Connect with us

LATEST NEWS

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ..!

Published

on

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ  ಪ್ರಸಾದ್ ರಾಜ್ ಕಾಂಚನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸಿ ಅಲ್ಲಿಂದ ಪಾದಯಾತ್ರೆ ಮೂಲಕ ತಾಲೂಕು ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಕೆ ಮಾಡಿದರು.

ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಜಿಲ್ಲಾಧ್ಯಕ್ಷರಾದ ಅಶೋಕ್ ಕೊಡವೂರು, ಉಡುಪಿ ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ಪ್ರಸಾದ್ ಕಾಂಚನ್ ತಾಯಿ ಸರಳ ಕಾಂಚನ್ ಉಪಸ್ಥಿತರಿದ್ದರು.

ಈ ಸಂದರ್ಭ ಮಾತನಾಡಿದ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮಾತನಾಡಿ, ‘ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಡುಪಿಗೆ ಬಂದಿರುವ  ಹೆಲಿಕಾಪ್ಟರ್ ಮೂಲಕ ಜಿಲ್ಲೆಗೆ ಅಪಾರ ಪ್ರಮಾಣದ ಹಣದ ಗಂಟನ್ನು ತರಲಾಗಿದೆ ಎಂದು ಆರೋಪಿಸಿದರು.

ನನಗೆ ಸಿಕ್ಕಿರುವ  ಮಾಹಿತಿಯಂತೆ ಇಂದು ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು  ರವಾನೆಯಾಗಿದೆ, ಅಭ್ಯರ್ಥಿ ಘೋಷಣೆಗೆ ಪಟಾಕಿ ಸಿಡಿಸಿರುವ ಇವರು ಒಂದು ವೇಳೆ ಗೆದ್ದರೆ ಬಾಂಬ್ ಸ್ಫೋಟಿಸಬಹುದು.

ಚುನಾವಣೆ ಘೋಷಣೆಗೂ ಮುನ್ನವೇ ನಾವು ನಾಲ್ಕು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ.  ಸುಳ್ಳು ಆರೋಪಗಳಿಂದ ಕಳೆದ ನಾವು ಸೋತಿದ್ದೇವೆ ಎಂದು ಸೊರಕೆ ಹೇಳಿದರು.

LATEST NEWS

ಬೆಂಗಳೂರಿನಲ್ಲಿ ಕೋವಿಡ್‌ನಿಂದ ವ್ಯಕ್ತಿ ಸಾವು

Published

on

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಅಲ್ಲದೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆಯೂ ದ್ವಿಗುಣಗೊಳ್ಳುತ್ತಿದೆ.

ಇದೀಗ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಕೊರೋನಾ ಬುಲೆಟಿನ್‌ನಲ್ಲಿ ಬೆಂಗಳೂರಿನಲ್ಲಿ ಕೋವಿಡ್-19ಗೆ ಒಬ್ಬ ಬಲಿಯಾಗಿದ್ದು, ರಾಜ್ಯದಲ್ಲಿ ಇಂದು 5 ಹೊಸ ಕೇಸ್‌ಗಳು ದಾಖಲಾಗಿವೆ. ಇದರ ಬೆನ್ನಲ್ಲ ಸರ್ಕಾರ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಜನರಿಗೆ ಒತ್ತಾಯಿಸುತ್ತಿದೆ.

ಇದನ್ನೂ ಓದಿ: ಮಳೆ ತಂದ ಆವಾಂತರ; ರಸ್ತೆ ಕಾಣದೆ ಮೀನಿನ ಲಾರಿ ಪಲ್ಟಿ

ಹೌದು, ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಇಂದು ಒಂದೇ ದಿನ 5 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ ಹಾಗೂ ಬೆಂಗಳೂರಿನಲ್ಲಿ ಕೋವಿಡ್ 19 ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಸದ್ಯ ರಾಜ್ಯದಲ್ಲಿ ಒಟ್ಟು 38 ಸಕ್ರೀಯ ಪ್ರಕರಣಳಿದ್ದು, ಇದರಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 32 ಕೇಸ್‌ಗಳು ದಾಖಲಾಗಿವೆ.

Continue Reading

DAKSHINA KANNADA

ಪ್ರಚೋದನಕಾರಿ ಪೋಸ್ಟ್: 4 ಇನ್ಸ್ಟಾಗ್ರಾಂ, 1 ಪೇಸ್ಬುಕ್ ಪೇಜ್ ರದ್ದು

Published

on

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 4 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜ್‌ಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಈ ಪೇಜ್‌ಗಳನ್ನು ಡಿಆ್ಯಕ್ಟಿವೇಟ್ ಮಾಡಲಾಗಿದೆ.

“ವಿಎಚ್‌ಪಿ ಬಜರಂಗದಳ ಅಶೋಕನಗರ’ ಮತ್ತು “ಶಂಖನಾದ’ ಇನ್‌ ಸ್ಟಾಗ್ರಾಂ ಪೇಜ್ ವಿರುದ್ಧ ಉರ್ವ ಪೊಲೀಸ್ ಠಾಣೆ, “ಡಿಜೆ ಭರತ್ 2008” ಇನ್‌ಸ್ಟಾಗ್ರಾಂ ಪೇಜ್ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ, “ಕರಾವಳಿ ಅಫೀಶಿಯಲ್ ಇನ್‌ಸ್ಟಾಗ್ರಾಂ ಪೇಜ್” ವಿರುದ್ಧ ಪಾಂಡೇಶ್ವರ ಠಾಣೆ ಮತ್ತು “ಆಶಿಕ್ ಮೈಕಾಲ’ ಫೇಸ್‌ಬುಕ್ ಪೇಜ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

ಈ ಪ್ರಕರಣಗಳ ತನಿಖೆಯನ್ನು ಸೆನ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 6 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜನ್ನು ರದ್ದುಗೊಳಿಸಲಾಗಿದೆ.

Continue Reading

LATEST NEWS

ಮಳೆ ತಂದ ಆವಾಂತರ; ರಸ್ತೆ ಕಾಣದೆ ಮೀನಿನ ಲಾರಿ ಪಲ್ಟಿ

Published

on

ಹಾಸನ: ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ರಾಟೆ ಮನೆ ಬಳಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಮೀನುಗಳನ್ನು ಸಾಗಿಸುತ್ತಿದ್ದ KA-02-AB-479 ನಂಬರ್‌ನ ಲಾರಿ ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾಗಿದೆ.

ಇದನ್ನೂ ಓದಿ: ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾ*ವು

ಇದರಿಂದಾಗಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸಕಲೇಶಪುರ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page