Connect with us

FILM

ಪುಷ್ಪರಾಜ್‌ಗೆ ಸಂಕಷ್ಟ; ಹೈಕೋರ್ಟ್ ಮೆಟ್ಟಿಲೇರಿದ ನಟ

Published

on

ಮಂಗಳೂರು/ಹೈದರಾಬಾದ್ : ಅತ್ತ ಪುಷ್ಪ 2  ದೇಶದಾದ್ಯಂತ ಕಮಾಲ್ ಮಾಡುತ್ತಿದ್ದರೆ, ಇತ್ತ ಅಲ್ಲು ಅರ್ಜುನ್‌ಗೆ ಸಂಕಷ್ಟ ಎದುರಾಗಿದೆ. ಇದೀಗ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಪುಷ್ಪ 2 ಚಿತ್ರದ ಪ್ರೀಮಿಯರ್ ಪ್ರದರ್ಶನದ ವೇಳೆ ನಡೆದ ಸಾ*ವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹೈದರಾಬಾದ್‌ನಲ್ಲಿ ಡಿ.4 ರಂದು ಪುಷ್ಪ 2 ಪ್ರೀಮಿಯರ್ ಶೋ ವೇಳೆ 35 ವರ್ಷದ ಮಹಿಳೆ ಸಾ*ವನ್ನಪ್ಪಿದ್ದು, ಆಕೆಯ 8 ವರ್ಷದ ಮಗ ಗಾ*ಯಗೊಂಡಿದ್ದ. ಈ ಬಗ್ಗೆ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದೀಗ ಅಲ್ಲು ಅರ್ಜುನ್ ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿ, ಅರ್ಜಿಯ ವಿಲೇವಾರಿಗೆ ಬಾಕಿ ಉಳಿದಿರುವ ಪ್ರಕ್ರಿಯೆ ಮತ್ತು ಬಂಧನಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಅಲ್ಲು ಅರ್ಜುನ್ ಮೃ*ತ ಮಹಿಳೆಯ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.

ಇದನ್ನೂ ಓದಿ : ಅಯ್ಯಪ್ಪ ಸ್ವಾಮಿ ಮಹಿಮೆ ; ಮಾಲೆ ಹಾಕುತ್ತಿದ್ದಂತೆ ಮಾತನಾಡೇ ಬಿಟ್ಟ ಮೂಕ
ಸದ್ಯ ಪುಷ್ಪ 2 ಸಿನಿಮಾ ಭಾರೀ ಸದ್ದು ಮಾಡುತ್ತಿದೆ. ಗಲ್ಲಾ ಪೆಟ್ಟಿಗೆಯಲ್ಲೂ ಹಿಂದೆ ಬಿದ್ದಿಲ್ಲ. ಸಾವಿರ ಕೋಟಿ ಗಳಿಸಿ ಮುನ್ನುಗ್ಗುತ್ತಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮೊದಲಾದವರು ಚಿತ್ರದಲ್ಲಿದ್ದಾರೆ.

FILM

ರಶ್ಮಿಕಾ ಮಂದಣ್ಣ ಮದ್ವೆ ಬೆನ್ನಲ್ಲೇ ಈ ಫೋಟೋ ಪೋಸ್ಟ್ ಮಾಡಿದ ನಟ ರಕ್ಷಿತ್ ಶೆಟ್ಟಿ..!

Published

on

ಕರಾವಳಿ ಮೂಲದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಇತ್ತೀಚೆಗೆ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಇದರಿಂದ ಅವರ ಅಭಿಮಾನಿಗಳು ಕೂಡಾ ಬೇಸರ ವ್ಯಕ್ತಪಡಿಸಿದ್ದಾರೆ. ರಿಚರ್ಡ್ ಆ್ಯಂಟನಿ’ ಸಿನಿಮಾ ಘೋಷಣೆ ಮಾಡಿ ಹಲವು ಸಮಯ ಕಳೆದರೂ ಆ ಚಿತ್ರದ ಬಗ್ಗೆ ಯಾವುದೇ ಅಪ್​​ಡೇಟ್ ಇಲ್ಲ. ಈ ಎಲ್ಲ ವಿಷಯದಲ್ಲಿ ಫ್ಯಾನ್ಸ್​ಗೆ ಬೇಸರ ಇದೆ. ಹೀಗಿರುವಾಗಲೇ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಬೇಸರದ ಮುಖ ಭಾವವಿರುವ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮತ್ತು ಕುತೂಹಲ ಅಭಿಮಾನಿಗಳದ್ದು.

ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಮುರಿದು ಬಿದ್ದಿತ್ತು. ಇದೀಗ ನಟಿ ರಶ್ಮಿಕಾ ಮಂದಣ್ಣ ನಟ ವಿಜಯ ದೇವರಕೊಂಡ ಅವರ ಕೈ ಹಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೆಲ್ಲ ಅವರ ವಿವಾಹದ ಫೋಟೋಗಳು ಸಖತ್ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಬೇಸರದಲ್ಲಿರೋ ಫೋಟೋನೇ ಪೋಸ್ಟ್ ಮಾಡಿದ್ದು ಅಚ್ಚರಿ ಮೂಡಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಇವರ ಪೋಸ್ಟ್ ಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ಸ್ ಗಳನ್ನು ಹಾಕಿದ್ದಾರೆ. ‘ಹಳೆಯದನ್ನು ಮರೆತು ಮುಂದೆ ಸಾಗಿ’ ಎಂದು ಫ್ಯಾನ್ಸ್ ಹೇಳಿದ್ದಾರೆ. ಇನ್ನೂ ಕೆಲವರು, ‘ನಿಮ್ಮ ಕಂಬ್ಯಾಕ್ ಬೇರೆಯವರಿಗೆ ಸ್ಲಿಪ್ಪರ್ ಶಾಟ್ ಆಗಬೇಕು’ ಎಂದು ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಇದ್ದಿದ್ದು ಕಡಿಮೆ. ಆದರೆ ಏಕಾಏಕಿ ಚಾರ್ಲಿ ಸಿನಿಮಾದ ಈ ಫೋಟೋ ಪೋಸ್ಟ್ ಮಾಡಿದ್ದು ಯಾಕೆ ಎಂಬ ಕ್ಯೂರಾಸಿಟಿ ಮಾತ್ರ ಜಾಸ್ತಿಯಾಗಿದೆ.

Continue Reading

FILM

ವೈವಾಹಿಕ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ನಟ

Published

on

ಮಂಗಳೂರು/ಬೆಂಗಳೂರು : ಶ್ರೀರಸ್ತು ಶುಭಮಸ್ತು ಜನಮೆಚ್ಚುಗೆ ಗಳಿಸಿದ್ದ ಧಾರಾವಾಹಿ. ಧಾರಾವಾಹಿಯ ಪಾತ್ರಗಳು, ಪಾತ್ರಕ್ಕೆ ಜೀವ ತುಂಬಿದ್ದ ನಟ, ನಟಿಯರು ಕೂಡ ಗಮನ ಸೆಳೆದಿದ್ದರು. ಇದೀಗ ಈ ಧಾರಾವಾಹಿಯಲ್ಲಿ ನಟಿಸಿದ್ದ ನಟನೊಬ್ಬ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ ತುಳಸಿ ಮಗನಾಗಿ ಸಮರ್ಥ್ ಪಾತ್ರದಲ್ಲಿ ನಟಿಸಿದ್ದ ದರ್ಶಿತ್ ಗೌಡ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ದರ್ಶಿತ್ ಗೌಡ ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ವಿವಾಹ ಸಮಾರಂಭಕ್ಕೆ ಶ್ರೀರಸ್ತು ಶುಭಮಸ್ತು ಧಾರಾವಾಹಿ ತಂಡದ ಕಲಾವಿದರು ಆಗಮಿಸಿ, ಶುಭ ಹಾರೈಸಿದ್ದಾರೆ.

ಇದನ್ನೂ ಓದಿ : ಗಂಡ ಸತ್ತ ಇಪ್ಪತ್ತೇ ದಿನಕ್ಕೆ ಎರಡನೇ ಮದುವೆಯಾದ ಹೆಂಡ್ತಿ…ತನಿಖೆ ವೇಳೆ ಬಯಲಾಯ್ತು ಸತ್ಯ!

ನಟಿ ಸುಧಾರಾಣಿ, ನಕುಲ್ ಶರ್ಮಾ, ದೀಪಾ ಕಟ್ಟೆ, ಅಜಿತ್ ಹಂಡೆ, ಅರ್ಫತ್ ಶರೀಫ್, ಲಾವಣ್ಯ ಸೇರಿದಂತೆ ಹಲವು ನಟ, ನಟಿಯರು ಭಾಗಿಯಾಗಿದ್ದರು.

Continue Reading

FILM

ಸಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ರಶ್ಮಿಕಾ-ವಿಜಯ್; ಆರತಕ್ಷತೆಯಲ್ಲಿ ಭಾಗಿಯಾಗಿ ಹರಸಿದ ಡಿ.ಕೆ.ಶಿ.

Published

on

‘ನ್ಯಾಷನಲ್ ಕ್ರಷ್’ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಅವರ ಅದ್ಧೂರಿ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ ನವಜೋಡಿಗಳಿಗೆ ಶುಭ ಹಾರೈಸಿದ್ದಾರೆ.


ರಶ್ಮಿಕಾ ಮಂದಣ್ಣ ಅವರು ಕರ್ನಾಟಕದ ಸಾಂಪ್ರದಾಯಿಕ ಮತ್ತು ಹೆಮ್ಮೆಯ ಕೆಂಪು ಬಣ್ಣದ ಮೈಸೂರು ಸಿಲ್ಕ್ ಸೀರೆ ಧರಿಸಿ ಎಲ್ಲರ ಗಮನ ಸೆಳೆದರು. ಈ ಸೀರೆಯ ಪಲ್ಲುವಿನಲ್ಲಿ ಕರ್ನಾಟಕದ ರಾಜ್ಯ ಲಾಂಛನವಾದ ‘ಗಂಡಭೇರುಂಡ’ ಪಕ್ಷಿಯ ವಿನ್ಯಾಸವನ್ನು ಬಂಗಾರ ಮತ್ತು ಬೆಳ್ಳಿಯ ಎಳೆಗಳಿಂದ ನೆಯ್ಯಲಾಗಿತ್ತು.

ರಶ್ಮಿಕಾ ನಮ್ಮ ಕರ್ನಾಟಕದ ಹೆಮ್ಮೆಯಾದ ‘ಕೆಂಪು ಬಣ್ಣದ ಮೈಸೂರು ಸಿಲ್ಕ್ ಸೀರೆ’ಯುಟ್ಟು ಮಿರಮಿರನೆ ಮಿಂಚಿದ್ದಾರೆ. ಇತ್ತ ವಿಜಯ್ ಅವರು ಬಿಳಿ ಬಣ್ಣದ ಸಿಲ್ಕ್ ಕುರ್ತಾ ಮತ್ತು ಸಾಂಪ್ರದಾಯಿಕ ಪಂಚೆ ಹಾಗೂ ಶಲ್ಯ ಧರಿಸಿ ಅಪ್ಪಟ ದೇಸಿ ಲುಕ್‌ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: ಮದುವೆ ಸಂಭ್ರಮದಲ್ಲೂ ಅಭಿಮಾನಿಗಳನ್ನ ಮರೆಯದ ರಶ್ಮಿಕಾ-ವಿಜಯ್: ಸೌಹಾರ್ದತೆಗೆ ಸಾಕ್ಷಿಯಾದ ಸ್ಟಾರ್ ದಂಪತಿ!

ಹೈದರಾಬಾದ್‌ನ ಐಷಾರಾಮಿ ತಾಜ್ ಕೃಷ್ಣ ಹೋಟೆಲ್‌ನಲ್ಲಿ ನಡೆದ ಈ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲದೆ, ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಹಾಗೂ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page