Connect with us

BELTHANGADY

ಉಜಿರೆ-ಧರ್ಮಸ್ಥಳ ರಸ್ತೆ ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ

Published

on

ಬೆಳ್ತಂಗಡಿ : ಶಿರಾಡಿ ರಸ್ತೆಯಾಗಿ ಪೆರಿಯ ಶಾಂತಿಯಿಂದ ಕೊಕ್ಕಡ ಮೂಲಕ ಧರ್ಮಸ್ಥಳವನ್ನು ಸೇರುವ ಹಾಗೂ ಚಾರ್ಮಾಡಿ ಮಾರ್ಗವಾಗಿ ಬಂದು ಉಜಿರೆಯಿಂದ ಧರ್ಮಸ್ಥಳಕ್ಕೆ ಸಾಗುವ ರಸ್ತೆಯು ಶೀಘ್ರ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲಿದೆ.


ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಕಳೆದ ಬಾರಿ ಧರ್ಮಸ್ಥಳ ನೇತ್ರಾವತಿ ವರೆಗಿನ ಚತುಷ್ಪಥ ರಸ್ತೆ ಉದ್ಘಾಟನೆ ವೇಳೆ ಉಜಿರೆ-ಪೆರಿಯಶಾಂತಿ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಅಗತ್ಯದ ಬಗ್ಗೆ ಪ್ರಸ್ತಾವವನ್ನು ಸರಕಾರದ ಮುಂದಿಟ್ಟಿದ್ದರು.

ಇದೀಗ ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯನ್ನು ಸಂಪರ್ಕಿಸುವ ಉಜಿರೆಯಿಂದ ಪೆರಿಯಶಾಂತಿ ವರೆಗಿನ 30 ಕಿ.ಮೀ. ವ್ಯಾಪ್ತಿಯನ್ನು ರಾ.ಹೆ.-73ರ ಸ್ಪರ್‌ ರಸ್ತೆಯಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ.

ರಸ್ತೆಯನ್ನು ರಾಜ್ಯ ಹೆದ್ದಾರಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.

ಈ ಬಗ್ಗೆ ಮಾತನಾಡಿರುವ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮಹಾಬಲ ನಾಯ್ಕ ‘ಐತಿಹಾಸಿಕ ಕ್ಷೇತ್ರಗಳನ್ನು ಸಂಪರ್ಕಿಸುವ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ, ಒಂದು ರಾಷ್ಟ್ರೀಯ ಹೆದ್ದಾರಿಯಿಂದ ಇನ್ನೊಂದು ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಅಥವಾ ಒಂದು ಪ್ರಮುಖ ರಸ್ತೆಯಿಂದ ಇನ್ನೊಂದು ಪ್ರಮುಖ ರಸ್ತೆಗೆ ಸಂಪರ್ಕಿಸುವ, ಒಳದಾರಿಗಳು ಅಥವಾ ಸಮೀಪದ ದಾರಿಗಳನ್ನು ಮೇಲ್ದರ್ಜೆ ಗೇರಿಸಿಕೊಂಡು ಅವುಗಳಿಗೆ ಸಮರ್ಪಕವಾದ ಅನುದಾನ ಒದಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಮಾದರಿಯ ರಸ್ತೆಯಂತೆ ಸುಸಜ್ಜಿತವಾಗಿ ನಿರ್ಮಾಣ ಮಾಡುವುದು ಈ ಸ್ಪರ್‌ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಇತಿಹಾಸ ಪ್ರಸಿದ್ಧ ದೇವಾಲಯಗಳು, ತೀರ್ಥ ಕ್ಷೇತ್ರಗಳನ್ನು ಸಂಪರ್ಕಿಸುವ ರಸ್ತೆಗಳಿಗೆ ಈಗಾಗಲೇ ರಾಜ್ಯದ ಹಲವೆಡೆ ಈ ರೀತಿಯ ಯೋಜನೆಯನ್ನು ಅನ್ವಯಿಸಲಾಗಿದೆ.

ಉಜಿರೆಯಿಂದ ಧರ್ಮಸ್ಥಳ ವರೆಗೆ ಚತುಷ್ಪಥದ ಬೇಡಿಕೆಯಿದ್ದು, ಧರ್ಮಸ್ಥಳ – ನಿಡ್ಲೆ – ಕೊಕ್ಕಡ ಮಾರ್ಗವಾಗಿ ಪೆರಿಯಶಾಂತಿ ವರೆಗೆ 10 ಮೀಟರ್‌ ಅಗಲದ ರಸ್ತೆ ನಿರ್ಮಾಣ ಸಾಧ್ಯತೆಯಿದೆ.

ಪ್ರಸ್ತುತ ಲೋಕೋಪ‌ಯೋಗಿ ಇಲಾಖೆಯ ಅಧೀನದಲ್ಲಿರುವ ಈ ರಸ್ತೆಯು ಧರ್ಮಸ್ಥಳದಿಂದ ಪೆರಿಯ ಶಾಂತಿ ವರೆಗಿನ ದುರಸ್ತಿ ಕಾರ್ಯಕ್ಕೆ ಪ್ರಸಕ್ತ ವರ್ಷದಲ್ಲಿ ಅನುದಾನ ದೊರೆತಿದ್ದು ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಮುಂದಿನ ದಿನಗಳಲ್ಲಿ ಧರ್ಮಸ್ಥಳ – ಸುಬ್ರಹ್ಮಣ್ಯ – ಮಂಗಳೂರು – ಬೆಂಗಳೂರು – ಉಡುಪಿ – ಸೋಲಾಪುರ ಪ್ರದೇಶಕ್ಕೆ ತೆರಳುವ ಪ್ರಯಾಣಿಕರಿಗೆ ಈ ರಸ್ತೆ ವಿಸ್ತರಣೆಯಿಂದ ಅನುಕೂಲವಾಗಲಿದೆ.

ಉಜಿರೆ – ಧರ್ಮಸ್ಥಳ ಚತುಷ್ಪಥ
ಧರ್ಮಸ್ಥಳ ಕ್ಷೇತ್ರದ ಭಕ್ತರ ಅನುಕೂಲ ಹಾಗೂ ಸ್ಥಳೀಯ ಜನರ ಅಗತ್ಯ ಮನಗಂಡು ಈಗಿರುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಗಿದೆ.

ಉಜಿರೆಯಿಂದ ಧರ್ಮಸ್ಥಳವರೆಗೆ ಚತುಷ್ಪಥ ನಿರ್ಮಾಣವಾಗಲಿದ್ದು ಉಳಿದಂತೆ ದ್ವಿಪಥವಾಗಿ ಅಭಿವೃದ್ಧಿಯಾಗಲಿದೆ ಎಂದು ಶಾಸಕ ಹರೀಶ್‌ ಪೂಂಜ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 73ನ್ನು ಸಂಪಕಿಸುವ ಉಜಿರೆ- ಪೆರಿಯಶಾಂತಿ ರಸ್ತೆ ಐತಿಹಾಸಿಕ ಸ್ಥಳಗಳನ್ನು ಸಂಪರ್ಕಿಸುವ ಸ್ಪರ್‌ ಯೋಜನೆಯಲ್ಲಿ ಮೇಲ್ದರ್ಜೆಗೆ ಏರಿಸುವ ಕುರಿತು ಅಧಿಕೃತ ಆದೇಶ ಬಿಡುಗಡೆಯಾಗಿ ನೋಟಿಫಿಕೇಶನ್‌ ಹಂತದಲ್ಲಿದೆ.

Advertisement
Click to comment

Leave a Reply

Your email address will not be published. Required fields are marked *

BELTHANGADY

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಚಾರ್ಮಾಡಿಯ ನಿವಾಸಿ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. 1990 ರಲ್ಲಿ ಈತನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. 1992 ರಲ್ಲಿ ಇದನ್ನು ಎಲ್‌ಪಿಸಿ ಪ್ರಕರಣ ಎಂಬುದಾಗಿ ಪರಿಗಣಿಸಲಾಗಿತ್ತು. ಈತನ ಪತ್ತೆ ಹಚ್ಚುವ ಬಗ್ಗೆ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ: ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿ*ಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ಇದೀಗ ಆರೋಪಿ ರವೀಂದ್ರನನ್ನು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ಪೊಲೀಸರು ದಸ್ತಗಿರಿ ಮಾಡಿ ಜನವರಿ 6 ರಂದು ಮಂಗಳವಾರ ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BELTHANGADY

ಬೆಳ್ತಂಗಡಿ: ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ

Published

on

ಬೆಳ್ತಂಗಡಿ: ತಾಲೂಕಿನ ಕುದ್ರಾಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.


ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಡಿಕ್ಕಿ ಆಗಿದ್ದು, ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ.

ಇದನ್ನೂ ಓದಿ: ಬಸ್ ಹತ್ತುವ ವೇಳೆ ದುರಂ*ತ; ಆಯತಪ್ಪಿ ಕೆಳಗೆ ಬಿದ್ದು ಬಾಲಕಿ ಸಾ*ವು

ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.

Continue Reading

BELTHANGADY

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರ ಡಿ*ಕ್ಕಿಯಾಗಿ ವಯೋವೃದ್ಧ ಸಾ*ವು

Published

on

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ.


ಮೃತರನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಹಂಝಾ (72) ಎಂದು ಗುರುತಿಸಲಾಗಿದೆ. ಇವರು ಪತ್ನಿ, ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಹಂಝಾ ಅವರು ಸೌದೆ ಕಡಿಯುವ ಕೆಲಸಕ್ಕೆಂದು ಮದ್ದಡ್ಕಕ್ಕೆ ಹೋಗಿದ್ದರು. ಅವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಚಾಲಕ ಬಿಹಾರಿ ರೈ ಎಂಬಾತ ಯಂತ್ರವನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಹಿಂದಕ್ಕೆ ತೆಗೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಹಂಝಾ ಅವರನ್ನು ತಕ್ಷಣವೇ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುತ್ತೂರು : ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕ ಆ*ತ್ಮಹ*ತ್ಯೆ

ಹಂಝಾ ಅವರದ್ದು ಬಡ ಕುಟುಂಬವಾಗಿದ್ದು, ತಮ್ಮ ವೃದ್ಧಾಪ್ಯದಲ್ಲೂ ಸೌದೆ ಕಡಿಯುವ ಕೆಲಸಕ್ಕೆ ಹೋಗುತ್ತಿದ್ದರು. ಅವರ ಕುಟುಂಬ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page