Connect with us

LATEST NEWS

ಕುಂಜಾಲ್ ಜಂಕ್ಷನ್‌ನಲ್ಲಿ ದನದ ರುಂಡ ಎಸೆದ ಪ್ರಕರಣ; ಆರೋಪಿಗಳ ಬಂಧನ

Published

on

ಉಡುಪಿ: ಆರೂರು ಗ್ರಾಮದ ಕುಂಜಾಲ್‌ ಜಂಕ್ಷನ್‌ ಬಳಿ ರಿಕ್ಷಾ ನಿಲ್ದಾಣದ ಎದುರು ರಸ್ತೆ ಮದ್ಯದಲ್ಲಿ ಯಾರೋ ಅಪರಿಚಿತರು ಗೋವಿನ ತಲೆ ಮತ್ತು ಚರ್ಮದ ಭಾಗವನ್ನು ರಸ್ತೆಯಲ್ಲಿ ಎಸೆದು ಹೋಗಿರುವ ಘಟನೆಗೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಹುಡುಕಾಟ ನಡೆದಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಆರೋಪಿಗಳಾದ ರಾಮ ಕುಂಜಾಲು (49) ಕುಂಜಾಲು, ಪ್ರಸಾದ್‌ ಕುಂಜಾಲು (21), ನವೀನ್‌ ಮಟಪಾಡಿ(35), ಕೇಶವ ನಾಯ್ಕ್‌ ಅಡ್ಜಿಲ (50), ಸಂದೇಶ ಕುಂಜಾಲು (35), ರಾಜೇಶ್ ಕುಂಜಾಲು (28), ಇವರನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.

ಆರೋಪಿಗಳು ದನವನ್ನು ಕಡಿದು ಅದರ ಅವಶೇಷಗಳನ್ನು ವಾಹನದಲ್ಲಿ ಸಾಗಿಸುವಾಗ ಅದರ ಕೆಲವು ಅವಶೇಷಗಳು ರಸ್ತೆಯಲ್ಲಿ ಬಿದ್ದು ಹೋಗಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಚಾಕೋಲೆಟ್ ಕೇಳಿದ ಮಗಳನ್ನು ಕೊಂದ ತಂದೆ!

ಆರೋಪಿಗಳಿಂದ ಹೊಂಡ ಆ್ಯಕ್ಟಿವಾ, ಸ್ವಿಫ್ಟ್‌ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣದ ಪತ್ತೆಗಾಗಿ ಬ್ರಹ್ಮಾವರ ಪೊಲೀಸ್‌ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಒಟ್ಟು 4 ತಂಡಗಳನ್ನು ರಚಿಸಿ, ವಿವಿಧ ಅಯಾಮಗಳಲ್ಲಿ ತನಿಖೆಯನ್ನು ನಡೆಸಲಾಗಿತ್ತು. ಪ್ರಕರಣದ ಕೂಲಂಕೂಷವಾಗಿ ಪರಿಶೀಲಿಸಿ, ಸಿಸಿಟಿವಿ ಹಾಗೂ ವಾಹನಗಳ ಚಲನೆಯ ಆಧಾರದ ಮೇಲೆ ತನಿಖೆ ನಡೆಸಿ ಬಂಧಿಸಲಾಗಿದೆ.

DAKSHINA KANNADA

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ನವ ವಿವಾಹಿತ ಸಾ*ವು

Published

on

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಮೃ*ತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ 32 ವರ್ಷದ ಭರತ್ ಎಂದು ತಿಳಿದುಬಂದಿದೆ.

ನಗರದ ಮಾಲ್ ಒಂದರಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾ*ವನ್ನಪ್ಪಿದ್ದಾರೆ.

ಇದನ್ನೂ ಓದಿ: ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

ಕಳೆದ ಏಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃ*ತ ಯುವಕ ಭರತ್ ತಾಯಿ, ಪತ್ನಿ ಹಾಗೂ ಮೂವರು ಸೋದರಿಯರು ಅಗಲಿದ್ದಾರೆ.

Continue Reading

LATEST NEWS

ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆಯ ಪ್ರಬಲ ಭೂಕಂಪನ

Published

on

ನವದೆಹಲಿ: ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆ ಪ್ರಬಲ ಭೂಕಂಪನ ಸಂಭವಿಸಿದ ಘಟನೆ ಇಂದು (ಜು. 10) ಮುಂಜಾನೆ ನಡೆದಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ತಿಳಿಸಿದ್ದು, ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಹೇಳಿದೆ.1 ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ.

ಇದನ್ನೂ ಓದಿ: ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ್ದಾರೆ. ಯಾವುದೇ ಹಾನಿ ಹಾಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ.

Continue Reading

DAKSHINA KANNADA

ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

Published

on

ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ಬಳಿಕ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.

ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತಪಟ್ಟವರು ಎಂದು ತಿಳಿದುಬಂದಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಅನ್ನು ತುಳಿದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

Continue Reading
Advertisement

Trending

Copyright © 2025 Namma Kudla News

You cannot copy content of this page