Connect with us

LATEST NEWS

ಕಾಸರಗೋಡಿನಲ್ಲಿ ಪ್ರವಾಸದ ಬಸ್ ಮಗುಚಿ ಬಿದ್ದು 40ಕ್ಕೂ ಅಧಿಕ ಮಂದಿ ಗಾಯ…!

Published

on

ಕಾಸರಗೋಡು: ಮೈಸೂರಿನಿಂದ ಕೇರಳದ ಕಾಸರಗೋಡು ಜಿಲ್ಲೆಯ ರಾಣಿಪುರಕ್ಕೆ ಪ್ರವಾಸಕ್ಕೆ ಹೊರಟಿದ್ದ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬಂದಿ ಪ್ರಯಾಣಿಸುತ್ತಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದ ಪರಿಣಾಮ 40ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.


ಗಾಯಗೊಂಡಿರುವ 20 ಮಂದಿಯನ್ನು ಪೂಡಂಕಲ್ಲು ತಾಲೂಕು ಆಸ್ಪತ್ರೆಗೆ ಹಾಗೂ 10 ಮಂದಿಯನ್ನು ಕಾಞ೦ಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರಿನ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ 49 ಜನ ಸಿಬಂದಿ ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು.

ಪನತ್ತಡಿ ಪೇಟೆಯಲ್ಲಿ ಬಸ್ಸು ಮಗುಚಿ ಬಿದ್ದ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಅದರಲ್ಲಿ ಸಿಲುಕಿದವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದರು.


ಬೆಳಿಗ್ಗೆ ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಆಪಘಾತದಿಂದ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.

 

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರು: 33ನೇ ವರ್ಷದ ಕೋಟಿ-ಚೆನ್ನಯ ಜೋಡುಕೆರೆ ಕಂಬಳ

Published

on

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 33ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಜನವರಿ 24 ಮತ್ತು 25ರಂದು ನಡೆಯಲಿದೆ.


ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ಕೂಟಗಳ ಪೈಕಿ ಹಲವು ಪ್ರಥಮಗಳನ್ನು ಸ್ಥಾಪಿಸಿದ ಕೂಟವೆಂಬ ಹೆಗ್ಗಳಿಕೆ ಪುತ್ತೂರು ಕಂಬಳಕ್ಕಿದ್ದು, ಈ ಬಾರಿ 200ಕ್ಕಿಂತಲೂ ಹೆಚ್ಚು ಜೋಡಿ ಕೋಣಗಳು ಭಾಗವಹಿಸಲಿವೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.32ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯ ಜೋಡುಕರೆಯಲ್ಲಿ ಕಂಬಳವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ವಹಿಸಲಿದ್ದಾರೆ ಎಂದರು.

ಇದನ್ನೂ ಓದಿ: ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ರೈ ವಹಿಸಲಿದ್ದಾರೆ ಹಲವು ಮಂದಿ ಗಣ್ಯರು ಭಾಗವಹಿಸಲಿರುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ., ಕೋಶಾಕಾರಿ ಪಂಜಿಗುಡ್ಡೆ ಈಶ್ವರ ಭಟ್, ಉಪಾಧ್ಯಕ್ಷರಾದ ನಿರಂಜನ ರೈ ಮಠಂತಬೆಟ್ಟು ಮೊದಲಾದವರಿದ್ದರು.

Continue Reading

LATEST NEWS

ಕೇರಳ: ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಆತ್ಮಹತ್ಯೆ ಪ್ರಕರಣ; ವ್ಲೋಗರ್ ಶಿಂಜಿತಾ ಮುಸ್ತಫಾ ಬಂಧನ

Published

on

ಕೋಝಿಕೋಡ್‌: ಗೋವಿಂದಪುರದ ದೀಪಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಬುಧವಾರ ವ್ಲೋಗರ್ ಶಿಂಜಿತಾ ಮುಸ್ತಫಾ ಅವರನ್ನು ಬಂಧಿಸಿದ್ದಾರೆ. ಶಿಂಜಿತಾ ಬಸ್ಸಿನೊಳಗೆ ಅವಮಾನಿಸಿದ ನಂತರ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿ ಮಹಿಳೆಯನ್ನು ವಡಕಾರದಲ್ಲಿ ಬಂಧಿಸಲಾಗಿದೆ. ಕೊಯಿಲಾಂಡಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಯ ನಂತರ, ಶಿಂಜಿತಾ ಮುಸ್ತಫಾಳನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಆಕೆಯ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ಹಲವಾರು ಅಪರಾಧಗಳ ಆರೋಪವನ್ನ ಹೊರಿಸಲಾಗಿದೆ.

ದೀಪಕ್‌ಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸಾರ್ವಜನಿಕ ಪ್ರತಿಭಟನೆ ನಡೆದ ನಂತರ ಬಂಧನವಾಗಿದೆ. ಖಾಸಗಿ ಬಸ್ಸಿನಲ್ಲಿ ದೀಪಕ್‌ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಶಿಂಜಿತಾ ಮುಸ್ತಫಾ ಆರೋಪಿಸಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ದೀಪಕ್‌ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ: ಹಾಸನ: ಶಾಲಾ ಬಾಲಕಿಯನ್ನು ಬೆನ್ನಟ್ಟಿದ ಪ್ರಕರಣ; ಕಿಡಿಗೇಡಿಯನ್ನು ಬಂಧಿಸಿದ ಪೊಲೀಸರು

ದೀಪಕ್‌ ಆತ್ಮಹತ್ಯೆ ಮಾಡಿದ ನಂತರ ಈ ಪ್ರಕರಣ ತಿರುವು ಪಡೆದುಕೊಂಡಿತ್ತು. ದೀಪಕ್‌ ಅವರದ್ದು ಯಾವುದೇ ತಪ್ಪಿಲ್ಲದೇ ಇದ್ದರೂ ಅವರ ಬಳಿಯೇ ಹೋಗಿ ಆಕೆ ವಿಡಿಯೋ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಪ್ರಚಾರಕ್ಕಾಗಿ ವಿಡಿಯೋ ಮಾಡಿ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದಕ್ಕೆ ಶಿಂಜಿತಾಳನ್ನು ಬಂಧಿಸಬೇಕೆಂಬ ಆಗ್ರಹ ಕೇಳಿಬಂದಿತ್ತು.

ತೀವ್ರ ಪ್ರತಿಭಟನೆಯ ನಂತರ ಎಚ್ಚೆತ್ತ ಪೊಲೀಸ್‌ ಇಲಾಖೆ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆ ವ್ಲೋಗರ್ ಶಿಂಜಿತಾ ಮುಸ್ತಫಾಳನ್ನ ಬಂಧಿಸಿದೆ. ಅಷ್ಟೆ ಅಲ್ಲದೆ, ಈ ಪ್ರಕರಣಕ್ಕೆ ಇದೀಗ ಕೇರಳ ಮಾನವ ಹಕ್ಕುಗಳ ಆಯೋಗ ಕೂಡ ಎಂಟ್ರಿ ಕೊಟ್ಟಿದ್ದು, ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಿ ವರದಿ ನೀಡುವಂತೆ ಡಿಐಜಿಗೆ ಆದೇಶಿಸಿದೆ.

Continue Reading

LATEST NEWS

ಹಾಸನ: ಶಾಲಾ ಬಾಲಕಿಯನ್ನು ಬೆನ್ನಟ್ಟಿದ ಪ್ರಕರಣ; ಕಿಡಿಗೇಡಿಯನ್ನು ಬಂಧಿಸಿದ ಪೊಲೀಸರು

Published

on

ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ ಆತಂಕ ಸೃಷ್ಟಿಸಿದ್ದ ಅಪರಿಚಿತನನ್ನು ಪೊಲೀಸರು ಬಂಧಿಸಲಾಗಿದೆ.


ಕೋಲಾರ ಜಿಲ್ಲೆಯ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಬಂಧಿತ ಆರೋಪಿ.

ಜನವರಿ 17 ರಂದು ಹಾಸನದಲ್ಲಿ ಈ ಘಟನೆ ನಡೆದಿತ್ತು. ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಇದನ್ನು ಗಮನಿಸಿ ಬಾಲಕಿ ಭಯಭೀತಳಾಗಿ ಓಡೋಡಿ ಬಂದು ಮನೆ ಸೇರಿಕೊಂಡಿದ್ದಳು.

ಇದನ್ನೂ ಓದಿ: ಬಾರೊಂದರಲ್ಲಿ ನಡೆದ ಗಲಾಟೆ; ತೀವ್ರ ಹಲ್ಲೆಗೊಳಗಾಗಿ ವ್ಯಕ್ತಿ ಸಾವು!

ಮನೆ ಬಳಿ ಬಂದ ಆರೋಪಿ ಗೇಟ್ ಹೊರಗೆ ನಿಂತು ಒಳಗೆ ಇಣುಕಿ ನೋಡಿ ವಾಪಾಸು ಹೋಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು, ವೈರಲ್ ಆಗಿತ್ತು.
ಈ ಬಗ್ಗೆ ಪೆನ್‌ ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page