Connect with us

ಅಬಕಾರಿ ಸಿಬ್ಬಂದಿ ಕಂಡು ಪರಾರಿಯಾಗಲು ಯತ್ನ; ಬೈಕ್‌ ಅಪಘಾತಕ್ಕೀಡಾಗಿ ಯುವಕ ಗಂಭೀರ

Published

on

ಅಬಕಾರಿ ಸಿಬ್ಬಂದಿ ಕಂಡು ಪರಾರಿಯಾಗಲು ಯತ್ನ; ಬೈಕ್‌ ಅಪಘಾತಕ್ಕೀಡಾಗಿ ಯುವಕ ಗಂಭೀರ

ಕಾಸರಗೋಡು: ಅಬಕಾರಿ ದಳದ ಸಿಬ್ಬಂದಿಯನ್ನು ಕಂಡು ಪರಾರಿಯಾದ ಬೈಕ್ ಅಪಘಾತಕ್ಕೀಡಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಕಾಸರಗೋಡಿನ ಪೈವಳಿಕೆ ಸಮೀಪದ ಚೇವಾರಿನಲ್ಲಿ ನಡೆದಿದೆ.

ಅಪಘಾತಕ್ಕೀಡಾದ ಬೈಕ್‌ನಲ್ಲಿ ಮದ್ಯದ ಪ್ಯಾಕೆಟ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಾಸರಗೋಡು ಚೌಕಿ ಬೆದ್ರಡ್ಕ ನಿವಾಸಿ ನವೀನ್ ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ರಾತ್ರಿ ಎಂಟು ಗಂಟೆ ಸುಮಾರಿಗೆ ಉಪ್ಪಳ ಸೋಂಕಾಲ್ ಎಂಬಲ್ಲಿಗೆ ಬೈಕಿನಲ್ಲಿ ಯುವಕ ಮದ್ಯ ಸಾಗಾಟ ಮಾಡುತ್ತಿದ್ದಾನೆ ಎಂಬ ಬಗ್ಗೆ ಅಬಕಾರಿ ದಳದ ಸಿಬ್ಬಂದಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆಗೆ ಮುಂದಾಗಿದ್ದರು.

ಈ ಹಿನ್ನಲೆ ಪೆರ್ಮುದೆ ಎಂಬಲ್ಲಿ ಅಬಕಾರಿ ಸಿಬ್ಬಂದಿ ಬೈಕನ್ನು ನಿಲ್ಲಿಸಲು ಸೂಚನೆ ನೀಡಿದ್ದು, ಆದರೆ ಬೈಕನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಸಿಬ್ಬಂದಿ ಬೈಕನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಬೈಕ್ ಚೇವಾರು ಎಂಬಲ್ಲಿ ಆರೋಗ್ಯ ಕೇಂದ್ರದ ಆವರಣ ಗೋಡೆಗೆ ಢಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ನವೀನ್ ಗಂಭೀರ ಗಾಯಗೊಂಡಿದ್ದಾನೆ.

ಇನ್ನು ಅಬಕಾರಿ ದಳದ ಸಿಬ್ಬಂದಿ ಪರಿಶೀಲಿನೆ ನಡೆಸಿದಾಗ ಬೈಕ್‌ನ ಬಾಕ್ಸ್ ಮತ್ತು ಬ್ಯಾಗ್‌ನಲ್ಲಿ 72 ಪ್ಯಾಕೆಟ್ ಮದ್ಯ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಅಬಕಾರಿ ದಳದ ಸಿಬ್ಬಂದಿ ಮತ್ತು ಕುಂಬಳೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಬೆಂಗಳೂರು: ಟಿಪ್ಪರ್‌ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಜೀವಾಂತ್ಯ!

Published

on

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಟಿಪ್ಪರ್‌ ಲಾರಿ ಹರಿದು 4ನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನ 21 ವರ್ಷದ ಕೃತಿಕಾ ಎಂದು ಗುರುತಿಸಲಾಗಿದೆ. ಈ ದುರ್ಘಟನೆಯಲ್ಲಿ ಕೃತಿಕಾ ಜೊತೆಗಿದ್ದ ಮತ್ತೊಬ್ಬ ವಿದ್ಯಾರ್ಥಿನಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗೆಳತಿ ಹಂಸಾ ಜೊತೆ ಕೃತಿಕಾ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಚಲಿಸುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸ್ಕಿಡ್ ಆಗಿ, ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಕೂಟಿ ಚಲಾಯಿಸುತ್ತಿದ್ದ ಹಂಸಾ ಎಡಭಾಗಕ್ಕೆ ಬಿದ್ರೆ, ಕೃತಿಕಾ ಬಲಭಾಗಕ್ಕೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಕೃತಿಕಾ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಪ್ರೀತಿಸುವಂತೆ ಸಹಪಾಠಿಯಿಂದ ಒತ್ತಾಯ; ಶಾಲಾ ಕಟ್ಟಡದಿಂದ ಜಿ*ಗಿದು ವಿದ್ಯಾರ್ಥಿನಿ ಆ*ತ್ಮಹ*ತ್ಯೆ

ಹಂಸಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಂಗೇರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಬಗ್ಗೆ ಡಿಸಿಪಿ ಅನೂಪ್ ಶೆಟ್ಟಿ ಹೇಳಿದ್ದೇನು?

ಮೈಸೂರು ರಸ್ತೆಯಲ್ಲಿರುವ ಆರ್.ಆರ್ ಆಸ್ಪತ್ರೆ ಎಕ್ಸಿಟ್ ಗೇಟ್ ನಲ್ಲಿ ಅಪಘಾತ ನಡೆದಿದೆ. ಇಬ್ಬರು ಮೆಡಿಕಲ್ ವಿದ್ಯಾರ್ಥಿನಿ ಬೈಕ್ ನಲ್ಲಿ ತೆರಳುತ್ತಿದ್ದರು. ಬೆಂಗಳೂರಿಂದ ಮೈಸೂರು ಕಡೆಗೆ ಹೋಗ್ತಿದ್ದ ಲಾರಿ ಡಿಕ್ಕಿ ಆಗಿದೆ. ಹಿಂಬದಿ ಸವಾರಿಣಿ ಸಾವನ್ನಪ್ಪಿದ್ದಾರೆ, ಚಾಲಕಿಗೆ ಗಾಯವಾಗಿದೆ. ಮೃತಳು ಆರ್.ಆರ್.ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ. ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಹೇಳಿದ್ದಾರೆ.

Continue Reading

International news

ಭಾರತಕ್ಕೆ ಹೊರಟಿದ್ದ ಸರಕು ಹಡಗಿನ ಮೇಲೆ ಇರಾನ್‌ ದಾ*ಳಿ

Published

on

ಮಂಗಳೂರು/ಟೆಹ್ರಾರ್ : ಯುಎಇ ಬಂದರಿನಿಂದ ಹೊರಟಿದ್ದ ಥಾಯ್ ಧ್ವಜದ ಸರಕು ಹಡಗಿನ ಮೇಲೆ ಹಾರ್ಮುಜ್ ಜಲಸಂಧಿಯ ಬಳಿ ದಾ*ಳಿ ನಡೆಸಲಾಗಿದೆ.

ಇಪ್ಪತ್ತು ನಾವಿಕರನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಥಾಯ್ ಕಂಪೆನಿ ಪ್ರೆಷಿಯಸ್ ಶಿಪ್ಪಿಂಗ್ ಪಿಸಿಎಲ್ ಒಡೆತನದ ಬೃಹತ್ ವಾಹಕ ನೌಕೆ ಮಯೂರಿ ನಾರಿ ಹೆಸರಿನ ನೌಕೆ ಮೇಲೆ ದಾಳಿ ನಡೆಸಲಾಗಿದೆ.

ಈ ನೌಕೆ ಯುಎಇಯ ಖಲೀಫಾ ಬಂದರಿನಿಂದ ಹೊರಟು ಭಾರತದ ಕಾಂಡ್ಲಾ ಬಂದರಿನತ್ತ ಸಾಗುತ್ತಿತ್ತು. ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವಾಗ ಈ ದಾ*ಳಿ ನಡೆದಿದೆ. ದಾ*ಳಿಯ ಹೊಣೆಯನ್ನು ಇರಾನ್ ಹೊತ್ತುಕೊಂಡಿದೆ.

ಇದನ್ನೂ ಓದಿ : ಇಸ್ರೇಲ್‌-ಇರಾನ್‌ ಸಂಘರ್ಷ; ಕಿಮ್‌ ಜಾಂಗ್‌ ಉನ್‌ ಎಂಟ್ರಿ..ಬೆಂಬಲ ಯಾರಿಗೆ!?

20 ನಾವಿಕರನ್ನು ತೆಪ್ಪಗಳ ಮೂಲಕ ಒಮಾನಿ ನೌಕಾಪಡೆ ರಕ್ಷಿಸಿದ್ದು, ಉಳಿದ ಮೂವರು ನೌಕೆಯಲ್ಲಿಯೇ ಇದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. 178 ಮೀಟರ್ ಉದ್ದವಿರುವ ಈ ಹಡಗು 30,000 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಸದ್ಯ ದಾ*ಳಿಯ ಬಗ್ಗೆ ತನಿಖೆ ನಡೆಸುವುದಾಗಿ ರಾಯಲ್ ಥಾಯ್ ನೌಕಾಪಡೆ ಹೇಳಿಕೆ ನೀಡಿದೆ.

 

 

 

 

 

 

Continue Reading

INTERNATIONAL

ಇಸ್ರೇಲ್‌-ಇರಾನ್‌ ಸಂಘರ್ಷ; ಕಿಮ್‌ ಜಾಂಗ್‌ ಉನ್‌ ಎಂಟ್ರಿ..ಬೆಂಬಲ ಯಾರಿಗೆ!?

Published

on

ಪ್ಯೊಂಗ್ಯಾಂಗ್: ಇರಾನ್-ಇಸ್ರೇಲ್‌ ಸಂಘರ್ಷ ಜಗತ್ತಿನ ನಿದ್ದೆಗೆಡಿಸಿದೆ. ಇಸ್ರೇಲ್‌ ಗೆ ಅಮೆರಿಕ ಬೆಂಬಲವಾಗಿ ನಿಂತಿದ್ದರೆ, ಇರಾನ್‌ ಒಬ್ಬಂಟಿ ಹೋರಾಟ ನಡೆಸುತ್ತಿತ್ತು. ಇದೀಗ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಎಂಟ್ರಿ ಕೊಟ್ಟಿದ್ದಾರೆ. ಇರಾನ್‌-ಇಸ್ರೇಲ್‌ ಯುದ್ದದ ಬಗ್ಗೆ ಮಾತನಾಡಿದ್ದು, ಅಮೆರಿಕ ವಿರುದ್ದ ಗುಡುಗಿದ್ದಾರೆ.


ಹೌದು.. ಅಮೆರಿಕ ಮತ್ತು ಇರಾನ್‌ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮೂರು ದೇಶಗಳ ನಡುವಿನ ಯುದ್ದೋನ್ಮಾದ ಕೇವಲ ಮಧ್ಯಪ್ರಾಚ್ಯ ಮಾತ್ರವಲ್ಲದೇ, ಜಾಗತಿಕ ಆತಂಕವನ್ನೂ ಹೆಚ್ಚಿಸಿದೆ. ಈ ನಡುವೆ ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಇದೀಗ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಇರಾನ್‌ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಇರಾನ್‌ ಮಾಜಿ ಸುಪ್ರೀಂ ಲೀಡರ್‌ ಅಯತೊಲ್ಲಾ ಅಲಿ ಖಮೇನಿಯ ಹತ್ಯೆಯ ನಂತರ ಅಧಿಕಾರ ವಹಿಸಿಕೊಂಡ ಮುಜ್ತಬಾ ಖಮೇನಿ ಅವರಿಗೆ ಉತ್ತರ ಕೊರಿಯಾದ ಕಿಮ್‌ ಜಾಂಗ್‌ ಉನ್‌ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ಕಾನೂನುಬಾಹಿರ ಎಂದು ಕರೆದಿರುವ ಉತ್ತರ ಕೊರಿಯಾ, ಯುದ್ದದ ನಡುವೆಯೇ ತನ್ನ ಅತ್ಯಂತ ಶಕ್ತಿಶಾಲಿ ಯುದ್ದನೌಕೆಯಿಂದ ಪರಮಾಣು ಸಾಮರ್ಥ್ಯದ ಕ್ಷಿಪಣಿಗಳನ್ನು ಉಡಾಯಿಸಿ ಅಮೆರಿಕಕ್ಕೆ ನೇರ ಸವಾಲು ಹಾಕಿದೆ. ಅಲ್ಲದೆ ಸಂಕಷ್ಟದ ಸಮಯದಲ್ಲಿ ತಾವು ಇರಾನ್‌ ಜೊತೆಗೆ ಇರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಸಂಘರ್ಷ: ಮಾ.12ರಂದು ಮಂಗಳೂರು- ಮಧ್ಯ ಪ್ರಾಚ್ಯ ಮಾರ್ಗದ 14 ವಿಮಾನಗಳು ರದ್ದು

ಇರಾನ್‌ ವಿಷಯದಲ್ಲಿ ಕೇವಲ ಹೇಳಿಕೆ ನೀಡಿ ಸುಮ್ಮನಾಗದ ಕಿಮ್‌ ಜಾಂಗ್‌ ಉನ್‌, ಪ್ರಾಯೋಗಿಕವಾಗಿ ತನ್ನ ಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಉತ್ತರ ಕೊರಿಯಾದ ಅತಿದೊಡ್ಡ ನೌಕಾ ವಿಧ್ವಂಸಕ ನೌಕೆ ಚೋ ಹ್ಯೋನ್‌ನಿಂದ ವ್ಯೂಹಾತ್ಮಕ ಕ್ರೂಸ್‌ ಕ್ಷಿಪಣಿಗಳ ಪರೀಕ್ಷೆಯನ್ನು ಕಿಮ್‌ ವೈಯಕ್ತಕವಾಗಿ ಮೇಲ್ವಿಚಾರಣೆ ಮಾಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page