Connect with us

FILM

ಟಾಕ್ಸಿಕ್, ಕಾಂತಾರ ಎಫೆಕ್ಟ್; ಅರಣ್ಯದಲ್ಲಿ ಚಿತ್ರೀಕರಣಕ್ಕೆ ಹೊಸ ರೂಲ್ಸ್

Published

on

ಬೆಂಗಳೂರು/ಮಂಗಳೂರು :  ಕಾಂತಾರ ಚಾಪ್ಟರ್ 1 ಮತ್ತು ಟಾಕ್ಸಿಕ್ ಸಿನಿಮಾಗಳು ಮಾಡಿರುವ ಎಡವಟ್ಟಿನಿಂದಾಗಿ ಅರಣ್ಯ ನಾಶವಾಗಿದೆ.  ಇದು ಅರಣ್ಯ ಇಲಾಖೆಯ ಕೆಂಗಣ್ಣಿಗೆ  ಕಾರಣವಾಗಿದೆ.  ಟಾಕ್ಸಿಕ್ ಚಿತ್ರತಂಡ ಮರ ಕಡಿದ ಆರೋಪ ಎದುರಿಸಿದ್ದು, ಕಾಂತಾರ ತಂಡ ಬಾಂ*ಬ್ ಸ್ಫೋ*ಟಿಸಿ ಅರಣ್ಯ ನಾಶ ಮಾಡಿರುವ ಬಗ್ಗೆ ಭಾರೀ ದಂಡ ತೆತ್ತಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಅರಣ್ಯದಲ್ಲಿ ಚಿತ್ರೀಕರಣ ಮಾಡುವವರಿಗೆ ಹೊಸ ನಿಯಮ ಜಾರಿಗೊಳಿಸಿದೆ.

ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಅನುಮತಿ ನೀಡಲಾಗುತ್ತಿದೆ. ಇದಲ್ಲದೆ, ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ.  ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ ಎಂದು  ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ನಿಶ್ಚಿತಾರ್ಥಗೊಂಡ ಯುವತಿಯ ಆ ಒಂದು ಪ್ರಶ್ನೆಗೆ ಆತ್ಮಹ*ತ್ಯೆ ಮಾಡಿಕೊಂಡ ಯುವಕ ?

ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯ ಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ಅನುಮತಿ ಪಡೆಯಬೇಕು ಎಂದು ಆದೇಶಿಸಲಾಗಿದೆ.

FILM

ರಶ್ಮಿಕಾ ಮಂದಣ್ಣ ಮದ್ವೆ ಬೆನ್ನಲ್ಲೇ ಈ ಫೋಟೋ ಪೋಸ್ಟ್ ಮಾಡಿದ ನಟ ರಕ್ಷಿತ್ ಶೆಟ್ಟಿ..!

Published

on

ಕರಾವಳಿ ಮೂಲದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಇತ್ತೀಚೆಗೆ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಇದರಿಂದ ಅವರ ಅಭಿಮಾನಿಗಳು ಕೂಡಾ ಬೇಸರ ವ್ಯಕ್ತಪಡಿಸಿದ್ದಾರೆ. ರಿಚರ್ಡ್ ಆ್ಯಂಟನಿ’ ಸಿನಿಮಾ ಘೋಷಣೆ ಮಾಡಿ ಹಲವು ಸಮಯ ಕಳೆದರೂ ಆ ಚಿತ್ರದ ಬಗ್ಗೆ ಯಾವುದೇ ಅಪ್​​ಡೇಟ್ ಇಲ್ಲ. ಈ ಎಲ್ಲ ವಿಷಯದಲ್ಲಿ ಫ್ಯಾನ್ಸ್​ಗೆ ಬೇಸರ ಇದೆ. ಹೀಗಿರುವಾಗಲೇ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಬೇಸರದ ಮುಖ ಭಾವವಿರುವ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮತ್ತು ಕುತೂಹಲ ಅಭಿಮಾನಿಗಳದ್ದು.

ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಮುರಿದು ಬಿದ್ದಿತ್ತು. ಇದೀಗ ನಟಿ ರಶ್ಮಿಕಾ ಮಂದಣ್ಣ ನಟ ವಿಜಯ ದೇವರಕೊಂಡ ಅವರ ಕೈ ಹಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೆಲ್ಲ ಅವರ ವಿವಾಹದ ಫೋಟೋಗಳು ಸಖತ್ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಬೇಸರದಲ್ಲಿರೋ ಫೋಟೋನೇ ಪೋಸ್ಟ್ ಮಾಡಿದ್ದು ಅಚ್ಚರಿ ಮೂಡಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಇವರ ಪೋಸ್ಟ್ ಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ಸ್ ಗಳನ್ನು ಹಾಕಿದ್ದಾರೆ. ‘ಹಳೆಯದನ್ನು ಮರೆತು ಮುಂದೆ ಸಾಗಿ’ ಎಂದು ಫ್ಯಾನ್ಸ್ ಹೇಳಿದ್ದಾರೆ. ಇನ್ನೂ ಕೆಲವರು, ‘ನಿಮ್ಮ ಕಂಬ್ಯಾಕ್ ಬೇರೆಯವರಿಗೆ ಸ್ಲಿಪ್ಪರ್ ಶಾಟ್ ಆಗಬೇಕು’ ಎಂದು ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಇದ್ದಿದ್ದು ಕಡಿಮೆ. ಆದರೆ ಏಕಾಏಕಿ ಚಾರ್ಲಿ ಸಿನಿಮಾದ ಈ ಫೋಟೋ ಪೋಸ್ಟ್ ಮಾಡಿದ್ದು ಯಾಕೆ ಎಂಬ ಕ್ಯೂರಾಸಿಟಿ ಮಾತ್ರ ಜಾಸ್ತಿಯಾಗಿದೆ.

Continue Reading

FILM

ವೈವಾಹಿಕ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ನಟ

Published

on

ಮಂಗಳೂರು/ಬೆಂಗಳೂರು : ಶ್ರೀರಸ್ತು ಶುಭಮಸ್ತು ಜನಮೆಚ್ಚುಗೆ ಗಳಿಸಿದ್ದ ಧಾರಾವಾಹಿ. ಧಾರಾವಾಹಿಯ ಪಾತ್ರಗಳು, ಪಾತ್ರಕ್ಕೆ ಜೀವ ತುಂಬಿದ್ದ ನಟ, ನಟಿಯರು ಕೂಡ ಗಮನ ಸೆಳೆದಿದ್ದರು. ಇದೀಗ ಈ ಧಾರಾವಾಹಿಯಲ್ಲಿ ನಟಿಸಿದ್ದ ನಟನೊಬ್ಬ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ ತುಳಸಿ ಮಗನಾಗಿ ಸಮರ್ಥ್ ಪಾತ್ರದಲ್ಲಿ ನಟಿಸಿದ್ದ ದರ್ಶಿತ್ ಗೌಡ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ದರ್ಶಿತ್ ಗೌಡ ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ವಿವಾಹ ಸಮಾರಂಭಕ್ಕೆ ಶ್ರೀರಸ್ತು ಶುಭಮಸ್ತು ಧಾರಾವಾಹಿ ತಂಡದ ಕಲಾವಿದರು ಆಗಮಿಸಿ, ಶುಭ ಹಾರೈಸಿದ್ದಾರೆ.

ಇದನ್ನೂ ಓದಿ : ಗಂಡ ಸತ್ತ ಇಪ್ಪತ್ತೇ ದಿನಕ್ಕೆ ಎರಡನೇ ಮದುವೆಯಾದ ಹೆಂಡ್ತಿ…ತನಿಖೆ ವೇಳೆ ಬಯಲಾಯ್ತು ಸತ್ಯ!

ನಟಿ ಸುಧಾರಾಣಿ, ನಕುಲ್ ಶರ್ಮಾ, ದೀಪಾ ಕಟ್ಟೆ, ಅಜಿತ್ ಹಂಡೆ, ಅರ್ಫತ್ ಶರೀಫ್, ಲಾವಣ್ಯ ಸೇರಿದಂತೆ ಹಲವು ನಟ, ನಟಿಯರು ಭಾಗಿಯಾಗಿದ್ದರು.

Continue Reading

FILM

ಸಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ರಶ್ಮಿಕಾ-ವಿಜಯ್; ಆರತಕ್ಷತೆಯಲ್ಲಿ ಭಾಗಿಯಾಗಿ ಹರಸಿದ ಡಿ.ಕೆ.ಶಿ.

Published

on

‘ನ್ಯಾಷನಲ್ ಕ್ರಷ್’ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಅವರ ಅದ್ಧೂರಿ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ ನವಜೋಡಿಗಳಿಗೆ ಶುಭ ಹಾರೈಸಿದ್ದಾರೆ.


ರಶ್ಮಿಕಾ ಮಂದಣ್ಣ ಅವರು ಕರ್ನಾಟಕದ ಸಾಂಪ್ರದಾಯಿಕ ಮತ್ತು ಹೆಮ್ಮೆಯ ಕೆಂಪು ಬಣ್ಣದ ಮೈಸೂರು ಸಿಲ್ಕ್ ಸೀರೆ ಧರಿಸಿ ಎಲ್ಲರ ಗಮನ ಸೆಳೆದರು. ಈ ಸೀರೆಯ ಪಲ್ಲುವಿನಲ್ಲಿ ಕರ್ನಾಟಕದ ರಾಜ್ಯ ಲಾಂಛನವಾದ ‘ಗಂಡಭೇರುಂಡ’ ಪಕ್ಷಿಯ ವಿನ್ಯಾಸವನ್ನು ಬಂಗಾರ ಮತ್ತು ಬೆಳ್ಳಿಯ ಎಳೆಗಳಿಂದ ನೆಯ್ಯಲಾಗಿತ್ತು.

ರಶ್ಮಿಕಾ ನಮ್ಮ ಕರ್ನಾಟಕದ ಹೆಮ್ಮೆಯಾದ ‘ಕೆಂಪು ಬಣ್ಣದ ಮೈಸೂರು ಸಿಲ್ಕ್ ಸೀರೆ’ಯುಟ್ಟು ಮಿರಮಿರನೆ ಮಿಂಚಿದ್ದಾರೆ. ಇತ್ತ ವಿಜಯ್ ಅವರು ಬಿಳಿ ಬಣ್ಣದ ಸಿಲ್ಕ್ ಕುರ್ತಾ ಮತ್ತು ಸಾಂಪ್ರದಾಯಿಕ ಪಂಚೆ ಹಾಗೂ ಶಲ್ಯ ಧರಿಸಿ ಅಪ್ಪಟ ದೇಸಿ ಲುಕ್‌ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: ಮದುವೆ ಸಂಭ್ರಮದಲ್ಲೂ ಅಭಿಮಾನಿಗಳನ್ನ ಮರೆಯದ ರಶ್ಮಿಕಾ-ವಿಜಯ್: ಸೌಹಾರ್ದತೆಗೆ ಸಾಕ್ಷಿಯಾದ ಸ್ಟಾರ್ ದಂಪತಿ!

ಹೈದರಾಬಾದ್‌ನ ಐಷಾರಾಮಿ ತಾಜ್ ಕೃಷ್ಣ ಹೋಟೆಲ್‌ನಲ್ಲಿ ನಡೆದ ಈ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲದೆ, ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಹಾಗೂ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page