Connect with us

UDUPI

Udupi : ನದಿಯಲ್ಲಿ ಯುವಕನ ಶ*ವ ಪತ್ತೆ

Published

on

ಉಡುಪಿ : ಅಲೆವೂರು ಪಾಪನಾಶಿನಿ ನದಿಯಲ್ಲಿ ಶ*ವ ಪತ್ತೆಯಾಗಿದೆ. ಉಡುಪಿ ತಾಲೂಕಿನ ಅಲೆವೂರು ನದಿಯಲ್ಲಿ ಯುವಕನೊಬ್ಬನ ಶ*ವ ಪತ್ತೆಯಾಗಿದೆ.  ಪಳ್ಳಿ ನಿವಾಸಿ ಭಾಸ್ಕರ ಕುಲಾಲ್ ಮೃತಪಟ್ಟವರನ್ನು ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

LATEST NEWS

ಕಾಪು: ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ

Published

on

ಕಾಪು: ನೇಣು ಬಿಗಿದು ಯುವಕನೋರ್ವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಪುವಿನ ಇನ್ನಂಜೆಯಲ್ಲಿ ನಡೆದಿದೆ.

ರಾಕೇಶ್ (32) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದುಬಂದಿದೆ. ಮೃತ ಯುವಕನು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದನು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: 30 ವರ್ಷದ ಹಿಂದೆ 500 ರೂ ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿ; ನಿವೃತ್ತಿಯಾದ 10 ವರ್ಷದ ಬಳಿಕ ಜೈಲು ಪಾಲು!

ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

Continue Reading

LATEST NEWS

ಕುಂದಾಪುರ : ಕಾಲು ಜಾರಿ ಕಿಂಡಿ ಅಣೆಕಟ್ಟಿಗೆ ಬಿದ್ದು ಯುವತಿ ಸಾ*ವು

Published

on

ಕುಂದಾಪುರ : ದನಗಳಿಗೆ ಹುಲ್ಲು ತರಲು ಹೋಗಿದ್ದ ಯುವತಿ ಕಾಲು ಜಾರಿ ಕಿಂಡಿ ಅಣೆಕಟ್ಟಿನ ನೀರಿಗೆ ಬಿದ್ದು ಸಾ*ವನ್ನಪ್ಪಿದ ಘಟನೆ ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆಯ ಜಂಬೆಹಾಡಿ ಎಂಬಲ್ಲಿ ನಡೆದಿದೆ.

ಜಡ್ಡಿನಗದ್ದೆಯ ಜಂಬೆಹಾಡಿ ಸಂಜೀವ ನಾಯ್ಕ ಮತ್ತು ನರ್ಸಿ ದಂಪತಿಯ ಪುತ್ರಿ 23 ವರ್ಷದ ಮೂಕಾಂಬಿಕಾ ಮೃ*ತ ದುರ್ದೈವಿ. ಮೂಕಾಂಬಿಕಾ ಅಮಾಸೆಬೈಲಿನ ಪೆಟ್ರೋಲ್ ಬಂಕ್‌ ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪಾಳಿ ಮಧ್ಯಾಹ್ನದ ಬಳಿಕ ಇದ್ದುದರಿಂದ ಬೆಳಗ್ಗೆ ಹುಲ್ಲು ತರಲು ಅತ್ತಿಗೆ ಅಶ್ವಿನಿಯೊಂದಿಗೆ ತೋಟಕ್ಕೆ ಹೋಗಿದ್ದರು.

ಮನೆಗೆ ಹಿಂದಿರುಗುವಾಗ ಅಶ್ವಿನಿ ಹುಲ್ಲಿನ ಹೊರೆಯನ್ನು ಹೊತ್ತುಕೊಂಡು ಮನೆಯ ಕಡೆಗೆ ಹೊರಟಿದ್ದು, ಮೂಕಾಂಬಿಕಾ ಹಿಂಬಾಲಿಸುತ್ತಿದ್ದರು. ಮನೆ ತಲುಪಿದ ಅಶ್ವಿನಿ ಹಿಂದಿರುಗಿ ನೋಡಿದಾಗ ಮೂಕಾಂಬಿಕಾ ಜೊತೆಗೆ ಇರಲಿಲ್ಲ. ಅವರನ್ನು ಕರೆಯುತ್ತ ಪುನಃ ತೋಟದ ಕಡೆಗೆ ತೆರಳಿದಾಗ ಅಣೆಕಟ್ಟಿನ ದಂಡೆಯ ಮೇಲೆ ಹುಲ್ಲು ಕೊಯ್ಯುವ ಕತ್ತಿ ಕಾಣಿಸಿದೆ.

ಇದನ್ನೂ ಓದಿ : ನೈತಿಕ ಪೊಲೀಸ್ ಗಿರಿಗೆ ನೊಂದು ಮಹಿಳೆ ಆ*ತ್ಮಹ*ತ್ಯೆ; ಮೂವರು ಎಸ್‌ಡಿಪಿಐ ಕಾರ್ಯಕರ್ತರ ಬಂಧನ

ಅಶ್ವಿನಿಯ ಬೊಬ್ಬೆ ಕೇಳಿ ಮನೆಯವರು ಓಡಿ ಬಂದು ಅಣೆಕಟ್ಟಿನಲ್ಲಿ ಹುಡುಕಿದ್ದು ಮೃತದೇಹ ಪ*ತ್ತೆಯಾಗಿದೆ. ಮೂಕಾಂಬಿಕಾ ತಂದೆ, ತಾಯಿ, 6 ಮಂದಿ ಸಹೋದರಿಯರು ಮತ್ತು ಸಹೋದರನನ್ನು ಅಗಲಿದ್ದಾರೆ.

Continue Reading

LATEST NEWS

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ, ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಹೆಬ್ಬಾಳ್ಕರ್‌

Published

on

ಉಡುಪಿ: ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಆದರೆ ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತದ ಬಗ್ಗೆ ಹೇಳುತ್ತಾರೆ. ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ.


ಸುದ್ದಿಗಾರರ ಜತೆ ಮಾತನಾಡಿದ ಸಚಿವೆ, ಚಕ್ರವರ್ತಿ ಸೂಲಿಬೆಲೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಅವರು ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರೋದನ್ನ ಕಪ್ಪು ಮಾಡುವುದರಲ್ಲಿ ನಿಸ್ಸೀಮರು. ಅವರು ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಇರುತ್ತಾರೆ ಎಂಬುದನ್ನು ಪೊಲೀಸ್ ವರಿಷ್ಠಾಧಿಕಾರಿಗಳಿಂದ ಗೊತ್ತಾಗಿದೆ. ಅವರು ಖಂಡಿತವಾಗಿಯೂ ಪ್ರವಾಸ ಮಾಡಬಹುದು. ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ರೀತಿಯ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ಕೊಟ್ಟಿದೆ. ಆದರೆ ಅವರು ದ್ವೇಷದ ಭಾಷಣ, ಸುಳ್ಳಿನ ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ. ಏಕೆಂದರೆ ಉಡುಪಿ ಶಾಂತಿ ಪ್ರೀಯರ ಜಿಲ್ಲೆಯಾಗಿದೆ ಎಂದರು.

ಇದನ್ನೂ ಓದಿ: ಹಿಂದೂಗಳನ್ನು ಗುರಿಯಾಗಿಟ್ಟುಕೊಳ್ಳುವ ಪೊಲೀಸರ ಕ್ರಮ ಸಹಿಸಲ್ಲ: ಭರತ್‌ ಶೆಟ್ಟಿ

ಇನ್ನು ಕರಾವಳಿಯಲ್ಲಿ ಕೋಮ ನಿಗ್ರಹ ಪಡೆ ರಚನೆಗೆ ಬಿಜೆಪಿ ಶಾಸಕರ ವಿರೋಧದ ಬಗ್ಗೆ ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್‌, ಬಿಜೆಪಿಯು ಒಂದು ಕಡೆ ಕೋಮುವಾದವನ್ನ ಪ್ರಚೋದನೆ ಮಾಡುತ್ತದೆ. ಆದರೆ ನಾವು ಕೋಮು ಪ್ರಚೋದನೆ ಮಾಡುತ್ತಿಲ್ಲ ಎನ್ನುತ್ತದೆ. ಇನ್ನೊಂದು ಕಡೆ ಕೋಮು ನಿಗ್ರಹದಳಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ಈ ಮನೋಭಾವನೆಯ ಬಿಜೆಪಿ ಶಾಸಕರನ್ನು ನೋಡಿದರೆ ಮನಸ್ಥಿತಿ ಏನು ಅನ್ನೋದು ಉಡುಪಿಯ ಜನತೆ ಅರ್ಥ ಮಾಡಿಕೊಳ್ಳ ಬೇಕೆಂದು ತಿಳಿಸಿದರು.

 

 

Continue Reading
Advertisement

Trending

Copyright © 2025 Namma Kudla News

You cannot copy content of this page