Connect with us

LATEST NEWS

ಮೂವರು ನಟೋರಿಯಸ್ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು..! 

Published

on

ಮೂವರು ನಟೋರಿಯಸ್ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು..! 

ಉಡುಪಿ :  ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ 12 ಗಂಟೆಯೊಳಗೆ  ಮೂವರ ಕಳ್ಳಿಯರನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಳ್ಳಾರಿಯ ಸಬಿತಾ, ಲತಾ, ಕವಿತಾ ಬಂಧಿತ ಮಹಿಳಾ ಆರೋಪಿಗಳಾಗಿದ್ದಾರೆ. ಇವರಿಂದ 32,400 ರೂ. ನಗದು, ಎರಡು ಮೊಬೈಲ್, ಎರಡು ಎಟಿಎಂ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಉತ್ತರಹಳ್ಳಿ ಅರ್ಚನಾ ರಾವ್ (39) ಎಂಬವರು ಅ.20 ರಂದು ಸಂಜೆ 6ಗಂಟೆಗೆ ಸಿಟಿಬಸ್‌ನಲ್ಲಿ ಉಡುಪಿ ಸಿಟಿಬಸ್ ನಿಲ್ದಾಣದಿಂದ ಕುಂಜಿಬೆಟ್ಟುವಿಗೆ ಪ್ರಯಾಣಿಸುತ್ತಿದ್ದರು.

ಈ ವೇಳೆ ಮೂವರು ಮಹಿಳೆಯರು ಕಡಿಯಾಳಿಯಿಂದ ಬಸ್ ಹತ್ತಿದ್ದು, ಅವರ ಕೈಯಲ್ಲಿದ್ದ ಮಗುವನ್ನು ಅರ್ಚನಾ ರಾವ್ ತೊಡೆಯ ಮೇಲೆ ಕೂರಿಸಿದರು ಆ ಮೂರು ಜನ ಮಹಿಳೆಯರು, ಅರ್ಚನಾ ರಾವ್ ಬಳಿಯೇ ನಿಂತಿದ್ದು, ಅವರಿಗೆ ತಿಳಿಯದ ರೀತಿಯಲ್ಲಿ ಅವರ ಹೆಗಲ ಮೇಲೆ ಇದ್ದ ಬ್ಯಾಗಿನ ಜೀಪ್ ತೆರೆದು ಅದರ ಒಳಗಡೆ ಇದ್ದ ಪರ್ಸನ್ನು ಕಳವು ಮಾಡಿದ್ದರು.

ಆ ಪರ್ಸ್‌ನಲ್ಲಿ ವಿವಿಧ ಬ್ಯಾಂಕ್ ಗಳ 4 ಎಟಿಎಂ ಕಾರ್ಡ್, ವೋಟರ್ ಐಡಿ, 5 ಸಾವಿರ ರೂ. ನಗದು ಹಾಗೂ ಇತರೇ ದಾಖಲೆ ಪತ್ರಗಳು ಇದ್ದವು.

ಬಳಿಕ ಆ ಮಹಿಳೆಯರು ಬ್ಯಾಗಿನಲ್ಲಿದ್ದ ಚೀಟಿಯಲ್ಲಿ ಬರೆದಿಟ್ಟಿದ್ದ ಎಟಿಎಂ ಪಿನ್ ಬಳಸಿ 25,000ರೂ. ಹಣವನ್ನು ಡ್ರಾ ಮಾಡಿದ್ದರೆಂದು ಉಡುಪಿ ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿತ್ತು.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಈ ಬಗ್ಗೆ ಎಲ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು.

ಅದರಂತೆ ಉಡುಪಿ ನಗರ, ಸಂಚಾರ ಠಾಣೆ, ಮಣಿಪಾಲ, ಕಾಪು, ಪಡುಬಿದ್ರಿ ಪೊಲೀಸರು ಆರೋಪಿಗಳ ಚಲನವನ ಗಮನಿಸಲಾಯಿತು.

ಬಸ್ ಹಾಗೂ ರಿಕ್ಷಾ ಚಾಲಕರ ಸಹಕಾರದೊಂದಿಗೆ ಮಾಹಿತಿ ಸಂಗ್ರಹಿಸಿ, ಧಾರವಾಡಕ್ಕೆ ಪ್ರಯಾಣಿಸಲು ಟಿಕೆಟ್ ಬುಕ್ ಮಾಡಿದ್ದ ಆರೋಪಿ ಗಳನ್ನು ಉಡುಪಿ ನಗರದಲ್ಲಿ  ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

DAKSHINA KANNADA

ಸುರತ್ಕಲ್ : ವಿದ್ಯುತ್ ಕಂಬಕ್ಕೆ ಡಿಕ್ಕಿ; ಹೊಂಡಕ್ಕೆ ಕಾರು; ದಂಪತಿಗೆ ಗಾಯ

Published

on

ಸುರತ್ಕಲ್: ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ 5 ಅಡಿ ಆಳದ ಹೊಂಡಕ್ಕೆ ಬಿದ್ದು ದಂಪತಿ ಗಾಯಗೊಂಡಿರುವ ಘಟನೆ ಜೋಕಟ್ಟೆಯ ಕಳವಾರು ಎಂಬಲ್ಲಿ ನಿನ್ನೆ (ಫೆ.6) ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಕಾನ ಕಾಪ್ರಿಗುಡ್ಡ ನಿವಾಸಿ ರವಿ ಹಾಗೂ ಅವರ ಪತ್ನಿ ಗಾಯಳುಗಳು ಎಂದು ಗುರುತಿಸಲಾಗಿದೆ. ಅಪಘಾತದಿಂದ ದಂಪತಿಗೆ ಗಾಯಗಳಾಗಿದ್ದು, ಅವರನ್ನು ಕಾನದ ಆಸ್ಪತ್ರೆಗೆ ರವಾನಿಸಲಾಗಿದೆ.

ತಮ್ಮ ಪತ್ನಿಯೊಂದಿಗೆ ರವಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಜೋಕಟ್ಟೆ ಕಳವಾರು ಬಳಿ ಕಾರಿನ ಬ್ರೇಕ್ ಫೇಲ್ ಆಗಿದೆ.‌ ಕಾರನ್ನು ನಿಯಂತ್ರಣಕ್ಕೆ ತರಲೆಂದು ಯತ್ನಿಸಿದಾಗ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದರ ಪರಿಣಾಮ ಒಂದು ವಿದ್ಯುತ್ ಕಂಬ ನೆಲಕ್ಕೆ ಉರುಳಿದ್ದು, ಹೈಟೆನ್ಷನ್ ವಯರ್ ರಸ್ತೆಯಲ್ಲಿ ಬಿದ್ದಿದೆ.

 

ಇದನ್ನೂ ಓದಿ : ಮಂಗಳೂರು : ಸ್ನ್ಯಾಪ್‌ನಲ್ಲಿ ಅಶ್ಲೀಲ ವಿಡಿಯೋ ಸೆಂಡ್ ಮಾಡಿ ಬೆದರಿಕೆ ಹಾಕಿದವನ ವಿರುದ್ಧ ದೂರು ದಾಖಲು

 

ಅಪಘಾತದ ರಭಸಕ್ಕೆ ಕಾರು ಜೋಕಟ್ಟೆ ಬಜ್ಪೆ ರಸ್ತೆಯಿಂದ ಎಸ್‌.ಇ.ಆರ್‌.ಝೆಡ್ ರಸ್ತೆಗೆ ಉರುಳಿದೆ ಎನ್ನಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದಾರೆ.

Continue Reading

LATEST NEWS

ಮಂಗಳೂರು : ಸ್ನ್ಯಾಪ್‌ನಲ್ಲಿ ಅಶ್ಲೀಲ ವಿಡಿಯೋ ಸೆಂಡ್ ಮಾಡಿ ಬೆದರಿಕೆ ಹಾಕಿದವನ ವಿರುದ್ಧ ದೂರು ದಾಖಲು

Published

on

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸ್ನ್ಯಾಪ್‌ ಚಾಟ್‌ನಲ್ಲಿ ಅಶ್ಲೀಲ ವೀಡಿಯೋ ಕಳುಹಿಸಿ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟೀವ್ ಇರುವುದು ತಪ್ಪಲ್ಲ. ಆದರೆ ಮಿತಿಯಲ್ಲಿರಬೇಕು. ಇದೀಗ ದಾಖಲಾಗಿರುವ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯ ಕೈಗೆ ಮೊಬೈಲ್ ಕೊಟ್ಟದ್ದು ಹೆತ್ತವರ ತಪ್ಪೂ ಹೌದು. ಜೊತೆಗೆ ಮೊಬೈಲ್‌ನಲ್ಲಿ ಆಕೆ ಏನು ಮಾಡುತ್ತಿದ್ದಾಳೆ ಎನ್ನುವುದನ್ನೂ ಗಮನಿಸುತ್ತಿರಬೇಕು. ವಿಶೇಷವಾಗಿ ಬಾಲಕಿಯರನ್ನು ಸೋಶಿಯಲ್ ಮೀಡಿಯಾದಿಂದ ಆದಷ್ಟು ದೂರ ಇರುವಂತೆ ಎಚ್ಚರಿಕೆ ನೀಡಬೇಕು. ಏಕೆಂದರೆ ಮುಂದಿನ ಸವಾಲಿನ ಬಗ್ಗೆ ಅವರಿಗೆ ಅರಿವಿರುವುದಿಲ್ಲ. ಇದೀಗ ನಡೆದಿರುವ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿ ವಿಡಿಯೋ ನೋಡಿ ಹೆದರಿ ಬಳಿಕ ಹೆತ್ತವರ ಸಹಾಯದೊಂದಿಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

“ವ್ಯಕ್ತಿಯೋರ್ವ ತನ್ನ ಸ್ನ್ಯಾಪ್‌ಚಾಟ್ ಖಾತೆಗೆ ಆತನ ಸ್ನ್ಯಾಪ್‌ಚಾಟ್ ಖಾತೆಯಿಂದ ಅಶ್ಲೀಲತೆಯ ವೀಡಿಯೋ ಕಾಲ್‌ನ ಸ್ಟ್ರೀನ್ ರೆಕಾರ್ಡ್ ಮಾಡಿರುವ ವೀಡಿಯೋ ಫೈಲ್ ಸೆಂಡ್ ಮಾಡಿ ಬೆದರಿಕೆ ಹಾಕಿದ್ದಾನೆ” ಎಂದು ನ್ಯಾಷನಲ್ ಸೈಬ‌ರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್‌ಗೆ (ಎನ್‌ಸಿಸಿಆರ್‌ಪಿ) ದೂರು ನೀಡಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಮಂಗಳೂರಿನ ಓರ್ವ ಶಂಕಿತ ಸ್ನ್ಯಾಪ್‌ಚಾಟ್ ಖಾತೆದಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

ಈ ದೇಶದಲ್ಲಿ ಪ್ರೇಮಿಗಳ ದಿನದಂದು ಹುಡುಗಿಯರು ಹುಡುಗರಿಗೆ ಉಡುಗೊರೆಗಳನ್ನು ನೀಡುತ್ತಾರೆ !

Published

on

ಪ್ರಪಂಚದಾದ್ಯಂತ ಫೆಬ್ರವರಿ 14ರಂದು ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತದೆ. ಅನೇಕ ಜನರು ಈ ದಿನ ತಮ್ಮ ಪ್ರೀತಿಯ ಸಂದೇಶಗಳೊಂದಿಗೆ ಕಾರ್ಡ್‌ಗಳು, ಹೂವುಗಳು ಅಥವಾ ಚಾಕೊಲೇಟ್‌ಗಳನ್ನು ಕಳುಹಿಸುವ ಮೂಲಕ ಇನ್ನೊಬ್ಬರಿಗೆ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಆದರೆ ಈ ಒಂದು ದೇಶದಲ್ಲಿ ಹುಡುಗಿಯರು ಹುಡುಗರಿಗೆ ಉಡುಗೊರೆಗಳನ್ನು ನೀಡುತ್ತಾರೆ.

ವ್ಯಾಲೆಂಟೆನ್ಸ್ ಡೇ ಬಹಳ ಜನಪ್ರಿಯವಾದ ದಿನವಾಗಿದೆ. ಪ್ರೀತಿಪಾತ್ರರ ನಡುವೆ ಈ ದಿನದಂದು ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ. ಪ್ರೇಮಿಗಳ ದಿನದಂದು ಹೆಚ್ಚಾಗಿ ಹುಡುಗರು ಹುಡುಗಿಯರಿಗೆ ಗಿಫ್ಟ್‌ಗಳನ್ನು ಕೊಡುತ್ತಾರೆ. ಆದರೆ, ಜಪಾನ್ ದೇಶದಲ್ಲಿ ಹುಡುಗಿಯರು ಹುಡುಗರಿಗೆ ಉಡುಗೊರೆಗಳನ್ನು ನೀಡುತ್ತಾರೆ. ಇದರ ಬದಲಾಗಿ ಹುಡುಗರು ಹುಡುಗಿಯರು ಇಷ್ಟಪಡದ ವಸ್ತುಗಳನ್ನು ಹಿಂತಿರುಗಿಸಬೇಕು.

ಇದನ್ನೂ ಓದಿ: ಗೆಳತಿಗಾಗಿ ಕಳ್ಳನಾದ ಎಂಎಲ್ಎ ಮಗ !

ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 14ರಂದು ಅಲ್ಲಿನ ಜನರು ತಮ್ಮ ತಮ್ಮ ಪ್ರೀತಿಪಾತ್ರರ ಹೆಸರನ್ನು ಹೃದಯದ ಆಕಾರದಲ್ಲಿ ಭುಜದ ಮೇಲೆ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಇನ್ನು ಎಲ್ಲಾ ದೇಶಗಳಲ್ಲೂ ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸಿದರೆ, ಬ್ರೇಜಿಲ್‌ನಲ್ಲಿ ಜೂನ್ 12 ರಂದು ವ್ಯಾಲೆಂಟೆನ್ಸ್ ಡೇ ಆಚರಿಸುತ್ತಾರೆ. ಫಿಲಿಪೈನ್ಸ್ ದೇಶದಲ್ಲಿ ಸರ್ಕಾರದ ಆಶ್ರಯದಲ್ಲಿ ಸಾಮೂಹಿಕ ವಿವಾಹಗಳು ನಡೆಯುತ್ತವೆ.

Continue Reading
Advertisement

Trending

Copyright © 2025 Namma Kudla News

You cannot copy content of this page