Connect with us

DAKSHINA KANNADA

ಅರಬ್ಬೀ ಸಮುದ್ರದಲ್ಲಿ ಟಗ್ ಬೋಟ್ ದುರಂತ ಪ್ರಕರಣ: ಕುಟುಂಬಕ್ಕೆ 25ಲ ಪರಿಹಾರಕ್ಕೆ ಎಂಆರ್ಪಿಎಲ್ ಗೆ ಇಂಟಕ್ ಆಗ್ರಹ ..

Published

on

ಮಂಗಳೂರು:ಎಂ ಆರ್ ಪಿ ಎಲ್ ಈ ಸಿಬಂದಿಗಳನ್ನು ಗುತ್ತಿಗೆ ಕಾರ್ಮಿಕರೆಂದು ನೋಡದೆ ಮಾನವೀಯ ನೆಲೆಯಲ್ಲಿ ತಲಾ 25ಲಕ್ಷ ರೂ.ಪರಿಹಾರ ಒದಗಿಸಬೇಕು ಹಾಗೂ ಕುಟುಂಬಕ್ಕೊಂದು ಉದ್ಯೋಗ ಕೊಡಬೇಕು ಎಂದು ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ ಒತ್ತಾಯಿಸಿದ್ದಾರೆ. ಕಂಪನಿಗಳ ಸಂಪರ್ಕದ ಕೊರತೆಯಿಂದ ಈ ಅವಘಡ ಸಂಭವಿಸಿದೆ. ಚಂಡಮಾರುತ ಬೀಸಲಿದೆ ಎಂದು ಪೂರ್ವಭಾವೀ ಮಾಹಿತಿ ಇದ್ದರೂ ಕಾರ್ಮಿಕರ ಜೀವ ಪಣಕ್ಕಿಟ್ಟಿದ್ದು ದೊಡ್ಡ ತಪ್ಪು. ಈ ಬಗ್ಗೆ ಕಂಪನಿಗಳು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.ಮುಂದೆ ಇಂತಹ ದುರಂತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಲ ಬೇಕು ಎಂದು ಆಗ್ರಹಿಸಿದ್ದಾರೆ.  ಜಿಲ್ಲಾಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿ,ಕಂಪನಿಗಳು ,ಅಧಿಕಾರಿಗಳು ಮಾಡಿದ ತಪ್ಪಿನಿಂದ ಅಮಾಯಕ ದುಡಿಯುವ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.ಚಂಡಮಾರುತದ ಮುನ್ಸೂಚನೆಯಿದ್ದರೂ ಟಗ್ ಕಳಿಸುವ ಅನಿವಾರ್ಯತೆ ಏನಿತ್ತು. ಇದೊಂದು ಕೊಲೆಯೆಂದೇ ಭಾವಿಸುವುದಾಗಿ ಹೇಳಿದ ಅವರು.

ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು .ಅಮಾಯಕ ಕುಟುಂಬಕ್ಕೆ ಪರಿಹಾರ ಮತ್ತು ಉದ್ಯೋಗ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭ ಪಿ. ಕೆ ಸುರೇಶ್ ಕುಮಾರ್ ಉಪಸ್ಥಿತರಿದ್ದರು.

DAKSHINA KANNADA

ಮಂಗಳೂರಿನ ಒಣಮೀನು ಮಾರುಕಟ್ಟೆ ಅವ್ಯವಸ್ಥೆ ಬಗ್ಗೆ ಕ್ರಮ : ಡಾ.ನಾಗಲಕ್ಷ್ಮಿ ಚೌಧರಿ

Published

on

ಮಂಗಳೂರು : ಮಂಗಳೂರಿನ ಕೇಂದ್ರ ಮಾರುಕಟ್ಟೆಯ ಒಣಮೀನು ಮಾರಾಟಗಾರ ಮಹಿಳೆಯರಿಗೆ ಸೆಂಟ್ರಲ್ ಮಾರುಕಟ್ಟೆಯಲ್ಲಿ ನಿರ್ಮಿಸಲಾದ ಹವಾನಿಯಂತ್ರಿತ ಮಾರುಕಟ್ಟೆಯಲ್ಲಿ ಜಾಗದ ಕೊರತೆ, ಬಾಡಿಗೆ ದುಬಾರಿಯ ದೂರು ಬಂದಿದೆ. ಮಾರುಕಟ್ಟೆಗಳು ಅದೆಷ್ಟು ಸುವ್ಯವಸ್ಥಿತ, ಹವಾನಿಯಂತ್ರಿತವಾಗಿದ್ದರೂ ಅದನ್ನು ಬಳಕೆ ಮಾಡುವವರಿಗೆ ಅದು ಹೊಂದಿಕೆಯಾಗಬೇಕು, ಸಬ್ಸಿಡಿ ದರದಲ್ಲಿ ದೊರೆಯಬೇಕು. ಅದಲ್ಲದೆ ಹಾಲಿ ಒಣ ಮೀನು ಮಾರುಕಟ್ಟೆ ಮಳೆಗಾಲದಲ್ಲಿ ಸೋರಿಕೆಯಾಗುತ್ತಿದ್ದು ಅದಕ್ಕೆ ಸೂಕ್ತ ವ್ಯವಸ್ಥೆ ಆಗಬೇಕಾಗಿದೆ. ಈ ಬಗ್ಗೆ ಪಾಲಿಕೆಯ ಆಯುಕ್ತರು ಕ್ರಮ ವಹಿಸುವುದಾಗಿ ತಿಳಿಸಿದ್ದು, ಕೈಗೊಳ್ಳುವ ಕ್ರಮದ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.

ದ.ಕ. ಜಿಲ್ಲಾ ಭೇಟಿಯಲ್ಲಿರುವ ಅವರು ಶನಿವಾರ(ಮಾ.07) ಜಿಲ್ಲಾ ಪಂಚಾಯತ್‌ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಕುಸಿತ :

ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ತುಂಬಾ ಕಡಿಮೆ ಆಗುತ್ತಿದೆ. ತಿಂಗಳಿಗೆ ನಾಲ್ಕರಿಂದ ಐದಷ್ಟೇ ಆಗುತ್ತಿದ್ದು, ಇದು ಉತ್ತಮ ಸಂದೇಶವಲ್ಲ ಎಂದು ಹೇಳಿದ ಅವರು, ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರು, ಅರಿವಳಿಕೆ ತಜ್ಞರ ಹುದ್ದೆ ಖಾಲಿ ಇದೆ. ಹಾಗಾಗಿ ಅಲ್ಲಿ ಸಹಜ ಹೆರಿಗೆಗೆ ಯಾರೂ ಬರುತ್ತಿಲ್ಲ, ಬದಲಾಗಿ ಮಂಗಳೂರಿನ ಲೇಡಿಗೋಶನ್‌ಗೆ ಹೋಗುತ್ತಾರೆಂಬ ಕಾರಣ ನೀಡಲಾಗಿದೆ.

ಆದರೆ, ಬಂಟ್ವಾಳದಿಂದ ಸುಮಾರು 25 ಕಿ.ಮೀ. ದೂರದ ಮಂಗಳೂರಿನ ಲೇಡಿಗೋಶನ್‌ಗೆ ಹೆರಿಗೆಗಾಗಿ ಗರ್ಭಿಣಿಯರು ಬರಬೇಕಾಗುತ್ತದೆ. ಅಗತ್ಯ ವೈದ್ಯರು , ವ್ಯವಸ್ಥೆಯನ್ನು ತಾಲೂಕು ಆಸ್ಪತ್ರೆಗಳಲ್ಲಿ ಒದಗಿಸಿದರೆ ಜನ ಯಾಕೆ ಬರುವುದಿಲ್ಲ ಎಂದು ಪ್ರಶ್ನಿಸಿದಾಗ, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸ್ವಾಗತಾರ್ಹ ಬೆಳವಣಿಗೆ :

ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಮಾಡಿರುವ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಉತ್ತರಿಸಿದ ನಾಗಲಕ್ಷ್ಮೀ, ಇದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದರು. ಈ ಬಗ್ಗೆ ನಾನು ಈ ಹಿಂದೆ ವಿದೇಶ ಪ್ರವಾಸ ಮಾಡಿ ಬಂದ ಬಳಿಕ ಸಿಎಂ ಅವರ ಗಮನಕ್ಕೆ ತಂದಿದ್ದೆ. ಅವರು ಅದನ್ನು ನೆನಪಿನಲ್ಲಿ ಇಟ್ಟುಕೊಂಡು ಬ್ಯಾನ್ ಮಾಡಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

Continue Reading

DAKSHINA KANNADA

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ : ಸಾಧಕಿಯರಿಗೆ ಆತ್ಮಸಮ್ಮಾನ ಕಾರ್ಯಕ್ರಮ

Published

on

ಮಂಗಳೂರು : ಜಿಲ್ಲಾ ರಾಜ್ಯೋತ್ಸವ, ರಾಜ್ಯ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಪಡೆದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕ ಮಹಿಳೆಯರಿಗೆ ಆತ್ಮಸಮ್ಮಾನ ಕಾರ್ಯಕ್ರಮ ಇಂದು ಪಡೀಲ್ ಆತ್ಮಶಕ್ತಿ ಸೌಧದಲ್ಲಿ ನಡೆಯಿತು. ಕಾಂಗ್ರೆಸ್ ಮುಖಂಡೆ, ಸಾಮರಸ್ಯ ಬಳಗದ ಅಧ್ಯಕ್ಷೆ ಮಂಜುಳಾ ನಾಯಕ್ ಅತಿಥಿಗಳ ಜೊತೆ ಸೇರಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಮಾತನಾಡಿ,  ಮಹಿಳಾ ದಿನಾಚರಣೆಯ ದಿನ ಮಾತ್ರ ಮಹಿಳೆಯರನ್ನು ಗೌರವಿಸೋದಲ್ಲ. ದಿನನಿತ್ಯ ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರ ಕಷ್ಟಕ್ಕೆ ಸ್ಪಂದಿಸಿದಾಗ ಮಾತ್ರ ಈ ದಿನಾಚರಣೆ ಅರ್ಥಪೂರ್ಣವಾಗುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷೆ ಸುಮನಾ ಶರಣ್ ಮಾತನಾಡಿ, ಸಹಕಾರಿ ಚುನಾವಣೆಯಲ್ಲಿ ಕೂಡಾ ಮಹಿಳೆಯರಿಗೆ 13 ಸೀಟಿನಲ್ಲಿ 2 ಮಾತ್ರ ಮೀಸಲಾತಿ ಇದೆ. ಅದು ಕೂಡ  50 ಶೇಕಡಕ್ಕೆ  ಬರಬೇಕು ಎಂಬುದು ನನ್ನ ಆಸೆ ಎಂದರು.

ಸಾಹಿತಿ ಶಶಿಲೇಖಾ ಬಿ ಹಾಗೂ ಪ್ರಾಣಿ ರಕ್ಷಕಿ ಉಷಾ ಸುವರ್ಣ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ,  ಸನ್ಮಾನ ಸ್ವೀಕರಿಸಿದ ಇಬ್ಬರು ಮಹಿಳೆಯರ ಸಾಧನೆ ಕೂಡ ಅತ್ಯಂತ ಶ್ಲಾಘನೀಯವಾದದ್ದು. ನಮ್ಮ ಸಂಘದ  ವತಿಯಿಂದ ಕಳೆದ 14 ವರ್ಷದಿಂದ  ನಿರಂತರವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿದ್ದೇವೆ.  ಮಹಿಳೆಯರು ಜೀವನದಲ್ಲಿ ಉತ್ತುಂಗದ ಸ್ಥಾನಕ್ಕೆ ಏರಬೇಕು ಎಂದು ಹೇಳಿದರು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಕಾರ್ಯಕ್ರಮದಲ್ಲಿ  ಉಪಾಧ್ಯಕ್ಷ  ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ ಸೇರಿದಂತೆ ಆಡಳಿತ ಮಂಡಳಿಯ ಇತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Continue Reading

BANTWAL

2028ಕ್ಕೆ ರಮಾನಾಥ ರೈ ಅಭ್ಯರ್ಥಿ: ನಾವೂರು ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Published

on

ಬಂಟ್ವಾಳ: 2028ಕ್ಕೂ ನಾವೇ ಅಧಿಕಾರಕ್ಕೆ ಬಂದೇ ಬರ್ತೀವಿ. ನಾವು ಅಧಿಕಾರದಲ್ಲಿದ್ದಾಗ ಕಂಬಳಕ್ಕೆ ಏನು ಪ್ರೋತ್ಸಾಹ ನೀಡಬೇಕೋ ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ. ಕಂಬಳಕ್ಕೆ ಹಣಕಾಸಿನ ನೆರವನ್ನೂ ಕೊಡ್ತೇವೆ, ರಮಾನಾಥ ರೈ ಅವರನ್ನು ಸೋಲಿಸಿದ್ದು ಬೇಸರ ತಂದಿದೆ, ಮುಂದಿನ ಚುನಾವಣೆಯಲ್ಲಿ ಅವರೇ ಅಭ್ಯರ್ಥಿಯಾಗ್ತಾರೆ, ಅವರನ್ನು ಮತ್ತೆ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ನಡೆದ ಮುಡೂರು ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಮಾನಾಥ ರೈ ಅವರು ತಮ್ಮ ಶಾಸಕ,ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ ಎಂದರು

ಬೆಂಜನಪದವು ಕ್ರೀಡಾಂಗಣ
ಬೆಂಜನಪದವಿನಲ್ಲಿ ಹತ್ತು ಕೋಟಿ ರೂ ಮಂಜೂರಾಗಿತ್ತು, ಅದನ್ನು ಅನುಷ್ಠಾನ ಮಾಡಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ಕ್ರೀಡಾಂಗಣ ನಿರ್ಮಾಣಕ್ಕೆ ನನಗೆ ಅವಕಾಶವನ್ನು ಮಾಡಿಕೊಡಬೇಕು ಎಂದು ಪ್ರಾಸ್ರಾವಿಕವಾಗಿ ಮಾತನಾಡಿದ ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ರಮಾನಾಥ ರೈ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಈ ಬಾರಿ ಕ್ರೀಡಾಂಗಣ ನಿರ್ಮಾಣಕ್ಕೆ ನೆರವು ನೀಡುವುದಾಗಿ ಹೇಳಿದರು.

ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ.ಸಂತೋಷ್ ಗುರೂಜಿ, ಎಂ ಎಲ್ ಸಿ ಸಲೀಮ್ ಆಹ್ಮದ್, ಐವಾನ್ ಡಿಸೋಜ, ಶಾಸಕರುಗಳಾದ ಅಶೋಕ್ ಕುಮಾರ್ ರೈ ,ಟಿ.ಡಿ.ರಾಜೇಗೌಡ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್,ಟಿ.ಎಮ್ ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್. ಗಟ್ಟಿ,ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಸಹಿತ ಪ್ರಮುಖರು ಹಾಜರಿದ್ದರು. ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಸ್ವಾಗತಿಸಿದರು.

WATCH VIDEO:

Continue Reading
Advertisement

Trending

Copyright © 2025 Namma Kudla News

You cannot copy content of this page