Connect with us

DAKSHINA KANNADA

ಉಳ್ಳಾಲದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ನಾಲ್ವರು ನೊಂದ ಯುವತಿಯರ ರಕ್ಷಣೆ..!

Published

on

ಉಳ್ಳಾಲ: ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು, ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ.


ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50)ಬಂಧಿತ ಆರೋಪಿ.
ರುಕಿಯಾ ವಿಜೇತ ನಗರದ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನಿಟ್ಟು ವೇಶ್ಯಾ ವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್,ಉಪ‌ನಿರೀಕ್ಷಕರಾದ ಮಂಜುಳಾ.ಎಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ಅಡ್ಡೆಗೆ ದಾಳಿ ನಡೆಸಿದ್ದಾರೆ.

ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ನೊಂದ ಯುವತಿಯರನ್ನ ರಕ್ಷಿಸಿದ್ದಾರೆ. ಪ್ರಮುಖ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ.

ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು,9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂಪಾಯಿ ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಎನ್, ದಾಕ್ಷಾಯಿಣಿ,ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ದ್ವೇಷ ಭಾಷಣ ಆರೋಪ; ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ದ ಎಫ್‌ಐಆರ್‌

Published

on

ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಹಾಗೂ ಆ ಭಾಷಣವನ್ನು ಪ್ರಸಾರ ಮಾಡಿದ ವಾಹಿನಿಯೊಂದರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕೋಮು ದ್ವೇಷ ಹಾಗೂ ಹಿಂಸೆಗೆ ಪ್ರಚೋದನೆಯಾಗುವ ರೀತಿಯಲ್ಲಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತು ಭಾಷಣವನ್ನು ಪ್ರಸಾರ ಮಾಡಿದ ವಾಹಿನಿ ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಂದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

DAKSHINA KANNADA

ನಾಳೆ(ಜ.21) ಕದ್ರಿ ಮ್ಯೂಸಿಕಲ್ ನೈಟ್ಸ್ 2026 : ರಿಷಬ್ ಶೆಟ್ಟಿ ಭಾಗಿ

Published

on

ಮಂಗಳೂರು : ಕದ್ರಿ ಶ್ರೀಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ  ಪ್ರಯುಕ್ತ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಕದ್ರಿ ಈವೆಂಟ್ಸ್ ಅರ್ಪಿಸುವ  ‘ಕದ್ರಿ ಮ್ಯೂಸಿಕಲ್ ನೈಟ್ಸ್ 2026’ ನಾಳೆ(ಜ.21) ಸಂಜೆ 7 ಗಂಟೆಯಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದೆ.

ಎಂದಿನಂತೆ ಈ ಬಾರಿಯೂ ತಾರಾ ಮೆರುಗು ಇರಲಿದ್ದು, ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಆಗಮಿಸಲಿದ್ದಾರೆ.

ಆಯೋಜಕ ಜಗದೀಶ್ ಕದ್ರಿ ಈ ಬಗ್ಗೆ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಕದ್ರಿ ಮ್ಯೂಸಿಕಲ್ ನೈಟ್ ಆಯೋಜನೆ ಮಾಡಿದ್ದೇವೆ. ಸಿನಿಮಾ ಸೆಲೆಬ್ರಿಟಿಗಳು, ಗಣ್ಯರು ಸೇರಿದಂತೆ ಹೆಸರಾಂತ ಗಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ : BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

ಕನ್ನಡ, ತುಳು ಚಿತ್ರರಂಗದ ಕಲಾವಿದರಾದ ರೂಪೇಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರ್ಜುನ್ ಕಾಪಿಕಾಡ್, ಶನಿಲ್ ಗುರು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ದೀಪಕ್ ರೈ ಪಾಣಾಜೆ, ವಿಜೆ ವಿನೀತ್, ಸಮತಾ ಅಮೀನ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Continue Reading

DAKSHINA KANNADA

ಮಂಗಳೂರು: ಡ್ರಗ್ಸ್‌ ನಿರ್ಮೂಲನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಬಸ್ಸು ಮಾಲಕರ ಸಂಘ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಾಗಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ ಬಸ್ಸು ಮಾಲಕರ ಸಂಘವೂ ಕೈಜೋಡಿಸಿ ಡ್ರಗ್ ನಿರ್ಮೂಲನೆ ಮಾಡಲು ಬೀದಿ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದು ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡ್ರಗ್ ಜಾಲಕ್ಕೆ ಕಡಿವಾಣ, ನಶೆಗೆ ಒಳಗಾಗುವ ವಿದ್ಯಾರ್ಥಿಗಳನ್ನು ಅದರಿಂದ ಹೊರತರುವ ಕೆಲಸ ಮಾಡುತ್ತಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ನುಡಿದರು. ಅಲ್ಲದೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆಗೆ ನಾವು ಕೈಜೋಡಿಸಿದ್ದೇವೆ. ಜನವರಿ 27ರ ಮಂಗಳವಾರ ರೋಶನಿ ನಿಲಯ ಕಾಲೇಜಿನ ಸಹಭಾಗಿತ್ವದೊಂದಿಗೆ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಹಲವು ಕಡೆ ಡ್ರಗ್‌ ವಿರೋಧಿ ಬೀದಿನಾಟಕ ಆಯೋಜನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮಂಗಳೂರು: ಹಂಚಿನ ಫ್ಯಾಕ್ಟರಿಯಲ್ಲಿ ಅ*ಗ್ನಿ ಅ*ವಘ*ಡ

ನಗರದ ಸೆಂಟ್ರಲ್‌ ಬಸ್ಸು ನಿಲ್ದಾಣ, ತೊಕ್ಕೊಟ್ಟು ಬಸ್ಸು ನಿಲ್ದಾಣ, ತಲಪಾಡಿ, ಉಳ್ಳಾಲ, ಲಾಲ್‌ಭಾಗ್‌ ಸೇರಿದಂತೆ ಹಲವು ಕಡೆಗಳ ಬಸ್ಸು ನಿಲ್ದಾಣಗಳಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ಬಸ್ಸುಗಳಲ್ಲಿ ಸ್ಟಿಕ್ಕರ್‌ ಹಚ್ಚಿ ಜಾಗೃತಿ ಮೂಡಿಸಲಿದ್ದೇವೆ. ಇದಕ್ಕೆ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ ರಾಮಚಂದ್ರ ನಾಯ್ಕ , ರಾಮಚಂದ್ರ ಪಿಲಾರ್ ಹಾಗೂ ಜೊತೆ ಕಾರ್ಯದರ್ಶಿ ರಾಜೇಶ್ ಟಿ ಯವರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page