Connect with us

LATEST NEWS

ಉಡುಪಿ : ಕಾಪು ಪೊಲೀಸರ ಕಾರ್ಯಾಚರಣೆ ಇಬ್ಬರು ಅಂತರ್‌ ಜಿಲ್ಲಾ ಸರಗಳ್ಳರ ಸೆರೆ..!

Published

on

ಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್‌ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಪಡುಬಿದ್ರಿಯಲ್ಲಿ ಕಾಪು ಪೊಲೀಸರು ಬಂಧಿಸಿದ್ದಾರೆ.

ಉಡುಪಿ : ಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್‌ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಪಡುಬಿದ್ರಿಯಲ್ಲಿ ಕಾಪು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿ.ಸಿ.ರೋಡ್‌ ನಿವಾಸಿ ಮಹಮ್ಮದ್‌ ರಫೀಕ್‌ (33) ಮತ್ತು ಸುರತ್ಕಲ್‌ ಚೊಕ್ಕಬೆಟ್ಟು ನಿವಾಸಿ ತೌಸಿಫ್ ಸಾಧಿಕ್‌ (31)ಬಂಧಿತ ಆರೋಪಿಗಳಾಗಿದ್ದು, ಕೃತ್ಯಕ್ಕೆ ಬಳಸಿದ ಬೈಕ್‌, 3 ಮೊಬೈಲ್‌, 2,500 ರೂ. ನಗದು, ಬಟನ್‌ ಇದ್ದ ಎರಡು ಚೂರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ಅಂತರ್‌ ಜಿಲ್ಲಾ ಸರಗಳ್ಳರಾಗಿದ್ದಾರೆ. ಬಂದಿತರ ಪೈಕಿ ಮಹಮ್ಮದ್‌ ರಫೀಕ್‌ನ ವಿರುದ್ಧ ಬೆಂಗಳೂರು, ಮಂಗಳೂರು ಕಮಿಷನರೇಟ್‌ ವ್ಯಾಪ್ತಿ, ದ.ಕ. ಮತ್ತು ಉಡುಪಿ ಜಿಲ್ಲೆಯ 32 ಠಾಣೆಗಳಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿದ್ದು ಬೆಂಗಳೂರಿನಲ್ಲಿ ಒಮ್ಮೆ ಆರು ವರ್ಷ ಹಾಗೂ ಮತ್ತೂಮ್ಮೆ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ.

ಮಾರ್ಚ್‌ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದು ಮತ್ತೆ ಅದೇ ಮಾದರಿಯ ಕಳ್ಳತನ ನಡೆಸಿ ಪೊಲೀಸರ ಸೆರೆಯಾಗಿದ್ದಾನೆ.

ಮತ್ತೋರ್ವ ಆರೋಪಿ ತೌಸಿಫ್‌ ಸಾಧಿಕ್‌ ವಿರುದ್ಧ ಬೆಂಗಳೂರು, ಮಂಗಳೂರು ಮತ್ತು ಮೂಲ್ಕಿ ಠಾಣೆಗಳಲ್ಲಿ ನಾಲ್ಕು ಸರಗಳ್ಳತನ ಪ್ರಕರಣಗಳು ದಾಖಲಾಗಿವೆ.

ಆರೋಪಿಗಳು ನೀಡಿರುವ ಮಾಹಿತಿಯಂತೆ ಜೂ. 12ರಂದು ಕಾಪುವಿನಲ್ಲಿ ಕಳವುಗೈದ ಎರಡು ಚಿನ್ನದ ಸರ, ಬ್ರಹ್ಮಾವರದಲ್ಲಿ ಕಳವಾಗಿರುವ ಚಿನ್ನದ ಸರ, ಮೇ 7ರಂದು ಬೆಂಗಳೂರಿನ ಮಹಾಲಕ್ಷ್ಮೀಪುರಂನಲ್ಲಿ ಕಳವಾಗಿರುವ ಚಿನ್ನದ ಸರ, ಮೇ 27ರಂದು ಮಲ್ಲೇಶ್ವರಂನಲ್ಲಿ ಕಳವಾಗಿರುವ ಎರಡು ಎಳೆಯ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ. ಹಾಕೆ ಮಚ್ಚೀಂದ್ರ ಅವರು ತಿಳಿಸಿದ್ದಾರೆ.

ಆರೋಪಿ ರಫೀಕ್‌ಗೆ ಬೈಕ್‌ ಚಾಲನೆ ಗೊತ್ತಿಲ್ಲವಾಗಿದ್ದು ಒಂದೊಂದು ಪ್ರಕರಣಕ್ಕೆ ಒಬ್ಬೊಬ್ಬರನ್ನು ಬೈಕ್‌ ಸವಾರರನ್ನಾಗಿ ಬಳಸಿಕೊಳ್ಳುತ್ತಿದ್ದನು.

ಜೂ. 12ರಂದು ಮಧ್ಯಾಹ್ನ 12.10ಕ್ಕೆ ಬ್ರಹ್ಮಾವರದಲ್ಲಿ ಮತ್ತು 2.15ರ ವೇಳೆಗೆ ಕಾಪುವಿನಲ್ಲಿ ಸರಗಳ್ಳತನ ನಡೆಸಿ ಪರಾರಿಯಾಗಿದ್ದರು.

ಆದರೆ ಕಾಪು ಪೊಲೀಸರು ನಡೆಸಿದ ಕ್ಷಿಪ್ರಗತಿಯ ಕಾರ್ಯಾಚರಣೆ, ವಿವಿಧೆಡೆಯ ಸಿಸಿ ಕೆಮರಾ ಪೂಟೇಜ್‌ಗಳು, ಟೋಲ್‌ಗೇಟ್‌ ಕೆಮರಾಗಳ ಸಹಕಾರದೊಂದಿಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದು, ಕಾರ್ಕಳ ಮತ್ತು ಉಡುಪಿ ಪೊಲೀಸ್‌ ಉಪಾಧೀಕ್ಷಕರು, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರ ನೇತೃತ್ವದಲ್ಲಿ ಹಿರಿಯಡಕ ಎಸ್‌ಐ ಮಂಜುನಾಥ ಮರಬಂದ ಹಾಗೂ ಅಪರಾಧ ವಿಭಾಗದ ಸಿಬಂದಿಗಳಾದ ಪ್ರವೀಣ್‌ ಕುಮಾರ್‌, ರಾಜೇಶ್‌, ನಾರಾಯಣ್‌, ಸಂದೇಶ್‌,ಆರ್‌ಡಿಸಿ ವಿಭಾಗದ ದಿನೇಶ್‌ ಮತ್ತು ನಿತಿನ್‌ ಅವರ ಕಾರ್ಯಾಚರಣೆಯಿಂದಾಗಿ ಸರಗಳ್ಳರ ಬಂಧನವಾಗಿದ್ದು ಪೊಲೀಸರಿಗೆ ನಗದು ಮತ್ತು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು ಎಂದಿದ್ದಾರೆ.

LATEST NEWS

ಉಡುಪಿ: ಮಹಿಳಾ, ಮಕ್ಕಳ ಆಸ್ಪತ್ರೆಯಲ್ಲಿ ಎನ್‌ ಆರ್‌ಸಿ ಕೇಂದ್ರ ಇಲ್ಲದಕ್ಕೆ ಗರಂ ಆದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

Published

on

ಉಡುಪಿ:  ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು.

ಪ್ರತಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಈ ಕೇಂದ್ರ ಇದೆ. ಆದರೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಸುಪರ್ದಿಗೆ ಬಂದು  ನಾಲ್ಕು ವರ್ಷಗಳಾದರೂ ಇನ್ನೂ ಎನ್‌ ಆರ್‌ ಸಿಯನ್ನು ಆರಂಭಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಹಳ ಬೇಸರದ ಸಂಗತಿ. ಈ ಬಗ್ಗೆ ಜಿಲ್ಲಾಡಳಿತ, ಡಿಎಚ್‌ಓ, ಜಿಲ್ಲಾ ಸರ್ಜನ್ ಯಾವ ಕಾರಣಕ್ಕಾಗಿ ಇದನ್ನು ಇನ್ನೂ ಆರಂಭಿಸಿಲ್ಲ ಎಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯಲ್ಲಿ ಮಕ್ಕಳು ದಾಖಲಾದ ಮೇಲೆ ಪ್ರತಿಯೊಂದು ಹೆಸರು, ತಾಯಿ ಹೆಸರು ದಾಖಲೆ ಮಾಡಿ, ಬಳಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಆದರೆ ಇಲ್ಲಿ ಕೇಸ್ ಶೀಟ್ ನೋಡಿದರೆ ಹಿನ್ನೆಲೆಯಲ್ಲಿ ಬರೆಯಲಾಗಿದೆ. ವಿವರ ಮಗುವಿನ ತಂದೆ ತಾಯಿ ಹೆಸರು ವಿಳಾಸ ಕೂಡ ಇಲ್ಲ. ಇದರಿಂದ ತಪ್ಪಾದ ಚಿಕಿತ್ಸೆ ನೀಡುವ ಸಾಧ್ಯತೆ ಹೆಚ್ಚು ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಅನಾವಶ್ಯಕವಾಗಿ ಆ ಮಗು ಅನಾರೋಗ್ಯಕ್ಕೆ ತುತ್ತಾಗುತ್ತದೆ. ಆದುದರಿಂದ ವೈದ್ಯರು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

Continue Reading

BELTHANGADY

ಶಿರಾಡಿ ಘಾಟ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

Published

on

ಶಿರಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ.

 

ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ ,  ಉಜಿರೆ ನಿವಾಸಿಗಳಾದ ಶ್ರೀಧರ್ , ಜನಾರ್ದನ ಕೆರಿಮಾರ್ ಮೃತ ದುರ್ದೈವಿಗಳು. ಧರ್ಮಸ್ಥಳದಿಂದ ಮದ್ಯಾಹ್ನ 1.30ಕ್ಕೆ ಬೆಂಗಳೂರು ಮೂಲಕ ತಿರುಪತಿಗೆ ಹೊರಟಿದ್ದ ಕೆ.ಎಸ್. ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಗೆ ಬರುತ್ತಿದ್ದ ಕಾರು ಶಿರಾಡಿ ಘಾಟ್ ಗಡಿ ಸಮೀಪ ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

 

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜಗುಜ್ಜಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಮತ್ತೋರ್ವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.  ಘಟನೆಯಲ್ಲಿ ಸುರೇಶ್ ಎಂಬವರಿಗೂ ಕೂಡಾ ಗಾಯಗಳಾಗಿವೆ ಎಂದು ತಿಳಿದುಬಂದಿದೆ.  ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

ಸಿಲಿಂಡರ್ ಅಭಾವ: ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

Published

on

ಬೆಂಗಳೂರು: ಇಸ್ರೇಲ್‌, ಅಮೇರಿಕ ಮತ್ತು ಇರಾನ್‌ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಇದೀಗ ಗ್ಯಾಸ್ ಸಿಲಿಂಡರ್ ಕೊರತೆಯ ನಡುವೆ, ಗ್ರಾಹಕರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ಈಗ ಬೆಲೆ ಏರಿಕೆಯ ಬಿಸಿ ಮತ್ತೊಂದು ಶಾಕ್ ನೀಡುವ ಸಾಧ್ಯತೆಯಿದೆ.


ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಅಯೋಮಯವಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಸಹ ಬಂದ್‌ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್​ನಂತೆ ಅಡುಗೆ ಆಯಿಲ್ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಅಡುಗೆ ಎಣ್ಣೆ ಮಾಲಿಕರೊಬ್ಬರು ಪ್ರತಿಕ್ರಿಯಿಸಿದ್ದು, ಕಳೆದ 1 ವಾರದಿಂದ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ. 100-200 ಬಾಕ್ಸ್‌ ಎಣ್ಣೆ ಬುಕ್‌ ಮಾಡಿದರೆ 20-50 ಬಾಕ್ಸ್‌ ಮಾತ್ರ ಕಳುಹಿಸುತ್ತಾರೆ. ಏಜೆಂಟರಲ್ಲಿ ಕೇಳಿದರೆ, ಸಪ್ಲೈ ಆಗುತ್ತಿಲ್ಲ. ಹೆಚ್ಚು ಬಾಕ್ಸ್‌ ನೀಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ 15-20 ರೂ. ದರ ಜಾಸ್ತಿ ಆಗಿರುವುದರಿಂದ ನಮಗೆ ತುಂಬಾ ಸಮಸ್ಯೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೀಮೆಎಣ್ಣೆ ಹಂಚಿಕೆ ಮತ್ತು ಆಮದು ನೀತಿಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದ ಹೊಸ ನಿರ್ಧಾರ

ಗ್ಯಾಸ್ ಅಭಾವ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದಾಗಿ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುವ ಭೀತಿ ಎದುರಾಗಿದೆ. ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಕಾಡುತ್ತಿದೆ. ನಗರದ ಕೆಲವು ಹೋಟೆಲ್‌ಗಳು ಮತ್ತು ಪಿಜಿಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ಮತ್ತೆ ಹಳೆಯ ಪದ್ಧತಿಯಂತೆ ಸೌದೆ ಒಲೆಗಳನ್ನು ಬಳಸುವ ಅನಿವಾರ್ಯತೆ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page