Connect with us

LATEST NEWS

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಉಮೇಶ್ ಪಂಬದರಿಗೆ ಸನ್ಮಾನ; ರಿಷಬ್ ಶೆಟ್ಟಿ ಭಾಗಿ

Published

on

ಮಂಗಳೂರು : ಉಮೇಶ್ ಪಂಬದ ಸಮ್ಮಾನ ಸಮಿತಿ ಮಂಗಳೂರು, ದಿ.ಜಾರಪ್ಪ ಪಂಬದ ಸಂಸ್ಮರಣ ಸಮಿತಿ ಮತ್ತು ಯೆಯ್ಯಾಡಿ ಒಳಗುಡ್ಡೆ ಶ್ರೀಅರಸು ಧರ್ಮ ಜಾರಂದಾಯ ಬಂಟ ಮತ್ತು ವಾರಾಹಿ ದೈವಸ್ಥಾನ ವತಿಯಿಂದ ಉರ್ವಸ್ಟೋರ್‌ನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ(ನ.23)  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಮೇಶ್ ಪಂಬದ ಮತ್ತು ಸಿಂಧೂ ಗುಜರನ್‌ರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಉಮೇಶ್ ಪಂಬದ, ನಿಮ್ಮೆಲ್ಲರ ಪ್ರೀತಿಯ ಆಶೀರ್ವಾದದಿಂದ ಸರ್ಕಾರ ನೀಡಿದ ಪ್ರಶಸ್ತಿಗೆ ನಾನು ಅಭಾರಿ. ನಿಮ್ಮ ಪ್ರೀತಿಗೆ ಧನ್ಯವಾದ ಹೇಳಲು ನನ್ನಲ್ಲಿ ಪದಗಳಿಲ್ಲ. ದೈವದ ಸೇವೆ ಮಾಡುವ ಹದಿನಾರು ವರ್ಗ ಪರಸ್ಪರ ಅನ್ಯೋನ್ಯತೆಯಿಂದ ಇದ್ದರೆ ದೈವರ ಕಾರ್ಣಿಕ ಎಲ್ಲೂ ಹೋಗೋದಿಲ್ಲ ಎಂದು ಹೇಳಿದರು.

ಈ ಸಂದರ್ಭ ನಟ, ನಿರ್ದೇಶಕ ರಿಷಭ್ ಶೆಟ್ಟಿ ಮಾತನಾಡಿ, ಉಮೇಶ್ ಪಂಬದ ಅವರು ತನ್ನ ಜೀವನನ್ನು ದೈವಕ್ಕೆ ದೈವಾರಾಧನೆಗೆ, ದೈವ ನರ್ತನಕ್ಕೆ ಮುಡಿಪಾಗಿಟ್ಟು ಸೇವೆ ಸಲ್ಲಿಸಿದ್ದಾರೆ. ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಪಂಬದ ಸಮುದಾಯವೂ ಸೇರಿದಂತೆ ದೈವದ ಚಾಕರಿ ಮಾಡುವ ಹದಿನಾರು ವರ್ಗಕ್ಕೆ ಸಂದ ಗೌರವ. ದೈವ ನರ್ತಕರು, ದೈವ ಚಾಕರಿ ಮಾಡುವ ಸಮುದಾಯವನ್ನು ಗುರುತಿಸಿ ಸರಕಾರ ಪ್ರಶಸ್ತಿ ನೀಡಿರುವುದು ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದರು.

ಗುರುಪುರ ವಜ್ರದೇಹಿ ಮಠದ ಶ್ರೀರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ದೈವಾರಾಧನೆಯಲ್ಲಿ ಹಿರಿಮೆ ಮತ್ತು ಗರಿಮೆಗೆ ಪಾತ್ರರಾಗಿರುವ ಉಮೇಶ ಪಂಬದ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಗೆ ಹೆಚ್ಚಿನ ಗೌರವ ಬಂದಿದೆ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿ, ಜಾತಿ, ಧರ್ಮದ ಗಡಿಯೊಳಗೆ ಸಿಲುಕಿ ಮನುಷ್ಯರು ದ್ವೀಪವಾಗುತ್ತಿರುವ ಈ ತಲ್ಲಣದ ಹೊತ್ತಿನಲ್ಲಿ ದೈವವೆಂಬ ದೀವಿಗೆಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು ಎಂದರು.

ವೇ.ಮೂ.ಕುಡುಪು ನರಸಿಂಹ ತಂತ್ರಿ, ಪಟೇಲ್ ಶಂಕರ ರೈ, ಸದಾನಂದ ಮೊಯ್ಲಿ ಎಕ್ಕಾರು, ಪ್ರಮುಖರಾದ ವಿಮಲಾ ಬಂಗೇರ, ಮೋಹಿನಿ ಬಂಗೇರ, ಪೂವಮ್ಮ ಬಂಗೇರ, ನಳಿನಿ ಬಂಗೇರ ಅವರನ್ನು ಸನ್ಮಾನಿಸಲಾಯಿತು. ತುಳುನಾಡಿನ ಜನಪದ ಕಲಾವಿದರನ್ನೂ ಸನ್ಮಾನಿಸಲಾಯಿತು.

ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್ ಉಳೆಪಾಡಿಗುತ್ತು, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಬಂಟರ ಯಾನೇ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಉದ್ಯಮಿ ಗಿರಿಧರ ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಎಚ್‌.ವಿ.ರಾಘವೇಂದ್ರ, ಅಗರಿ ಸಂಸ್ಥೆಯ ಮಾಲಕ ಅಗರಿ ರಾಘವೇಂದ್ರ ರಾವ್‌, ಎಸ್‌.ಡಿ.ಎಂ. ಎಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕ ಡಾ.ರವೀಶ್ ಪಡುಮಲೆ, ಕೆಎಂಸಿ ಮಂಗಳೂರು ಮಹಾ ಪ್ರಬಂಧಕ ರವಿರಾಜ್ ಕೆ., ನಲಿಕೆ ಸಮುದಾಯದ ಅಧ್ಯಕ್ಷ ಪಾಂಡುರಂಗ ಉಡುಪಿ, ಪಂಬದ ಸಂಘದ ಮಹಾಬಲ ಗಂಧಕಾಡು, ಪ್ರಮುಖರಾದ ಅಶೋಕ್ ಚೌಟ, ನಮ್ಮ ಕುಡ್ಲ ವಾಹಿನಿಯ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು. ಸಮ್ಮಾನ ಸಮಿತಿ ಅಧ್ಯಕ್ಷ ವಕೀಲ್ ರವಿ ಪ್ರಸನ್ನ ಸಿ.ಕೆ. ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ : BBK12: ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಸ್ಪರ್ಧಿಯೇ ಮನೆಯಿಂದ ಹೊರಗೆ!?

ಶಾರದಾ ವಿದ್ಯಾಲಯದ ಪ್ರಿನ್ಸಿಪಾಲ್ ದಯಾನಂದ ಕಟೀಲು ಪ್ರಸ್ತಾವಿಕವಾಗಿ ಮಾತನಾಡಿದರು. ಕಾಲೇಜು ಶಿಕ್ಷಣ ಇಲಾಖೆ ವಿಶೇಷ ಅಧಿಕಾರಿ ದೇವಿ ಪ್ರಸಾದ್ ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

LATEST NEWS

ಪತಿಯನ್ನು ನಂಬಿ ಪ್ರಾ*ಣ ಕಳೆದುಕೊಂಡ ಕಬಡ್ಡಿ ಆಟಗಾರ್ತಿ

Published

on

ಮಂಗಳೂರು/ನಾಗ್ಪುರ : ಪ್ರತಿಭಾವಂತ ಕಬಡ್ಡಿ ಆಟಗಾರ್ತಿಯೊಬ್ಬರು ಮನೆಯಲ್ಲೇ ಕೀಟನಾಶಕ ಸೇವಿಸಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಕಿರಣ್ ಸೂರಜ್ ದಾಧೆ (29) ಆ*ತ್ಮಹ*ತ್ಯೆಗೆ ಶರಣಾದ ಆಟಗಾರ್ತಿ.

ಕಿರಣ್ ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಬಿ.ಎ ಪದವೀಧರೆಯಾದ ಕಿರಣ್, ಸೇನೆ, ಪೊಲೀಸ್, ಹೋಮ್ ಗಾರ್ಡ್ ಮತ್ತು ಇತರ ಸರ್ಕಾರಿ ಉದ್ಯೋಗಗಳಿಗಾಗಿ ನಿರಂತರವಾಗಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಇದೇ ಸಂದರ್ಭ ಸ್ವಪ್ನಿಲ್ ಜಯದೇವ್ ಎಂಬ ಯುವಕನ ಪರಿಚಯವಾಗಿದೆ. ತನ್ನನ್ನು ಮದ್ವೆಯಾದ್ರೆ ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಹೇಳಿದ್ದ. ಅದನ್ನು ನಂಬಿ ಮದುವೆಯಾದ ಬಳಿಕ ಆತನ ನಿಜರೂಪ ಬಯಲಾಗಿದೆ. ಸ್ವಲ್ಪ ಸಮಯದ ಬಳಿಕ ಆತ ನಿರಂತರ ಕಿರುಕು*ಳ ನೀಡಲು ಆರಂಭಿಸಿದ್ದಾನೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರೂ ಈತನ ಕಿರುಕು*ಳ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.

ಇದನ್ನೂ ಓದಿ : ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

ಗಂಡ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆ*ದರಿಸಿ ಮಾನಸಿಕವಾಗಿ ಹಿಂ*ಸೆ ನೀಡುತ್ತಿದ್ದ. ಇದರಿಂದ ಮನನೊಂದು ಕೀಟನಾಶಕ ಸೇವಿಸಿ ಪ್ರತಿಭಾವಂತ ಆಟಗಾರ್ತಿ ಜೀವಾಂ*ತ್ಯಗೊಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

 

Continue Reading

DAKSHINA KANNADA

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ: ವಾರ್ಷಿಕ ಮಹೋತ್ಸವ

Published

on

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವ ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜ, ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆಯೊಂದಿಗೆ ದೇವರ ಅನುಗ್ರಹವು ಬೇಕು. ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ  ಇದನ್ನು ಗಳಿಸಬಹುದು ಎಂದರು.

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ : ಕಾವ್ಯಾ ನಾಮಿನೇಟ್ ಮಾಡಿದ್ಯಾರನ್ನ ಗೊತ್ತಾ!? ರಣರಂಗವಾಯ್ತು ‘ಬಿಗ್’ ಮನೆ

ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ  ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ  ಅನೇಕ ಭಕ್ತರು ಭಾಗವಹಿಸಿದ್ದರು.

Continue Reading

LATEST NEWS

ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

Published

on

ಭಾರತದ ಮಾಜಿ ಆಲ್‌ರೌಂಡರ್ ಆರ್‌ ಅಶ್ವಿನ್ ತಮ್ಮ ಅಧಿಕೃತ ಎಕ್ಸ್‌ಖಾತೆಯಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಚಿತ್ರವನ್ನು ಪೋಸ್ಟ್ ಮಾಡಿದ್ದು, ನೆಟ್ಟಿಗರು ಶಾಕ್ ಆಗಿದ್ದಾರೆ.

ಹೌದು, ಅಶ್ವಿನ್ ಆಗಾಗೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅನೇಕ ರೀತಿಯ ಸಂತೋಷದ ಕ್ಷಣಗಳಿರುವ ಫೋಟೋ, ವೀಡಿಯೋ ಹಂಚಿಕೊಳ್ಳುತ್ತಾರೆ. ಇದನ್ನ ಅಭಿಮಾನಿಗಳು ಕೂಡ ಇಷ್ಟಪಟ್ಟು ಮೆಚ್ಚುಗೆ ಸೂಚಿಸುತ್ತಾರೆ. ಆದರೆ ಈ ಬಾರಿ ಇದಕ್ಕೆ ತದ್ವಿರುದ್ದವೆಂಬಂತೆ ಎರಡು ಚಿತ್ರಗಳ ಕೊಲಾಜ್ ಅನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಒಂದು ಬದಿಯಲ್ಲಿ ಸನ್ನಿ ಲಿಯೋನ್ ಅವರ ಚಿತ್ರವನ್ನು ಹೊಂದಿದ್ದರೆ, ಇನ್ನೊಂದು ಬದಿಯಲ್ಲಿ ಚೆನ್ನೈನ ಸಾಧು ಬೀದಿಯ ಚಿತ್ರವಿದೆ. ಇದು ಸಾಕಷ್ಟು ಅಭಿಮಾನಿಗಳ ಚಿಂತೆಗೀಡು ಮಾಡಿತ್ತು. ಆದರರೆ ಆಟಗಾರನ ಚಟುವಟಿಕೆಯ ಹಿಂದಿನ ತರ್ಕವನ್ನು ಅರ್ಥಮಾಡಿಕೊಳ್ಳುವಲ್ಲಿ ನೆಟ್ಟಿಗರು ಯಶಸ್ವಿಯಾಗಿದ್ದಾರೆ.

ಈ ಎರಡು ಚಿತ್ರಗಳ ಕೊಲಾಜ್ ಅರ್ಥವೇನು?
ಅಶ್ವಿನ್ ಅವರು ಪೋಸ್ಟ್ ಮಾಡಿರುವ ಎರಡು ಪೋಟೋಗಳ ಅರ್ಥವನ್ನು ಅಭಿಮಾನಿಗಳು ಗೆಸ್ ಮಾಡಿದ್ದಾರೆ. ಅಷ್ಟಕ್ಕೂ ಆಲ್‌ರೌಂಡರ್ ಈ ಫೋಟೋ ಮೂಲಕ ತಮಿಳುನಾಡು ಆಲ್‌ರೌಂಡರ್ ಸನ್ನಿ ಸಂಧು ಬಗ್ಗೆ ಗಮನಸೆಳೆಯುವ ಪ್ರಯತ್ನ ಮಾಡಿದ್ದರು. ಇತ್ತೀಚೆಗೆ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಪಾದಾರ್ಪಣೆ ಮಾಡಿ ಗಮನಸೆಳೆದಿದ್ದರು.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ (ಡಿ.08) ಸೌರಾಷ್ಟ್ರ ವಿರುದ್ಧ ನಡೆದ ಪಂದ್ಯದಲ್ಲಿ ಸಂಧು ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿಗೆ ಕಾರಣರಾದರು. ತಮಿಳುನಾಡು ಪರ ತಮ್ಮ ಎರಡನೇ ಪಂದ್ಯವನ್ನು ಆಡಿದ ಸನ್ನಿ, ಸಾಯಿ ಸುದರ್ಶನ್ (55 ಎಸೆತಗಳಲ್ಲಿ 101*) ಅವರೊಂದಿಗೆ ಕೇವಲ 9 ಎಸೆತಗಳಲ್ಲಿ 30 ರನ್ ಗಳಿಸುವ ಮೂಲಕ 37 ರನ್‌ಗಳ ನಿರ್ಣಾಯಕ ಜೊತೆಯಾಟವಾಡಿದರು. ಇದು ಅವರ ತಂಡದ ಗೆಲುವಿಗೆ ಕಾರಣವಾಯಿತು.

ಇದನ್ನೂ ಓದಿ: ಮುರಿದುಬಿದ್ದ ಮದುವೆ: ಟಿ20 ಸರಣಿಗೆ ಅಭ್ಯಾಸ ಆರಂಭಿಸಿದ ಸ್ಮೃತಿ ಮಂಧನಾ

22 ವರ್ಷದ ಸನ್ನಿ ಸಂಧುರನ್ನು ಮುಂಬರುವ ಐಪಿಎಲ್ ನಲ್ಲಿ ಫ್ರಾಂಚೈಸಿಗಳು ಅನ್‌ಕ್ಯಾಪ್ಡ್ ಆಲ್‌ರೌಂಡರ್‌ ಆಗಿ ಆಯ್ಕೆ ಮಾಡಿಕೊಳ್ಳಬಹುದು ಅನ್ನೋ ಸೂಚನೆಯನ್ನೂ ಅಶ್ವಿನ್ ತಮ್ಮ ಪೋಸ್ಟ್‌ನ ಮೂಲಕ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page