Connect with us

LATEST NEWS

ಉಡುಪಿ : ಮಳೆಯ ರುದ್ರನರ್ತನ – ಆಟೋ ಮೇಲೆ ಮರ ಉರುಳಿ ಬಿದ್ದು ಇಬ್ಬರು ಬಲಿ..!

Published

on

ಭಾರೀ ಗಾಳಿ ಮಳೆಯ ಪರಿಣಾಮ ಉಡುಪಿ ಜಿಲ್ಲೆಯ ಕಾಪು – ಶಿರ್ವ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆ ಬೃಹತ್ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಉಡುಪಿ : ಭಾರೀ ಗಾಳಿ ಮಳೆಯ ಪರಿಣಾಮ ಉಡುಪಿ ಜಿಲ್ಲೆಯ ಕಾಪು – ಶಿರ್ವ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆ ಬೃಹತ್ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಇಲ್ಲಿನ ಮಲ್ಲಾರು ಚಂದ್ರನಗರದ ಬಳಿ ಗುರುವಾರ ರಾತ್ರಿ ವೇಳೆ ಈ ಅವಘಡ ಸಂಭವಿಸಿದೆ.

ಕಾಪುವಿನಿಂದ ಪಾದೂರಿಗೆ ತೆರಳುತಿದ್ದ ರಿಕ್ಷಾದ ಮೇಲೆ ಧೂಪದ ಮರ ಉರುಳಿ ಬಿದ್ದಿದ್ದು ಇಬ್ಬರು ಪ್ರಯಾಣಿಕರು ರಿಕ್ಷಾದೊಳಗೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಾದೂರು ಕೂರಾಲು ರೈಸ್ ಮಿಲ್ ಬಳಿಯ ನಿವಾಸಿ 45 ವರ್ಷದ ಪುಷ್ಪಾ ಕುಲಾಲ್ ಮತ್ತು ಕಳತ್ತೂರು ನಿವಾಸಿ 48ವರ್ಷದ ಕೃಷ್ಣ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ರಿಕ್ಷಾ ಚಾಲಕ ಶರೀಫ್ ಅವರು ಪವಾಡ ಸದೃಶ ರೀತಿಯಲ್ಲಿ ರಿಕ್ಷಾದಿಂದ ಜಿಗಿದು ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮರವನ್ನು ತೆರವುಗೊಳಿಸಲು ಹರಸಾಹಸ ಪಡಬೇಕಾಯಿತು.

ಪೊಲೀಸ್, ಮೆಸ್ಕಾಂ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಸಹಿತ ನೂರಾರು ಮಂದಿ ಸಹಕಾರ ಹಾಗು ಜೆಸಿಬಿ, ಕ್ರೇನ್ ಸಹಾಯದಿಂದ ಸತತ ಒಂದೂವರೆ ಗಂಟೆಗಳ ಪರಿಶ್ರಮದ ಬಳಿಕ ಮರವನ್ನು ಬದಿಗೆ ಸರಿಸಲಾಯಿತು.

ರಿಕ್ಷಾದೊಳಗೆ ಸಿಲುಕಿದ್ದವರು ಅಷ್ಟರಲ್ಲೇ ಮೃತ ಪಟ್ಟಿದ್ದರು. ಮೃತದೇಹಗಳನ್ನು ಆಂಬ್ಯುಲೆನ್ಸ್ ಮೂಲಕ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತು.

ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರ ಮಾಡಲಾಯಿತು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

DAKSHINA KANNADA

ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆಯ ಆರ್ಭಟ; ಅಲ್ಲಲ್ಲಿ ಹಾನಿ

Published

on

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಎರಡನೇ ದಿನವಾದ ಇಂದು ಕೂಡಾ ಮುಂದುವರಿದಿದೆ. ಇದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ನೆರೆ ರಾಜ್ಯ ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಮಳೆ ತೀವ್ರವಾಗಿದೆ. ಹವಾಮಾನ ಇಲಾಖೆಯು ನಾಲ್ಕೂ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಿದೆ. ರಸ್ತೆ ಕಾಮಗಾರಿ, ಅವೈಜ್ಙಾನಿಕ ಚರಂಡಿ ಕೆಲಸ ಇತ್ಯಾದಿ ಕಾರಣಗಳಿಂದಾಗಿ ಮಳೆ ನೀರು ಸರಾಗವಾಗಿ ಹರಿಯದೆ ಕೃತಕ ನೆರೆ ಬಂದು ಅನೇಕ ಕಡೆಗಳಲ್ಲಿ ನಾಶ ನಷ್ಟ ಸಂಭವಿಸಿದೆ. ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

ಗಾಳಿ ಮಳೆಗೆ ಮರಗಳು ಬಿದ್ದು ವಿದ್ಯುತ್‌ ಸಂಪರ್ಕ ಹಲವಾರು ಕಡೆಗಳಲ್ಲಿ ಕಡಿತಗೊಂಡಿದೆ. ಮಂಗಳೂರು ನಗರ, ಉಡುಪಿ ನಗರ, ಮಣಿಪಾಲಗಳಲ್ಲಿ ಅಲ್ಲಲ್ಲಿ ಕೃತಕ ನೆರೆಯಿಂದ ಹಾನಿ ಸಂಭವಿಸಿದೆ. ಇಂದು ಮುಂಜಾನೆಯಿಂದ ಬಿಟ್ಟು ಬಿಟ್ಟು ಭಾರೀ ಮಳೆ ಬರುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Continue Reading

BELTHANGADY

ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

Published

on

ಬೆಳ್ತಂಗಡಿ: ಪಂಜಾಬ್​​ನಲ್ಲಿ ನಿಗೂಢವಾಗಿ ಮೃತಪಟ್ಟ ಬೆಳ್ತಂಗಡಿಯ ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ತರಲಾಯಿತು.

ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಮಣ್ಣಿನಲ್ಲಿ ಹೂತಗೊಂಡ ಘಟನೆಯೂ ನಡೆಯಿತು. ನಂತರ ಸ್ಥಳೀಯರು ಆ್ಯಂಬುಲೆನ್ಸ್ ಟೈರ್ ಅನ್ನು ಮಣ್ಣಿನಿಂದ ಹೊರತೆಗೆದರು.

ಇದನ್ನೂ ಓದಿ: ಆಕಾಂಕ್ಷ ಸಾ*ವು ಪ್ರಕರಣ: ಪ್ರೊಫೆಸರ್ ಅರೆಸ್ಟ್; ಮೇ.21 ರಂದು  ಮೃ*ತದೇಹ ಬೆಳ್ತಂಗಡಿಗೆ

ಸದ್ಯ ಆಕಾಂಕ್ಷಾ ಮೃತದೇಹ ಬೋಳಿಯಾರ್​​ನಲ್ಲಿರುವ ಮನೆಗೆ ತಲುಪಿದೆ. ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಹೆಚ್ಚಾಗಿದೆ. ಮೃತದೇಹದ ಅಂತ್ಯ ಸಂಸ್ಕಾರ ಇಂದೇ ನೆರವೇರುವ ಸಾಧ್ಯತೆ ಇದೆ.

Continue Reading

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page