Connect with us

LATEST NEWS

ದುಬೈಯಲ್ಲಿ ಅನಾರೋಗ್ಯದಿಂದ ದಾರುಣ ಅಂತ್ಯ ಕಂಡ ಕರಾವಳಿಯ ವಿದ್ಯಾರ್ಥಿ

Published

on

ದುಬೈ: ಪದವಿ ಶಿಕ್ಷಣಕ್ಕೆಂದು ದುಬೈಗೆ ತೆರಳಿದ್ದ ಕರಾವಳಿಯ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಹ್ಮದ್ ಬಿಲಾಲ್ ಕಾಪು (20) ಮೃತಪಟ್ಟ ವಿದ್ಯಾರ್ಥಿ.


ಉಡುಪಿಯಲ್ಲಿ ಪಿಯುಸಿ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ದುಬೈಗೆ ತೆರಳಿದ್ದ. ಅನಾರೋಗ್ಯಕ್ಕೀಡಾದ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಶಾರ್ಜಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ 20 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಬಿಲಾಲ್ ತಂದೆ ಅಬ್ದುಸ್ಸಲಾಂ ಸೂರಿಂಜೆ ಅವರು 35 ವರ್ಷಗಳಿಂದ ದುಬೈಯಲ್ಲಿ ದುಡಿಯುತ್ತಿದ್ದ ಹಿನ್ನೆಲೆಯಲ್ಲಿ, ಶಿಕ್ಷಣಕ್ಕಾಗಿ ಬಿಲಾಲ್ ನಾಲ್ಕು ತಿಂಗಳ ಹಿಂದೆ ದುಬೈಗೆ ತೆರಳಿದ್ದರು.

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading

LATEST NEWS

ಭೀಕರ ಅಪಘಾತ; ಟೋಲ್ ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್!

Published

on

ಉತ್ತರ ಪ್ರದೇಶ: ಟೋಲ್‌ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಟೋಲ್‌ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಶನಿವಾರ(ಜ.17) ಮಧ್ಯಾಹ್ನ ನಡೆದಿದೆ.


ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂಬ ಕಾರಣಕ್ಕೆ ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು. ಟೋಲ್ ಸಿಬ್ಬಂದಿ ಟ್ಯಾಗ್​ ಸ್ಕ್ಯಾನ್ ಮಾಡುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಟ್ರಕ್ ನಿಂತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ರಸ್ತೆ ವಿಭಜಕಕ್ಕೆ ಎಸ್ ಯುವಿ ಡಿ*ಕ್ಕಿ; 5 ಮಂದಿ ಸಾ*ವು

ಡಿಕ್ಕಿಯ ರಭಸಕ್ಕೆ ಸಿಬ್ಬಂದಿ ಕಾರಿನ ಬಾನೆಟ್ ಮೇಲೆ ಬಿದ್ದಿದ್ದು, ಟ್ರಕ್ ಅವರನ್ನು ಸುಮಾರು 50 ಮೀಟರ್‌ಗಳಿಗಿಂತಲೂ ಹೆಚ್ಚು ದೂರ ಎಳೆದೊಯ್ದಿದೆ. ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page