Connect with us

BELTHANGADY

ನಾಳೆ ವೇಣೂರು-ಪೆರ್ಮುಡ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಹೊನಲು ಬೆಳಕಿನ 3೦ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ ಡಿಸೆಂಬರ್ 3 ರಂದು ಉದ್ಘಾಟನೆಗೊಳ್ಳಲಿದೆ.


ವಿಶೇಷವಾಗಿ ಮೂರು ದಶಕದ ಹಿನ್ನೆಲೆಯನ್ನು ಹೊಂದಿರುವ 3೦ನೇ ವರ್ಷದ ಕಂಬಳವಾಗಿದ್ದು, ಕಂಬಳದ ಎಲ್ಲ ಪೂರ್ವ ತಯಾರಿ ನಡೆಸಲಾಗಿದೆ. ನಿಗದಿಯಂತೆ 24 ಗಂಟೆಯೊಳಗೆ ಮುಗಿಸಲು ಎಲ್ಲ ಸಿದ್ಧತೆಗಳನ್ನು, ಅದಕ್ಕೆ ಬೇಕಾದ ವಿವಿಧ ಸಮಿತಿಗಳನ್ನು ಈಗಾಗಲೇ ರಚಿಸಲಾಗಿದೆ ಎಂದು ಸಮಿತಿ ಪ್ರಮುಖರು ತಿಳಿಸಿದ್ದಾರೆ.


ಕಂಬಳವನ್ನು ಬೆಳಗ್ಗೆ 8.30ಕ್ಕೆಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ| ಪದ್ಮ ಪ್ರಸಾದ್ ಅಜಿಲರು ಉದ್ಘಾಟಿಸಲಿದ್ದಾರೆ.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಪುರುಷೋತ್ತಮ ರಾವ್ ಅಧ್ಯಕ್ಷತೆ ವಹಿಸಲಿದ್ದು, ತಹಶೀಲ್ದಾರ್ ಪೃಥ್ವಿ ಸಾನಿಕಂ, ವೃತ್ತ ನಿರೀಕ್ಷಕ ಶಿವಕುಮಾರ್ ಬಿ.ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.


ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧಕ್ಷತೆಯನ್ನು ಸಮಿತಿಯ ಗೌರವಧ್ಯಕ್ಷ ಮಾಜಿ ಶಾಸಕ ಕೆ.ವಸಂತ ಬಂಗೇರ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ಉಪ ನಾಯಕ ಬಿ.ಕೆ.ಹರಿಪ್ರಸಾದ್, ಸಹಕಾರ ರತ್ನ ಡಾ| ಎಂ.ಎನ್.ರಾಜೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಪ್ರಮುಖರು ಭಾಗವಹಿಸಲಿದ್ದಾರೆ.


ಕಂಬಳದಲ್ಲಿ ಕನೆ ಹಲಗೆ, ಹಗ್ಗ ಕಿರಿಯ, ಹಗ್ಗ ಹಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಹೀಗೆ ಒಟ್ಟು 6 ವಿಭಾಗದಲ್ಲಿ ಕೋಣಗಳ ಓಟದ ಸ್ಪರ್ಧೆ ನಡೆಯಲಿದೆ. ಈ ಬಾರಿಯ ಕಂಬಳದಲ್ಲಿ ಒಟ್ಟು 200 ಕ್ಕಿಂತ ಹೆಚ್ಚು ಅoಕ ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.

BELTHANGADY

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಚಾರ್ಮಾಡಿಯ ನಿವಾಸಿ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. 1990 ರಲ್ಲಿ ಈತನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. 1992 ರಲ್ಲಿ ಇದನ್ನು ಎಲ್‌ಪಿಸಿ ಪ್ರಕರಣ ಎಂಬುದಾಗಿ ಪರಿಗಣಿಸಲಾಗಿತ್ತು. ಈತನ ಪತ್ತೆ ಹಚ್ಚುವ ಬಗ್ಗೆ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ: ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿ*ಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ಇದೀಗ ಆರೋಪಿ ರವೀಂದ್ರನನ್ನು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ಪೊಲೀಸರು ದಸ್ತಗಿರಿ ಮಾಡಿ ಜನವರಿ 6 ರಂದು ಮಂಗಳವಾರ ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BELTHANGADY

ಬೆಳ್ತಂಗಡಿ: ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ

Published

on

ಬೆಳ್ತಂಗಡಿ: ತಾಲೂಕಿನ ಕುದ್ರಾಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.


ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಡಿಕ್ಕಿ ಆಗಿದ್ದು, ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ.

ಇದನ್ನೂ ಓದಿ: ಬಸ್ ಹತ್ತುವ ವೇಳೆ ದುರಂ*ತ; ಆಯತಪ್ಪಿ ಕೆಳಗೆ ಬಿದ್ದು ಬಾಲಕಿ ಸಾ*ವು

ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.

Continue Reading

BELTHANGADY

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರ ಡಿ*ಕ್ಕಿಯಾಗಿ ವಯೋವೃದ್ಧ ಸಾ*ವು

Published

on

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ.


ಮೃತರನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಹಂಝಾ (72) ಎಂದು ಗುರುತಿಸಲಾಗಿದೆ. ಇವರು ಪತ್ನಿ, ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಹಂಝಾ ಅವರು ಸೌದೆ ಕಡಿಯುವ ಕೆಲಸಕ್ಕೆಂದು ಮದ್ದಡ್ಕಕ್ಕೆ ಹೋಗಿದ್ದರು. ಅವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಚಾಲಕ ಬಿಹಾರಿ ರೈ ಎಂಬಾತ ಯಂತ್ರವನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಹಿಂದಕ್ಕೆ ತೆಗೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಹಂಝಾ ಅವರನ್ನು ತಕ್ಷಣವೇ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುತ್ತೂರು : ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕ ಆ*ತ್ಮಹ*ತ್ಯೆ

ಹಂಝಾ ಅವರದ್ದು ಬಡ ಕುಟುಂಬವಾಗಿದ್ದು, ತಮ್ಮ ವೃದ್ಧಾಪ್ಯದಲ್ಲೂ ಸೌದೆ ಕಡಿಯುವ ಕೆಲಸಕ್ಕೆ ಹೋಗುತ್ತಿದ್ದರು. ಅವರ ಕುಟುಂಬ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page