Connect with us

LATEST NEWS

ಸಂಭಾವ್ಯ ದರೋಡೆ ಸಂಚನ್ನು ತಪ್ಪಿಸಿದ ಉಡುಪಿ ಪೊಲೀಸರು – ಮಾರಕಾಯುಧಗಳು, ಮಾದಕ ದ್ರವ್ಯ ಎಂಡಿಎಂಎ, ಗಾಂಜಾ ವಶಕ್ಕೆ..!

Published

on

ಉಡುಪಿ : ಗಾಂಜಾ ಮತ್ತು ಇತರ ಮಾದಕ ದ್ರವ್ಯಗಳನ್ನು ಸೇವಿಸಿ ದರೋಡೆಗೆ ಸಂಚು ರೂಪಿಸಿದ್ದ ನಾಲ್ಕು ಮಂದಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಅವರಿಂದ ಮಚ್ಚು, ಚೂರಿ, ಕಬ್ಬಿಣದ ಸುತ್ತಿಗೆ, ಮರದ ಸೋಂಟೆ, 5 ಮೊಬೈಲ್‌ ಫೋನ್‌ ಸೆಟ್‌, 25,000 ರೂಪಾಯಿ ಮೌಲ್ಯದ 6 ಗ್ರಾಂ ಎಂಡಿಎಂಎ ಮತ್ತು 110 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ.

ಕಾಪು ತಾಲೂಕು ಮಲ್ಲಾರು ಗ್ರಾಮದ ಕೋಟೆ ರಸ್ತೆಯ ನಿವಾಸಿ 27 ವರ್ಷ ಪ್ರಾಯದ ಮುಝಾಮಿಲ್‌, ಉದ್ಯಾವರ ಸಂಪಿಗೆ ನಗರದ 25 ವರ್ಷ ಪ್ರಾಯದ ಮೊಹಮ್ಮದ್‌ ಅನಾಸ್‌ ಸಾಹೇಬ್‌, ಶಿವಳ್ಳಿ ವಿ.ಪಿ. ನಗರದ 26 ವರ್ಷ ಪ್ರಾಯದ ಮಹಮ್ಮದ್‌ ರಫೀಕ್‌ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಬಾರೆಕಾಡು ನಿವಾಸಿ 18 ವರ್ಷ ಪ್ರಾಯದ ನಿಹಾಲ್‌ ಬಂಧಿತ ಅರೋಪಿಗಳು.

ಈ ಆರೋಪಿಗಳು ಉಡುಪಿಯ ಮಣಿಪಾಲದ ವಿ.ಪಿ. ನಗರದ ಮನೆಯೊಂದರಲ್ಲಿ ಗಾಂಜಾ ಮತ್ತು ಮಾದಕ ದ್ರವ್ಯಗಳನ್ನು ಮನೆಯಲ್ಲಿ ಇರಿಸಿಕೊಂಡು ಅದನ್ನು ಸೇವಿಸಿ ಮಾರಕಾಯುಧಗಳೊಂದಿಗೆ ದರೋಡೆಗೆ ಸಂಚು ರೂಪಿಸಿದ್ದಾರೆ ಎನ್ನುವ ಖಚಿತ ಮಾಹಿತಿ ಲಭಿಸಿದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಸಂಭಾವ್ಯ ದರೋಡೆ ಕೃತ್ಯವನ್ನು ತಪ್ಪಿಸಿದ್ದಾರೆ.

ಉಡುಪಿ ಜಿಲ್ಲಾ ಎಸ್ಪಿ ಅಕ್ಷಯ್‌ ಮಚೀಂದ್ರ ಹಾಕೆ ಅವರ ಮಾರ್ಗದರ್ಶನದಲ್ಲಿ ಅಡೀಶನಲ್‌ ಎಸ್ಪಿ ಸಿದ್ಧಲಿಂಗಪ್ಪ ಟಿ. ಅವರು ತಮ್ಮ ತಂಡದ ಸದಸ್ಯರಾದ ಡಿವೈಎಸ್ಪಿ ದಿನಕರ ಕೆ.ಪಿ., ಮಣಿಪಾಲ ಪೊಲೀಸ್‌ ನಿರೀಕ್ಷಕ ದೇವರಾಜ ಟಿ.ವಿ. ಮತ್ತು ಇತರರು ಈ ಕಾರ್ಯಾಚರಣೆ ನಡೆಸಿದರು.

LATEST NEWS

ಉಡುಪಿ ಪರ್ಯಾಯ ಸಂಭ್ರಮ : ಶ್ರೀ ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

Published

on

ಉಡುಪಿ : ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಇಂದು (ಜ.18) ಮುಂಜಾನೆ ಸರ್ವಜ್ಞ ಪೀಠವೇರಿದರು. ಈ ಸಂಭ್ರಮಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು.

ಶ್ರೀವೇದವರ್ಧನ ತೀರ್ಥ ಶ್ರೀಪಾದರು ಪ್ರಾತಃ ಕಾಲ 1.15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿದರು. ಪ್ರಾತಃ ಕಾಲ 2ಕ್ಕೆ ಜೋಡುಕಟ್ಟೆಯಿಂದ ವೈಭವದ ಪರ್ಯಾಯ ಮೆರವಣಿಗೆ ಪ್ರಾರಂಭವಾಯಿತು. ಬೆಳಗ್ಗೆ 5.15 ಕ್ಕೆ ಕನಕನ ಕಿಂಡಿಯಲ್ಲಿ ಶ್ರೀಕೃಷ್ಣ ದರ್ಶನ ಮಾಡಿ ಬಳಿಕ ಶ್ರೀ ಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ ದರ್ಶನ ಮಾಡಿದರು.

ಅದ್ದೂರಿ ಪರ್ಯಾಯ ಮುಗಿಸಿದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬೆಳಗ್ಗೆ 5:45ಕ್ಕೆ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಶ್ರೀ ಸರ್ವಜ್ಞ ಪೀಠಾರೋಹಣದಲ್ಲಿ ಕುಳ್ಳಿರಿಸಿದರು. ಶ್ರೀ ವೇದವರ್ಧನ ತೀರ್ಥರು ತಾಯಿಯ ಪಾದಕ್ಕೆ ನಮಿಸಿ ಸರ್ವಜ್ಞ ಪೀಠ ಏರಿದರು.

ಇದನ್ನೂ ಓದಿ : ಮಂಗಳೂರಿಗೆ ಮೊದಲ ‘ಅಮೃತ್ ಭಾರತ್ ಎಕ್ಸ್ ಪ್ರೆಸ್’ ರೈಲು; ಎಲ್ಲಿಂದ ಎಲ್ಲಿಗೆ?

ಬೆಳಗ್ಗೆ 5:55ಕ್ಕೆ ಬಡಗು ಮಾಳಿಗೆಯ ಅರಳು ಗದ್ದುಗೆಯಲ್ಲಿ ಸಾಂಪ್ರ ದಾಯಿಕ ದರ್ಬಾರ್‌ ಹಾಗೂ ಅಷ್ಟ ಮಠಾಧೀಶರಿಗೆ ಮಾಲಿಕೆ ಮಂಗಳಾರತಿ ನಡೆಯಿತು. ಬೆಳಗ್ಗೆ 6.15ಕ್ಕೆ ರಾಜಾಂಗಣದಲ್ಲಿ ಪರ್ಯಾಯ ದರ್ಬಾರ್ ಆರಂಭವಾಯಿತು. ಧಾರ್ಮಿಕ ಮುಖಂಡರು, ಮಠದ ಯತಿಗಳು, ಜನಪ್ರತಿನಿಧಿಗಳು ಭಾಗಿಯಾಗಿದ್ದರು.

Continue Reading

bangalore

ಚಲಿಸುತ್ತಿದ್ದ ಕಾರು ಅಗ್ನಿಗಾಹುತಿ; ಪ್ರಾಣಾಪಾಯದಿಂದ ಪಾರಾದ ಚಾಲಕ

Published

on

ಬೆಂಗಳೂರು: ಚಲಿಸುತ್ತಿದ್ದ ಕಾರಿಗೆ ರಸ್ತೆಮಧ್ಯೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಯಶವಂತಪುರ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸುಮಾರು 7 ಗಂಟೆಗೆ ನಡೆದಿದೆ.


ಯಶವಂತಪುರದಿಂದ ಮಲ್ಲೇಶ್ವರಂ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನ ಇಂಜಿನ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್‌, ಚಾಲಕ ತಕ್ಷಣ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ- ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಕಾರಿಗೆ ಬೆಂಕಿ ಹೊತ್ತಿಕೊಂಡ ಕಾರಣ ತಿಳಿದುಬಂದಿಲ್ಲ.

Continue Reading

LATEST NEWS

ದಿನ ಭವಿಷ್ಯ 18-01-2026: ಇಂದು ಈ ರಾಶಿಯವರ ಆದಾಯದ ಮೂಲ ಹೆಚ್ಚಾಗಲಿದೆ!

Published

on

2026 ಜನವರಿ 18ರ ಭಾನುವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

ಮೇಷ ರಾಶಿ: ಉಡುಗೋರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ‌ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಬದಲಾಣೆಗೆ ನೀವು ತೆರೆದುಕೊಳ್ಳಬೇಕಾದೀತು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು.

ವೃಷಭ ರಾಶಿ: ಕೆಲಸಕ್ಕೆ ಸಂಬಂಧಿಸಿದಂತೆ ನೀವು ಕುಟುಂಬದಿಂದ ದೂರ ಉಳಿಯಬೇಕಾದ ಸಂದರ್ಭ ಬರಬಹುದು. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ಒಗ್ಗಟ್ಟಿನ ಕೆಲಸದಲ್ಲಿ ಜಯವಿರಲಿದೆ. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ. ಎಂದೋ ಕಳೆದುಕೊಂಡ ವಸ್ತುವು ಇಂದು ಪ್ರಾಪ್ತವಾಗುವುದು. ಹಣದ ಅಭಾವವಿದ್ದರೂ ಖರ್ಚನ್ನು‌ ಮಾಡಬೇಕಾದ ಸ್ಥಿತಿಯು ಬರಬಹುದು. ಮನೆಯಿಂದ ದೂರವಿದ್ದು ಬೇಸರವಾಗಲಿದೆ. ಭವಿಷ್ಯದ ಬಗ್ಗೆ ಗಂಭೀರವಾದ ಚಿಂತನೆ ಮಾಡುವಿರಿ.

ಮಿಥುನ ರಾಶಿ: ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸ್ವಲ್ಪ ದುರ್ಬಲವಾದ ದಿನ. ಹಳೆಯ ಕಾಯಿಲೆಗಳು ಮತ್ತೆ ಕಾಣಿಸಿಕೊಂಡು ನಿಮ್ಮ ಆತಂಕವನ್ನು ಹೆಚ್ಚಿಸಬಹುದು, ಆದ್ದರಿಂದ ನಿರ್ಲಕ್ಷ್ಯ ಬೇಡ. ಖರ್ಚು ವೆಚ್ಚಗಳ ಮೇಲೆ ನಿಯಂತ್ರಣವಿರಲಿ. ಸಾಮಾಜಿಕ ಕೆಲಸಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ ಮತ್ತು ಹೊಸತನ್ನು ಸಾಧಿಸಬೇಕೆಂಬ ನಿಮ್ಮ ಹಂಬಲ ಇಂದು ಫಲ ನೀಡಲಿದೆ. ಬಹಳ ದಿನಗಳ ನಂತರ ಹಳೆಯ ಸ್ನೇಹಿತನನ್ನು ಭೇಟಿಯಾಗುವಿರಿ. ವ್ಯಾಪಾರಸ್ಥರಿಗೆ ಲಾಭದಾಯಕವಾದ ಹೊಸ ಒಪ್ಪಂದಗಳು ಸಿಗುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ: ಇಂದು ಕರ್ಕಾಟಕ ರಾಶಿಯವರಿಗೆ ಸ್ವಲ್ಪ ಒತ್ತಡವನ್ನುಂಟುಮಾಡಬಹುದು. ನೀವು ಮಾನಸಿಕ ಒತ್ತಡ ಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು. ಆದರೂ ನೀವು ವ್ಯಾಪಾರ ಅಥವಾ ಷೇರು ಮಾರುಕಟ್ಟೆಯಲ್ಲಿ ಗಣನೀಯ ಯಶಸ್ಸನ್ನು ಅನುಭವಿಸುವಿರಿ. ನಿಮ್ಮ ಆತ್ಮವಿಶ್ವಾಸವೂ ಹೆಚ್ಚಾಗುತ್ತದೆ. ದಿನದ ಅಂತ್ಯದ ವೇಳೆಗೆ, ಒಂದು ಪ್ರಮುಖ ವ್ಯವಹಾರ ಒಪ್ಪಂದವು ಅಂತಿಮಗೊಳ್ಳಬಹುದು.ಸ್ನೇಹವು ಪ್ರೀತಿಯಾಗಿ ಬದಲಾಗಬಹುದು. ಮಕ್ಕಳೊಂದಿಗೆ ಆಶೀರ್ವದಿಸಲ್ಪಡಬಹುದು. ಇಂದು ನೀವು ಶಿವನನ್ನು ಪೂಜಿಸಿದರೆ ತುಂಬಾ ಒಳಿತು.

ಸಿಂಹ ರಾಶಿ: ಯಾವುದೇ ಕೆಲಸದಲ್ಲಿ ಅನಗತ್ಯ ರಿಸ್ಕ್ ತೆಗೆದುಕೊಳ್ಳುವುದು ಬೇಡ. ತಂದೆಯವರು ನೀಡುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಪೂರೈಸಿ, ಇಲ್ಲದಿದ್ದರೆ ಅವರ ಕೆಂಗಣ್ಣಿಗೆ ಗುರಿಯಾಗಬೇಕಾದೀತು. ಇಂದು ಸಮಾಜದ ಗಣ್ಯ ವ್ಯಕ್ತಿಗಳ ಭೇಟಿಯಾಗುವ ಸಂಭವವಿದೆ. ಮನೆಗೆ ಅತಿಥಿಗಳು ಆಗಮಿಸುವುದರಿಂದ ಅತಿಥಿ ಸತ್ಕಾರದಲ್ಲಿ ನೀವು ಇಂದು ಹೆಚ್ಚು ಕಾರ್ಯನಿರತರಾಗಿರುತ್ತೀರಿ. ಇಂದು ನಿಮ್ಮ ಮ್ಮ‌ ಬಳಿ ಸಾಮಾಜಿಕ ಕಳಕಳಿಯಿರುವ ಜನರು ಬರುವರು. ಇನ್ನು ಬಾರದು ಎಂದುಕೊಂಡ ಹಣವು ಇಂದು ನಿಮ್ಮ ಕೈ ಸೇರುವುದು. ಕರ್ತವ್ಯದತ್ತ ನಿಮ್ಮ ಗಮನಹರಿಸುವಿರಿ.

ಕನ್ಯಾ ರಾಶಿ: ಇಂದು ನಿಮ್ಮ ಆದಾಯದ ಮೂಲ ಹೆಚ್ಚಾಗಲಿದೆ. ತಂದೆ ಮತ್ತು ಮಕ್ಕಳ ನಡುವೆ ಪ್ರೀತಿ ಇರುತ್ತದೆ. ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ಹೂಡಿಕೆಯನ್ನು ಬೇರೆಯವರ ಹೆಸರಿನಲ್ಲಿ ಮಾಡುವಿರಿ. ನಿಮ್ಮ ಕಾಳಜಿಯನ್ನು ವಹಿಸಿಕೊಂಡವರಿಗೆ ಬೇಸರ ಮಾಡದಂತೆ ನಿಮ್ಮನ್ನು ತೋರಿಸಿಕೊಳ್ಳಿ. ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ.

ತುಲಾ ರಾಶಿ: ಇಂದು ತುಲಾ ರಾಶಿಯವರಿಗೆ ಶುಭವಾಗಿರುತ್ತದೆ. ವಿಶೇಷವಾಗಿ ವ್ಯವಹಾರ ಮತ್ತು ವೃತ್ತಿಜೀವನದಲ್ಲಿ, ನೀವು ಗಮನಾರ್ಹ ಲಾಭಗಳನ್ನು ನೋಡುತ್ತೀರಿ. ನಿಮ್ಮ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುತ್ತದೆ. ಇಂದು ನೀವು ಸಣ್ಣ ಪ್ರವಾಸಗಳಿಗೆ ಹೋಗಬಹುದು. ಇವುಗಳು ಸಾಕಷ್ಟು ಆನಂದದಾಯಕ ಪ್ರವಾಸಗಳಾಗುತ್ತವೆ. ನೀವು ಹೊಸ ಜನರ ಸಂಪರ್ಕಕ್ಕೂ ಬರುತ್ತೀರಿ. ಪ್ರೀತಿಪಾತ್ರರು ಮನೆಗೆ ಬರುತ್ತಾರೆ. ನಿಮ್ಮ ಪ್ರೇಮ ಜೀವನವು ಉತ್ತಮವಾಗಿರಲಿದೆ. ವೈವಾಹಿಕ ಜೀವನವು ಸಂತೋಷವಾಗಿರುತ್ತದೆ.

ವೃಶ್ಚಿಕ ರಾಶಿ: ಇಂದು ನಿಮಗೆ ಸಕಾರಾತ್ಮಕ ಫಲಿತಾಂಶಗಳು ಲಭಿಸಲಿವೆ. ಕುಟುಂಬದ ಸಣ್ಣಪುಟ್ಟ ಕಲಹಗಳು ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚಿಸಬಹುದು. ಮಕ್ಕಳ ಉದ್ಯೋಗದ ನಿಮಿತ್ತ ದೂರದ ಪ್ರಯಾಣ ಬೆಳೆಯುವ ಸಾಧ್ಯತೆ ಇದೆ. ರುಚಿಕರವಾದ ಭೋಜನವನ್ನು ಸವಿಯುವಿರಿ, ಆದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು, ಎಚ್ಚರವಿರಲಿ. ವಿದ್ಯಾರ್ಥಿಗಳು ಮಾನಸಿಕ ಹೊರೆಯಿಂದ ಮುಕ್ತಿ ಪಡೆಯಲಿದ್ದಾರೆ. ಹಳೆಯ ಸ್ನೇಹಿತರ ಭೇಟಿಯಿಂದ ಮನಸ್ಸು ಪ್ರಫುಲ್ಲವಾಗಲಿದೆ.

ಧನು ರಾಶಿ: ಇಂದು ಧನು ರಾಶಿಯವರಿಗೆ ಏರಿಳಿತದ ಅವಧಿಯಾಗಿರುತ್ತದೆ. ಆರಂಭದಲ್ಲಿ ವೆಚ್ಚಗಳು ಹೆಚ್ಚಾಗುತ್ತವೆ. ವೃತ್ತಿ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ನಿಮಗೆ ಎದುರಾಗಬಹುದು. ಕೆಲಸದಲ್ಲಿ ನಿಮ್ಮ ಕಿರಿಯರು ಮತ್ತು ಹಿರಿಯರೊಂದಿಗೆ ಸಮನ್ವಯವನ್ನು ಕಾಯ್ದುಕೊಳ್ಳುವುದು ಬುದ್ಧಿವಂತ. ಹೂಡಿಕೆ ಮಾಡುವುದನ್ನು ತಪ್ಪಿಸಿ. ಪ್ರೀತಿಪಾತ್ರರೊಂದಿಗೆ ವಾದಗಳ ಸಾಧ್ಯತೆ ಇದೆ. ನೀವು ತುಂಬಾ ಕಾರ್ಯನಿರತರಾಗಿರುತ್ತೀರಿ, ನಿಮ್ಮ ಕುಟುಂಬದ ಮೇಲೆ ಗಮನ ಹರಿಸಲು ನಿಮಗೆ ಸಾಧ್ಯವಾಗುವುದಿಲ್ಲ.

ಮಕರ ರಾಶಿ: ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ. ಬುದ್ಧಿವಂತಿಕೆಗೆ ಸಂಬಂಧಿಸಿದ ಕಾರ್ಯಗಳಿಂದ ಆದಾಯ ಹೆಚ್ಚಾಗುತ್ತದೆ. ನೀವು ಸ್ನೇಹಿತರಿಂದ ಬೆಂಬಲ ಪಡೆಯಬಹುದು. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ‌. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಸಂಬಂಧದಲ್ಲಿ ಒಡಕು ಬರಬಹುದು.‌ ವ್ಯವಹಾರವು ಸರಿಯಾಗಿ ಇರಲಿ. ಅತಿಯಾದ ಕೋಪದಿಂದ ಎಲ್ಲ ಕೆಲಸವನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ಆಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ಅಧಿಕಾರಿಯ ವಿಶ್ವಾಸವನ್ನು ಪಡೆದು ಹೆಚ್ಚಿನ ಸ್ಥಾನ ಪಡೆಯುವಿರಿ.

ಕುಂಭ ರಾಶಿ: ಇಂದು ನಿಮಗೆ ಮಧ್ಯಮ ಫಲಗಳ ದಿನ. ದೂರದ ಪ್ರಯಾಣದ ಯೋಜನೆ ಹಾಕಿಕೊಳ್ಳುವಿರಿ. ಸಂಗಾತಿಯ ಭಾವನೆಗಳಿಗೆ ಬೆಲೆ ಕೊಡಿ ಮತ್ತು ಮಾತನಾಡುವಾಗ ಸಂಯಮವಿರಲಿ. ನಿಮ್ಮಲ್ಲಿ ಇಂದು ಹೆಚ್ಚಿನ ಶಕ್ತಿ ಮತ್ತು ಉತ್ಸಾಹವಿರಲಿದ್ದು, ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿವೆ. ಇತರರ ವೈಯಕ್ತಿಕ ವಿಷಯಗಳಲ್ಲಿ ಮಧ್ಯಪ್ರವೇಶ ಮಾಡುವುದರಿಂದ ನಿಮಗೆ ಸಮಸ್ಯೆ ಎದುರಾಗಬಹುದು. ರಾಜಕೀಯ ಆಕಾಂಕ್ಷಿಗಳು ಇಂದು ಎಚ್ಚರಿಕೆಯಿಂದ ಹೆಜ್ಜೆ ಇಡುವುದು ಉತ್ತಮ. ನಿಮ್ಮ ಆರೋಗ್ಯವು ಸಾಮಾನ್ಯವಾಗಿರುತ್ತದೆ. ನೀವು ಸಂಪೂರ್ಣ ಕುಟುಂಬ ಬೆಂಬಲವನ್ನು ಪಡೆಯುತ್ತೀರಿ. ನೀವು ನಿಮ್ಮ ಸಂಗಾತಿಯೊಂದಿಗೆ ಪ್ರವಾಸಕ್ಕೆ ಹೋಗಬಹುದು.

ಮೀನ ರಾಶಿ: ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಲಿದೆ. ಆದರೆ ಕೆಲಸದ ಸ್ಥಳದಲ್ಲಿ ಬದಲಾವಣೆಯಾಗಬಹುದು. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಆಸ್ತಿಯನ್ನು ಖರೀದಿಸುವ ಕುರಿತು ಮನೆಯಲ್ಲಿ ಚರ್ಚೆಗಳು ನಡೆಯುವುದು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು. ಹೇಳಲಾಗದ ಮರೆಯಲಾಗದ ಸ್ಥಿತಿ ಇರಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page