Connect with us

BELTHANGADY

ಚಾರ್ಮಾಡಿ ಘಾಟಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Published

on

ಬೆಳ್ತಂಗಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿಮಧ್ಯೆ ಮೃತಪಟ್ಟ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಇಂದು ನಡೆದಿದೆ.

ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನವೀನ್(24) ಮೃತಪಟ್ಟ ಸವಾರ.
ರಾಮನಗರದಿಂದ ಧರ್ಮಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಳೆ ಬಂದ ಹಿನ್ನೆಲೆ ಬೃಹತ್ ಮರವೊಂದು ಬೈಕ್ ಮೇಲೆ ಬಿದ್ದಿದೆ.

ಗಂಭೀರವಾಗಿ ಗಾಯಗೊಂಡಿದ್ದ ನವೀನ್ ನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BELTHANGADY

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಚಾರ್ಮಾಡಿಯ ನಿವಾಸಿ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. 1990 ರಲ್ಲಿ ಈತನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. 1992 ರಲ್ಲಿ ಇದನ್ನು ಎಲ್‌ಪಿಸಿ ಪ್ರಕರಣ ಎಂಬುದಾಗಿ ಪರಿಗಣಿಸಲಾಗಿತ್ತು. ಈತನ ಪತ್ತೆ ಹಚ್ಚುವ ಬಗ್ಗೆ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ: ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿ*ಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ಇದೀಗ ಆರೋಪಿ ರವೀಂದ್ರನನ್ನು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ಪೊಲೀಸರು ದಸ್ತಗಿರಿ ಮಾಡಿ ಜನವರಿ 6 ರಂದು ಮಂಗಳವಾರ ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BELTHANGADY

ಬೆಳ್ತಂಗಡಿ: ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ

Published

on

ಬೆಳ್ತಂಗಡಿ: ತಾಲೂಕಿನ ಕುದ್ರಾಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.


ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಡಿಕ್ಕಿ ಆಗಿದ್ದು, ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ.

ಇದನ್ನೂ ಓದಿ: ಬಸ್ ಹತ್ತುವ ವೇಳೆ ದುರಂ*ತ; ಆಯತಪ್ಪಿ ಕೆಳಗೆ ಬಿದ್ದು ಬಾಲಕಿ ಸಾ*ವು

ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.

Continue Reading

BELTHANGADY

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರ ಡಿ*ಕ್ಕಿಯಾಗಿ ವಯೋವೃದ್ಧ ಸಾ*ವು

Published

on

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ.


ಮೃತರನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಹಂಝಾ (72) ಎಂದು ಗುರುತಿಸಲಾಗಿದೆ. ಇವರು ಪತ್ನಿ, ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಹಂಝಾ ಅವರು ಸೌದೆ ಕಡಿಯುವ ಕೆಲಸಕ್ಕೆಂದು ಮದ್ದಡ್ಕಕ್ಕೆ ಹೋಗಿದ್ದರು. ಅವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಚಾಲಕ ಬಿಹಾರಿ ರೈ ಎಂಬಾತ ಯಂತ್ರವನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಹಿಂದಕ್ಕೆ ತೆಗೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಹಂಝಾ ಅವರನ್ನು ತಕ್ಷಣವೇ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುತ್ತೂರು : ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕ ಆ*ತ್ಮಹ*ತ್ಯೆ

ಹಂಝಾ ಅವರದ್ದು ಬಡ ಕುಟುಂಬವಾಗಿದ್ದು, ತಮ್ಮ ವೃದ್ಧಾಪ್ಯದಲ್ಲೂ ಸೌದೆ ಕಡಿಯುವ ಕೆಲಸಕ್ಕೆ ಹೋಗುತ್ತಿದ್ದರು. ಅವರ ಕುಟುಂಬ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page