳಿಗ್ಗೆ ಭೈರವ ದೇವರಿಗೆ ಅಭಿಷೇಕ, ಮಹಾಪೂಜೆ ನೆರವೇರಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ಈ ಸಂದರ್ಭ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಹೆಚ್ ಸೋಮಸುಂದರಂ ಮತ್ತು ಕಾರ್ಯದರ್ಶಿ ಮಾಧವ ಸುವರ್ಣ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಕಟೀಲು ಏಳನೇ ಮೇಳದ ಪದಾರ್ಪಣೆ ಸಂಭ್ರಮ; ನ.15ರಂದು ನಡೆಯಲಿದೆ ವೈಭವದ ಮೆರವಣಿಗೆ

ಕ್ಷೇತ್ರದಲ್ಲಿ ಇಂದು(ನ.12) ಸಂಜೆ 7.30 ಕ್ಕೆ ಭೈರವ ತರ್ಪಣ ಮತ್ತು ಮಹಾಪೂಜೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಯಲ್ಲಿ ಆಗಮಿಸಿ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗುವಂತೆ ಕ್ಷೇತ್ರದ ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಸಮಿತಿ ವಿನಂತಿಸಿಕೊಂಡಿದೆ.

Continue Reading

DAKSHINA KANNADA

ನಂದಿಗುಡ್ಡೆಯಲ್ಲಿ ಕೊರಗಜ್ಜ ಚಿತ್ರ ತಂಡದಿಂದ ಹರಕೆಯ ಕೋಲ ಸೇವೆ

Published

on

ಮಂಗಳೂರು: ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ ಮೂಡಿ ಬಂದಿರುವ 6 ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿರುವ ಕೊರಗಜ್ಜ ಸಿನೆಮಾ ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಾದ್ಯಂತ ತೆರೆ ಕಾಣಲಿದೆ. ಅದಕ್ಕೂ ಮುನ್ನ ಚಿತ್ರ ತಂಡ ಮಂಗಳೂರಿನ ನಂದಿಗುಡ್ಡೆ ಕೊರಗಜ್ಜನ ಸಾನಿಧ್ಯದಲ್ಲಿ ಹರಕೆಯ ಕೋಲ ಸೇವೆ ಮಾಡಿ ಚಿತ್ರದ ಯಶಸ್ವಿಗೆ ಪ್ರಾರ್ಥನೆ ಮಾಡಿದೆ.


ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಶ್ರುತಿ, ಭವ್ಯ, ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಶ್ರುತಿ ತಂದೆ, ತಾಯಿ ಸಹಿತ ಚಿತ್ರರಂಗದ ಹಲವು ಮಂದಿ ಸೇರಿ ಸುಮಾರು 1500 ಅಧಿಕ ಮಂದಿ ಭಕ್ತರು ಕೊರಗಜ್ಜನ ಕೋಲದಲ್ಲಿ ಭಾಗಿಗಳಾಗಿದ್ದರು.

ತ್ರಿವಿಕ್ರಮ ಸಪಲ್ಯ ನಿರ್ಮಾಣದ ‘ಸಕ್ಸಸ್ ಫಿಲ್ಮ್ಸ್’ ಹಾಗೂ ‘ತ್ರಿವಿಕ್ರಮ ಸಿನಿಮಾಸ್’ ಮೂಲಕ ಈ ಸಿನಿಮಾ ನಿರ್ಮಾಣವಾಗಿದ್ದು, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಕೆಲಸ ಮಾಡಿದ್ದಾರೆ.


ತುಳು, ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಗೊಳ್ಳಲಿದೆ. ಇನ್ನು ಸಿನೆಮಾದಲ್ಲಿ ನಟಿಸಿರುವ ಖ್ಯಾತ ನಟಿ ಶ್ರುತಿ ಅವರು ಚಿತ್ರದ ಅಭಿನಯದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

 

Continue Reading

LATEST NEWS

2026ರ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದು ಅನುಮಾನ!?

Published

on

ಬೆಂಗಳೂರು: ರಾಯಲ್ ಚಾಲೆಂಜರ್ಸ್ ತಂಡ 2025ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಟ್ರೋಫಿ ಗೆದ್ದ ಖುಷಿ ಒಂದು ದಿನ ಕಳೆಯುವ ಮುನ್ನವೇ ಕಾಲ್ತುಳಿತದಿಂದಾಗಿ ಮಣ್ಣುಪಾಲಾಯಿತು. ಈ ದು:ಖದಿಂದ ಅಭಿಮಾನಿಗಳು ಹೊರಬರುತ್ತಿರುವಾಗಲೇ ಮತ್ತೊಂದು ಕಹಿ ಸುದ್ದಿಯೊಂದು ಎದುರಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸುವುದು ಅನುಮಾನ. ಹೀಗಾಗಿಯೇ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದೆಲ್ಲಿ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬದಲಿಗೆ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಆಸೋಸಿಯೇಷನ್ ಕ್ರೀಡಾಂಗಣದಲ್ಲಿ ಆರ್‌ಸಿಬಿ ತನ್ನ ತವರು ಪಂದ್ಯಗಳನ್ನು ಆಡಲಿದೆ ಎಂಬ ಮಾತಿದೆ. ಈ ಬಗ್ಗೆ ಆರ್‌ಸಿಬಿ ಆಗಲಿ ಅಥವಾ ಐಪಿಎಲ್ ಆಯೋಜಕರಾಗಲಿ ಖಚಿತಪಡಿಸಿಲ್ಲ.

ಆದರೆ ಈ ಬಗ್ಗೆ ಎಂಸಿಎ ಕಾರ್ಯದರ್ಶಿ ಕಮಲೇಶ್ ಪಿಸಾಲ್, ಆರ್​ಸಿಬಿ ತಂಡಕ್ಕೆ ತವರಿನಲ್ಲಿ ಪಂದ್ಯ ಆಯೋಜಿಸಲು ಸಮಸ್ಯೆಗಳಿವೆ. ಹೀಗಾಗಿ ಅವರು ಪರ್ಯಾಯ ಸ್ಥಳಗಳನ್ನು ಹುಡುಕುತ್ತಿದ್ದಾರೆ. ಈ ಬಗ್ಗೆ ನಮ್ಮೊಂದಿಗೆ ಚರ್ಚಿಸಿದ್ದಾರೆ. ಐಪಿಎಲ್ ವೇಳೆ ನಮ್ಮ ಕ್ರೀಡಾಂಗಣ ಫ್ರೀ ಇರುವುದರಿಂದ ಇಲ್ಲಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: BBK12: ‘ನಾಮಿನೇಟೆಡ್’ ತಂಡಕ್ಕೆ ಹೊಸ ಚಾಲೆಂಜ್ ನೀಡಿದ ಬಿಗ್ ಬಾಸ್; ರಾಶಿಕಾ ವಿರುದ್ದ ತಿರುಗಿಬಿದ್ದ ರಕ್ಷಿತಾ!

ಮೈಕಲ್ ಕುನ್ಹಾ ಆಯೋಗವು ಕ್ರೀಡಾಂಗಣದ ವಿನ್ಯಾಸ ಮತ್ತು ರಚನೆ ಹೆಚ್ಚಿನ ಜನರು ಸೇರುವ ಸಮಾರಂಭಗಳಿಗೆ ಸೂಕ್ತವಲ್ಲ ಮತ್ತು ಅಸುರಕ್ಷಿತ ಎಂದು ತನ್ನ ವರದಿಯಲ್ಲಿ ಹೇಳಿದೆ. ದೊಡ್ಡ ಸಂಖ್ಯೆಯ ಜನರು ಸೇರಿದರೆ ಅಪಾಯ ಎದುರಾಗಬಹುದು. ಇಂತಹ ಸಮಾರಂಭಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಬೇಕು ಮತ್ತು ಅಂತಾರಾಷ್ಟ್ರೀಯ ಮಾನದಂಡಗಳನ್ನು ಪಾಲಿಸಿಯೇ ಇನ್ನು ಪಂದ್ಯಗಳನ್ನು ನಡೆಸಬೇಕು ಎಂದು ವರದಿಯಾಗಿತ್ತು.

ಮತ್ತೊಂದೆಡೆ, ಆರ್‌ಸಿಬಿ ಅಥವಾ ಯಾವುದೇ ತಂಡವು ತಮ್ಮ ತವರು ಪಂದ್ಯಗಳನ್ನು ಬೇರೆ ಮೈದಾನಗಳಲ್ಲಿ ಈವರೆಗೂ ಆಡಿಲ್ಲ. ಈಗ, ಆರ್‌ಸಿಬಿ ಪುಣೆ ಮೈದಾನದಲ್ಲಿ ಆಡಿದರೆ, ತಮ್ಮ ತವರು ಮೈದಾನವನ್ನು ಹೊರತುಪಡಿಸಿ ಬೇರೆ ಸ್ಥಳದಲ್ಲಿ ಆಡಿದ ಮೊದಲ ತಂಡ ಎಂಬ ಹೆಸರಿಗೆ ಪಾತ್ರವಾಗುತ್ತದೆ. ಇನ್ನು 2009 ರಲ್ಲಿಯೂ ಸಹ, ಆರ್‌ಸಿಬಿ ಬೆಂಗಳೂರಿನಲ್ಲಿ ತನ್ನ ಪಂದ್ಯಗಳನ್ನು ಆಡಲಿಲ್ಲ. ಏಕೆಂದರೆ, ಆ ಸಮಯದಲ್ಲಿ ಇಡೀ ಪಂದ್ಯಾವಳಿಯನ್ನು ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸಲಾಯಿತು. ಇದು ಮಾತ್ರವಲ್ಲದೆ, ಕೋವಿಡ್ ಸಮಯದಲ್ಲಿಯೂ ಸಹ ಆರ್‌ಸಿಬಿ ಬೆಂಗಳೂರಿನಲ್ಲಿ ಆಡಲಿಲ್ಲ. ಮಹಾಮಾರಿ ಕೋವಿಡ್ ಕಾರಣದಿಂದಾಗಿ ದುಬೈನಲ್ಲಿ ಆಡಿಸಲಾಗಿತ್ತು.

Continue Reading
Advertisement

Trending

Copyright © 2025 Namma Kudla News

You cannot copy content of this page